ಕೇಂದ್ರ ಗೃಹ ಸಚಿವಾಲಯದ ಅಡಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಭಾರತದಲ್ಲಿನ ಅಪರಾಧಗಳ ಕುರಿತಾದ ಅಂಕಿ-ಅಂಶಗಳ ಒಳಗೊಂಡ 2023ರ ವರದಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ವರದಿಯ ವಿಶ್ಲೇಷಣೆ ಹೀಗಿದೆ. NCRBಯ ಭಾರತದಲ್ಲಿ ಅಪರಾಧ-2023 ವರದಿಯು 71ನೇ ಆವೃತ್ತಿಯಾಗಿದ್ದು, 2023ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿ 1ರಿಂದ ಡಿಸೆಂಬರ್ 31, 2023ರವರೆಗೆ) ನಡೆದ ಅಪರಾಧ ದತ್ತಾಂಶಗಳ ಮಾಹಿತಿ ನೀಡಲಾಗಿದೆ. ಕರ್ನಾಟಕದಲ್ಲಿ ಅಪರಾಧ ಪ್ರಮಾಣದಲ್ಲಿ ವಿಶೇಷವಾಗಿ ಸೈಬರ್ …
Read More »Monthly Archives: ಅಕ್ಟೋಬರ್ 2025
ಸೋಷಿಯಲ್ ಮೀಡಿಯಾದಲ್ಲಿ ರೌಡಿಗಳಿಗೆ ಬಿಲ್ಡಪ್: 8 ಮಂದಿಗೆ ಬಿಸಿ ಮುಟ್ಟಿಸಿದ ಪೊಲೀಸರು
ಬೆಂಗಳೂರು: ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ರೌಡಿಶೀಟರ್ಗಳಿಗೆ ಬಿಲ್ಡಪ್ ಕೊಟ್ಟು ವೀಡಿಯೋ, ಫೋಟೋಗಳನ್ನು ಪ್ರಕಟಿಸುತ್ತಿದ್ದ 8 ಜನರಿಗೆ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಲೈಕ್ಸ್, ಫಾಲೋವರ್ಸ್ ಆಸೆಗೆ ರೌಡಿಗಳ ಬಗ್ಗೆ ಸಹಾನುಭೂತಿ ಮತ್ತು ಪರಸ್ಪರ ವೈಷಮ್ಯ ಮೂಡಿಸುವಂತಹ ಪೋಸ್ಟ್‌ಗಳನ್ನು ಮಾಡುತ್ತಿದ್ದ ಓರ್ವ ಯುವತಿ, ಬಾಲಕ ಸೇರಿದಂತೆ ಎಂಟು ಜನರ ವಿರುದ್ಧ ಪೊಲೀಸರು ರೌಡಿಶೀಟ್ ತೆರೆದಿದ್ದಾರೆ. “ದೀಪಕ್(22), ಕುಶಾಲ್ (20), ಮನೋಜ್ (22), ವೇಣು.ಎನ್ (19), ಕುಮಾರಿ ಕೈಸರ್ (21), …
Read More »‘ನಮಗೆ ನೆಟ್ವರ್ಕ್ ನೀಡುವವರೆಗೂ ಗಣತಿಯಲ್ಲಿ ಭಾಗಿಯಾಗಲ್ಲ’: ಶರಾವತಿ ಹಿನ್ನೀರ ಗ್ರಾಮಸ್ಥರ ಪ್ರತಿಭಟನೆ
ಶಿವಮೊಗ್ಗ: ಗ್ರಾಮದಲ್ಲಿರುವ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸದಿರಲು ಜಿಲ್ಲೆಯ ನಾಲ್ಕು ಗ್ರಾಮಗಳು ತೀರ್ಮಾನಿಸಿವೆ. ಜಿಲ್ಲೆಯ ಸಾಗರ ತಾಲೂಕಿನ ಬರೂರು ಗ್ರಾಮ ಪಂಚಾಯತಿಯ ಬರೂರು, ಕಲ್ಲುಕೊಪ್ಪ, ತೆಪ್ಪಗೋಡು ಮತ್ತು ಮುಳುಕೇರಿ ಗ್ರಾಮಸ್ಥರು ರಾಜ್ಯ ಸರ್ಕಾದ ಸಮೀಕ್ಷೆಯಿಂದ ದೂರವಿರಲು ನಿರ್ಧರಿಸಿದ್ದಾರೆ. “ನಾವು ನಮ್ಮ ಗ್ರಾಮಗಳಲ್ಲಿ ಮೊಬೈಲ್ ನೆಟ್ವರ್ಕ್ ಇಲ್ಲದೆ ಪರದಾಡುತ್ತಿದ್ದೇವೆ. ಹೀಗಾಗಿ ನಾವು ಗಣತಿಯಲ್ಲಿ ಭಾಗಿಯಾಗುವುದಿಲ್ಲ” ಎಂದು ಬರೂರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮೊದಲು …
Read More »ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಸಮರ್ಥ ಮಾರ್ಗದರ್ಶನ ಪ್ರಭಾ ಶುಗರ್ಸ್ ಅಧ್ಯಕ್ಷರಾಗಿ ಕಂಬಳಿ, ಉಪಾಧ್ಯಕ್ಷರಾಗಿ ಕಬ್ಬೂರ ಅವಿರೋಧವಾಗಿ ಆಯ್ಕೆ
