Breaking News

Daily Archives: ಸೆಪ್ಟೆಂಬರ್ 2, 2025

ಚಿಕ್ಕೋಡಿ : ಕರೆಂಟ್ ವೈರ್ ತಗುಲಿ ರೈತನೊಬ್ಬ ಸಾವು

ಚಿಕ್ಕೋಡಿ : ಕರೆಂಟ್ ವೈರ್ ತಗುಲಿ ರೈತನೊಬ್ಬ ಸಾವು ಬೆಳಗಾವಿ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಜಳಕಿ ತೋಟದ ನಿವಾಸಿ ಸದಾಶಿವ್ ಭೀಮಪ್ಪ ಜಳಕಿ 21 ವರ್ಷದ ಯುವಕ ಕರೆಂಟು ವೈರ್ ತಗೂಲಿ ಸಾವಿಗಿಡಾಗಿದ್ದಾನೆ ಕರೆಂಟ್ ವೈರ್ ಕಟ್ಟಾಗಿದ್ದನ್ನು ನೋಡದೆ ತನ್ನದೇ ಜಮೀನಿನಲ್ಲಿ ಹಾದು ಹೋಗುವಾಗ ವೈರ್ ಗೆ ಟಚ್ ಆಗಿ ಈ ಘಟನೆ ಸಂಭವಿಸಿದೆ ಸ್ಥಳಕ್ಕೆ ಹಾರುಗೇರಿ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ …

Read More »

ಅಯ್ಯೋ ವಿಧಿಯೇ! ಒಂದೇ ದಿನ ಹೃದಯಾಘಾತದಿಂದ ಅಣ್ಣ- ತಮ್ಮ ಸಾವು!

ಯಾದಗಿರಿ, (ಸೆಪ್ಟೆಂಬರ್ 02): ಒಂದೇ ಕುಟುಂಬದ ಇಬ್ಬರು ಸಹೋದರರು (Br0thers) ಹೃದಯಾಘಾತಕ್ಕೆ (heart attack) ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ (kembhavi) ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಕೇಳಿ ತಮ್ಮ ಇರ್ಫಾನ್​​ ಗೂ ಸಹ ಹೃದಯಾಘಾತವಾಗಿದೆ. ಒಂದೇ ದಿನ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. …

Read More »

ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಜತೆಗೆ ಬೆಳೆ ಹಾನಿ ಸಮೀಕ್ಷೆ ನಡೆಸಿದ- ಸಚಿವ ಸಂತೋಷ ಲಾಡ್.

ಇಡೀ ದಿನ ಕ್ಷೇತ್ರ ಸುತ್ತಿ ಸಾರ್ವಜನಿಕರ ಸಮಸ್ಯೆ ಜತೆಗೆ ಬೆಳೆ ಹಾನಿ ಸಮೀಕ್ಷೆ ನಡೆಸಿದ- ಸಚಿವ ಸಂತೋಷ ಲಾಡ್. ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ ಲಾಡ್ ಅವರು ಸೋಮವಾರ ಬೆಳಿಗ್ಗೆಯಿಂದ ಸಂಜೆಯವರೆಗೆ ಕಲಘಟಗಿ ಮತಕ್ಷೇತ್ರ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ, ಬೆಳೆಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ, ಕಲಘಟಗಿ ಪಟ್ಟಣದಲ್ಲಿ ಜನಸ್ಪಂದನ ಸಭೆ ಜರುಗಿಸಿ, ಸಾರ್ವಜನಿಕರ ಸಮಸ್ಯೆ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು. ಹುಲಕೊಪ್ಪ ಹಾಗೂ ಗಳಗಿ ಹುಲಕೊಪ್ಪ ಗ್ರಾಮಗಳ ಚನ್ನಬಸಪ್ಪ ಹಳ್ಯಾಳ …

Read More »

ಮೃತದೇಹ ಸ್ವೀಕರಿಸಲೊಪ್ಪದ ಸಹೋದರ; ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ಸಮಾಜಸೇವಕ

ಉಡುಪಿ : ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಮೃತದೇಹ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ ಭೂಮಿಯಲ್ಲಿ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸಂಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. …

Read More »

ಬಿಜೆಪಿಯವರದ್ದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ: ಸಿಎಂ

ಮೈಸೂರು: “ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್.ಐ.ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ?” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. “SIT ರಚನೆಯಾದ ಪ್ರಾರಂಭದಲ್ಲಿ ಎನ್​ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ …

Read More »

ಬೆಂಗಳೂರಿನಲ್ಲಿ ಮಳೆ ಅವಾಂತರ

(ಬೆಂಗಳೂರು): ಕಟ್ಟಡ ನಿರ್ಮಾಣಕ್ಕಾಗಿ ಪಾಯ ಅಗೆಯುತ್ತಿದ್ದ ವೇಳೆ ಮಳೆ ನೀರು ಪಾಯಕ್ಕೆ ನುಗ್ಗಿ ಪಾಯದಲ್ಲಿನ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಕಳೆದ ರಾತ್ರಿ ಯಲಹಂಕದಲ್ಲಿ ಸಂಭವಿಸಿದೆ. ಆಂಧ್ರ ಪ್ರದೇಶ ಮೂಲದ ಜೆ.ಶಿವಾ (32) ಮತ್ತು ಮಧುಸುದನ್ ರೆಡ್ಡಿ (58) ಮೃತ ಕಾರ್ಮಿಕರು. ಇಲ್ಲಿನ ಎಂಬೆಸ್ಸಿ ಗ್ರೂಪ್ ಸಂಸ್ಥೆಯ ಕಟ್ಟಡದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಟ್ಟಡ ನಿರ್ಮಾಣಕ್ಕಾಗಿ ಕಾರ್ಮಿಕರು ದೊಡ್ಡದಾದ ಗುಂಡಿ ತೆಗೆದಿದ್ದರು. …

