Breaking News

Monthly Archives: ಆಗಷ್ಟ್ 2025

‘ನನ್ನನ್ನು ಜೈಲಿಗೆ ಹಾಕಿ, ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ’: ಜನಾರ್ದನ ಪೂಜಾರಿ

ಮಂಗಳೂರು: “ಧರ್ಮಸ್ಥಳದ ವಠಾರವನ್ನು ಎಸ್ಐಟಿ ಅಗೆಯುತ್ತಿದೆ‌‌. ಕೇಂದ್ರ ಸರ್ಕಾರ, ಪ್ರಧಾನಮಂತ್ರಿ ಮೋದಿಯವರು ಏನು ಮಾಡುತ್ತಿದ್ದಾರೆ? ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಮುಖ್ಯಮಂತ್ರಿಯವರೇ ನಾಚಿಕೆಯಾಗುತ್ತಿದೆ ನನಗೆ, ಒಂದು ದೇವಸ್ಥಾನವನ್ನು ಹಾಳುಗೆಡವುತ್ತಿರುವಾಗ ಮಾತನಾಡುವ ಧೈರ್ಯ ಇಲ್ಲವೇ ನಿಮಗೆ? ನಾನು ಇದರ ವಿರುದ್ಧ ಧ್ವನಿ ಎತ್ತುತ್ತೇನೆ. ನನ್ನನ್ನು ಬೇಕಾದರೆ ಜೈಲಿಗೆ ಹಾಕಿ. ಆದರೆ ಧರ್ಮಸ್ಥಳದ ಹೆಸರು ಹಾಳು ಮಾಡಲು ನಾನು ಬಿಡುವುದಿಲ್ಲ” ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಸರ್ಕಾರದ ವಿರುದ್ಧ ದೋಸ್ತಿಗಳ ಪ್ರತಿಭಟನೆ

ಬೆಂಗಳೂರು: ಮಳೆಗಾಲದ ಅಧಿವೇಶನದ ಮೊದಲ ದಿನವೇ ಮೈತ್ರಿ ಪಕ್ಷಗಳು ಸರ್ಕಾರಕ್ಕೆ ಹೋರಾಟದ ಮೂಲಕ ಬಿಸಿ ಮುಟ್ಟಿಸಿದವು. ಕಾಲ್ತುಳಿತ ದುರಂತದ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಆಗ್ರಹಿಸಿ ಇಂದು ಬೆಳಗ್ಗೆ ಸದನ ಆರಂಭಕ್ಕೂ ಮುನ್ನ ಬಿಜೆಪಿ-ಜೆಡಿಎಸ್ ಶಾಸಕರು, ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಈ ಎಲ್ಲ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಜೆಡಿಎಸ್ ವಿರೋಧ ಪಕ್ಷದ …

Read More »

ಮೈಸೂರು ದಸರಾ ಗಜಪಡೆಯ ತೂಕ ಪರೀಕ್ಷೆ: 25 ವರ್ಷದ ಭೀಮನೇ ಬಲಾಢ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅಭಿಮನ್ಯು ನೇತೃತ್ವದ ಮೊದಲ ತಂಡದ 9 ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಈ ತೂಕ ಪರೀಕ್ಷೆಯಲ್ಲಿ 25 ವರ್ಷದ ಭೀಮನೇ ಅತೀ ಹೆಚ್ಚು ತೂಕ ಹೊಂದಿರುವ ಆನೆಯಾಗಿದ್ದು, ಆನಂತರ ಜಂಬೂ ಸವಾರಿ ಕ್ಯಾಪ್ಟನ್ ಅಭಿಮನ್ಯು 2ನೇ ಸ್ಥಾನದಲ್ಲಿದೆ. ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಮೊದಲ ಹಂತದ ಅಭಿಮನ್ಯು ನೇತೃತ್ವದ ಗಜಪಡೆಗೆ ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ತೂಕ ಕೇಂದ್ರದಲ್ಲಿ ತೂಕ ಪರೀಕ್ಷೆ …

Read More »

ಧರ್ಮಸ್ಥಳ ಘರ್ಷಣೆ ಪ್ರಕರಣ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ 6 ಮಂದಿ ಬಂಧನ

ಬೆಳ್ತಂಗಡಿ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಆ. 6ರಂದು ನಡೆದಿದ್ದ ಅಹಿತಕರ ಘಟನೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32), ಸುಹಾಸ್ (22), ಶಶಿಧರ್(30), ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಕಲ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತ ಆರೋಪಿಗಳು. ಧರ್ಮಸ್ಥಳದ ಪಾಂಗಳದಲ್ಲಿ ಆಗಸ್ಟ್ 6 ರಂದು ನಾಲ್ವರು ಯೂಟ್ಯೂಬರ್‌‌ಗಳ …

Read More »

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ

ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಮಾತೋಶ್ರೀ ಭೀಮಾಬಾಯಿ ಲಿಂಬಾವಳಿ (80) ಅವರು ಬಾಗಲಕೋಟೆಯಲ್ಲಿ ನಿಧನರಾದರು. ಮೃತರು ಮಹಾದೇವಪುರ ಶಾಸಕಿ ಮಂಜುಳಾ ಅವರ ಅತ್ತೆಯಾಗಿದ್ದು, ಮೃತರು ಮಾಜಿ ಸಚಿವ ಅರವಿಂದ ಲಿಂಬಾವಳಿ ಸೇರಿ ಐವರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಇಂದು ಸಂಜೆ 4 ಗಂಟೆಗೆ ತುಳಸಿಗೇರಿಯ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Read More »