ಗೋಕಾಕ- ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಅವರು ಪ್ರಕಟಿಸಿದರು. ಇಲ್ಲಿಯವರೆಗೆ …
Read More »ಹುಲಿ ಹತ್ಯೆ ಆರೋಪಿಗಳಿಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣದ ತನಿಖೆ ಅಂತಿಮ ಘಟ್ಟಕ್ಕೆ ಬಂದಿದ್ದು, ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಯಲ್ಲಿ ಭಾನುವಾರ ಬೆಳಗ್ಗೆ ನಾಲ್ವರು ಆರೋಪಿಗಳಿಗೆ ಮೆಡಿಕಲ್ ಟೆಸ್ಟ್ ನಡೆಸಲಾಯಿತು. ಪಚ್ಚೆದೊಡ್ಡಿ ಗ್ರಾಮದ ಪಚ್ಚಮಲ್ಲ, ಗಣೇಶ್, ಗೋವಿಂದೇಗೌಡ, ಸಂಪು ಎಂಬವರನ್ನು ಅರಣ್ಯಾಧಿಕಾರಿಗಳು ಆಸ್ಪತ್ರೆಗೆ ಕರೆತಂದು ಮೆಡಿಕಲ್ ಟೆಸ್ಟ್ ಮಾಡಿಸಿದ್ದಾರೆ. ನಾಲ್ವರನ್ನು ಕೂಡ ಬಂಧಿಸಿ ನ್ಯಾಯಾಧೀಶರ ಮುಂದೆ ಇಂದೇ ಹಾಜರುಪಡಿಸುವ ಸಾಧ್ಯತೆ ಇದೆ. ಜಾನುವಾರುಗಳ ಮೇಲೆ ಹುಲಿ ದಾಳಿ ಮಾಡುತ್ತಿದ್ದರಿಂದ ರೊಚ್ಚಿಗೆದ್ದ …
Read More »ಕರ್ನಾಟಕದ ರೈತ ದೇವೇಂದ್ರಪ್ಪ ಅವರನ್ನು ‘ಸಂತ ಈಶ್ವರ್ ಸಮ್ಮಾನ್ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.
ನವದೆಹಲಿ: ದಾವಣಗೆರೆಯ ಕುಂಬಳೂರಿನ ಸಣ್ಣ ಹಳ್ಳಿಯೊಂದರ ರೈತ ದೇವೇಂದ್ರಪ್ಪ ಅವರನ್ನು ಪ್ರತಿಷ್ಟಿತ ‘ಸಂತ ಈಶ್ವರ್ ಸಮ್ಮಾನ್ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ದೆಹಲಿಯ ಪುಸಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಪರಿಸರ ಸಚಿವ ಭೂಪೇಂದ್ರ ಸಿಂಗ್ ಯಾದವ್ ಅವರು ದೇವೇಂದ್ರಪ್ಪರನ್ನು ಸನ್ಮಾನಿಸಲಿದ್ದಾರೆ. ಈ ಕುರಿತು ದೇವೇಂದ್ರಪ್ಪ ಅವರು , “ನನ್ನಲ್ಲಿ 15ಕ್ಕೂ ಹೆಚ್ಚು ಸುಧಾರಿತ ಭತ್ತದ ತಳಿಗಳಿವೆ. ಮುಖ್ಯವಾಗಿ ಡಿಡಿ ಚಾರ್ ಅಕ್ಕಿ …
Read More »ದಸರಾ ಮುಗಿಸಿ ಶಿಬಿರಗಳತ್ತ ಹೊರಟ ಗಜಪಡೆ
ಮೈಸೂರು: ಯಶಸ್ವಿಯಾಗಿ ದಸರಾ, ಜಂಬೂಸವಾರಿ ಮುಗಿಸಿದ ಅಭಿಮನ್ಯು ನೇತೃತ್ವದ ಗಜಪಡೆಗೆ ಅರಮನೆಯ ಅವರಣದಲ್ಲಿ ಇಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಶಿಬಿರಗಳಿಗೆ ಬೀಳ್ಕೊಡಲಾಯಿತು. 14 ಆನೆಗಳು ಅವುಗಳ ಮಾವುತರು, ಕಾವಾಡಿಗರನ್ನು ಕೋಡಿ ಸೋಮೇಶ್ವರ ದೇವಾಲಯದ ಬಳಿ ಅರಣ್ಯ ಇಲಾಖೆ ಬೀಳ್ಕೊಟ್ಟಿತು. ಆನೆಗಳನ್ನು ನೋಡಲು ಸೇರಿದ್ದ ಜನರು ಫೋಟೋ, ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಆನೆಗಳು ನಿರ್ಗಮಿಸುತ್ತಿರುವುದನ್ನು ನೋಡುತ್ತಾ ಭಾವುಕರಾದರು. ಕಳೆದ 60 ದಿನಗಳಿಂದಲೂ ಗಜಪಯಣದ ಮೂಲಕ ಎರಡು ಹಂತಗಳಲ್ಲಿ ಆಗಮಿಸುವ ಆನೆಗಳು ಕೋಡಿ ಸೋಮೇಶ್ವರ …
