ಬೆಂಗಳೂರು/ಮೈಸೂರು: ಅಕ್ಟೋಬರ್ 2ರಂದು ದೇಶಾದ್ಯಂತ ಮಹಾತ್ಮ ಗಾಂಧಿ ಅವರ ಜಯಂತಿ ಆಚರಿಸಲಾಗುತ್ತದೆ. ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗಾಂಧಿ ಜಯಂತಿ ಅಂಗವಾಗಿ ಇಂದು ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಸಿಎಂ ಗೌರವಾರ್ಪಣೆ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ಇಂದು ಮಾಜಿ ಪ್ರಧಾನ ಮಂತ್ರಿ …
Read More »Daily Archives: ಅಕ್ಟೋಬರ್ 2, 2025
ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗುತ್ತಿದೆ 30 ಜಿಲ್ಲೆಗಳ ಸ್ತಬ್ಧಚಿತ್ರ
ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗುವ ರಾಜ್ಯದ ನಾನಾ ಜಿಲ್ಲೆಗಳ ಸ್ತಬ್ಧಚಿತ್ರಗಳು ಅತ್ಯಂತ ಆಕರ್ಷಣೆಯಾಗಿದ್ದು, ಅವುಗಳಲ್ಲಿ ರೈಲ್ವೆ ಇಲಾಖೆ ಸ್ತಬ್ಧಚಿತ್ರವು ಅದ್ಭುತವಾಗಿ ಮೂಡಿ ಬಂದಿದೆ. 30 ಜಿಲ್ಲೆಗಳ ಸ್ತಬ್ಧಚಿತ್ರಗಳು ಸೇರಿದಂತೆ ವಿವಿಧ ನಿಗಮ, ಇಲಾಖೆಗಳ 35ಕ್ಕೂ ಹೆಚ್ಚಿನ ಸ್ತಬ್ಧಚಿತ್ರಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗುತ್ತಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಕ್ತಿ ಯೋಜನೆಯ ಯಶೋಗಾಥೆ, ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ವಿಜಯದ ರನ್ವೇ ಭಾರತದ ಆಕಾಶಕ್ಕೆ ಎಚ್ಎಎಲ್ನ ಶಕ್ತಿ, ಭಾರತೀಯ ರೈಲ್ವೆ ಇಲಾಖೆ …
Read More »ಬೆಂಬಲ ಬೆಲೆಯಲ್ಲಿ ಸೋಯಾಬಿನ್, ಶೇಂಗಾ ಖರೀದಿ; ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಿ: ಸಚಿವ ಶಿವಾನಂದ ಪಾಟೀಲ್
ಬೆಂಗಳೂರು: ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಜಿಲ್ಲಾ ಟಾಸ್ಕ್‌ಪೋರ್ಸ್ ಸಮಿತಿಗಳಿಗೆ ಸೂಚಿಸಿದ್ದಾರೆ. ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328 ರೂ. ಹಾಗೂ ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, …
Read More »ಮಹಾತ್ಮ ಗಾಂಧಿ ಭೇಟಿ ನೀಡಿದ್ದ ಗಾಂಧಿ ನಗರ
ದಾವಣಗೆರೆ : ಭಾರತ ದೇಶವನ್ನು ಆಂಗ್ಲರ ಕಪಿಮುಷ್ಟಿಯಿಂದ ಬಿಡುಗಡೆ ಮಾಡಬೇಕು ಎಂದು ಸ್ವಾತಂತ್ರ್ಯ ಹೋರಾಟಕ್ಕೆ ಧುಮ್ಮಿಕ್ಕಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಜನರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದರು. ಈ ಸಂಬಂಧ ಅವರು 1934ರಲ್ಲಿ ದಾವಣಗೆರೆ ಜಿಲ್ಲೆಯ ಎಕೆ ಹಟ್ಟಿಗೆ ಭೇಟಿ ನೀಡಿದ್ದರು. ಅಲ್ಲದೇ, ಗಾಂಧಿಜೀ ಅವರು ಹರಿಜನರೊಂದಿಗೆ ಸಂವಾದ ನಡೆಸಿದ್ದಕ್ಕಾಗಿ ಇಲ್ಲಿಗೆ ಗಾಂಧಿನಗರ ಎಂದು ನಾಮಕರಣ ಕೂಡಾ ಮಾಡಲಾಗಿದೆ. ಎಕೆ ಹಟ್ಟಿಯಿಂದ ಗಾಂಧಿ ನಗರ ಎಂದು ನಾಮಕರಣ: ಈ ಸಂವಾದದಲ್ಲಿ …