ದೇಶ ಭದ್ರತೆಗೆ ನಿಂತ ಸೇನಾನಿಗಳು ಸದಾ ಪೂಜ್ಯನೀಯರು ಅಂಕಲಗಿ ಮಠದ ಅಮರಸಿದ್ಧೇಶ್ವರ ಮಹಾಸ್ವಾಮೀಜಿ ಅಭಿಮತ

ದೇಶ ಭದ್ರತೆಗೆ ನಿಂತ ಸೇನಾನಿಗಳು ಸದಾ ಪೂಜ್ಯನೀಯರು ಅಂಕಲಗಿ ಮಠದ ಅಮರಸಿದ್ಧೇಶ್ವರ ಮಹಾಸ್ವಾಮೀಜಿ ಅಭಿಮತ ಅಂಕಲಗಿ – ಜೀವದ ಹಂಗು ತೊರೆದು ಗಡಿ ಕಾಯ್ದು ನಮ್ಮನ್ನು ಹೂವಿನಂತೆ ರಕ್ಷಿಸುತ್ತಿರುವ ನಮ್ಮ ಸೇನಾನಿಗಳು ಸದಾ ಪೂಜ್ಯನೀಯರು ಎಂದು ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಮಠಾಧ್ಯಕ್ಷರಾದ ಅಮರಸಿದ್ಧೇಶ್ವರ ಮಹಾಸ್ವಾಮಿಗಳು ಹೇಳಿದರು. ಅವರು ರವಿವಾರ ಅಕ್ಕತಂಗೇರಹಾಳ ದಲ್ಲಿ ಜರುಗಿದ ಮಾಜಿ ಸೈನಿಕರ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ , ಕುಂಡದ …

Read More »

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿ

2019ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನದಿಂದ ಸೋಲಾಗಿದೆ ಎಂಬ ರಾಜ್ಯಸಭೆಯ ಸದಸ್ಯರು, ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ ಕಲಬುರಗಿ ನಗರದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಲಾಯಿತು. 2024ರಲ್ಲಿ ಭಾರತೀಯ ಜನತಾ ಪಕ್ಷವೂ ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿದ್ದು, ಅದನ್ನು ಜನಾದೇಶವೆಂದು ಸ್ವೀಕರಿಸಲಾಗಿದೆ. ಆದರೆ 2019ರಲ್ಲಿ ಜನ ವಿರೋಧಿ ನೀತಿಯಿಂದ ಸೋಲನ್ನು ಅನುಭವಿಸಿ ಅದನ್ನು ಮತಗಳ್ಳತನ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆ ಖಂಡಿಸಲಾಯಿತು. ಹಾಗಾದರೆ …

Read More »

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ ನರಸಿಂಹ ಸ್ವಾಮಿ ಆಶೀರ್ವಾದದಿಂದ ಮನೋರಂಜನ್ ರವಿಚಂದ್ರನ್ ಹೊಸ ಸಿನಿಮಾ ಶುರು ಮುಹೂರ್ತದ ಸಂಭ್ರಮದಲ್ಲಿ ಮನೋರಂಜನ್ ಹೊಸ ಸಿನಿಮಾ…ಮನು ಐದನೇ ಚಿತ್ರಕ್ಕೆ ಸಾರಥಿ ಯಾರು? ಸದ್ದಿಲ್ಲದೆ ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ಕಥೆಯೊಂದಿಗೆ ಕ್ರೇಜಿ ಸ್ಟಾರ್ ಪುತ್ರ ಹಾಜರಿ ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಮನೋರಂಜನ್ ರವಿಚಂದ್ರನ್ ಹೊಸ ಕಥೆಯೊಂದಿಗೆ ಹಾಜರಾಗಿದ್ದಾರೆ. …

Read More »

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ

ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವಕ್ಕೆ ಸಿದ್ದಾಪುರದ ದಂಪತಿ ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ವಿಶೇಷ ಯೋಜನೆ ಬೆಂಗಳೂರು : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ತರ ಕನ್ನಡ ಜಿಲ್ಲೆಯಾ ಸಿದ್ದಾಪುರ ತಾಲೂಕಿನ ದಂಪತಿಗೆ ಅವಕಾಶ ಸಿಕ್ಕಿದೆ. ಸಿದ್ದಾಪುರ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನಮನೆ ಸಂಜೀವಿನಿ ಒಕ್ಕೂಟದ ಹಸವಂತೆ ಗ್ರಾಮದ ಪ್ರಗತಿ ಸ್ತ್ರೀ ಶಕ್ತಿ ಸಂಘದ ಸರಸ್ವತಿ ಈಶ್ವರ ನಾಯ್ಕ ದಂಪತಿಗಳು ಆಯ್ಕೆಯಾಗಿದ್ದಾರೆ. ಈ …

Read More »

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ

ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಪಾಲು ಶೇ12.63 ರಷ್ಟು ಮಾತ್ರ: ಕೇಂದ್ರ ಸರ್ಕಾರ ಒದಗಿಸಿರುವುದು 7468.86 ಕೋಟಿ ರೂ ಮಾತ್ರ: ಸಿಎಂ ವಿವರಣೆ ಬೆಂಗಳೂರು : ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ …

Read More »