Breaking News

Monthly Archives: ಸೆಪ್ಟೆಂಬರ್ 2025

ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ… ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದೆ. ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯುತ್ತಿದ್ದು, ವಸತಿ ಇಲಾಖೆಯಿಂದ ರಾಜ್ಯದಲ್ಲಿ ಕೈಗೊಂಡಿರುವ ಕೆಲಸಗಳು ಹಾಗೂ ಮುಂದೆ ಕೈಗೊಳ್ಳಲ್ಲಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ವಿವರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಹಲವಾರು …

Read More »

ಮತ್ತೆ ಪಾಚಿಕಟ್ಟಿದ ಸುವರ್ಣ ಸೌಧ:

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಬೆಳಗಾವಿಯ ಸುವರ್ಣ ವಿಧಾನಸೌಧ ಮತ್ತೆ ಪಾಚಿಕಟ್ಟಿದೆ. ಸ್ವಚ್ಛತೆಗೆ ಅನುದಾನ ಕೊರತೆ ಎದುರಾಗಿದೆ. ಜೊತೆಗೆ 1.10 ಕೋಟಿ ವಿದ್ಯುತ್ ಬಿಲ್ ಸಹ ಕಟ್ಟಿಲ್ಲ. ಅಲ್ಲದೇ ಇಲ್ಲಿನ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು 11 ಕೋಟಿ ಅನುದಾನಕ್ಕಾಗಿ ಕಳುಹಿಸಿದ್ದ ಪ್ರಸ್ತಾವನೆಗೂ ರಾಜ್ಯ ಸರ್ಕಾರ ಸೊಪ್ಪು ಹಾಕದೇ ಇರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.   ಹೌದು, ಒಂದೆಡೆ ಸುವರ್ಣ ವಿಧಾನಸೌಧಕ್ಕೆ ರಾಜ್ಯಮಟ್ಟದ ಕಚೇರಿಗಳ ಸ್ಥಳಾಂತರ ಆಗಿಲ್ಲ. ಮತ್ತೊಂದೆಡೆ …

Read More »

ಒಂದೇ ಕುಟುಂಬದ ನಾಲ್ವರು ದುರಂತ ಅಂತ್ಯ; ತಾಯಿ, ಓರ್ವ ಮಗ ಪಾರು

ಬೀದರ್​: ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರ ಕಾಲುವೆ ಬಳಿ ಮಂಗಳವಾರ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮರೂರ ಹತ್ತಿರ ಹಾದುಹೋಗುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಬ್ಬರು ಬದುಕುಳಿದಿದ್ದಾರೆ. ಬೀದರ್​​ ನಗರದ ಮೈಲೂರು ಬಡಾವಣೆಯ ಶಿವಮೂರ್ತಿ ಮಾರುತಿ (45), ಮತ್ತು ಅವರ 9 ವರ್ಷ, 7 ವರ್ಷ ಹಾಗೂ ಏಳು ತಿಂಗಳು ವಯಸ್ಸಿನ ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ. ಶಿವಮೂರ್ತಿ ಅವರ ಪತ್ನಿ ರಮಾಬಾಯಿ, ಮತ್ತು …

Read More »

ನೇಪಾಳಕ್ಕೆ ಪ್ರವಾಸ ಹೋದ 39 ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ CSಗೆ ಸಿಎಂ ಸೂಚನೆ

ಬೆಂಗಳೂರು: ಹಿಂಸಾಚಾರಪೀಡಿತ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ(ಸಿಎಸ್) ಶಾಲಿನಿ ರಜನೀಶ್ ಅವರಿಗೆ ಮಂಗಳವಾರ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮಕ್ಕೆ‌ ಸೂಚನೆ ನೀಡಿದ್ದಾರೆ. ನೇಪಾಳಕ್ಕೆ ಪ್ರವಾಸ ಹೋಗಿರುವ 39 ಮಂದಿ ಕನ್ನಡಿಗರು ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಮಾಹಿತಿ ಇದೆ. ಸಾಮಾಜಿಕ ಜಾಲತಾಣಗಳ ನಿಷೇಧ, ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ನೇಪಾಳದಲ್ಲಿ ಯುವಜನರು …

