ಹುಬ್ಬಳ್ಳಿ: ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ರೈಲ್ವೆ ಮಂಡಳಿಯು ರೈಲು ಸಂಖ್ಯೆ 07301/07302 ಬೆಳಗಾವಿ–ಮೀರಜ್–ಬೆಳಗಾವಿ ಮತ್ತು 07303/07304 ಬೆಳಗಾವಿ–ಮೀರಜ್–ಬೆಳಗಾವಿ ಕಾಯ್ದಿರಿಸದ ದೈನಂದಿನ ವಿಶೇಷ ಪ್ಯಾಸೆಂಜರ್ ರೈಲುಗಳನ್ನು ಖಾಯಂಗೊಳಿಸಲು ಅನುಮೋದನೆ ನೀಡಿದೆ. ಅದರಂತೆ ಈ ರೈಲುಗಳು 51461/51462 ಬೆಳಗಾವಿ–ಮೀರಜ್–ಬೆಳಗಾವಿ ಮತ್ತು 51463/51464 ಬೆಳಗಾವಿ–ಮೀರಜ್–ಬೆಳಗಾವಿ ಎಂದು ಮರು-ಸಂಖ್ಯೆ ಪಡೆಯಲಿವೆ. ರೈಲು ಸಂಖ್ಯೆ 51461 ಬೆಳಗಾವಿ-ಮೀರಜ್ ಡೈಲಿ ಪ್ಯಾಸೆಂಜರ್ ಬೆಳಗಾವಿಯಿಂದ ಬೆಳಗ್ಗೆ 05:45ಕ್ಕೆ ಹೊರಟು, ಅದೇ ದಿನ ಬೆಳಗ್ಗೆ …
Read More »Daily Archives: ಅಕ್ಟೋಬರ್ 11, 2025
ಡಿಸಿಸಿ ಬ್ಯಾಂಕ್ ಚುನಾವಣೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನನ್ನ ನಾಮಪತ್ರವನ್ನು ಇಂದು ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ನನ್ನ ಮೊದಲ ಹೆಜ್ಜೆಯನ್ನು ಇಟ್ಟಿದ್ದೇನೆ. ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಹಿರಿಯ ನಾಯಕರು ಶ್ರೀ ಬಾಲಚಂದ್ರ ಜಾರಕಿಹೊಳಿ, ಶ್ರೀ ಅಣ್ಣಾಸಾಹೇಬ ಜೊಲ್ಲೆ, ಶ್ರೀ ಚನ್ನರಾಜ ಹಟ್ಟಿಹೊಳಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು. ಸಹಕಾರದ ಸಿದ್ಧಾಂತಗಳನ್ನು ಬೆಂಬಲಿಸಿ ಜನರ ಸೇವೆಗೆ ಸಮರ್ಪಿತರಾಗಿರುವ ನನ್ನ ಪ್ರಯತ್ನಕ್ಕೆ ಎಲ್ಲರ ಆಶೀರ್ವಾದ ಹಾಗೂ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.
ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಗುದಗೋಪ್ಪ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ …
Read More »ದರ್ಶನ್‌ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ ಆರೋಪ: ಕಾರಾಗೃಹಕ್ಕೆ ಭೇಟಿ ನೀಡುವಂತೆ ಕಾರ್ಯದರ್ಶಿಗೆ ಕೋರ್ಟ್ ಸೂಚನೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಜೈಲಿನಲ್ಲಿ ತಮಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲವೆಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿರುವ ನ್ಯಾಯಾಲಯ, ಕಾರಾಗೃಹಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗೆ ಶುಕ್ರವಾರ ಸೂಚಿಸಿದೆ. ನಟ ದರ್ಶನ್ ಅವರ ಅರ್ಜಿ ವಿಚಾರಣೆ ನಡೆಸಿರುವ 57ನೇ ಸೆಷನ್ಸ್ ನ್ಯಾಯಾಲಯ ಬೆಂಗಳೂರು ನಗರ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಸೂಚಿಸಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ …
Read More »ನೈಋತ್ಯ ರೈಲ್ವೆಗೆ ಸೆಪ್ಟೆಂಬರ್ನಲ್ಲಿ ಭರ್ಜರಿ ಆದಾಯ: ಸರಕು ಸಾಗಣೆಯಿಂದ ₹427, ಪ್ರಯಾಣಿಕರಿಂದ ₹282 ಕೋಟಿ ಗಳಿಕೆ
ಹುಬ್ಬಳ್ಳಿ: ಸೆ. 2025ರಲ್ಲಿ ನೈಋತ್ಯ ರೈಲ್ವೆಯು ಸರಕು ಸಾಗಣೆ ಮತ್ತು ಆದಾಯದಲ್ಲಿ ಅತ್ಯುತ್ತಮ ಸಾಧನೆ ದಾಖಲಿಸಿದೆ. ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ಅತೀ ಹೆಚ್ಚು ಸರಕು ಸಾಗಣೆಯನ್ನು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಇದು ನಿರಂತರ ಮತ್ತು ಬಲವಾದ ಬೆಳವಣಿಗೆಯ ಸೂಚಕವಾಗಿದೆ. ಈ ಅವಧಿಯಲ್ಲಿ ನೈಋತ್ಯ ರೈಲ್ವೆ ಒಟ್ಟು 4.17 ಮಿಲಿಯನ್ ಟನ್ (MT) ಮೂಲ ಸರಕುಗಳನ್ನು ಲೋಡ್ ಮಾಡಿದ್ದು, ರೈಲ್ವೆ ಮಂಡಳಿಯ 4.15 MT ಗುರಿಯನ್ನು ಮೀರಿಸಿದೆ. …
Read More »ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ
ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು ಅವುಗಳ ಅಭಿವೃದ್ಧಿ ಆಗಬೇಕು ಎಂಬ ವಿಷಯ ಪ್ರಸ್ತಾಪಿಸಿದರು. ಆಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಅಧಿಕಾರಿಗಳಿಗೆ …
Read More »ಅಡಿಕೆ ಸಾಗಿಸುತ್ತಿದ್ದ VRL ಲಾರಿ ತೋಟಕ್ಕೆ ಉರುಳಿ ಸಂಪೂರ್ಣ ಜಖಂ!
ಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಅಡಿಕೆ ತೋಟಕ್ಕೆ ಮಗುಚಿ ಬಿದ್ದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಈ ಅಪಘಾತದಿಂದ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸೇರಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದಿನಾಂಕ 09.10.2025 ರಂದು ರಾತ್ರಿ ಸುಮಾರು 9:30 ಗಂಟೆ ಸುಮಾರಿಗೆ ಲಾರಿಯಲ್ಲಿ 400 ಚೀಲಗಳಷ್ಟು ಅಡಿಕೆಯನ್ನು ತುಂಬಿಕೊಂಡು ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಸಾಗಿಸಲಾಗುತ್ತಿತ್ತು. ಶಿರಸಿ-ಹುಬ್ಬಳ್ಳಿ …
Read More »ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ
ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಆರಂಭವಾದ ಗುಡುಗು ಹಾಗೂ ಮಿಂಚು ಸಹಿತ ಮಳೆ ರಾತ್ರಿಯಿಡೀ ಸುರಿದಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡ ಪರಿಣಾಮ ವಾಹನ ಸವಾರರು ಹೈರಾಣಾಗಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್, ಎಲೆಕ್ಟ್ರಾನಿಕ್ ಸಿಟಿ, ಮಹಾದೇವಪುರದ ಬಳಿ ರಸ್ತೆಗಳಲ್ಲಿ ನೀರು ನಿಂತು ಸಂಚರಿಸುವುದೇ ದುಸ್ತರವಾಗಿದೆ. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ಲೇಔಟ್‌ನಲ್ಲಿ ಒಳಚರಂಡಿಯಿಂದ ನೀರು ಉಕ್ಕಿ ಹರಿದ ಪರಿಣಾಮ ರಸ್ತೆ, …
Read More »