Breaking News

Daily Archives: ಅಕ್ಟೋಬರ್ 3, 2025

GST ಸರಳೀಕರಣದಿಂದ ರಾಜ್ಯಕ್ಕೆ 15 ಸಾವಿರ ಕೋಟಿ ನಷ್ಟ: ಮುಖ್ಯಮಂತ್ರಿ

ಮೈಸೂರು: ಬಿಹಾರ ಚುನಾವಣೆ ಹಿನ್ನೆಲೆ ಜಿಎಸ್​​ಟಿ ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ತಮ್ಮ ನಿವಾಸದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಜಿಎಸ್​​ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್​ಟಿ ಜಾರಿಗೆ ತಂದು ಜಿಎಸ್​ಟಿ ದರ ನಿಗದಿಪಡಿಸಿತು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ …

Read More »

ದೇಶದಲ್ಲಿಯೇ ಅತಿ ಹೆಚ್ಚು ಸೈಬರ್ ಅಪರಾಧ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದೆ. ಎನ್‌ಸಿಆರ್‌ಬಿ (ರಾಷ್ಟ್ರೀಯ ಅಪರಾಧ ದಾಖ

ಬೆಂಗಳೂರು: ಭಾರತದ ಸಿಲಿಕಾನ್ ವ್ಯಾಲಿ, ಐಟಿ ನಗರಿ ಬೆಂಗಳೂರಿನಲ್ಲಿ 2023ರಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಸೋಮವಾರ ಬಿಡುಗಡೆಗೊಳಿಸಿರುವ 2023ರ ದತ್ತಾಂಶದಲ್ಲಿ ಈ ಮಾಹಿತಿ ಬಹಿರಂಗಗೊಂಡಿದ್ದು, ಈ ಪಟ್ಟಿಯಲ್ಲಿ ಬೆಂಗಳೂರು ಅಗ್ರಸ್ಥಾನ ಪಡೆದುಕೊಂಡಿದೆ. ಎನ್‌ಸಿಆರ್‌ಬಿ (ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ) ಬಿಡುಗಡೆಗೊಳಿಸಿರುವ ಅಂಕಿ- ಅಂಶಗಳನ್ವಯ 2023ರಲ್ಲಿ ಬೆಂಗಳೂರಿನಲ್ಲಿ ಒಟ್ಟು 17,631 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. 2022ರಲ್ಲಿ ದಾಖಲಾದ (9,940) …

Read More »

ಗ್ಯಾರಂಟಿ ಕಾರ್ಯಕ್ರಮ ತರಲು ಹೋಗಿ ರಾಜ್ಯ ಬರಡಾಗಿದೆ: ಹಣಕಾಸು ಸ್ಥಿತಿ ಹದಗೆಟ್ಟಿದೆ: ಹೆಚ್. ಡಿ. ದೇವೇಗೌಡ

ಬೆಂಗಳೂರು : ಗ್ಯಾರಂಟಿ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಲು ಹೋಗಿ ಇಂದು ರಾಜ್ಯ ಬರಡಾಗಿದೆ. ಹಣಕಾಸಿನ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಆರೋಪಿಸಿದ್ದಾರೆ. ಜೆ. ಪಿ. ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಮಾತನ್ನು ನಾನು ಹೇಳುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಅವರಲ್ಲೇ ಗೊಂದಲ ಇದೆ. ದುಡ್ಡಿಲ್ಲ ದುಡ್ಡಿಲ್ಲ ಅಂತಿದ್ದಾರೆ. ಸರ್ಕಾರ ಇಂಥ ಅತಿವೃಷ್ಟಿ ಬಂದಾಗ ತನ್ನ ಸಂಪನ್ಮೂಲದಿಂದ ಸಂಕಷ್ಟಕ್ಕೀಡಾದ ಜನರಿಗೆ ಶಕ್ತಿ ಮೀರಿ ಸಹಾಯ …

Read More »

