Breaking News

Daily Archives: ಸೆಪ್ಟೆಂಬರ್ 25, 2025

ಬದುಕಿನ ‘ಯಾನ’ ಮುಗಿಸಿದ ಭೈರಪ್ಪನವರನ್ನು ನೆನೆದ ಮನೆ ಕೆಲಸದವರು; ಮೈಸೂರಿನಲ್ಲಿ ನಾಳೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಮೈಸೂರು : ಸರಸ್ವತಿ ಸನ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರ ಗೌರವಗಳೊಂದಿಗೆ ನಾಳೆ (ಶುಕ್ರವಾರ) ಮಧ್ಯಾಹ್ನ ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ರುದ್ರ ಭೂಮಿಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ. ಬುಧವಾರ ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಅವರಿಗೆ 94 ವರ್ಷ ವಯಸ್ಸಾಗಿತ್ತು. ಮೂಲತಃ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದವರಾದ ಭೈರಪ್ಪ, ಕೆಳದ 50 ವರ್ಷಗಳಿಂದ ಮೈಸೂರಿನ ಉದಯರವಿ ರಸ್ತೆಯಲ್ಲಿರುವ …

Read More »

ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ

ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆ ಚುನಾವಣೆಯ ಹಿನ್ನೆಲೆ ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್’ನ್ನು ಬೆಂಬಲಿಸಿ’ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಇಂದು ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಪ್ಯಾನಲ್’ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ, ಶ್ರೀ ಮಲಪ್ರಭಾ …

Read More »

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಭರಮಣ್ಣ ಉಪ್ಪಾರ

ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಭರಮಣ್ಣ ಉಪ್ಪಾರ ಅವರು ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ, ಸನ್ಮಾನಿಸಿದರು. ‌ ಈ ವೇಳೆ ನೂತನ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ, ಸಮಾಜದ ಅಭಿವೃದ್ಧಿಗೆ ಶ್ರಮಿಸಿ ಎಂದು ಸಚಿವರು ಶುಭ ಹಾರೈಸಿದರು

Read More »

ಪ್ರಜ್ವಲ್ ರೇವಣ್ಣ ಪ್ರಕರಣಗಳ ವಿಚಾರಣೆ ಬೇರೆ ಪೀಠಕ್ಕೆ ವರ್ಗಾಯಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆಗೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್​ ವಜಾಗೊಳಿಸಿದೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಹಾಗೂ ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ಸಿಐಡಿ ಪೊಲೀಸ್‌ ಠಾಣೆ ಮತ್ತು ಹಾಸನದ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರತ್ಯೇಕ ಎರಡು ಪ್ರಕರಣಗಳ …

Read More »

ರಮೇಶ ಕತ್ತಿಗೆ ಯುವಕನ ಸಖತ್ ಪ್ರಶ್ನೆಗಳು

ಕೆಇಬಿ ಸಹಕಾರಿಗೆ ಅಧ್ಯಕ್ಷರು ಇದ್ದರೂ, ಟಿಸಿ ಕೇಳಲು ನಿಮ್ಮ ಮನೆ ಬಾಗಿಲಿಗೆ ಏಕೆ ಬರಬೇಕು? ಮೀಟರ್ ಇದ್ದರೂ ಸಹಕಾರಿಯ ಚುನಾವಣೆಯಲ್ಲಿ ನಮ್ಮನ್ನು ಮತದಿಂದ ವಂಚಿತ ಏಕೆ ಮಾಡಿದ್ದೀರಿ? ರಮೇಶ ಕತ್ತಿಗೆ ಯುವಕನ ಸಖತ್ ಪ್ರಶ್ನೆಗಳು #hukkeri #sankeshwar #KEB

Read More »

ಕಾಲುವೆಗೆ ತಳ್ಳಿ ಪ್ರೇಯಸಿ ಕೊಲೆ ಆರೋಪ: ಯುವಕ ಅರೆಸ್ಟ್

ಶಿವಮೊಗ್ಗ: ಯುವಕನೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಬಲವಂತವಾಗಿ ಭದ್ರಾವತಿ ಕಾಲುವೆಗೆ ತಳ್ಳಿ ಕೊಲೆ ಮಾಡಿರುವುದಾಗಿ ದೂರು ದಾಖಲಾಗಿದೆ. ಭದ್ರಾವತಿ ತಾಲೂಕು ಅಂತರಗಂಗೆ ಬಳಿ ಯರೇಹಳ್ಳಿಯ ಬೋವಿ ಕಾಲೋನಿಯ ಸ್ವಾತಿ ಅಲಿಯಾಸ್ ಮಹಾಲಕ್ಷ್ಮಿ ಮೃತ ಯುವತಿ. ಯುವತಿಯ ಪೋಷಕರು ನೀಡಿದ ದೂರಿನ ಆಧಾರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸೂರ್ಯನನ್ನು ಬಂಧಿಸಲಾಗಿದೆ. ಇವರಿಬ್ಬರೂ ದೂರದ ಸಂಬಂಧಿಗಳಾಗಿದ್ದರು.‌ ಸೆಪ್ಟಂಬರ್ 21 ರಂದು ಯುವತಿಯನ್ನು ಸೂರ್ಯ ಮನೆಯಿಂದ ಕರೆದುಕೊಂಡು ಹೋಗಿ ಗ್ರಾಮದ …

Read More »