Breaking News

Daily Archives: ಅಕ್ಟೋಬರ್ 15, 2025

ಚಿಕ್ಕೋಡಿ ನಗರದಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ.

ಚಿಕ್ಕೋಡಿ ನಗರದಲ್ಲಿ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿಗಳನ್ನು ವಿತರಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ. ಮಳೆ ಮತ್ತು ಬಿಸಿಲಿನಿಂದ ರಕ್ಷಣೆ ನೀಡುವ ಈ ನೆರವು, ಕೇವಲ ಸಣ್ಣ ಸಹಾಯವಾಗಿರದೆ, ಅವರ ದೈನಂದಿನ ಜೀವನೋಪಾಯಕ್ಕೆ ಪುಟ್ಟ ಆಸರೆ ಒದಗಿಸುವ ಮಾನವೀಯತೆಯ ಉದಾತ್ತ ಕಾರ್ಯವಾಗಿದೆ‌. ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ಕ್ರೀಡೆ ಸೇರಿದಂತೆ ಅನೇಕ ಸಮಾಜಮುಖಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸತೀಶ ಜಾರಕಿಹೊಳಿ ಫೌಂಡೇಶನ್, ಜನಜೀವನ ಸುಧಾರಣೆಯ ದಿಸೆಯಲ್ಲಿ …

Read More »

ಮಹಾನಗರ ಪಾಲಿಕೆಗಳ ಆಯುಕ್ತರ ಜೊತೆ ಸಚಿವ ಬೈರತಿ ಸುರೇಶ್​ ಸಭೆ

ಬೆಂಗಳೂರು: ಬೆಂಗಳೂರು ಹೊರತುಪಡಿಸಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಉದ್ಯಾನಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ನವೆಂಬರ್ ಮಾಸಾಂತ್ಯದ ವೇಳೆಗೆ ಟೆಂಡರ್ ಕರೆಯಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪಾಲಿಕೆಗಳ ಮುಖ್ಯಸ್ಥರಿಗೆ ಗಡುವು ನೀಡಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಮಂಗಳವಾರ ಎಲ್ಲ 12 ಮಹಾನಗರ ಪಾಲಿಕೆಗಳ ಆಯುಕ್ತರ ಸಭೆಯಲ್ಲಿ ಅಮೃತ್ 2.0 ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. …

Read More »

ಮೈಸೂರು ಕಾಗದ ಮಿಲ್ ಪುನಾರಂಭ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳುವುದೇ ರಾಜ್ಯ ಸರ್ಕಾರ?

ಶಿವಮೊಗ್ಗ: ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿ ಹಾಗೂ ಮಲೆನಾಡಿನ ನೈಸರ್ಗಿಕ ಸಂಪತ್ತಿನ ಸೌಲಭ್ಯದ ಮೇರೆಗೆ 1936ರಲ್ಲಿ ಸ್ಥಾಪಿತವಾದ ಮೈಸೂರು ಕಾಗದ ಕಾರ್ಖಾನೆ ಈಗ ಪುನಾರಂಭವಾಗುವ ಲಕ್ಷಣಗಳು ಗೋಚರವಾಗುತ್ತಿದೆ. ಕರ್ನಾಟಕದ ಏಕೈಕ ನ್ಯೂಸ್ ಪೇಪರ್​ಗೆ ಬೇಕಾದ ಕಾಗದ ತಯಾರಾಗುತ್ತಿದ್ದದ್ದು ಇದೇ ಮೈಸೂರು ಕಾಗದ ಕಾರ್ಖಾನೆಯಿಂದ. ಇಂತಹ ಕಾರ್ಖಾನೆಯು ಸಾವಿರಾರು ಜನರಿಗೆ ಪ್ರತ್ಯಕ್ಷವಾಗಿ ಹಾಗೂ ಸಾವಿರ ಜನರಿಗೆ ಪರೋಕ್ಷವಾಗಿ ಉದ್ಯೋಗವನ್ನು ನೀಡಿತ್ತು. ಆದರೆ, ಆಡಳಿತ ನಿರ್ವಹಣೆ ಕೊರತೆಯಿಂದ ಕಾರ್ಖಾನೆಯು ಮುಚ್ಚುವ ಹಂತಕ್ಕೆ …

Read More »

ಖಾನಾಪುರ ಹಾಗೂ ಕಿತ್ತೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ರಸ್ತೆಗಳ ಪರಿಶೀಲನೆ:ಸತೀಶ ಜಾರಕಿಹೊಳಿ..