ವಿಜಯನಗರ: 5.25 ಕೋಟಿ ಇನ್ಶೂರೆನ್ಸ್​ ಹಣಕ್ಕಾಗಿ ಕೊಲೆ: ಅಪಘಾತವೆಂದು ಬಿಂಬಿಸಲು ಯತ್ನಿಸಿದ ಆರೋಪಿಗಳ​ ಬಂಧನ

ವಿಜಯನಗರ: ಇನ್ಶೂರೆನ್ಸ್​​​ ಹಣಕ್ಕಾಗಿ ಕೊಲೆ ಮಾಡಿ, ಅದನ್ನು ಅಪಘಾತ ಎಂದು ಬಿಂಬಿಸಲು ಪ್ರಯತ್ನಪಟ್ಟ ಹಂತಕರನ್ನು ಸೆರೆ ಹಿಡಿಯುವಲ್ಲಿ ಹೊಸಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸಪೇಟೆ ಹೊರವಲಯದಲ್ಲಿ ವ್ಯಕ್ತಿಯೊಬ್ಬನನ್ನು ಅಪಘಾತದಲ್ಲಿ ಮೃತಪಟ್ಟಂತೆ ತೋರಿಸಿ, 5.25 ಕೋಟಿ ರೂ. ಇನ್ಶೂರೆನ್ಸ್ ಹಣ ಲಪಟಾಯಿಸುವ ಯತ್ನವನ್ನು ಮಾಡಿದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯನ್ನು ಹೊಸಪೇಟೆಯ ಕೌಲ್ ಪೇಟೆಯ ನಿವಾಸಿ ಗಂಗಾಧರ ಹಾಗೂ ಬಂಧಿತರನ್ನು ಕೊಪ್ಪಳ ಜಿಲ್ಲೆಯ ಕೃಷ್ಣಪ್ಪ, ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಅಜೇಯ, …

Read More »

ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ ಗೋಕಾಕ ನಗರದ ಗೃಹಕಚೇರಿಯಲ್ಲಿ ಬಿಡುಗಡೆ

ಜಿಲ್ಲಾ ಪಂಚಾಯತ್ ಕಾರ್ಯಾಲಯ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ ಮತ್ತು ಚಿಕ್ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ “ಬೆಳಗಾವಿ ಜಿಲ್ಲಾ ಟ್ಯಾಲೆಂಟ್ ಸರ್ಚ್ ಪರೀಕ್ಷೆ – ಕನಸುಗಳಿಗೆ ಚಿನ್ನದ ದಾರಿ, ಪ್ರತಿಭೆಗೆ ಹೊಸ ವೇದಿಕೆ – 2025” ರ ಮಾಹಿತಿ ಪತ್ರವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಗೋಕಾಕ ನಗರದ ಗೃಹಕಚೇರಿಯಲ್ಲಿ ಬಿಡುಗಡೆ ಮಾಡಿದರು ಜಿಲ್ಲಾ ಪಂಚಾಯತ್ ಬೆಳಗಾವಿ ವತಿಯಿಂದ, ಜಿಲ್ಲೆಯ ಸರಕಾರಿ ಪ್ರೌಢಶಾಲೆಗಳ 9 ಮತ್ತು …

Read More »

ಮಂಗಳೂರು ಸೆಂಟ್ರಲ್‌ನಿಂದ ಬೆಂಗಳೂರು ಮಾರ್ಗವಾಗಿ ನವದೆಹಲಿಗೆ ಪ್ರಪ್ರಥಮ ವಿಶೇಷ ರೈಲು: ಅ.5ರಿಂದ ಸೇವೆ ಪ್ರಾರಂಭ

