Breaking News

Daily Archives: ಸೆಪ್ಟೆಂಬರ್ 3, 2025

ಉದ್ಘಾಟನೆಯಾದರೂ ಕಾರ್ಯಾರಂಭವಿಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ‘ಪೂಜೆ’ ಪ್ರತಿಭಟನೆ

ಉದ್ಘಾಟನೆಯಾದರೂ ಕಾರ್ಯಾರಂಭವಿಲ್ಲ: ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ‘ಪೂಜೆ’ ಪ್ರತಿಭಟನೆ ದೊಡ್ಡಬಳ್ಳಾಪುರ: ಅರ್ಕಾವತಿ ನದಿ ಹೋರಾಟ ಸಮಿತಿ ಹೋರಾಟದ ಫಲವಾಗಿ ಬೆಂಗಳೂರಿನಲ್ಲಿದ್ದ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ದೊಡ್ಡಬಳ್ಳಾಪುರಕ್ಕೆ ಸ್ಥಳಾಂತರಗೊಂಡಿದೆ. ಕಚೇರಿ ಉದ್ಘಾಟಿಸಿ 12 ದಿನವಾಗಿದೆ. ಅಂದು ಕಚೇರಿಗೆ ಹಾಕಿದ ಬೀಗ ಇನ್ನೂ ತೆಗೆದಿಲ್ಲ. ಇದು ಅಧಿಕಾರಿಗಳ ನಿರ್ಲಕ್ಷ್ಯವೆಂದು ಆರೋಪಿಸಿ ಅರ್ಕಾವತಿ ನದಿ ಹೋರಾಟ ಸಮಿತಿ ಹೋರಾಟಗಾರರು ಕಚೇರಿಯ ಬಾಗಿಲಿಗೆ ಪೂಜೆ ಸಲ್ಲಿಸಿ ಅರ್ಚನೆ ಮಾಡಿ ಪ್ರತಿಭಟಿಸಿದರು. ನಗರದ ಪ್ರವಾಸಿ …

Read More »

ಅಕ್ರಮ ಚಿನ್ನ ಕಳ್ಳಸಾಗಣೆ ಕೇಸ್​: ರನ್ಯಾ ರಾವ್​ಗೆ ₹102 ಕೋಟಿ ದಂಡ ಪಾವತಿಸುವಂತೆ ಡಿಆರ್‌ಐ ನೋಟಿಸ್

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನ ಎದುರಿಸುತ್ತಿರುವ ನಟಿ ರನ್ಯಾ ರಾವ್​​ಗೆ 102.55 ಕೋಟಿ ರೂಪಾಯಿ ದಂಡ ಪಾವತಿಸುವಂತೆ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ರವಾನಿಸಿದ್ದಾರೆ. ಹಾಗೂ ಇನ್ನುಳಿದ ಆರೋಪಿಗಳಾದ ತರುಣ್ ಕೊಂಡೂರು ರಾಜುಗೆ 62 ಕೋಟಿ ರೂ, ಸಾಹಿಲ್ ಜೈನ್ ಮತ್ತು ಭರತ್ ಜೈನ್ ಅವರಿಗೆ ತಲಾ 53 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ಡಿಆರ್‌ಐ ಮೂಲಗಳು ಮಾಹಿತಿ ನೀಡಿವೆ. …

Read More »

ಸೆಪ್ಟೆಂಬರ್​ ಕ್ರಾಂತಿ, ನಮ್ಮ ವಿರುದ್ದ ಮಾತನಾಡಿದವರೇ ಬಿಜೆಪಿಗೆ ಹೋಗಬಹುದು: ಎಂಎಲ್​ಸಿ ಆರ್.ರಾಜೇಂದ್ರ

ಬೆಂಗಳೂರು: ರಾಜಣ್ಣ ಅವರ ಮೇಲೆ ಆರೋಪ ಮಾಡುತ್ತಿದ್ದವರೇ ನಾಳೆ ಬೆಳಗ್ಗೆಯೆಂದರೆ ಬಿಜೆಪಿಗೆ ಹೋದರೂ ಆಶ್ಚರ್ಯ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಸೂಚ್ಯವಾಗಿ ಹೇಳಿದ್ದಾರೆ.‌ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂಬ ಶಾಸಕ ಮಾಗಡಿ ಬಾಲಕೃಷ್ಣ ಹೇಳಿಕೆಗೆ ಶಾಸಕರ ಭವನದಲ್ಲಿ ಪ್ರತಿಕ್ರಿಯಿಸಿದ ಆರ್.ರಾಜೇಂದ್ರ, ಬಾಲಕೃಷ್ಣ ಬಿಜೆಪಿಯನ್ನೂ ಮುಗಿಸಿ ಬಂದಿದ್ದಾರೆ. ಜೆಡಿಎಸ್ ಪಕ್ಷವನ್ನೂ ಮುಗಿಸಿ ಬಂದಿದ್ದಾರೆ. ಕೆಲವರಿಗೆ ಮಾತನಾಡುವ ಹುಚ್ಚು. ಅದನ್ನು ತೀರಿಸಿಕೊಳ್ಳಲು ಹೀಗೆಲ್ಲ ಮಾತನಾಡುತ್ತಾರೆ. …

Read More »

ಟೊಮೊಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಕಾಡಾನೆ ಓಡೋಡಿ ಬಂದು ತಿಂದಿದೆ.