ಖಾನಾಪುರ ಹಾಗೂ ಕಿತ್ತೂರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ರಸ್ತೆಗಳ ಪರಿಶೀಲನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ರಸ್ತೆಗಳ ಅಭಿವೃದ್ಧಿ ಮತ್ತು ದುರಸ್ತಿ ಕಾರ್ಯಗಳನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವಂತೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವ ಸತೀಶ ಜಾರಕಿಹೊಳಿ.. ರಸ್ತೆಗಳನ್ನು ತ್ವರಿತವಾಗಿ ಸುಧಾರಣೆಗೊಳಿಸಿ ಜನಸಾಮಾನ್ಯರ ಸಂಚಾರ ಸುಗಮವಾಗುವಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ್ ಪಾಟೀಲ್, ಖಾನಾಪುರ ಶಾಸಕ ಶ್ರೀ ವಿಠ್ಠಲ ಹಲಗೇಕರ್, ಕಾಡಾ ಅಧ್ಯಕ್ಷ ಯುವರಾಜ್ ಕದಮ್ …

Read More »

ಟೆಲಿಫೋನ್​ ಕದ್ದಾಲಿಕೆ ಆರೋಪ ಪ್ರಕರಣ: ಅಲೋಕ್​ ಕುಮಾರ್​ ವಿರುದ್ಧದ ಇಲಾಖಾವಾರು ತನಿಖೆ ರದ್ದುಪಡಿಸಿದ ಸಿಎಟಿ

ಬೆಂಗಳೂರು: ಟೆಲಿಫೋನ್​ ಕದ್ದಾಲಿಕೆ ಆರೋಪ ಸಂಬಂಧ ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರ ವಿರುದ್ಧ ಇಲಾಖಾವಾರು ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಇಂದು ರದ್ದುಪಡಿಸಿ ಆದೇಶಿಸಿದೆ. ಅಲ್ಲದೆ, ಅರ್ಜಿದಾರ ಅಲೋಕ್​ ಕುಮಾರ್ ರಿಗೆ ಸಲ್ಲಬೇಕಾದ ಎಲ್ಲ ರೀತಿಯ ಸವಲತ್ತುಗಳನ್ನು ಲಭ್ಯವಾಗುವಂತೆ ಮಾಡಬೇಕು ಎಂದು ಪೀಠ ತಿಳಿಸಿದೆ. ಟೆಲಿಫೋನ್​ ಕದ್ದಾಲಿಕೆ ಪ್ರಕರಣ ಸಂಬಂಧ ತನ್ನ ವಿರುದ್ಧ ಇಲಾಖಾವಾರು ತನಿಖೆಗೆ ಆದೇಶಿಸಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಆಲೋಕ್​ ಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ …

Read More »

ಶ್ರೀ ಹಾಸನಾಂಬ ದೇವಾಲಯಕ್ಕೆ ಕುಟುಂಬಸಮೇತ ಭೇಟಿ ನೀಡಿ: ಡಿ.ಕೆ.ಶಿ

ಸಿಎಂ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಭಗವಂತನಿಗೆ ಮಾತ್ರ ಗೊತ್ತಿದೆ: ಡಿ.ಕೆ.ಶಿ ಹಾಸನ: ನನಗೆ ಸಿಎಂ ಸ್ಥಾನ ಸಿಗುವ ವಿಚಾರ ನನಗೆ ಮತ್ತು ಆ ಭಗವಂತನಿಗೆ ಮಾತ್ರ ಗೊತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದು (ಮಂಗಳವಾರ) ಶ್ರೀ ಹಾಸನಾಂಬ ದೇವಾಲಯಕ್ಕೆ ಕುಟುಂಬಸಮೇತ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಾಲಯ. ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ …

Read More »

ವಾರದಲ್ಲಿ 6 ದಿನ ಮೌನ ವ್ರತ: ಭಕ್ತರ ಅಚ್ಚರಿಗೆ ಕಾರಣವಾಯ್ತು ಗವಿಸಿದ್ದೇಶ್ವರ ಸ್ವಾಮೀಜಿ ನಡೆ

ಕೊಪ್ಪಳ, ಅಕ್ಟೋಬರ್​ 14: ಗವಿಮಠದ ಪೀಠಾಧಿಪತಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು (Abhinava Gavisiddeshwara Swamiji) ನಡೆದಾಡುವ ದೇವರು ಎಂದೇ ಪ್ರಸಿದ್ದ. ಅವರ ದರ್ಶನಕ್ಕಾಗಿ ಪ್ರತಿನಿತ್ಯ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಹೀಗಿರುವಾಗ ಸ್ವಾಮೀಜಿಯ ಅದೊಂದು ನಡೆ ಮಾತ್ರ ಎಲ್ಲರಲ್ಲೂ ಅಚ್ಚರಿಗೆ ಕಾರಣವಾಗಿದೆ. ವಾರದಲ್ಲಿ ಒಂದು ದಿನ ಮಾತ್ರ ಮೌನ ಅನುಷ್ಠಾನ ಆಚರಿಸುತ್ತಿದ್ದ ಅವರು, ಇದೀಗ ವಾರದಲ್ಲಿ ಆರು ದಿನ ಮೌನ ಅನುಷ್ಠಾನದ ಮೊರೆಹೋಗುತ್ತಿದ್ದಾರೆ. ಆ ಮೂಲಕ ಕಾರ್ಖಾನೆಯೊಂದರ ವಿಚಾರವಾಗಿ ಪರೋಕ್ಷವಾಗಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. …

Read More »

ಪುಟಿದೆದ್ದ ಜಾರಕಿಹೊಳಿ ಸಹೋದರರು ಜೊಲ್ಲೆ ಗೆಲುವಿಗಾಗಿ ಒಂದಾದ ಮೂವರು ಜಾರಕಿಹೊಳಿ ಬ್ರದರ್ಸ್‌, ಇದು ಬೆಳಗಾವಿ ರಾಜಕೀಯ ಆಟ

ಬೆಳಗಾವಿ, (ಅಕ್ಟೋಬರ್ 14): ಹುಕ್ಕೇರಿ ವಿದ್ಯುತ್‌ ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ರಮೇಶ್‌ ಕತ್ತಿ (Ramesh Katti), ಜಾರಕಿಹೊಳಿ ಬ್ರದರ್ಸ್‌(Jarkiholi Brothers) ವಿರುದ್ಧ ಮೀಸೆ ತಿರುವಿದ್ದರು. ಇದಾಗಿ ಒಂದೇ ವಾರಕ್ಕೆ ಜಾರಕಿಹೊಳಿ ಸಹೋದರರು ಪುಟಿದೆದ್ದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ನ (Belagavi DCC Bank Election)  16 ಸ್ಥಾನಗಳ ಪೈಕಿ ಜಾರಕಿಹೊಳಿ ಬಣದ 9 ಸದಸ್ಯರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಆ ಮೂಲಕ ಡಿಸಿಸಿ ಬ್ಯಾಂಕ್‌ನ ಆಡಳಿತ ಜಾರಕಿಹೊಳಿ ಪ್ಯಾನಲ್‌ ಪಾಲಾಗುವುದು …

Read More »