Breaking News

Monthly Archives: ಆಗಷ್ಟ್ 2025

ಬೀದಿ ನಾಯಿಗಳ ಹಾವಳಿ: ಪರಿಷತ್​​ನಲ್ಲಿ ಜೋರು ಚರ್ಚೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ವಿಧಾನಪರಿಷತ್ ನಲ್ಲಿ ಜೋರು ಚರ್ಚೆ ನಡೆಯಿತು. ಪ್ರಶ್ತೋತರ ಕಲಾಪ ವೇಳೆ ವಿಪಕ್ಷ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ಚಿಕ್ಕಮಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ. ಸಚಿವರು, ಶಾಸಕರು, ಜಡ್ಜ್ ಮಕ್ಕಳಿಗೆ ಬೀದಿನಾಯಿಗಳಿಂದ ಸಮಸ್ಯೆಯಿಲ್ಲ. ಬೀದಿಯಲ್ಲಿ ಓಡಾಡುವ …

Read More »

ಅವಧಿಗೂ ಮುನ್ನ ಜನಿಸಿದ, ಕಡಿಮೆ ತೂಕದ ಎರಡು ಶಿಶುಗಳ ಜೀವ ಉಳಿಸಿದ ವೈದ್ಯರು

ಮೈಸೂರು: ಮದರ್‌ಹುಡ್ ಆಸ್ಪತ್ರೆಯಲ್ಲಿ ಅವಧಿಗೂ ಮುನ್ನ ಜನಿಸಿದ ಹಾಗೂ ಕಡಿಮೆ ತೂಕ ಹೊಂದಿದ್ದ ಎರಡು ಶಿಶುಗಳ ಜೀವ ಉಳಿಸಲಾಗಿದೆ ಎಂದು ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ.ಶ್ವೇತಾ ನಾಯಕ್ ತಿಳಿಸಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸವದ ಅವಧಿಗೂ ಬಹಳ ಮುಂಚಿತವಾಗಿ ಜನಿಸಿದ ಹಾಗೂ ಜನನದ ಸಮಯದಲ್ಲಿ ಬಹಳ ಕಡಿಮೆ ದೇಹ ತೂಕ ಹೊಂದಿದ್ದ ಶಿಶುಗಳು ಬದುಕುಳಿದಿದ್ದು, ಮಾತ್ರವಲ್ಲದೇ ದೇಹ ತೂಕದಲ್ಲಿ ಉತ್ತಮ ಬೆಳವಣಿಗೆ ಕೂಡ ಕಂಡು ಬಂದಿದೆ …

Read More »

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

ಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ ವಿಮಾನ ನಿಲ್ದಾಣ ಸೌರಶಕ್ತಿ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಿದೆ. ನಿಲ್ದಾಣದಲ್ಲಿ ಅಳವಡಿಸಲಾಗಿರುವ ಸೋಲಾರ್ ಪ್ಲಾಂಟ್ ಮೂಲಕ ನಿತ್ಯ 8 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ದೇಶದ ಮೊದಲ ವಿಮಾನ ನಿಲ್ದಾಣದ ಎಂಬ ಖ್ಯಾತಿಗೆ ಪಾತ್ರವಾಗಿದೆ.ಇಲ್ಲಿ ಸೌರಶಕ್ತಿ ಘಟಕ 2022ರಲ್ಲಿಯೇ ಸ್ಥಾಪಿಸಲ್ಪಟ್ಟಿದೆ. ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಯಾವುದೇ ನಿಲ್ದಾಣದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ವಿದ್ಯುತ್ ಉತ್ಪಾದಿಸುವ …

Read More »

ಬಂಡೀಪುರದಲ್ಲಿ ಆನೆ ಜೊತೆ ಫೋಟೋ ತೆಗೆದುಕೊಳ್ಳಲು ಹೋದ ವ್ಯಕ್ತಿಗೆ 25 ಸಾವಿರ ರೂಪಾಯಿ ದಂಡ

ಚಾಮರಾಜನಗರ: ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬವರಿಗೆ 25 ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಲಾರಿಯಿಂದ ಕ್ಯಾರೆಟ್ ಚೀಲ ಕಿತ್ತು ತಿನ್ನುತ್ತಿದ್ದಾಗ ಬಸವರಾಜು ಕಾರಿನಿಂದ ಇಳಿದು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ, ರೊಚ್ಚಿಗೆದ್ದ ಕಾಡಾನೆ …

