ಚಿಕ್ಕೋಡಿ(ಬೆಳಗಾವಿ): “ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಹತ್ಯೆಗೈದ ಘಟನೆ ಚಿಕ್ಕೋಡಿಯ ಉಗಾರ್ ಬಿಕೆ ಗ್ರಾಮದಲ್ಲಿ ಕಳೆದ ಭಾನುವಾರ ರಾತ್ರಿ ನಡೆದಿದ್ದು, ಪತಿ ಹಾಗು ಇನ್ನಿಬ್ಬರನ್ನು ಬಂಧಿಸಲಾಗಿದೆ” ಎಂದು ಎಸ್ಪಿ ಭೀಮಾಶಂಕರ ಗುಳೇದ ತಿಳಿಸಿದರು. ಚೈತಾಲಿ (23) ಕೊಲೆಯಾದವರು. ಎಸ್ಪಿ ಗುಳೇದ ಅವರು ಬೆಳಗಾವಿ ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಪ್ರಕರಣದ ಪೂರ್ಣ ಮಾಹಿತಿ ನೀಡಿದರು. “ಕಳೆದ ಭಾನುವಾರ (7-09-25) ರಾತ್ರಿ ಕಾಗವಾಡ ತಾಲೂಕಿನ ಉಗಾರ ಬಿ.ಕೆ.ಗ್ರಾಮದ ಮಹಿಳೆ ಚೈತಾಲಿ …
Read More »Daily Archives: ಸೆಪ್ಟೆಂಬರ್ 11, 2025
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ
ನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸಲ್ಲಿಕೆಯಾಗಿವೆ. ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು …
Read More »ವಿವಿಧ ಕೇಸ್ ನಲ್ಲಿ ಆರೋಪಿಯಾಗಿರುವ ಪುನೀತ್ ಕೆರೇಹಳ್ಳಿ ಮದ್ದೂರಿಗೆ ಹೋಗುವ ಮುನ್ನ ಪೊಲೀಸರ ವಶಕ್ಕೆ
ವಿವಿಧ ಕೇಸ್ ನಲ್ಲಿ ಆರೋಪಿಯಾಗಿರುವ ಪುನೀತ್ ಕೆರೇಹಳ್ಳಿ ಮದ್ದೂರಿಗೆ ಹೋಗುವ ಮುನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲ್ಲು ತೂರಾಟ ಖಂಡಿಸಿ ಪುನೀತ್ ಕೆರೆಹಳ್ಳಿ ಮದ್ದೂರಿಗೆ ತೆರಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಬಸವನಗುಡಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಅಲ್ಲೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನು ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿ ಆಗುವುದಿಲ್ಲ. ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದಕ್ಕೆ ಧಕ್ಕೆ ತರುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡುವಂತೆ …
Read More »ನಿಯಮ ಉಲ್ಲಂಘಿಸಿ ಶಾಸಕ ವೀರೇಂದ್ರ ಬಂಧನ-ವಕೀಲರ ವಾದ: ವಿಚಾರಣೆ ಮುಂದೂಡಿಕೆ
ಬೆಂಗಳೂರು: ಆನ್ಲೈನ್ ಮತ್ತು ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಸಮನ್ಸ್ ಜಾರಿಗೊಳಿಸದೆ, ನಿಯಮಗಳನ್ನು ಉಲ್ಲಂಘಿಸಿ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯಡಿ ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ. ಚಿತ್ರದುರ್ಗದ ಶಾಸಕರಾದ ತಮ್ಮ ಪತಿ ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಬಂಧಿಸಿರುವ ಕ್ರಮ ಕಾನೂನು ಬಾಹಿರ ಎಂದು ಘೋಷಿಸುವಂತೆ ಕೋರಿ …
Read More »98ರ ಮಂಗಳೂರು ಕೋಮುಗಲಭೆ: 26 ವರ್ಷದ ಬಳಿಕ ಇಬ್ಬರ ಬಂಧನ
98ರ ಮಂಗಳೂರು ಕೋಮುಗಲಭೆ: 26 ವರ್ಷದ ಬಳಿಕ ಇಬ್ಬರ ಬಂಧನ ಮಂಗಳೂರು(ದಕ್ಷಿಣ ಕನ್ನಡ): 1998ಲ್ಲಿ ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು 26 ವರ್ಷಗಳ ಬಳಿಕ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಬಂಧಿತರು. ಲೀಲಾಧರ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದು, ಇತ್ತೀಚೆಗೆ ಊರಿಗೆ ಬಂದಿದ್ದನು. ಚಂದ್ರಹಾಸ್ ಕೇಶವ ಶೆಟ್ಟಿ ದುಬೈನಿಂದ ಊರಿಗೆ ಬರುವಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 30ರಂದು ಬಂಧಿಸಲಾಗಿದೆ. …
