ಮೈಸೂರು: ಕಾಡಾನೆ ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿ, ಭಯದಲ್ಲಿಯೇ ಅರಣ್ಯ ವೀಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎಚ್. ಡಿ. ಕೋಟೆ ತಾಲೂಕಿನ ಡಿ. ಬಿ. ಕುಪ್ಪೆ ವನ್ಯಜೀವಿ ವಲಯದಲ್ಲಿ ನಡೆದಿದೆ. ಮಾನೆಮೂಲೆ ಹಾಡಿಯ ನಿವಾಸಿಯಾಗಿದ್ದ ಅರಣ್ಯ ವೀಕ್ಷಕ ರಾಜು (45) ಸಾವಿಗೀಡಾದವರು. ಈ ಘಟನೆ ನಡೆದಿದ್ದು ಹೇಗೆ?: ಎಂದಿನಂತೆ ಇತರ ಸಿಬ್ಬಂದಿಯೊಂದಿಗೆ ರಾಜು ಅವರು ಕಾಡಿನಲ್ಲಿ ಗಸ್ತು ತಿರುಗಲು ಹೋಗಿದ್ದರು. ಈ ವೇಳೆ ಕಾಡಾನೆಯೊಂದು ಸಿಬ್ಬಂದಿಯ ಮೇಲೆ ದಾಳಿಗೆ ಮುಂದಾಯಿತು. …
Read More »Daily Archives: ಸೆಪ್ಟೆಂಬರ್ 13, 2025
ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ.
ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದಲ್ಲಿ ಇಂದು ನಡೆದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಶ್ರೀ ಅಪ್ಪಣಗೌಡ ಪಾಟೀಲ ವಿದ್ಯುತ್ ಸಹಕಾರಿ ಪೆನಲ್ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದೆ. ಗ್ರಾಮೀಣ ಅಭಿವೃದ್ಧಿ ಹಾಗೂ ಜನಪರ ಸೇವೆಗೆ ಬದ್ಧತೆಯಿಂದ ಮತ್ತು ಸ್ವತಂತ್ರವಾಗಿ ಶ್ರಮಿಸುವ ಈ ಪೆನಲ್‌ಗೆ ಎಲ್ಲರೂ ಒಗ್ಗಟ್ಟಿನಿಂದ ಬೆಂಬಲ ನೀಡುವಂತೆ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಶಶಿಕಾಂತ ನಾಯಕ, ಮುಖಂಡರಾದ ಶ್ರೀ …
Read More »ಚಿಕ್ಕೋಡಿ | ವಸತಿ ಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಚಿಕ್ಕೋಡಿ : ತಾಲ್ಲೂಕಿನ ಹಿರೇಕೋಡಿ ಗ್ರಾಮದ ಹೊರವಲಯದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ. ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾದವರನ್ನು ತಕ್ಷಣವೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆ ಮತ್ತು ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಗಡದ ಅವರ ಮಾಹಿತಿಯ ಪ್ರಕಾರ, ತಾಲ್ಲೂಕು …
Read More »ದಂಡ ಕಟ್ಟಿ ಮಾರುದ್ದದ ಚಲನ್ ಸ್ವೀಕರಿಸುತ್ತಿರುವ ವಾಹನ ಸವಾರ
ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಪಾವತಿ ಮಾಡಲು ಸರ್ಕಾರ ಶೇ.50% ರಿಯಾಯಿತಿ ನೀಡಿತ್ತು. ಇದರಿಂದ ವಾಹನ ಸವಾರರು ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡಿದ್ದಾರೆ. ಹತ್ತಿಪ್ಪತ್ತು ಪ್ರಕರಣಗಳಲ್ಲಿ 20 ರಿಂದ 30 ಸಾವಿರ ರೂಪಾಯಿ ವರೆಗೂ ದಂಡ ಪಾವತಿ ಮಾಡಿದ್ದಾರೆ. ಇನ್ನು ದಾವಣಗೆರೆ ಉತ್ತರ ಹಾಗೂ ದಕ್ಷಿಣ ಸಂಚಾರಿ ಠಾಣೆಗಳಲ್ಲಿ ದಂಡ ಪಾವತಿಸಿ ಉದ್ದನೆಯ ಚಲನ್ ಪಡೆಯುವ ಮೂಲಕ ಕೆಲ ವಾಹನ ಸವಾರರು ಗಮನ ಸೆಳೆದಿದ್ದಾರೆ. ಉದ್ದನೆಯ …
Read More »