Breaking News

Daily Archives: ಸೆಪ್ಟೆಂಬರ್ 13, 2025

ಚಿಕ್ಕೋಡಿ | ವಸತಿ ಶಾಲೆಯ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿಕ್ಕೋಡಿ : ತಾಲ್ಲೂಕಿನ ಹಿರೇಕೋಡಿ ಗ್ರಾಮದ ಹೊರವಲಯದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬೆಳಗಿನ ಉಪಹಾರ ಸೇವಿಸಿದ ನಂತರ ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ. ಬೆಳಿಗ್ಗೆ ಉಪ್ಪಿಟ್ಟು ಸೇವನೆ ಮಾಡಿದ ವಿದ್ಯಾರ್ಥಿ-ವಿದ್ಯಾರ್ಥಿನಿಯರಲ್ಲಿ ವಾಂತಿ ಹಾಗೂ ಬೇಧಿ ಕಾಣಿಸಿಕೊಂಡಿದ್ದು, ತೀವ್ರ ಅಸ್ವಸ್ಥರಾದವರನ್ನು ತಕ್ಷಣವೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆ ಮತ್ತು ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್. ಗಡದ ಅವರ ಮಾಹಿತಿಯ ಪ್ರಕಾರ, ತಾಲ್ಲೂಕು …

Read More »

ದಂಡ ಕಟ್ಟಿ ಮಾರುದ್ದದ ಚಲನ್ ಸ್ವೀಕರಿಸುತ್ತಿರುವ ವಾಹನ ಸವಾರ

ದಾವಣಗೆರೆ: ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ಪಾವತಿ ಮಾಡಲು ಸರ್ಕಾರ ಶೇ.50% ರಿಯಾಯಿತಿ ನೀಡಿತ್ತು. ಇದರಿಂದ ವಾಹನ ಸವಾರರು ಸರತಿ ಸಾಲಿನಲ್ಲಿ ನಿಂತು ದಂಡ ಪಾವತಿ ಮಾಡಿದ್ದಾರೆ. ಹತ್ತಿಪ್ಪತ್ತು ಪ್ರಕರಣಗಳಲ್ಲಿ 20 ರಿಂದ 30 ಸಾವಿರ ರೂಪಾಯಿ ವರೆಗೂ ದಂಡ ಪಾವತಿ ಮಾಡಿದ್ದಾರೆ. ಇನ್ನು ದಾವಣಗೆರೆ ಉತ್ತರ ಹಾಗೂ ದಕ್ಷಿಣ ಸಂಚಾರಿ ಠಾಣೆಗಳಲ್ಲಿ ದಂಡ ಪಾವತಿಸಿ ಉದ್ದನೆಯ ಚಲನ್ ಪಡೆಯುವ ಮೂಲಕ ಕೆಲ ವಾಹನ ಸವಾರರು ಗಮನ ಸೆಳೆದಿದ್ದಾರೆ. ಉದ್ದನೆಯ …

Read More »