Breaking News

Daily Archives: ಅಕ್ಟೋಬರ್ 31, 2025

ಧರ್ಮಸ್ಥಳ ಶವಗಳ ಹೂತಿಟ್ಟ ಪ್ರಕರಣ: ಎಸ್​ಐಟಿ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೇ, ಪ್ರಕರಣ ಸಂಬಂಧ ಪ್ರಕರಣದಲ್ಲಿ ದೂರು ದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರುಗಳಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಇದೇ ವೇಳೆ ಪೊಲೀಸರಿಗೆ ಸೂಚನೆ ನೀಡಿದೆ. ಶವಗಳನ್ನು ಹೂತ್ತಿಟ್ಟಿದ್ದಾರೆ ಎನ್ನಲಾದ ಆರೋಪ ಬಹುತೇಕ ಸುಳ್ಳು ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಎಸ್‌ಐಟಿ …

Read More »

ಬೆಳಗಾವಿ ಜಿಲ್ಲೆಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿ: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಬೆಳಗಾವಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ರಾಜಶ್ರೀ ನಾಗರಾಜ, ಸಂಕೀರ್ಣ ಕ್ಷೇತ್ರದಲ್ಲಿ ಪುಂಡಲೀಕಶಾಸ್ತ್ರಿ (ಬುಡಬುಡಕೆ) ಮತ್ತು ಜಾನಪದ ಕ್ಷೇತ್ರದಲ್ಲಿ ಸಣ್ಣನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಸಣ್ಣನಿಂಗಪ್ಪ ಮುಶನ್ನಗೋಳ ಅವರು ಗೋಕಾಕ್ ತಾಲೂಕಿನ ತೆಳಗಿನಹಟ್ಟಿ ಗ್ರಾಮದವರು. 77 ವರ್ಷದ ಅವರು ಬಾಲ್ಯದಲ್ಲಿಯೇ ಡೊಳ್ಳಿನ ಹಾಡುಗಳನ್ನು ಹಾಡುತ್ತಾ ಬೆಳೆದವರು. ಡೊಳ್ಳಿನ …

Read More »

2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಉಮಾಶ್ರೀ ಭಾಜನ: ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್ ಪ್ರಶಸ್ತಿ ಪ್ರಕಟ

ಬೆಂಗಳೂರು: 2019ನೇ ಸಾಲಿನ ಡಾ. ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿ ಸೇರಿದಂತೆ ಚಲನಚಿತ್ರ ಸಾಹಿತ್ಯ ವಾರ್ಷಿಕ ಹಾಗೂ ಕಿರುಚಿತ್ರ ಪ್ರಶಸ್ತಿಗಳಿಗೆ ಅರ್ಹರನ್ನು ರಾಜ್ಯ ಸರ್ಕಾರ ಘೋಷಿಸಿದೆ. ಡಾ. ರಾಜ್ ಕುಮಾರ್ ಪ್ರಶಸ್ತಿಗೆ ಹಿರಿಯ ನಟಿ ಉಮಾಶ್ರೀ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿಗೆ ನಿರ್ದೇಶಕ ಎನ್. ಆರ್. ನಂಜುಂಡೇಗೌಡ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಗೆ ನಿರ್ಮಾಪಕ ಹಾಗೂ ನಿರ್ದೇಶಕರಾಗಿರುವ ರಿಚರ್ಡ್ ಕ್ಯಾಸ್ಟಲಿನೋ ಅವರು ಗೌರವಕ್ಕೆ ಪಾತ್ರರಾಗಿದ್ದಾರೆ. ಈ …

Read More »

ಮುಂಗಾರಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ

ಬೀದರ್: ಒಡಿಶಾ, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಗೆ ಕಾರಣವಾಗಿರುವ ಮೊಂಥಾ ಚಂಡಮಾರುತ ರಾಜ್ಯದ ಗಡಿ ಜಿಲ್ಲೆ ಬೀದರ್​ನಲ್ಲೂ ರೈತರ ನಿದ್ದೆಗೆಡಿಸಿದೆ. ಸೋಮವಾರ ಸ್ವಲ್ಪ ಮಳೆಯಾದರೆ, ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನ ಜಾವದವರೆಗೆ ಜಿಲ್ಲೆಯ ಬಹುತೇಕ ಕಡೆ ವರುಣ ಆರ್ಭಟಿಸಿತು. ಬುಧವಾರ ಬೆಳಗ್ಗೆಯಿಂದ ರಾತ್ರಿವರೆಗೂ ಆಗಾಗ್ಗೆ ಎಲ್ಲೆಡೆ ಮಳೆ ಸುರಿದಿದೆ. ಮಳೆಯೊಂದಿಗೆ ಚಳಿ ಗಾಳಿ ಸಹ ಬೀಸುತ್ತಿದ್ದು, ಇದು ಸಾಮಾನ್ಯ ಜನಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಕಳೆದ ರಾತ್ರಿಯಿಂದ ಬೆಳಗ್ಗೆವರೆಗೆ ನಾಲ್ಕೈದು …

Read More »

ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರ ಅವಧಿ ವಿಸ್ತರಣೆ

ಹುಬ್ಬಳ್ಳಿ: ರೈಲ್ವೆ ಮಂಡಳಿಯು ರೈಲು ಸಂಖ್ಯೆ 07355/07356 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ–ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲುಗಳ ಸಂಚಾರದ ಅವಧಿಯನ್ನು ವಿಸ್ತರಿಸಲು ಅನುಮೋದನೆ ನೀಡಿದೆ. ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮನಾಥಪುರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಈ ಮೊದಲು ಅಕ್ಟೋಬರ್ 25, 2025ರ ವರೆಗೆ ಓಡಿಸಲು ಸೂಚಿಸಲಾಗಿತ್ತು. ಈಗ, ಇದು ನವೆಂಬರ್ 1, 2025 ರಿಂದ ನವೆಂಬರ್ 29, 2025 ರ ವರೆಗೆ ತನ್ನ ಸೇವೆಯನ್ನು …

Read More »

ಪ್ರವಾಹದಿಂದ ಹಾನಿಗೊಳಗಾದ ಪ್ರದೇಶದಲ್ಲಿ ಮೂಲಸೌಕರ್ಯ ಪುನರ್ ನಿರ್ಮಾಣ: 1545.23 ಕೋಟಿ ಅನುದಾನ ಕೋರಿ ಕೇಂದ್ರಕ್ಕೆ ಪತ್ರ

ಬೆಂಗಳೂರು: ನೈಋತ್ಯ ಮುಂಗಾರು ಅವಧಿಯಲ್ಲಿ ಭಾರೀ ಮಳೆಯಿಂದಾಗಿ ನದಿಗಳ ಪ್ರವಾಹ ಉಂಟಾಗಿ ಹಾನಿಗೊಳಗಾದ ಮೂಲಸೌಕರ್ಯಗಳ ಪುನರ್ ನಿರ್ಮಾಣಕ್ಕಾಗಿ 1545.23 ಕೋಟಿ ರೂ. ಅನುದಾನ ನೀಡುವಂತೆ ಕೋರಿ ಕೇಂದ್ರದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ (ಎನ್​ಡಿಆರ್​ಎಫ್) ಪತ್ರ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿವೆ. ಬೆಳೆ ನಾಶವಲ್ಲದೇ ಹಲವು ಜಿಲ್ಲೆಗಳಲ್ಲಿ ರಸ್ತೆಗಳು ಬಿರುಕು ಮೂಡಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಚೆಕ್ ಡ್ಯಾಂ ಹಾಗೂ ಮನೆಗಳು ಇನ್ನಿತರ ಮೂಲಸೌಕರ್ಯಗಳಿಗೆ ಅಡಚಣೆಯಾಗಿದೆ. …

Read More »

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 11 ಆರೋಪಿಗಳ ವಿರುದ್ಧ ಚಾರ್ಜ್​​ಶೀಟ್

ಬೆಂಗಳೂರು: ದಕ್ಷಿಣ ಕನ್ನಡದ ಬಜ್ಪೆ ಬಳಿ ನಡೆದಿದ್ದ‌ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತ 11 ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ಬುಧವಾರ ಚಾರ್ಜ್ ​​ಶೀಟ್ ಸಲ್ಲಿಸಿದೆ. ಬಂಧಿತ ಆರೋಪಿಗಳಾದ ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್, ನೌಶಾದ್, ಆದಿಲ್ ಮಹರೂಫ್, ಕಲಂದರ್ ಶಫಿ, ಎಂ.ನಾಗರಾಜ, ರಂಜಿತ್, ಮಹಮ್ಮದ್ ರಿಜ್ವಾನ್, ಅಜರುದ್ದೀನ್ ಮತ್ತು ಅಬ್ದುಲ್ ಖಾದರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ 1967, ಭಾರತೀಯ ನ್ಯಾಯ …

Read More »

ಐಟಿ ಉದ್ಯೋಗಿಗಳ ಕನ್ನಡ ಪ್ರೇಮ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಗಡಿಜಿಲ್ಲೆ ಬೆಳಗಾವಿಯಲ್ಲಿ ಸಂಭ್ರಮ ಕಳೆಗಟ್ಟಿದೆ. ಈ ಬಾರಿಯ ರಾಜ್ಯೋತ್ಸವದಲ್ಲಿ ಇಲ್ಲಿನ ಬೆಳಗಾವಿ ಕೆಎ ಪುಟ ತಂಡದ “ಸೋತ್ರು ಗೆದ್ರು ಆರ್ ಸಿಬಿ ಬಿಡಾಂಗಿಲ್ಲಾ, ಜೀವಾ ಹೋದ್ರು ಬೆಳಗಾವಿ ಕೊಡಾಂಗಿಲ್ಲ” ಬರಹದ ಟೀಶರ್ಟ್ ಗಳು ಗಮನ ಸೆಳೆಯುತ್ತಿವೆ. ಕಳೆದ 10 ವರ್ಷಗಳಿಂದ ಈ ಪುಟ ಗಡಿಯಲ್ಲಿ ಕನ್ನಡದ ಕೈಂಕರ್ಯಕ್ಕೆ ಪಣ ತೊಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಹೌದು, ಒಂದೆಡೆ ಬೆಳಗಾವಿಯಲ್ಲಿ ಕನ್ನಡ ಗಟ್ಟಿಗೊಳಿಸಲು ವಿವಿಧ …

Read More »