ವಿಜಯಪುರ, ಸೆಪ್ಟೆಂಬರ್ 18: ಸಪ್ಟೆಂಬರ್ 16 ರ ಸಾಯಂಕಾಲ ವಿಜಯಪುರ (Vijayapura) ಜಿಲ್ಲೆ ಚಡಚಣ ಪಟ್ಟಣದ ಎಸ್ಬಿಐ ಬ್ಯಾಂಕ್ (SBI Bank) ದರೋಡೆಯಾಗಿತ್ತು. ಮುಸುಕು ಹಾಕಿದ್ದ ಐವರು ದರೋಡೆಕೋರರ ಗ್ಯಾಂಗ್ ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಇತರೆ ಅಧಿಕಾರಿಗಳು, ಸೆಕ್ಯೂರಿಟಿ ಗಾರ್ಡ್ ಹಾಗೂ ಕೆಲ ಗ್ರಾಹಕರಿಗೆ ಕಂಟ್ರೀ ಪಿಸ್ತೂಲ್ ತೋರಿಸಿ ಕೈಕಾಲು ಕಟ್ಟಿ ಹಾಕಿ ಕೊಠಡಿಯಲ್ಲಿ ಕೂಡಿ ಹಾಕಿ ನಗದು ಚಿನ್ನಾಭರಣ ದೋಚಿತ್ತು. 1.5 ಕೋಟಿ ರೂಪಾಯಿ ನಗದು, 20 ಕೆಜಿ ಚಿನ್ನಾಭರಣದೊಂದಿಗೆ ಪರಾರಿಯಾಗಿತ್ತು. ದರೋಡೆಕರರು ಬಿಡಿ ಬಿಡಿಯಾಗಿ …
Read More »Daily Archives: ಸೆಪ್ಟೆಂಬರ್ 18, 2025
ಬಿಜೆಪಿಯವರು ಮತಗಳ್ಳತನ ಮಾಡುತ್ತಿದ್ದಾರೆ, ನನ್ನ ಬಳಿ ಅಧಿಕೃತ ದಾಖಲೆಗಳಿವೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: “ಬಿಜೆಪಿಯವರೇ ಮತಗಳ್ಳತನ ಮಾಡುತ್ತಿದ್ದಾರೆ. ನನ್ನ ಬಳಿ ಅಧಿಕೃತ ದಾಖಲೆಗಳಿವೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಆಳಂದ ಮತ ಕ್ಷೇತ್ರದಲ್ಲಿ ಮತಗಳವು ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “2023ರ ಚುನಾವಣೆಗೂ ಮುನ್ನ 7,250 ಮತದಾರರ ಹೆಸರು ಏಕಾಏಕಿ ಮತದಾರರಿಗೆ ಗೊತ್ತಿಲ್ಲದೆ ಡಿಲೀಟ್ ಆಗ್ತಿತ್ತು. ಅದರ ಬಗ್ಗೆ ಶಾಸಕ ಬಿ.ಆರ್.ಪಾಟೀಲ್ ಮತ್ತು ನಾನು ಎಲೆಕ್ಷನ್ ಕಮಿಷನ್ಗೆ ದೂರು ಕೊಟ್ಟಿದ್ದೆವು. ಅದರ ಆಧಾರದ ಮೇಲೆ ಕಲಬುರಗಿಯಲ್ಲಿ ಎಫ್ಐಆರ್ ದಾಖಲಿಸಲಾಯಿತು. ಪರಿಶೀಲನೆ …
Read More »ಬೆಂಗಳೂರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಯೋಗ ಗುರು ಬಂಧನ
ಬೆಂಗಳೂರು: ಯೋಗ ಕಲಿಯಲು ಬರುತ್ತಿದ್ದ ಅಪ್ರಾಪ್ತೆಗೆ ಪುಸಲಾಯಿಸಿ ಅಂತಾರಾಷ್ಟ್ರೀಯ ಮಟ್ಟದ ಯೋಗಪಟುವನ್ನಾಗಿ ಮಾಡುವುದಾಗಿ ಆಮಿಷವೊಡ್ಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಯೋಗಗುರುವೊಬ್ಬರನ್ನು ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ. ನಿರಂಜನಾಮೂರ್ತಿ ಬಂಧಿತ ಯೋಗ ಗುರು. ಬಾಲಕಿಯ ಕುಟುಂಬಸ್ಥರು ನೀಡಿದ ದೂರು ಆಧರಿಸಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್. ಆರ್. ನಗರದ ಸನ್ ಶೈನ್ ಇನ್ಸ್ಟಿಟ್ಯೂಟ್ ಹೆಸರಲ್ಲಿ 2019 ರಿಂದ ಆರೋಪಿ ಯೋಗ ತರಗತಿ ನಡೆಸುತ್ತಿದ್ದರು. …
Read More »ಜಾತಿ ಗಣತಿ: ‘ಧರ್ಮ’ ಆಯ್ಕೆ ವಿಚಾರದಲ್ಲಿ ಲಿಂಗಾಯತ ಸಮುದಾಯದಲ್ಲಿ ಹೆಚ್ಚುತ್ತಿರುವ ‘ಬಿರುಕು’