Read More »

ಜನತಾ ದರ್ಶನ ನಡೆಸಿದ ಶಾಸಕ ಆಸೀಫ್ ಸೇಠ್… ನಗರಸೇವಕರಿಂದ ಬಾಕಿ ಕಾಮಗಾರಿಗಳ ಮಾಹಿತಿ ಪಡೆದ ಶಾಸಕರು

ಜನತಾ ದರ್ಶನ ನಡೆಸಿದ ಶಾಸಕ ಆಸೀಫ್ ಸೇಠ್… ನಗರಸೇವಕರಿಂದ ಬಾಕಿ ಕಾಮಗಾರಿಗಳ ಮಾಹಿತಿ ಪಡೆದ ಶಾಸಕರು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿಯ ವೀರಭದ್ರ ನಗರದಲ್ಲಿ ಜನತಾ ದರ್ಶನ ನಡೆಸಿ ನಾಗರೀಕರ ಅಹವಾಲುಗಳನ್ನು ಸ್ವೀಕರಿಸಿದರು. ಈ ವೇಳೆ ಸ್ಥಳೀಯರೊಂದಿಗೆ ಸಂವಾದ ನಡೆಸಿದ ಶಾಸಕರ ಮುಂದೆ ಸ್ಥಳೀಯರು ಮೂಲಭೂತ ಸೌಕರ್ಯಗಳು, ಸ್ವಚ್ಛತೆ, ನೀರು ಸರಬರಾಜು, ಸೇರಿದಂತೆ ವಿವಿಧ ಬೇಡಿಕೆಗಳನ್ನು ತೆರೆದಿಟ್ಟರು. ನಂತರ ಶಾಸಕ ಆಸೀಫ್ ಸೇಠ್ ಮತ್ತು ಅಮಾನ್ …

Read More »

ವಿವಿಧ ನಾಲ್ಕು ಪ್ರಕರಣಗಳಲ್ಲಿ 11 ಜನರ ಬಂಧನ

ವಿವಿಧ ನಾಲ್ಕು ಪ್ರಕರಣಗಳಲ್ಲಿ 11 ಜನರ ಬಂಧನ ವಿವಿಧ ನಾಲ್ಕು ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 11 ಜನರನ್ನು ಬಂಧಿಸಿ ಅವರಿಂದ ಸುಮಾರು 14.400 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿರುವ ಘಟನೆ ಜರುಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಯ ಮಚ್ಚೆಯ ಹಿಂದುಳಿದ ಕಲ್ಯಾಣ ಇಲಾಖೆಯ ವಸತಿ ನಿಲಯದ ಹಿಂದುಗಡೆ ಜೂಜಾಟ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಸಂತೋಷ ದಳವಾಯಿ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಮಹಾದೇವ ಬಸವಣ್ಣಿ …

Read More »

ಹುಬ್ಬಳ್ಳಿ- ಕಾರೈಕ್ಕುಡಿ ನಡುವೆ ವಿಶೇಷ ರೈಲು ಸಂಚಾರ: ತಾಳಗುಪ್ಪ– ಯಶವಂತಪುರ ರೈಲು ಸಮಯ ಬದಲು

ಹುಬ್ಬಳ್ಳಿ: ಸ್ವಾತಂತ್ರ್ಯ ದಿನಾಚರಣೆ ಮತ್ತು ನಂತರದ ರಜಾ ದಿನಗಳ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ತಮಿಳುನಾಡಿನ ಕಾರೈಕ್ಕುಡಿ ಜಂಕ್ಷನ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​ಪ್ರೆಸ್ ರೈಲು ಸೇವೆಯನ್ನು ಆರಂಭಿಸಿದೆ. ಎಸ್ಎಸ್ಎಸ್ ಹುಬ್ಬಳ್ಳಿ – ಕಾರೈಕ್ಕುಡಿ ಜಂಕ್ಷನ್ ನಡುವೆ 07331 ಸಂಖ್ಯೆಯ ಈ ವಿಶೇಷ ಎಕ್ಸ್​ಪ್ರೆಸ್ ರೈಲು ಆಗಸ್ಟ್ 14 ರಂದು (ಗುರುವಾರ) ಮಧ್ಯಾಹ್ನ 4 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಗ್ಗೆ 11 …

Read More »

ಮತಗಳ್ಳತನ ಆರೋಪದ ವಿರುದ್ಧ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಪದಚ್ಯುತಿಗೊಳಿಸಲಾಗಿದೆ.

ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಪದಚ್ಯುತಿಗೊಳಿಸಲಾಗಿದೆ. ತುಮಕೂರಿನಲ್ಲಿ ಮಾತನಾಡಿದ್ದ ಸಚಿವ ಕೆ‌.ಎನ್.ರಾಜಣ್ಣ, ವೋಟರ್ ಲಿಸ್ಟ್ ಯಾವ ಕಾಲದಲ್ಲಿ ಮಾಡಿದ್ದು? ನಮ್ಮದೇ ಸರ್ಕಾರ ಇರುವಾಗ ಮಾಡಿರೋದು ಅಲ್ವಾ? ಆವಾಗ ಎಲ್ಲಾ ಕಣ್ಮುಚ್ಚಿ ಕುಳಿತಿದ್ರಾ? ಎಂದು ತಮ್ಮ ಸರ್ಕಾರವನ್ನೇ ಪ್ರಶ್ನಿಸಿದ್ದರು. ಮತಪಟ್ಟಿ ಅಕ್ರಮಗಳು ನಡೆದಿರುವುದು ಸತ್ಯ. ಆದರೆ, ಆ ಅಕ್ರಮಗಳು ನಮ್ಮ ಕಣ್ಮುಂದೆನೆ ನಡೆದಿದ್ದಲ್ಲ. ನಮಗೆ ಅವಮಾನ ಆಗಬೇಕು. ನಾವು ನೋಡಿಕೊಳ್ಳಲಿಲ್ಲವಲ್ಲ ಅಂತ ಎಂದು …

Read More »

ಕೇವಲ ಐದನೂರು ರೂಪಾಯಿ ಹಣಕ್ಕಾಗಿ ಸ್ನೇಹಿತನ ಹತ್ಯೆ

ಕೇವಲ ಐದನೂರು ರೂಪಾಯಿ ಹಣಕ್ಕಾಗಿ ಸ್ನೇಹಿತನ ಹತ್ಯೆ ಕೇವಲ ಐದನೂರು ರೂಪಾಯಿ ಹಣಕ್ಕಾಗಿ ಸ್ನೇಹಿತನ ಮನೆಗೆ ನುಗ್ಗಿ ತಾಯಿ ಸಮ್ಮುಖದಲ್ಲಿ ಸ್ನೇಹಿತನ ಮೇಲೆ ಹಲ್ಲೆ ನಡಿಸಿ ಕೊಲೆ ಮಾಡಿರುವ ಘಟನೆ ಜರುಗಿದೆ, ಕೇವಲ ಐದನೂರು ರೂಪಾಯಿಗೆ ಸ್ನೇಹಿತನ ಮನೆಗೆ ನುಗ್ಗಿ ತಾಯಿ ಸಮ್ಮುಖದಲ್ಲಿ ಸ್ನೇಹಿತನ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದ ನಿವಾಸಿ ಹುಸೇನ್ ತಾಶೇವಾಲೆ(45) ಕೊಲೆಯಾದ ದುರ್ದೈವಿ. ಆರೋಪಿಗಳಾದ ಮಿಥುನ ಕುಬಜಿ, …

Read More »

ಕಾರು ಚಾಲಕ ಆತ್ಮಹತ್ಯೆ ಪ್ರಕರಣ: ಬಂಧನ ಭೀತಿಯಿಂದ ಹೈಕೋರ್ಟ್​ಗೆ ಸಂಸದ ಸುಧಾಕರ್ ಅರ್ಜಿ, ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಅವರಣದಲ್ಲಿ ಡೆತ್​​ನೋಟ್ ಬರೆದಿಟ್ಟು ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವ ಸಂಸದ ಡಾ. ಕೆ. ಸುಧಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೋಮವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಪೀಠಕ್ಕೆ ವಿಷಯವನ್ನು ಪ್ರಸ್ತಾಪಿಸಿ, ಅರ್ಜಿದಾರರಿಗೂ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಅವರನ್ನು ಬಂಧಿಸಬೇಕು ಎಂಬ ಕಾರಣದಿಂದ ವ್ಯಾಪ್ತಿಯಿಲ್ಲದ ನ್ಯಾಯಾಲಯಕ್ಕೆ ದೂರು ದಾಖಲಿಸಲಾಗಿದೆ. ಆದ್ದರಿಂದ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು. …

Read More »