ಸುಬ್ರಹ್ಮಣ್ಯ(ದ.ಕನ್ನಡ): ದಕ್ಷಿಣ ರೈಲ್ವೆ ವಲಯವು ಇದೇ ಅ.5ರಂದು ಮಂಗಳೂರು ಸೆಂಟ್ರಲ್​​ನಿಂದ ಹಾಸನ, ಯಶವಂತಪುರ, ಕಾಚಿಗುಡ ಮಾರ್ಗವಾಗಿ ಪ್ರಪ್ರಥಮವಾಗಿ ದೆಹಲಿಯ ಹಜ್ರತ್ ನಿಜಾಮುದ್ದೀನ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ಘೋಷಿಸಿದೆ. ರೈಲು ಸಂಖ್ಯೆ 06008 ಮಂಗಳೂರು ಸೆಂಟ್ರಲ್ – ಹಜ್ರತ್ ನಿಜಾಮುದ್ದೀನ್ ವಿಶೇಷ ರೈಲು ಅ.5ರಂದು ಮಧ್ಯಾಹ್ನ 2:25ಕ್ಕೆ ಮಂಗಳೂರು ಸೆಂಟ್ರಲಿನಿಂದ ಹೊರಟು ಹಾಸನ ಮಾರ್ಗವಾಗಿ ರಾತ್ರಿ 11:30ಕ್ಕೆ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಅಲ್ಲಿಂದ ರಾತ್ರಿ 11:45ಕ್ಕೆ ಹೊರಡುವ ರೈಲು …

Read More »

ಪೇಸ್‌ಮೇಕರ್‌ ಚಿಕಿತ್ಸೆ ಯಶಸ್ವಿ, ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯಕ್ಕೊಳಗಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್​​ ಮೇಕರ್​ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಗುರುವಾರ ಸಂಜೆ ಬೆಂಗಳೂರಿನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್​ ಮಾಡಿರುವ ಕಾಂಗ್ರೆಸ್​, ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಶೀಘ್ರದಲ್ಲೇ ದೈನಂದಿನ ಕಾರ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದೆ. ಖರ್ಗೆ ಚೇತರಿಕೆ ಕಾಣುತ್ತಿದ್ದಾರೆ. ಅವರಿಗೆ ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಶೀಘ್ರದಲ್ಲೇ ವೈದ್ಯರ ಸಲಹೆಯ ಬಳಿಕ ಅವರು ತಮ್ಮ ಚಟುವಟಿಕೆಗಳಿಗೆ …

Read More »

ಮತ್ತೊಂದು ಹುಲಿ ಹತ್ಯೆ: ತನಿಖೆಗೆ ಅರಣ್ಯ ಸಚಿವ ಖಂಡ್ರೆ ಆದೇಶ

ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆಯಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ ಪಚ್ಚೆದೊಡ್ಡಿ ಗ್ರಾಮದ ಬಳಿ ಗುರುವಾರ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು …

Read More »

ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ”

ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ” ನೆರೆ ಪ್ರದೇಶಗಳ ಪ್ರವಾಸದ ಹಿನ್ನಲೆ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ವಿರೋಧ ಪಕ್ಷದ ನಾಯಕರಾದ ಶ್ರೀ R Ashoka ಜಿ ಅವರೊಂದಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ,ರೈತರಿಗೆ ಧೈರ್ಯ ತುಂಬಲಾಯಿತು. ನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ,ನಿರ್ಲಕ್ಷ್ಯ ತೋರಿದ ರೈತ ಕಾಳಜಿ …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ: ಡಾ. ಜಿ. ಪರಮೇಶ್ವರ್

ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ. ಅಲ್ಲದೇ ಸಿದ್ದರಾಮಯ್ಯ ಅವರೇ ನೀಡಿರುವ ಹೇಳಿಕೆ ಪ್ರಕಾರ ನಮ್ಮಲ್ಲಿ ಹೈಕಮಾಂಡ್ ಇದೆ, ಹೈಕಮಾಂಡ್ ಹೇಳಿದಂತೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕ್ರಾಂತಿ ಇರೋದಿಲ್ಲ, ಬದಲಾಗಿ ಶಾಂತಿಯಾಗಿ ಇರಲಿದೆ. ತುಮಕೂರು ಜಿಲ್ಲೆಯು ಕಲೆ, ಸಾಹಿತ್ಯ ಹಾಗೂ ನಾಟಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇದನ್ನು ನಾವು …

Read More »