ಚಾಮರಾಜನಗರ: ಕಾಡಾನೆಗೆ ಊಟ, ರೈತನಿಗೆ ಪ್ರಾಣ ಸಂಕಟ ಎಂಬಂತೆ ನಡುರಸ್ತೆಯಲ್ಲಿ ಪಲ್ಟಿಯಾದ ಈಚರ್ ವಾಹನ ಕಂಡು ಕಾಡಾನೆಯೊಂದು ಓಡೋಡಿ ಬಂದು ಟೊಮೊಟೊ ತಿಂದ ಘಟನೆ ಚಾಮರಾಜನಗರ ತಾಲೂಕಿನ ಪುಣಜನೂರು ಸಮೀಪ ತಡರಾತ್ರಿ ನಡೆದಿದೆ. ಚಿಕ್ಕಮಗಳೂರಿನಿಂದ ಕೇರಳಕ್ಕೆ ಈಚರ್ ನಲ್ಲಿ ಟೊಮೊಟೊ ಸಾಗಿಸುವಾಗ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲಿ ಪಲ್ಟಿಯಾಗಿದೆ. ಸುಮಾರು 210 ಬಾಕ್ಸ್ ಟೊಮೊಟೊ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಕಂಡ ಕಾಡಾನೆ ಓಡೋಡಿ ಬಂದು ತಿಂದಿದೆ. ರಸ್ತೆಯಲ್ಲಿ ಟೊಮೊಟೊ ತಿನ್ನುತ್ತಾ ನಿಂತ ಕಾಡಾನೆಯನ್ನು …

Read More »

ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ

ಬೈಲಹೊಂಗಲ ಭಾಗದ ಆರಾಧ್ಯ ದೈವ ಶ್ರೀ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಗೊಂಡಿದ್ದು ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ಶ್ರೀ ಕ್ಷೇತ್ರದಲ್ಲಿ ಸಭೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಸರ್ವ ಸದಸ್ಯರು , ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಸದಾಶಿವ ಬಡಿಗೆರ, ಸವದತ್ತಿ ತಹಸೀಲ್ದಾರಾದ ಮಲ್ಲಿಕಾರ್ಜುನ ಹೆಗ್ಗಣ್ಣವರ,ಅರಣ್ಯ ಇಲಾಖೆಯ ಅಧಿಕಾರಿಗಳು, ಸವದತ್ತಿಯ ಎಡಿಎಲ್ಆರ್, ಉಪಸ್ಥಿತರಿದ್ದರು.

Read More »

ಗಣೇಶ ಮೂರ್ತಿಗಳ ವಿಸರ್ಜನೆಗೆ ಸಚಿವ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಸೂಕ್ತ ವ್ಯವಸ್ಥೆ ಮಲಗೌಡಾ ಪಾಟೀಲ ಸೂಚನೆ …

ಗಣೇಶ ಮೂರ್ತಿಗಳ ವಿಸರ್ಜನೆಗೆ ಅಳತಗಾ ಸೇತುವೆ ಸಿದ್ಧತೆಗೆ ಅಗತ್ಯ ಕ್ರಮಕ್ಕೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಸೂಚನೆ … ಮಾರ್ಕಂಡೇಯ ನದಿಯ ಅಳತಗಾ ಸೇತುವೆಗೆ ಭೇಟಿವಿವಿಧ ಗ್ರಾಮಸ್ಥರು ಅಧಿಕಾರಿಗಳು ಭಾಗಿಗಣೇಶ ಮೂರ್ತಿಗಳ ವಿಸರ್ಜನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ ಅಧಿಕಾರಿಗಳಿಗೆ ಮಾರ್ಗದರ್ಶನ ಸೇತುವೆಯ ಅಕ್ಕ-ಪಕ್ಕ ಗಣೇಶ ಮೂರ್ತಿಗಳ ವಿಸರ್ಜನೆಗೆ ಆಗಮಿಸುವ ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಗ್ರಾಮ ಪಂಚಾಯತಿಯವರು ಸ್ವಚ್ಛತೆ ಮತ್ತು ಸೂಕ್ತ ವಿದ್ಯುತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಸಾರ್ವಜನಿಕರು …

Read More »