Breaking News

Daily Archives: ಸೆಪ್ಟೆಂಬರ್ 4, 2025

ಸಾಮೂಹಿಕ ಅತ್ಯಾಚಾರ ಆರೋಪ: ಶಾಸಕ ಮುನಿರತ್ನ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಿದ ಎಸ್​ಐಟಿ

ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಿ ರಿಪೋರ್ಟ್ ಸಲ್ಲಿಸಿದೆ ಎಂದು ಅರ್ಜಿದಾರರ ಪರ ವಕೀಲರು ಹೈಕೋರ್ಟ್​ಗೆ ಮಾಹಿತಿ ನೀಡಿದ್ದಾರೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ. ಅರುಣ್, ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಬಿ ವರದಿ ಸಲ್ಲಿಸಲಾಗಿದೆ. ಆದ್ದರಿಂದ …

Read More »

ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ

ನಕಲಿ ದಾಖಲೆ ಸೃಷ್ಟಿಸಿ 40 ಕೋಟಿ ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಯತ್ನ: 6 ಎಕರೆ ಜಾಗವನ್ನು ವಶಕ್ಕೆ ಪಡೆದ ಸರ್ಕಾರ ದೊಡ್ಡಬಳ್ಳಾಪುರ(ಬೆಂ.ಗ್ರಾಮಾಂತರ): ನಗರದಂಚಿನಲ್ಲಿರುವ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದಲ್ಲಿ ನಕಲಿ ದಾಖಲೆ ಸೃಷಿಸಿ ಕಬಳಿಸಿದ್ದ ಆರು ಎಕರೆ ಗೋಮಾಳ ಜಮೀನನ್ನು ಸರ್ಕಾರ ವಶಪಡಿಸಿಕೊಂಡಿದೆ. ವಶಕ್ಕೆ ಪಡೆದಿರುವ ಭೂಮಿಯ ಈಗಿನ ಮಾರುಕಟ್ಟೆ ಮೌಲ್ಯ ಸುಮಾರು 40 ಕೋಟಿ ಎಂದು ಅಂದಾಜಿಸಲಾಗಿದೆ. ದೊಡ್ಡಬಳ್ಳಾಪುರ ನಗರದ ಪ್ರಭಾವಿಗಳಾದ ಕೆ.ಬಿ. ಮುದ್ದಪ್ಪ, ಪುರುಷೋತ್ತಮಗೌಡ, ಕೆ.ಬಿ. ಹನುಮಂತರಾಯಪ್ಪ, ಎಂ. ಮುನಿರಾಜು …

Read More »

ಕುಂದಾಪುರದಲ್ಲಿ ಹನಿಟ್ರ್ಯಾಪ್; ಮನೆಗೆ ಕರೆದು ವ್ಯಕ್ತಿಗೆ ಹಲ್ಲೆ ಮಾಡಿ ಹಣ ಸುಲಿಗೆ

ಉಡುಪಿ: ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ …

Read More »