Breaking News

Daily Archives: ಅಕ್ಟೋಬರ್ 21, 2025

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 900 ಕೋಟಿ ರೂ. ಬಾಕಿ ಬರಬೇಕಿದೆ: ಶಾಸಕ ರಾಜು ಕಾಗೆ

ಚಿಕ್ಕೋಡಿ: ಶಕ್ತಿ ಯೋಜನೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ ನಿಗಮಕ್ಕೆ 900 ಕೋಟಿ ರೂಪಾಯಿ ಬಾಕಿ ಹಣ ಬರಬೇಕಿದೆ. ಈ ಬಾಕಿ ಹಣದ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಗಮವನ್ನು ನೋ ಪ್ರಾಫಿಟ್, ನೋ ಲಾಸ್ ಸೂತ್ರದಡಿ ಮುನ್ನಡೆಸಿಕೊಂಡು ಹೋಗುವುದಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಬಾಕಿ ಹಣ ನೀಡಬೇಕು …

Read More »

ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್

ಕಾಂಗ್ರೆಸ್ ಸರ್ಕಾರ ಇಲ್ಲಿ ಲೂಟಿ ಮಾಡಿ ಬಿಹಾರ ಚುನಾವಣೆಗೆ ಹಣ ಕಳಿಸುತ್ತಿದ್ದಾರೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಆರ್.ಎಸ್.ಎಸ್ ಸಂಘವನ್ನು ಎದುರು ಹಾಕಿಕೊಂಡಿದ್ದೀರಾ, ಭಸ್ಮ ಆಗ್ತೀರಾ, ಇದು ನಿಮ್ಮ ಅಂತ್ಯದ ಆರಂಭ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿಮಿಡಿಗೊಂಡರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಎಟಿಎಂ ಇದ್ದಂತೆ, ಇಲ್ಲಿ ಲೂಟಿ ಮಾಡಿ ಬಿಹಾರ …

Read More »

ಪರಮಾತ್ಮನ ಮಹಾಬೆಳಕನ್ನು ಹೃದಯದಲ್ಲಿ ಪ್ರತಿಷ್ಠಾಪಿಸೋಣ: ಡಾ ಗುರುದೇವಿ ಹುಲೆಪ್ಪನವರಮಠ ಅಭಿಮತ ಮಹಾಸಭೆಯಲ್ಲಿ ಅಮಾವಾಸ್ಯೆ ಅನುಭಾವ ಗೋಷ್ಠಿ

ಬೆಳಗಾವಿ 20: ಪರಮಾತ್ಮನನ್ನು ನಮ್ಮ ಹೃದಯ ಕಮಲದಲ್ಲಿ ನೆಲೆಗೊಳಿಸಿಕೊಂಡು ಸಂತೃಪ್ತಿಯನ್ನು ಕಾಣಬೇಕು. ನಮ್ಮ ಹೃದಯದ ಕಲ್ಮಶವನ್ನು ಕಿತ್ತು ಹಾಕುವ ಶಕ್ತಿ ಪರಮಾತ್ಮನ ದಿವ್ಯಸಾನ್ನಿಧ್ಯದಲ್ಲಿದೆ ಎಂದು ಶರಣರು ಪರಮಾತ್ಮನನ್ನು ಹೃದಯದಲ್ಲಿ ಪ್ರತಿಷ್ಠಾಪಿಸಿ ಮನದ ಕಲ್ಮಶವನ್ನು ಕಿತ್ತು ಹಾಕಿದರೆಂದು ಖ್ಯಾತ ಚಿಂತಕಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು. ಅವರು ಬೆಳಗಾವಿಯ ಶಿವಬಸವ ನಗರದ ಲಿಂಗಾಯತ ಭವನದಲ್ಲಿ ಆಯೋಜಿಸಿದ್ದ ಅಮವಾಸ್ಯೆ ಅನುಭವ ಗೋಷ್ಠಿಯಲ್ಲಿ ‘ಮನೆಯೊಳಗೆ ಮನೆಯ ಒಡೆಯ ನಿದ್ದಾನೋ ಇಲ್ಲವೋ’ ಉಪನ್ಯಾಸವನ್ನ ನೀಡಿದರು. ‘ಮನೆಯಲ್ಲಿ …

Read More »

ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ

ಚನ್ನರಾಜ ಹಟ್ಟಿಹೊಳಿಗೆ ಸನ್ಮಾನ ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸುಳಗಾ ಗ್ರಾಮದಲ್ಲಿ ಸೋಮವಾರ ಸನ್ಮಾನಿಸಲಾಯಿತು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಮಲಪ್ರಭಾ ಹಾಗೂ ಘಟಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನಿಗಮದ (ಕಾಡಾ) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಯುವರಾಜ ಕದಂ ಅವರನ್ನೂ ಸಹ ಗ್ರಾಮಸ್ಥರು ಸನ್ಮಾನಿಸಿದರು. ಈ ವೇಳೆ ಬಾಗಣ್ಣ ನರೋಟಿ, ಬಾಳು ಪಾಟೀಲ, ಯಲ್ಲಪ್ಪ ಕಲಕಾಂಬ್ಕರ್, ಕಾಶೀರಾಮ್ …

Read More »