Read More »ರಾಜ್ಯ ಹೈಕೋರ್ಟ್, ಇಸ್ರೇಲ್ ರಾಯಭಾರ ಕಚೇರಿಗೆ ಬೆದರಿಕೆ ಇ – ಮೇಲ್: ಪ್ರಕರಣ ದಾಖಲು
ಬೆಂಗಳೂರು: ಇಸ್ರೇಲ್ ರಾಯಭಾರ ಕಚೇರಿ ಹಾಗೂ ಹೈಕೋರ್ಟ್‌ನಲ್ಲಿ ಸ್ಫೋಟಕ ಇರಿಸಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಕಿಡಿಗೇಡಿ ವಿರುದ್ಧ ಹಲಸೂರು ಹಾಗೂ ವಿಧಾನಸೌಧ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಸೆಪ್ಟೆಂಬರ್ 19 ರಂದು ಇ- ಮೇಲ್ ಸ್ವೀಕರಿಸಲಾಗಿದ್ದು, ಪೊಲೀಸರು ತಪಾಸಣೆ ನಡೆಸಿದಾಗ ಇದೊಂದು ಹುಸಿ ಬೆದರಿಕೆ ಎಂದು ದೃಢಪಟ್ಟಿದೆ. ಆರ್ಡಿಎಕ್ಸ್ ಇರಿಸಿರುವ ಬಗ್ಗೆ ಬೆದರಿಕೆ: ಇ-ಮೇಲ್ ಖಾತೆಯಿಂದ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಇಸ್ರೇಲ್ ರಾಯಭಾರ ಕಚೇರಿ ಹಾಗೂ ಹೈಕೋರ್ಟ್‌ಗೆ ಪ್ರತ್ಯೇಕವಾಗಿ ಮೇಲ್ ಕಳುಹಿಸಿರುವ ಕಿಡಿಗೇಡಿ, …
Read More »ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಅಹವಾಲು ಸ್ವೀಕಾರ: ಕರ್ನಾಟಕ ರಾಜ್ಯೋತ್ಸವಕ್ಕಾಗಿ 2 ಕೋಟಿ ಅನುದಾನಕ್ಕೆ ಬೇಡಿಕೆ..!
ಬೆಳಗಾವಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ, ಬೆಳಗಾವಿಯಲ್ಲಿ ಅದ್ಧೂರಿಯಾಗಿ ಆಚರಿಸುವ ಕರ್ನಾಟಕ ರಾಜ್ಯೋತ್ಸವಕ್ಕೆ 2 ಕೋಟಿ ಅನುದಾನ ಸೇರಿ ವಿವಿಧ ಬೇಡಿಕೆಗಳ ಪಟ್ಟಿಯನ್ನು ಕನ್ನಡ ಹೋರಾಟಗಾರರು ಮುಖ್ಯಮಂತ್ರಿಗಳ ಮುಂದಿಟ್ಟರು. ಬೇಡಿಕೆಗಳ ದೊಡ್ಡ ಪಟ್ಟಿಯನ್ನು ಸಿಎಂ ಮುಂದಿಟ್ಟ ಹೋರಾಟಗಾರರು: ಬೆಳಗಾವಿಯಲ್ಲಿ ನಡೆಯುವ ರಾಜ್ಯೋತ್ಸವ ರಾಜ್ಯದಲ್ಲಿಯೇ ಅತ್ಯಂತ ಅದ್ಧೂರಿಯಾಗಿ ನಡೆಯುವ ಉತ್ಸವವಾಗಿದ್ದು, ಬೆಳಗಾವಿ ರಾಜ್ಯೋತ್ಸವಕ್ಕೆ ಪ್ರತಿವರ್ಷ ಎರಡು ಕೋಟಿ …
Read More »ಅ.9ರಿಂದ ಹಾಸನಾಂಬೆ ದರ್ಶನ: ವಾಟ್ಸ್ಆ್ಯಪ್ ಮೂಲಕ ಟಿಕೆಟ್ ಬುಕ್ಕಿಂಗ್ಗೆ ಅವಕಾಶ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಭಾಗ್ಯ ನೀಡುವ ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ 5 ದಿನ ಮಾತ್ರವಿದ್ದು, ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ. 13 ದಿನ ದರ್ಶನ ಭಾಗ್ಯ: ಅಕ್ಟೋಬರ್ 9ಕ್ಕೆ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲು ತೆರೆಯಲಿದ್ದು, 23ರ ವರೆಗೂ ದೇವಿ ದರ್ಶನಕ್ಕೆ ಅವಕಾಶ ಸಿಗಲಿದೆ. 15 ದಿನ ದೇಗುಲದ ಬಾಗಿಲು ತೆರದಿರಲಿದೆ. ಆದರೆ, ಮೊದಲ ಮತ್ತು ಕೊನೆಯ ದಿನ ಹೊರತುಪಡಿಸಿ …
Read More »