Read More »

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

ಶಾಸಕ ಕೆ.ಸಿ. ವೀರೇಂದ್ರಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ ಬೆಂಗಳೂರು: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಇದುವರೆಗೂ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಬೆಳ್ಳಿ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಸ್ವತ್ತುಗಳನ್ನು ಜಪ್ತಿ ಮಾಡಿದೆ. …

Read More »

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಜರುಗಿದ ಖಾನಾಪೂರ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಅಲ್ಲಿನ ಶಾಸಕ ವಿಠ್ಠಲ ಹಲಗೇಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠಯವರೊಂದಿಗೆ ಸುದೀರ್ಘ ಚರ್ಚೆಯನ್ನು ನಡೆಸಿದರು. ಅಕ್ಟೋಬರ್ …

Read More »

ನಟ ದರ್ಶನ್​ಗೆ ಪರಪ್ಪನ ಅಗ್ರಹಾರವೇ ಫಿಕ್ಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಹೆಚ್ಚುವರಿ ಹಾಸಿಗೆ – ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜೈಲಿನ ಕೈಪಿಡಿಯಲ್ಲಿರುವ ನಿಯಮಗಳನ್ನು ಅನುಸರಿಸಬೇಕು ಎಂದು ತಿಳಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ವರ್ಗಾಯಿಸಬೇಕೆಂದು ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ದರ್ಶನ್ ಪರ ವಕೀಲ …

Read More »

ಯೋಗೇಶ್​ಗೌಡ ಕೊಲೆ ಪ್ರಕರಣ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು

ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ಆದೇಶದಂತೆ ಜೈಲು ವಾಸದಲ್ಲಿರುವ ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಎರಡು ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದೆ. ಮಗನ ಶಸ್ತ್ರಚಿಕಿತ್ಸೆ ಕಾರಣ ನೀಡಿ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ವಿನಯ್​ ಕುಲಕರ್ಣಿ ಸಲ್ಲಿಸಿದ್ದ ಮಧ್ಯಂತರ ಆರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್​ ಅವರು, …

Read More »

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ವಿಜಯಪುರ…:ಪಿಪಿಪಿ ವಿರುದ್ಧ ಭುಗಿಲೆದ್ದ ಆಕ್ರೋಶ: ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವವಿಲ್ಲದೆ ಸಂಪೂರ್ಣ ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಆಗ್ರಹಿಸಿ ಹೋರಾಟ ಸಮಿತಿಯ ನಿಯೋಗವು ಬೃಹತ್ ಪ್ರತಿಭಟನೆ ನಡೆಸಿತು. ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ನಗರದ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು. ಸಭೆ ಸೇರಿದ ನಿಯೋಗವು ಯಾವುದೇ …

Read More »

ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ.

ಹುಕ್ಕೇರಿ : ನೇತ್ರ ದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿ – ನಿಜಲಿಂಗೇಶ್ವರ ಮಹಾಸ್ವಾಮಿಜಿ. ನೇತ್ರ ದಾನ ಮಾಡುವ ಮೂಲಕ ಇಬ್ಬರ ಬಾಳಿಗೆ ಬೆಳಕಾಗಬೇಕು ಎಂದು ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಜಿ ಹೇಳಿದರು. ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ ಅಂಗವಾಗಿ ಸಂಕೇಶ್ವರ ನಗರದ ಎಂ ಎಂ ಜೋಶಿ ನೇತ್ರ ವಿಜ್ಞಾನ ಸಂಸ್ಥೆ ಹಮ್ಮಿಕೊಂಡ ಜಾಗ್ರತಾ ಜಾಥಾಕ್ಕೆ ನಿಡಸೋಸಿ ಮಠದ ನಿಜಲಿಂಗೇಶ್ವರ ಮಹಾಸ್ವಾಮಿಗಳು ಮತ್ತು ಡಾಕ್ಟರ ಶೀಲಾ ದೋಡಬಂಗಿ ಲಕ್ಷ್ಮಿ ದೇವಿ …

Read More »