Read More »ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ಮೈಸೂರು: ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಜೆ 4.42 ರಿಂದ 5.06 ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಶಿವರಾಜ ಎಸ್.ತಂಗಡಗಿ, ಯದುವಂಶಸ್ಥ, ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತ …
Read More »ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರು ಗಾಂಧಿ ಜಯಂತಿ ಆಚರಿಸಿಲ್ಲ ಎಂಬ ಆರೋಪ
ಚಿಕ್ಕೋಡಿ (ಬೆಳಗಾವಿ) : ದೇಶಾದ್ಯಂತ ಇವತ್ತು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 156ನೇ ಜನ್ಮ ದಿನವನ್ನು ಆಚರಣೆ ಮಾಡಲಾಗಿದೆ. ಆದರೆ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರು ಗಾಂಧಿ ಜಯಂತಿಯನ್ನು ಆಚರಿಸದೇ ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿದೆ. ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಕೂಡ ಗಾಂಧಿ ಜಯಂತಿಯನ್ನು ಆಚರಿಸಿಕೊಂಡು ಬಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಆದರೆ ಝುಂಜರವಾಡ ಗ್ರಾಮದ …
Read More »ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಕಣಬರಗಿ ನಿವಾಸಿಯೊಬ್ಬರು ಸಾವಯವ ಕೃಷಿಯತ್ತ ಸಾಗಿ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ.
ಬೆಳಗಾವಿ : ಕಲಿತಿದ್ದು ಡಿಪ್ಲೋಮಾ ಮೆಕ್ಯಾನಿಕಲ್ ಇಂಜಿನಿಯರಿಂಗ್. ಬಾರ್ ಉದ್ಯಮ, ಸರ್ಕಾರಿ ಗುತ್ತಿಗೆ ಸೇರಿ ಮತ್ತಿತರ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡಿದ್ದರು. ವ್ಯಾಪಾರದಲ್ಲಿ ಲಕ್ಷ ಲಕ್ಷ ಗಳಿಸಿದರೂ ಮನಸ್ಸಿಗೆ ಮಾತ್ರ ನೆಮ್ಮದಿ ಇರಲಿಲ್ಲ. ಈಗ ಅವರಿಗೆ ನೆಮ್ಮದಿ ಸಿಕ್ಕಿದ್ದು, ಸಾವಯವ ಕೃಷಿಯಲ್ಲಿ. 80ರ ಇಳಿ ವಯಸ್ಸಿನಲ್ಲೂ ಉತ್ತಮ ಆರೋಗ್ಯದ ಜೊತೆಗೆ ಲಕ್ಷ ಲಕ್ಷ ಆದಾಯ ಗಳಿಸುವ ಮೂಲಕ ಯುವಕರನ್ನೂ ನಾಚಿಸುವಂತೆ ಜಿಲ್ಲೆಯ ಕೃಷಿಕರೊಬ್ಬರು ಸಾಧನೆ ಮಾಡಿದ್ದಾರೆ. ಹೌದು, ತಲೆ ಮೇಲೆ ಟೋಪಿ, ಸಫಾರಿ …