ಬೆಂಗಳೂರು: ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಆಯೋಗ ಇದೇ ತಿಂಗಳ 22ರಿಂದ ನಡೆಸಲಿರುವ ಜಾತಿ ಗಣತಿಗೂ ಮುನ್ನವೇ ಲಿಂಗಾಯತ ಸಮುದಾಯವನ್ನು ಪ್ರತಿನಿಧಿಸುವ ಮಠಾಧೀಶರು ಹಾಗೂ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಮೂಡಿವೆ. ಈ ಹಿನ್ನೆಲೆಯಲ್ಲಿ, ರಾಜ್ಯ ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ಲಿಂಗಾಯತ ಸಮುದಾಯದೊಳಗಿನ ಬಿರುಕುಗಳು ಬಹಿರಂಗವಾಗಿವೆ. ಪಂಚಮಸಾಲಿ ಲಿಂಗಾಯತ ಸ್ವಾಮೀಜಿಗಳ ಸಭೆ: ಬುಧವಾರ ಬೆಂಗಳೂರಿನಲ್ಲಿ ಹರಿಹರ ವೀರಶೈವ ಪಂಚಮಸಾಲಿ ಲಿಂಗಾಯತ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ ಕರೆದಿದ್ದ ಪಂಚಮಸಾಲಿ ಲಿಂಗಾಯತ ಮಠಗಳ ಸ್ವಾಮೀಜಿಗಳು ಮತ್ತು ನಾಯಕರ …
Read More »ಭಾರೀ ಮಳೆಗೆ ಬಾಗಲಕೊಟೆಯಲ್ಲಿ ಮನೆ ಕುಸಿದು ಬಿದ್ದ ಘಟನೆ ನಡೆದಿದೆ.
ವಿಜಯಪುರ ಸೇರಿದಂತೆ ಬಾಗಲಕೊಟೆಯಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದ್ದು ಇದೀಗ ಭಾರೀ ಮಳೆಗೆ ಬಾಗಲಕೊಟೆಯಲ್ಲಿ ಮನೆ ಕುಸಿದು ಬಿದ್ದ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆ ಇಲಕಲ್ ತಾಲ್ಲೂಕಿನ ಗೊನಾಳ ಎಸ್ ಟಿ ಗ್ರಾಮದಲ್ಲಿ. ಯಂಕಣ್ಣ, ಹಾಗೂ ಬಾಗವ್ವ ಮಾದರ ಅವರ ಮನೆ ಸೇರಿದಂತೆ ಮೂರು ಮನೆಗಳ ಮೆಲ್ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮುಂಚಿತವಾಗಿ ಪರಿಣಾಮ ಅರಿತದಿದ್ದರಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ. ಇನ್ನೂ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು. ಜಿಲ್ಲಾಡಳಿತ ಹಾಗೂ ಗ್ರಾಮ …
Read More »ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾರತ್ನ ಪ್ರಶಸ್ತಿ
ಪತ್ರಕರ್ತ ಅಲ್ತಾಫ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾರತ್ನ ಪ್ರಶಸ್ತಿ -ಖಾನಾಪೂರದ ಇನ್ ನ್ಯೂಸ್ ರಿಪೋರ್ಟರ್ ಅಲ್ತಾಫ್ ಮಹಮ್ಮದ್ ಇಕ್ಬಾಲ್ ಬಸರೀಕಟ್ಟಿ ಅವರಿಗೆ ರಾಜ್ಯಮಟ್ಟದ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು ಕಲಾ ಕೌಸ್ತುಭ ಸಂಸ್ಥೆ ದಾಂಡೇಲಿ ಅವರು ಹುಬ್ಬಳ್ಳಿಯ ನಿರಂಜನ ಹಾಲ್, ಸಿದ್ಧಾರೂಢ ಮಠ ಹುಬ್ಬಳ್ಳಿಯಲ್ಲಿ ಏರ್ಪಡಿಸಲಾಗಿದ್ದ ಕವಿಗೋಷ್ಠಿ ಸಮಾರಂಭದಲ್ಲಿ ವಿವಿಧ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿತ್ತು ಇದರಲ್ಲಿ ನಮ್ಮ ಇನ್ ನ್ಯೂಸ್ ಖಾನಾಪೂರ …
Read More »ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಮಹಾಪೌರ ಜ್ಯೋತಿ ಪಾಟೀಲ.
ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಮಹಾಪೌರ ಜ್ಯೋತಿ ಪಾಟೀಲ. – ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕ್ರತಿಯ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ. ಶಿಲ್ಪಕಲೆ, ವಾಸ್ತುಶಿಲ್ಪ ಮತ್ತು ಮರಗೆಲಸ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರ ಕೌಶಲ್ಯ ಮತ್ತು ಪರಿಣತಿಯು ಅನನ್ಯವಾದದ್ದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಹಾಪೌರರಾದ ಜ್ಯೋತಿ ಪಾಟೀಲ ಅವರು ಹೇಳಿದರು. ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ …
Read More »