ಹುಕ್ಕೇರಿ : ಆರೋಗ್ಯಕರ ಆಹಾರ ಸೇವನೆಯಿಂದ ಸಂತೋಷದ ಜೀವನ ನಡೆಸ ಬಹುದು – ನ್ಯಾಯಾಧೀಶ ರಾಜಣ್ಣಾ. ಆರೋಗ್ಯಕರ ಆಹಾರದಿಂದ ಸಂತೋಷದ ಜೀವನ ನಡೆಸಬಹುದು ಎಂದು ಹುಕ್ಕೇರಿ ಹಿರಿಯ ನ್ಯಾಯಾಧೀಶ ರಾಜಣ್ಣ ಸಂಕಣ್ಣವರ ಹೇಳಿದರು. ಇಂದು ಹುಕ್ಕೇರಿ ನಗರದಲ್ಲಿ ವಿಶ್ವ ಪೌಷ್ಟಿಕ ಆಹಾರ ದಿನಾಚಾರಣೆ ಅಂಗವಾಗಿ ಕಾನೂನು ಸೇವಾ ಸಮಿತಿ ,ನ್ಯಾಯವಾದಿಗಳ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ …
Read More »Monthly Archives: ಸೆಪ್ಟೆಂಬರ್ 2025
ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ.
ಧಾರವಾಡದಕ್ಲಿ ಸಾರ್ವಜನಿಕ ಗಣೇಶನ ಮೂರ್ತಿಗಳ ದರ್ಶನ ಪಡೆದ ಕೇಂದ್ರ ಸಚಿವ ಜೋಶಿ…. ವಿಘ್ನ ನಿವಾರಕ ಮೂರ್ತಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದ ಜೋಶಿ. – ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಭಾನುವಾರ ತಡ ಸಂಜೆ ಧಾರವಾಡ ನಗರದ ಐದಕ್ಕೂ ಹೆಚ್ಚು ಸಾರ್ವಜನಿಕ ಗಣೇಶನ ದರ್ಶನ ಪಡೆದುಕೊಂಡು, ವಿಶೇಷ ಪೂಜೆ ಸಲ್ಲಿಸಿ ವಿಘ್ನ ನಿವಾರಕನ ಕೃಪೆಗೆ ಪಾತ್ರರಾದರು. ವೈ- ಧಾರವಾಡದ ಟಿಕಾರೆ ರೋಡ್ ಗಣಪತಿ, ಸುಭಾಸ್ ರಸ್ತೆ, ಹೆಬ್ಬಳ್ಳಿ ಅಗಸಿ …
Read More »ಶೆಟ್ಟಿ ಗಲ್ಲಿ ಗಣೇಶೋತ್ಸವ ಮಂಡಳದಿಂದ ಮಹಾಪ್ರಸಾದ ಶ್ರೀ ಸತ್ಯನಾರಾಯಣಸ್ವಾಮಿಯ ದರ್ಶನ ಪಡೆದ ಭಕ್ತರು
ಶೆಟ್ಟಿ ಗಲ್ಲಿ ಗಣೇಶೋತ್ಸವ ಮಂಡಳದಿಂದ ಮಹಾಪ್ರಸಾದ ಶ್ರೀ ಸತ್ಯನಾರಾಯಣಸ್ವಾಮಿಯ ದರ್ಶನ ಪಡೆದ ಭಕ್ತರು ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳ ಶೆಟ್ಟಿ ಗಲ್ಲಿ ಇಂದು 5ನೇ ದಿನ ಶ್ರೀ ಸತ್ಯನಾರಾಯಣ ಪೂಜೆ ಮಹಾಪ್ರಸಾದದ ಆಯೋಜನೆ ಮಾಡಿದ ಮಂಡಳ ಸಾವಿರಾರು ಜನರು ಪಡೆದು ಲಾಭ ಬೆಳಗಾವಿಯ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು. ಬೆಳಗಾವಿ ಮಹಾನಗರದ ಶೆಟ್ಟಿ ಗಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಮಂಡಳದ ವತಿಯಿಂದ ಪ್ರತಿಷ್ಠಾಪಿಸಲಾದ …
Read More »ರಾಷ್ಟ್ರಪತಿಗಳ ಮೈಸೂರು ಪ್ರವಾಸ: ಚಾಮುಂಡೇಶ್ವರಿ ದರ್ಶನ, ಅರಮನೆಗೆ ಭೇಟಿ
ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರದಿಂದ (ಸೆ.1) ಎರಡು ದಿನ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೊತೆಗೆ ಆಯಿಷ್ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿಗಳ ಸ್ವಾಗತಕ್ಕೆ ನಗರದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯಲ್ಲಿ ಸೆ.1 ರಂದು ನಡೆಯಲಿರುವ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ಆಗಮನ …
Read More »ಕುಕ್ಕೆ ದೇವಳದಲ್ಲಿ ಅದ್ಧೂರಿಯಾಗಿ ನೆರವೇರಿದ ಹೊಸ್ತಾರೋಗಣೆ
ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ನಾಗಾರಾಧನೆಯ ಪುಣ್ಯಕ್ಷೇತ್ರ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಹೊಸ್ತಾರೋಗಣೆ ಮತ್ತು ಕದಿರು ಕಟ್ಟುವ ಕಾರ್ಯವು ವಿವಿಧ ವೈಧಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ಭಾನುವಾರ ನೆರವೇರಿತು. ಈ ನಿಮಿತ್ತ ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಮೂಲ ವಿಗ್ರಹಕ್ಕೆ ಪಂಚಾಮೃತ ಮಹಾಭಿಷೇಕವನ್ನು ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ನೆರವೇರಿಸಿದರು. ತೆನೆ ಮೆರವಣಿಗೆ: ಅಭಿಷೇಕದ ಬಳಿಕ ತೆನೆ ತರಲು ಪ್ರಧಾನ ಅರ್ಚಕ ಸೀತಾರಾಮ …