Read More »2 ಬಾರಿ ಮಾರಾಟವಾದ ಜಮೀನಿನ ಹಕ್ಕುಗಳ ಮರುಸ್ಥಾಪನೆಗೆ PTCL ಕಾಯ್ದೆಯಡಿ ಅರ್ಜಿ ಸಲ್ಲಿಸಲು ಅವಕಾಶವಿದೆ: ಹೈಕೋರ್ಟ್
ಬೆಂಗಳೂರು: ಪರಿಶಿಷ್ಟ ವರ್ಗದವರಿಗೆ ಸರ್ಕಾರದಿಂದ ಮಂಜೂರಾದ ಜಮೀನನ್ನು ಮಾರಾಟ ಮಾಡಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲವು ಜಮೀನುಗಳ ಪರಾಭಾರೆ ನಿಷೇಧ) ಕಾಯಿದೆ (ಪಿಟಿಸಿಎಲ್)ಯಡಿ ಹಿಂಪಡೆದು, ಅದೇ ಭೂಮಿಯನ್ನು ಮತ್ತೆ ಮಾರಾಟ ಮಾಡಿ ಮರು ಸ್ಥಾಪನೆಗೆ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ ಎನ್ನಲಾಗದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಮಂಜೂರಾದ ಭೂಮಿ ಒಮ್ಮೆ ಪುನಃಸ್ಥಾಪನೆಯಾದ ಬಳಿಕ ಕಾನೂನು ಬದ್ಧ ಉತ್ತರಾಧಿಕಾರಿಗಳ ಪರವಾಗಿ ಹಕ್ಕುಗಳನ್ನು ಮರು ಸ್ಥಾಪಿಸುವುದಕ್ಕೆ ಕೋರಿ ಅರ್ಜಿ ಸಲ್ಲಿಸಲು …
Read More »ದಸರಾ ಜಂಬೂಸವಾರಿ ಇಂದು: ಭೀಮನ ತೂಕ 440 ಕೆ.ಜಿ ಹೆಚ್ಚಳ, ಉಳಿದ ಆನೆಗಳ ತೂಕ ಹೀಗಿದೆ
ಮೈಸೂರು: ಆಯುಧ ಪೂಜೆಯ ದಿನವಾದ ನಿನ್ನೆ(ಬುಧವಾರ) 14 ದಸರಾ ಆನೆಗಳ ತೂಕ ಹಾಕಲಾಯಿತು. ಭೀಮ ಆನೆಯ ತೂಕ 440 ಕೆ.ಜಿ ಹೆಚ್ಚಳವಾಗಿದ್ದು ಕಂಡುಬಂದಿದ್ದು, ಗಜಪಡೆಯಲ್ಲಿ ಇವನೇ ಬಲಶಾಲಿಯಾಗಿದ್ದಾನೆ. ಶಿಬಿರಗಳಿಂದ ಅರಮನೆಗೆ ಬಂದಾಗ ಯಾವ ಆನೆ ಎಷ್ಟು ತೂಕವಿತ್ತು, ಈಗ ಎಷ್ಟು ತೂಕವಿದೆ ಎಂಬ ಮಾಹಿತಿ ಪಡೆಯಲು ಆನೆಗಳನ್ನು ತೂಕ ಹಾಕಲಾಗುತ್ತದೆ. ಆನೆಗಳು ಅರಮನೆಗೆ ಬಂದಾಗ(ಕೆ.ಜಿ) ಹೆಚ್ಚಳವಾದ ತೂಕ(ಕೆ.ಜಿ) ಒಟ್ಟು ತೂಕ(ಕೆ.ಜಿ) ಅಭಿಮನ್ಯು 5635 275 5910 ಲಕ್ಷ್ಮಿ 3940 210 4150 …
Read More »ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲ ಬಿಡುಗಡೆ
ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ. ತೆರಿಗೆ ಪಾಲನ್ನು ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕಕ್ಕೆ 3,705 ಕೋಟಿ ರೂ ಹಂಚಿಕೆ ಮಾಡಲಾಗಿದೆ. ರಾಜ್ಯಗಳ ಅಭಿವೃದ್ಧಿ/ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಮತ್ತು ಬಂಡವಾಳ ವೆಚ್ಚ ವೇಗಗೊಳಿಸಲು ಹಾಗೂ ಮುಂಬರುವ ಹಬ್ಬಗಳ ಋತುವಿನ ಹಿನ್ನೆಯಲ್ಲಿ ಕೇಂದ್ರ ಅಕ್ಟೋಬರ್ 1 ರಂದು ರಾಜ್ಯ ಸರ್ಕಾರಗಳಿಗೆ ಹೆಚ್ಚುವರಿ 1,01,603 ಕೋಟಿ ರೂ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ ಎಂದು …
Read More »