Breaking News

Daily Archives: ಅಕ್ಟೋಬರ್ 9, 2025

ಬೆಳಗಾವಿ DCC ಬ್ಯಾಂಕ ಚುನಾವಣೆಯನ್ನು ಎದುರಿಸಲು ನಮ್ಮ ಗುಂಪು ಸಿದ್ಧ:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಇದೇ ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಚುನಾವಣೆಯನ್ನು ಎದುರಿಸಲು ನಮ್ಮ ಗುಂಪು ಸಿದ್ಧಗೊಂಡಿದ್ದು, ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲು ಸನ್ನದ್ಧರಾಗಿದ್ದೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಗುರುವಾರದಂದು ಇಲ್ಲಿನ ಬಿಡಿಸಿಸಿ ಬ್ಯಾಂಕಿಗೆ ತಮ್ಮ ಬೆಂಬಲಿಗರಿಂದ ನಾಮಪತ್ರಗಳನ್ನು ಸಲ್ಲಿಸಿದ ಬಳಿಕ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ, ನಮ್ಮ ಗುಂಪಿಗೆ ಬಹುಮತ ಪಡೆಯಲು‌ ಮತದಾರರ …

Read More »

ಶೀಗಿ ಹುಣ್ಣಿಮೆ: ವಿಶೇಷ ಬಸ್​ಗಳಲ್ಲಿ ಯಲ್ಲಮ್ಮನ ಗುಡ್ಡಕ್ಕೆ 10 ಸಾವಿರಕ್ಕೂ ಹೆಚ್ಚು ಭಕ್ತರ ಪ್ರಯಾಣ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ದೀಪಾವಳಿ ಅಮಾವಾಸ್ಯೆವರೆಗೆ ಶುಕ್ರವಾರ, ರವಿವಾರ ಹಾಗೂ ಮಂಗಳವಾರ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಶೀಗಿ ಹುಣ್ಣಿಮೆಯ ಪ್ರಯುಕ್ತ ಅವಳಿ ನಗರದಿಂದ ಸವದತ್ತಿಯ ರೇಣುಕಾದೇವಿ ದರ್ಶನಕ್ಕೆ ತೆರಳುವ ಭಕ್ತಾದಿಗಳು ಹಾಗೂ …

Read More »

ಮುಡಾ ಪ್ರಕರಣ: ಬಿ ವರದಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಆದೇಶ ಇಂದು ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಗುರುವಾರ (ಅ.9) ಪ್ರಕಟಿಸುವುದಾಗಿ ತಿಳಿಸಿದೆ. ಗುರುವಾರ ಆದೇಶ ಪ್ರಕಟಿಸುವುದಾಗಿ ಹೇಳಿದ ಕೋರ್ಟ್: ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಅ.8ರಂದು ಅಂತಿಮ ಆದೇಶ ನೀಡುವುದಾಗಿ …

Read More »

ಆರ್​.ಅಶೋಕ್​ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್​. ಅಶೋಕ್​ ಅವರ ಪೊಲೀಸ್​​ ಬೆಂಗಾವಲು ವಾಹನದ ಚಾಲಕ (ನಗರ ಸಶಸ್ತ್ರ ಮೀಸಲು ಪೊಲೀಸ್​ ಪಡೆ) ಶರಣಪ್ಪ (33) ಅವರು ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಬಾಪೂಜಿನಗರದ ಬಾಡಿಗೆ ಮನೆಯಲ್ಲಿ ಶರಣಪ್ಪ ಅವರು ಪತ್ನಿ ಶೈಲಶ್ರೀ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ನೆಲೆಸಿದ್ದರು. ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿ ಕೆಲಸ ಮಾಡುತ್ತಿದ್ದಾರೆ. …

Read More »

ಸಿಜೆಐ ಮೇಲಿನ ದಾಳಿ ಪ್ರಕರಣ: ವಕೀಲನ ವಿರುದ್ಧ ಬೆಂಗಳೂರಲ್ಲಿ FIR ದಾಖಲು

ಬೆಂಗಳೂರು: ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಅವರ ಮೇಲೆ ದಾಳಿ ಮಾಡಿದ ಹಿರಿಯ ವಕೀಲ ರಾಕೇಶ್‌ ಕಿಶೋರ್‌ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ವಕೀಲ ಭಕ್ತವತ್ಸಲ ಎಂಬುವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ರಾಕೇಶ್‌ ಕಿಶೋರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ.6ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ರಾಕೇಶ್‌ ಕಿಶೋರ್‌ ಏಕಾಏಕಿ ಮುಖ್ಯ ನ್ಯಾಯಮೂರ್ತಿ …

Read More »

ಗಂಗಾವತಿ- ಬಿಜೆಪಿ ಯುವ ಮುಖಂಡನ ಕಗ್ಗೊಲೆ: ಹಳೇ ದ್ವೇಷವೇ ಹತ್ಯೆಗೆ ಕಾರಣ ಎಂದು ಪೊಲೀಸರ ಶಂಕೆ!

ಗಂಗಾವತಿ, ಕೊಪ್ಪಳ: ಹಳೇಯ ದ್ವೇಷದ ಹಿನ್ನೆಲೆ ಬಿಜೆಪಿ ಯುವ ಮುಖಂಡನೊಬ್ಬನನ್ನು ಐವರ ಗುಂಪು, ಅಮಾನುಷವಾಗಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಣಾಪ್ರತಾಪ್ ಸಿಂಗ್ ವೃತ್ತದ ಸಮೀಪ ಇರುವ ರಿಲಯನ್ಸ್ ಪಾಯಿಂಟ್‌ನ ಲೀಲಾವತಿ ಆಸ್ಪತ್ರೆ ಸಮೀಪ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ (32) ಎಂದು ತಿಳಿದು ಬಂದಿದೆ. ತಡರಾತ್ರಿ ಊಟ ಮುಗಿಸಿಕೊಂಡು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ …

Read More »