Breaking News

Daily Archives: ಸೆಪ್ಟೆಂಬರ್ 5, 2025

ತಾಯಿ ಪಿಂಚಣಿ ಹಣಕ್ಕಾಗಿ ಸಹೋದರರ ಜಗಳ; ಅಣ್ಣನ ಕೊಲೆಯಲ್ಲಿ ಅಂತ್ಯ

ಚಿಕ್ಕಬಳ್ಳಾಪುರ: ವೃದ್ಧ ತಾಯಿಗೆ ಬರುತ್ತಿದ್ದ ಪಿಂಚಣಿ ಹಣ ಹಂಚಿಕೆ ವಿಚಾರಕ್ಕೆ ಮೂವರು ಸಹೋದರರ ನಡುವೆ ಜಗಳವಾಗಿದ್ದು, ವಿಕೋಪಕ್ಕೆ ತಿರುಗಿ ಅಣ್ಣನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ನರಸಿಂಹಮೂರ್ತಿ (45) ಕೊಲೆಯಾದ ಸಹೋದರ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊಲೆ ಆರೋಪಿಗಳಾದ ರಾಮಾಂಜಿ (39) ಮತ್ತು ಗಂಗಾಧರಪ್ಪ (39) ಎಂಬವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೌರಿಬಿದನೂರು ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಯಾದ …

Read More »

ಮಳೆ ಅಬ್ಬರಕ್ಕೆ ನಲುಗಿದ ಅನ್ನದಾತ

ಹಾವೇರಿ: ಭಾರಿ ಮಳೆಯಿಂದ ಜಿಲ್ಲೆಯ ಹಲವೆಡೆ ಬೆಳೆಗಳೆಲ್ಲ ರೋಗಕ್ಕೆ ತುತ್ತಾಗಿದ್ದು, ಬೇಸತ್ತ ರೈತನೋರ್ವ ಹತ್ತಿ ಬೆಳೆಯನ್ನು ಟ್ರ್ಯಾಕ್ಟರ್ ರೂಟರ್​​​ ಹೊಡೆದು ನಾಶ ಮಾಡಿದ್ದಾರೆ. ಈ ವರುಷ ಉತ್ತಮ ಮುಂಗಾರು ಪೂರ್ವ ಮಳೆ ಆಗಿರುವ ಹಿನ್ನೆಲೆಯಲ್ಲಿ, ರೈತರು ಹೆಚ್ಚಿನ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಬೆಳೆಗಳು ನಾಶವಾಗಿವೆ. ಗೋವಿನಜೋಳ, ಹತ್ತಿ, ಸೋಯಾಬಿನ್​, ಶೇಂಗಾ ಬೆಳೆಗಳಿಗೆ ಹಲವು ರೋಗಗಳು ಕಾಣಿಸಿಕೊಂಡಿವೆ. ಕೆಂಪುರೋಗ, ಬೂದಿರೋಗ ಸೇರಿದಂತೆ ಹಲವು ರೋಗಗಳಿಂದ ಬೆಳೆಗಳು …

Read More »

ಏರ್​ಗನ್​ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು

ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್​ಗನ್​ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.‌ ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು (ಅಣ್ಣ, ತಮ್ಮ) ಆಟವಾಡುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದೆ. ಅಣ್ಣ ತಮ್ಮ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ …

Read More »

ರಾಜ್ಯಾದ್ಯಂತ ಇಂದಿನಿಂದ ಮಳೆ ಅಬ್ಬರ

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಅಬ್ಬರ ಕಡಿಮೆಯಾದರೂ, ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್​ 11 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಆಗಲಿರುವ ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, …

Read More »