ರಸ್ತೆ ದುರಸ್ತಿಗೆ ರೋಡ್ನಲ್ಲಿ ಹೋಮ: ಈಗಲೂ ಸರಿಪಡಿಸದಿದ್ದರೆ ಮತ್ತೊಂದು ಪ್ರತಿಭಟನೆ ಹಾವೇರಿ: ರಾಣೆಬೆನ್ನೂರಿನ ಗೌರಿಶಂಕರ್ ನಗರದ 2ನೇ ಹಂತ 1ನೇ ಕ್ರಾಸ್ ರಸ್ತೆ ಹದಗೆಟ್ಟಿದ್ದು, ರಸ್ತೆ ದುರಸ್ತಿಗೆ ಆಗ್ರಹಿಸಿ ರೈತ ಸಂಘಟನೆ ಹಾಗೂ ಸ್ಥಳೀಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಎರಡನೇ ಹಂತ, ಮೊದಲನೇ ಕ್ರಾಸ್ ರಸ್ತೆ ಸರಿಪಡಿಸುವಂತೆ ಆಗ್ರಹಿಸಿ ರೋಡ್ನಲ್ಲಿ ಹೋಮ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಅರುಣ್ ಕುಮಾರ್ ಪೂಜಾರ್ …
Read More »Daily Archives: ಅಕ್ಟೋಬರ್ 27, 2025
ರೈತನ ಮೇಲೆ ಹುಲಿ ದಾಳಿ ಪ್ರಕರಣ: ನಿರ್ಲಕ್ಷ್ಯ ತೋರಿದ್ದರೆ ಅಧಿಕಾರಿಗಳ ಮೇಲೆ ಕ್ರಮ- ಸಚಿವ ಖಂಡ್ರೆ
ಮೈಸೂರು: ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ (ಮುಳ್ಳೂರು) ಬಳಿ ರೈತರೊಬ್ಬರ ಮೇಲೆ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ.ಖಂಡ್ರೆ ತಿಳಿಸಿದರು. ಇಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ …
Read More »ಮೋಂಥಾ ಚಂಡಮಾರುತದ ಎಫೆಕ್ಟ್: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ
ಬೆಂಗಳೂರು: ಮೋಂಥಾ ಚಂಡಮಾರುತ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿ ತೀರದ ಮೂಲಕ ಹಾದುಹೋಗಲಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 27 (ಇಂದಿನಿಂದ) ಅ. 29ರ ವರೆಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಇಂದು, ನಾಳೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಅವಧಿಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 30ರಿಂದ ನವೆಂಬರ್ 2ರ ಅವಧಿಯಲ್ಲಿ …
Read More »ಪತ್ನಿ ಮೃತಪಟ್ಟ 3 ಗಂಟೆಯ ಬಳಿಕ ಪತಿ ಸಾವು; ಒಟ್ಟಿಗೆ ಅಂತ್ಯಕ್ರಿಯೆ
ಬೀದರ್: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ (ಬಿ) ಗ್ರಾಮದಲ್ಲಿ ದಂಪತಿಗಳು ಒಂದೇ ದಿನ ಸಾವಿಗೀಡಾದ ಘಟನೆ ನಡೆದಿದೆ. ಗುಂಡಪ್ಪ ಹೋಡಗೆ (85), ಲಕ್ಷ್ಮಿಬಾಯಿ ಹೋಡಗೆ (83) ಸಾವಿನಲ್ಲೂ ಒಂದಾದ ದಂಪತಿ. ದಂಪತಿಗಳಿಬ್ಬರು ಕೆಲ ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೊದಲು ಲಕ್ಷ್ಮೀಬಾಯಿ ಹೋಡಗೆ ಅವರು ಶುಕ್ರವಾರ ಸಂಜೆ ನಿಧನ ಹೊಂದಿದರು. ಇವರ ಸಾವಿನ ಸುದ್ದಿ ವಿಷಯ ತಿಳಿದು ಮೂರು ಗಂಟೆ ನಂತರ ಗುಂಡಪ್ಪ ಹೋಡಗೆ ಸಹ ಕೊನೆಯುಸಿರೆಳೆದಿದ್ದಾರೆ. ಆರೇಳು ದಶಕ …
Read More »18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಳೆ ವಂಟಮೂರಿ ಸಮೀಪದಲ್ಲಿ ಇಂದು ಅಂದಾಜು ರೂ. 18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಯೋಜನೆಯಡಿ ಪಾಶ್ಚಾಪೂರ ರೈಲ್ವೆ ನಿಲ್ದಾಣದಿಂದ ಹಳೆ ವಂಟಮೂರಿ – ಕಲ್ಲಟ್ಟಿ – ಜಾರಕಿಹೊಳಿ – ಬೀರನಹೊಳಿ – ಕಾಟಾಬಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ-4 ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ.ಈ ರಸ್ತೆ ಯೋಜನೆಯಿಂದ …
Read More »ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ: ಪರಮೇಶ್ವರ್
ಬಿಹಾರ ಚುನಾವಣೆ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ: ಪರಮೇಶ್ವರ್ ಬೆಂಗಳೂರು: ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಗತ್ಯವಿದ್ರೆ ಬಿಹಾರ ಚುನಾವಣೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್. ನಾವು ಇಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅವಶ್ಯಕತೆ ಇದ್ದರೆ ಬಿಹಾರ ಚುನಾವಣೆ ನಂತರ …
Read More »ನವದೆಹಲಿಯಲ್ಲಿ ಎಐಸಿಸಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್
ನವದೆಹಲಿಯಲ್ಲಿ ಎಐಸಿಸಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ನವದೆಹಲಿಯಲ್ಲಿ ಅಖಿಲ ಭಾರತೀಯ ಕಾಂಗ್ರೆಸ್ ಕಮೀಟಿಯ ವತಿಯಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ತನ್ನ ಉಸ್ತುವಾರಿಯ ವ್ಯಾಪ್ತಿಯಲ್ಲಿ ಬರುವ ದಾದರಾ ನಗರದ ಹವೇಳಿ ಚುನಾವಣೆಯಲ್ಲಿ ಓಟ್ ಜೋರಿ ಸಂದರ್ಭದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದರು ಲೋಕಲ್ ಬೌಡಿ ಚುನಾವಣೆಯಲ್ಲಿ ದಾಮನ ಮತ್ತು ದೀವ್ ಯಲ್ಲಿಯೂ …
Read More »ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ : ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ
ಸ್ವೀಪ್ ಚಟುವಟಿಕೆಗಳ ಮೂಲಕ ಜಾಗೃತಿ ಮೂಡಿಸಿ : ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಬೆಳಗಾವಿ, ಅ-27: ಚುನಾವಣೆ ಸಂದರ್ಭದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಸ್ವೀಪ್ ಚಟುವಟಿಕೆ ಬಹುಮುಖ್ಯವಾಗಿದ್ದು, ಸ್ವೀಪ್ ಚಟುವಟಿಕೆಗಳ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನ ಸಾಮಾನ್ಯರಿಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎಸ್. ವಸ್ತ್ರದ ಅವರು ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಸೋಮವಾರ …
Read More »
Laxmi News 24×7