ಬೆಳಗಾವಿ- ಬಿಡಿಸಿಸಿ ಬ್ಯಾಂಕಿನ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು. ಅಕ್ಟೋಬರ್ …
Read More »Daily Archives: ಸೆಪ್ಟೆಂಬರ್ 9, 2025
ನಟ ದರ್ಶನ್ಗೆ ಪರಪ್ಪನ ಅಗ್ರಹಾರವೇ ಫಿಕ್ಸ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಹೆಚ್ಚುವರಿ ಹಾಸಿಗೆ – ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜೈಲಿನ ಕೈಪಿಡಿಯಲ್ಲಿರುವ ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ವರ್ಗಾಯಿಸಬೇಕೆಂದು ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದರ್ಶನ್ ಪರ ವಕೀಲ …
Read More »ಯೋಗೇಶ್ಗೌಡ ಕೊಲೆ ಪ್ರಕರಣ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು
ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಜೈಲು ವಾಸದಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದೆ. ಮಗನ ಶಸ್ತ್ರಚಿಕಿತ್ಸೆ ಕಾರಣ ನೀಡಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಮಧ್ಯಂತರ ಆರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, …
Read More »ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸಂಪೂರ್ಣ ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಬೃಹತ್ ಪ್ರತಿಭಟನೆ ನಡೆಸಿತು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಸಭೆ ಸೇರಿದ ನಿಯೋಗವು ಯಾವುದೇ …
Read More »ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ.
ಹುಕ್ಕೇರಿ : ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ. ನೇತ್ರ ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕಾಗಬೇಕು ಎಂದು ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಜಿ ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ ಅಂಗವಾಗಿ ಸಂಕೇಶ್ವರ ನಗರದ ಎಂ ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹಮ್ಮಿಕೊಂಡ ಜಾಗ್ರತಾ ಜಾಥಾಕ್ಕೆ ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಗಳು ಮತ್ತು ಡಾಕ್ಟರ ಶೀಲಾ ದೋಡಬಂಗಿ ಲಕ್ಷ್ಮಿ ದೇವಿ …
Read More »ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ
ವಿಜಯಪುರ…:ವಿಜಯಪುರ ಜಿಲ್ಲೆಯಲ್ಲಿ ಮೀನುಮರಿ ಸಾಕಾಣಿಕೆ:13 ಜಿಲ್ಲೆಗೊಂದು ಮೀನುಮರಿ ಸಾಕಾಣಿಕೆ ಕೇಂದ್ರಕ್ಕೆ ಸಿಬ್ಬಂದಿ ಕೊರತೆ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಪಂಚ ನದಿಗಳು ಹರಿಯುತ್ತಿದ್ದು, ಜಿಲ್ಲೆಗೆ ಹೊಂದಿಕೊಂಡೆ ಆಲಮಟ್ಟಿ ಹಾಗೂ ನಾರಾಯಣಪುರ ಈ ಎರಡು ಜಲಾಶಯಗಳು ಸಹ ಇರುವುದರಿಂದ ಮೀನುಗಾರಿಕೆಗೆ ಉತ್ತಮ ತಾಣವಾಗಿತ್ತು. ಇದರಿಂದಾಗಿಯೇ ಉತ್ತರ ಕರ್ನಾಟಕದಲ್ಲೂ ಸಹ ಒಳನಾಡು ಮೀನುಗಾರಿಗೆ ಒಂದು ದೊಡ್ಡ ಉದ್ಯಮವಾಗಿ ಬೆಳೆಯುತ್ತಿದೆ. ವಿಜಯಪುರ ಜಿಲ್ಲೆ ಸೇರಿದಂತೆ 13 ಜಿಲ್ಲೆಗಳಲ್ಲಿ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡುತ್ತಿದ್ದಾರೆ. ಆದರೆ ಈ …
Read More »ಇದೇ ೧೧ ರಂದು ಬೆಳಗಾವಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ
ಬೆಳಗಾವಿ: ವಿಶ್ವಗುರು ಬಸವಣ್ಣನವರನ್ನು ಕರ್ನಾಟಕ ಸರ್ಕಾರ “ಸಾಂಸ್ಕೃತಿಕ ನಾಯಕ”ನೆಂದು ಘೋಷಿಸಿದ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇದೆ ಗುರುವಾರ ದಿನಾಂಕ 11 ರಂದು ಬೃಹತ್ ಪ್ರಮಾಣದಲ್ಲಿ ಬಸವ ಸಂಸ್ಕೃತಿ ಅಭಿಯಾನ ಆಯೋಜಿಸಲಾಗಿದೆ ಎಂದು ಜಾಗತಿಕ ಲಿಂಗಾಯಿತ ಮಹಾಸಭೆಯ ಜಿಲ್ಲಾ ಅಧ್ಯಕ್ಷ ಬಸವರಾಜ ರೊಟ್ಟಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು ಬಸವಣ್ಣನವರ ತತ್ವ ಸಿದ್ಧಾಂತ ಪ್ರಚಾರ ಮತ್ತು ಪ್ರಸಾರ ವಚನ ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ …
Read More »
Laxmi News 24×7