Read More »ಜಾತಿ ನೋಡಲ್ಲ; ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೇ ನಮ್ಮ ಸರ್ಕಾರದ ಗುರಿ: ಸಿಎಂ
ಮೈಸೂರು : ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ ಚೈತನ್ಯ ಕೊಡಲು ಅಂದು ಭಾಗ್ಯಗಳು, ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ, ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಉಪ್ಪಾರ ಸಮುದಾಯ ಭವನ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈ ನೆಲದ ದಾರ್ಶನಿಕರು, ಮಹಾನುಭಾವರು ಮನುಕುಲಕ್ಕೆ ನೀಡಿದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು …
Read More »ಕೆ.ಎನ್.ರಾಜಣ್ಣ ಮನೆಗೆ ವಿವಿಧ ಮಠಾಧೀಶರ ಭೇಟಿ:
ತುಮಕೂರು: ಸಚಿವ ಸಂಪುಟದಿಂದ ವಜಾಗೊಂಡಿರುವ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ವಿವಿಧ ಮಠಗಳ 15ಕ್ಕೂ ಹೆಚ್ಚು ಸ್ವಾಮೀಜಿಗಳು ಭಾನುವಾರ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, “ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಿರುವುದು ಇಡೀ ಹಿಂದುಳಿದ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗಿದೆ. ಅವರನ್ನು ವಾಪಸ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸುವ ಮೂಲಕ ಹಿಂದುಳಿದ ವರ್ಗಗಳ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕೆಂಬ ಆಶಯದೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಅನ್ನು …
Read More »ಉತ್ತರ ಕನ್ನಡ: ಗಮನ ಸೆಳೆದ RCB ಗಣಪತಿ: ಅಂಕೋಲಾದ ಅವಾರ್ಸಾದಲ್ಲಿ ಕಪ್ ಎತ್ತಿ ಹಿಡಿದ ಗಣಪ
ಅಂಕೋಲಾ(ಉತ್ತರ ಕನ್ನಡ): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಐಪಿಎಲ್ ಕಪ್ ಗೆದ್ದ ಸಂಭ್ರಮದಲ್ಲಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಅವರ್ಸಾದಲ್ಲಿ ವಿಶೇಷವಾಗಿ ನಿರ್ಮಾಣಗೊಂಡ ಆರ್‌ಸಿಬಿ ಗಣಪ ಜನಮನ ಸೂರೆಗೊಳ್ಳುತ್ತಿದೆ. ಕ್ರಿಕೆಟಿಗ ವಿರಾಟ್ ಕೊಹ್ಲಿ ಪಕ್ಕ ಬಸ್ ಏರಿ ಕಪ್ ಹಿಡಿದು ಗಣೇಶ ನಿಂತಿದ್ದು, ಈ ಹಿಂದೆ ರಾಜ್ಯದಾದ್ಯಂತ ನಡೆದ ಸಂಭ್ರಮಾಚರಣೆಯನ್ನು ಮತ್ತೆ ಮರುಕಳಿಸುವಂತೆ ಮಾಡಲಾಗಿದೆ. ಅಂಕೋಲಾ ಅವರ್ಸಾದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ 42ನೇ ವರ್ಷದ ಸಾರ್ವಜನಿಕ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿದೆ. …
Read More »ಮನೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ 15 ವರ್ಷದ ಬಾಲಕಿ.. ಸಹೋದರನಿಂದಲೇ ಕೃತ್ಯ!
ಶಿವಮೊಗ್ಗ: ಕೆಲ ದಿನಗಳ ಹಿಂದೆ ಯಾದಗಿರಿ ಜಿಲ್ಲೆಯಲ್ಲಿ ಶಾಲಾ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ್ದ ಘಟನೆ ವರದಿಯಾಗಿತ್ತು. ಈ ಘಟನೆ ಮಾಸುವ ಮುನ್ನವೇ, ಮನೆಯ ಶೌಚಾಲಯದಲ್ಲಿ 15 ವರ್ಷದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಗೆ ಹೆರಿಗೆಯಾದ ನಂತರ ಬಾಲಕಿಗೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಕುರಿತು ಬಾಲಕಿಯ ಪೋಷಕರು ದೂರು ನೀಡಿರುವ ದೂರಿನ ಅನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ …
Read More »