Read More »

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್​ ನ್ಯಾಯಾಲಯ ವಜಾಗೊಳಿಸಿದೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಿಚಾರಣೆ ನಡೆಸಿದ 57ನೇ ಸೆಷನ್ಸ್​ ನ್ಯಾಯಾಲಯ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿದೆ. ಮಹಿಳೆ ಹಾಗೂ ಸಿಂಗಲ್ ಪೇರೆಂಟ್ ಆಗಿರುವುದರಿಂದ ಮಗಳ ಆರೈಕೆ ಮಾಡಬೇಕಿದೆ ಎಂಬ ಕಾರಣ ನೀಡಿ ಪವಿತ್ರಾ ಗೌಡ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಪವಿತ್ರಾ ಗೌಡ ಅವರ ಮನವಿಯನ್ನ ಪರಿಗಣಿಸದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ …

Read More »

20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್

ಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ ಕೋರಿ ಸಲ್ಲಿಸುವ ಮನವಿ ತಿರಿಸ್ಕರಿಸಬೇಕು ಎಂಬ ನಿಯಮವಿಲ್ಲ ಎಂದು ಹೈಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಆದೇಶದಲ್ಲಿ ಶಿಕ್ಷೆಯ ಮಾಫಿ ಕುರಿತು ಪ್ರಸ್ತಾಪವಿಲ್ಲದಿದ್ದಂತಹ ಸಂದರ್ಭದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಬೇಕೆಂದಿಲ್ಲ. ಇಂತಿಷ್ಟು ವರ್ಷ ಶಿಕ್ಷೆಯ ಬಳಿಕ ಶಿಕ್ಷೆಯ ಮಾಫಿ, ಪೆರೋಲ್, ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿರುತ್ತಾರೆ ಎಂದು ಪೀಠ ತಿಳಿಸಿದೆ. ತನ್ನ ಪತಿ, …

Read More »

ಗಣೇಶೋತ್ಸವಕ್ಕೆ ‘ಆಪರೇಷನ್ ಸಿಂಧೂರ’ ಟಚ್: ಗಣೇಶನೊಂದಿಗೆ ಭಾರತೀಯ ಸೈನಿಕರಿಗೂ ಪೂಜೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ‌ ಗಣೇಶ ಮೂರ್ತಿಗಳು ಒಂದಕ್ಕಿಂತ ಒಂದು ವಿಶಿಷ್ಟವಾಗಿವೆ. ಆಕರ್ಷಕ ಅಲಂಕಾರ, ಮಂಟಪಗಳು ಗಮನ ಸೆಳೆಯುತ್ತಿವೆ. ಇಲ್ಲೊಂದು ಮಂಡಳಿ ‘ಆಪರೇಷನ್ ಸಿಂಧೂರ’ ಟಚ್ ನೀಡಿದ್ದು, ಗಣೇಶನ ಜೊತೆಗೆ ಭಾರತೀಯ ಸೈನಿಕರಿಗೂ ಪೂಜೆ ಸಲ್ಲಿಸುವ ಮೂಲಕ ದೇಶಭಕ್ತಿ ಮೆರೆಯುತ್ತಿದೆ. ಒಂದೆಡೆ ಮಂಟಪದ ಹೊರಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಮನೆ ಮಾತಾಗಿದ್ದ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಭಾವಚಿತ್ರಗಳು. ಮತ್ತೊಂದೆಡೆ, ಮಂಟಪದೊಳಗೆ ಕಾಲಿಡುತ್ತಿದ್ದಂತೆ …

Read More »

ವಿಜಯಪುರ–ಮಂಗಳೂರು ನಡುವೆ ವಿಶೇಷ ರೈಲು ಇಂದಿನಿಂದ ಖಾಯಂ: ಟಿಕೆಟ್​ ವಿವರ ಇಲ್ಲಿದೆ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ರೈಲು ಸಂಖ್ಯೆ 07377 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಇಂದಿನಿಂದ ಅಂದರೆ ಸೆಪ್ಟೆಂಬರ್ 1ರಿಂದ ಹಾಗೂ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್‌-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 2ರಿಂದ ಖಾಯಂ ಸಂಚಾರ ಮಾಡಲಿದೆ. ಹೊಸ ದರ ಪಟ್ಟಿಯನ್ನು ರೈಲ್ವೇ ಇಲಾಖೆ ಬಿಡುಗಡೆ ಮಾಡಿದೆ. ಈಗಾಗಲೇ ರೈಲು ಸಂಖ್ಯೆ ಬದಲಾವಣೆಯೊಂದಿಗೆ ರೈಲು ಸಂಖ್ಯೆ 17377/78 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನ ಟಿಕೆಟ್​ ಬುಕ್ಕಿಂಗ್ ಆರಂಭಗೊಂಡಿದೆ. ಕಾಯ್ದಿರಿಸಿದ ದರ್ಜೆಯ …

Read More »