Read More »ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3: ಇಂದಿನ ಸಂಪುಟ ಸಭೆಯಲ್ಲಿ ಭೂಸ್ವಾಧೀನ ದರ ನಿಗದಿ
ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಅಡಿ ಸ್ವಾಧೀನಕ್ಕೊಳಪಡುವ ಭೂಮಿಗಳಿಗೆ ದರ ನಿಗದಿಯನ್ನು ಇಂದು ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತಿದೆ. ಈ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ನಡೆದ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಭೂಸ್ವಾಧೀನ ಪರಿಹಾರ ವಿಚಾರವನ್ನೇ ವಿವಾದ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಮುಂದೆ ತೀರ್ಮಾನ ಮಾಡಲಿರುವ ಸೂಚಿತ ಪರಿಹಾರಕ್ಕೆ ಸರ್ವಪಕ್ಷಗಳೂ ಒಪ್ಪಿಗೆ ಸೂಚಿಸಬೇಕು ಎಂದು ಮನವಿ ಮಾಡುತ್ತಿದ್ದೇನೆ …
Read More »ಚಾಮುಂಡಿ ಬೆಟ್ಟ ಸುತ್ತಮುತ್ತ ಚಿರತೆ ಓಡಾಟ
ಮೈಸೂರು: ಚಾಮುಂಡಿ ಬೆಟ್ಟದ ದೇವಿಕೆರೆ ಕಟ್ಟೆ ಹಾಗೂ ತಾವರೆಕಟ್ಟೆಯ ಜನವಸತಿ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದು, ನಿವಾಸಿಗಳು ಹಾಗೂ ಭಕ್ತರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅರಣ್ಯ ಇಲಾಖೆ, ಚಾಮುಂಡಿ ಬೆಟ್ಟ ಗ್ರಾಮ ಹಾಗೂ ಇಲ್ಲಿನ ನಾಗರಿಕ ಬಂಧುಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಇತ್ತೀಚೆಗೆ ಚಾಮುಂಡಿ ಬೆಟ್ಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಚಲನವಲನಗಳು ಕಂಡುಬಂದಿರುವುದಾಗಿ ವರದಿಯಾಗಿದೆ. ಈ ವಿಷಯದ ಕುರಿತು ಅರಣ್ಯ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು …
Read More »ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆ
ಹುಕ್ಕೇರಿ ತಾಲೂಕಿನ ಯಾದಗೂಡ, ಅಮ್ಮಣಗಿ ಮತ್ತು ಎಲಿಮುನ್ನೋಳಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಸಭೆಗಳಲ್ಲಿ ಪಾಲ್ಗೊಂಡು, ಮುಂಬರುವ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳಿಗೆ ಬೆಂಬಲ ನೀಡುವಂತೆ ಮನವಿ ಮಾಡಿದೆ.
Read More »ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ
ಚಿಕ್ಕೋಡಿ ತಾಲೂಕಿನ ಮಲಿಕವಾಡ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಮಧ್ಯರಾತ್ರಿ ಕಳ್ಳತನ ನಡೆದ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ದೇವಸ್ಥಾನದ ದಾನಪೆಟ್ಟಿಗೆ ಒಡೆದು ನಗದು ಹಣ ಹಾಗೂ ದೇವಿಯ ಆಭರಣಗಳನ್ನು ಅಪರಿಚಿತ ಕಳ್ಳರು ಕದಿಯಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಪ್ರಕಾರ, ಭಾನುವಾರ ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ ಈ ಕಳ್ಳತನ ನಡೆದಿದೆ. ದೇವಸ್ಥಾನ ಆವರಣದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳರು ಸ್ಪಷ್ಟವಾಗಿ ಸೆರೆಯಾಗಿದ್ದಾರೆ. ಬೆಳಿಗ್ಗೆ …
Read More »