Breaking News

Monthly Archives: ಅಕ್ಟೋಬರ್ 2025

ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ”

ನೆರೆ ಸಂಕಷ್ಟಿತ ರೈತರ ನೆರವಿಗೆ ರಾಜ್ಯ ಸರ್ಕಾರ ಕೂಡಲೇ ಧಾವಿಸಲಿ-ಸೂಕ್ತ ತುರ್ತು ಪರಿಹಾರ ತಕ್ಷಣ ಘೋಷಿಸಲಿ” ನೆರೆ ಪ್ರದೇಶಗಳ ಪ್ರವಾಸದ ಹಿನ್ನಲೆ ಬೈಲಹೊಂಗಲ ಕ್ಷೇತ್ರದ ನೇಸರಗಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ವಿರೋಧ ಪಕ್ಷದ ನಾಯಕರಾದ ಶ್ರೀ R Ashoka ಜಿ ಅವರೊಂದಿಗೆ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ,ರೈತರಿಗೆ ಧೈರ್ಯ ತುಂಬಲಾಯಿತು. ನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ,ನಿರ್ಲಕ್ಷ್ಯ ತೋರಿದ ರೈತ ಕಾಳಜಿ …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ: ಡಾ. ಜಿ. ಪರಮೇಶ್ವರ್

ತುಮಕೂರು : ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಐದು ವರ್ಷ ಇರುತ್ತಾರೆ. ಅಲ್ಲದೇ ಸಿದ್ದರಾಮಯ್ಯ ಅವರೇ ನೀಡಿರುವ ಹೇಳಿಕೆ ಪ್ರಕಾರ ನಮ್ಮಲ್ಲಿ ಹೈಕಮಾಂಡ್ ಇದೆ, ಹೈಕಮಾಂಡ್ ಹೇಳಿದಂತೆ ನಾನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕ್ರಾಂತಿ ಇರೋದಿಲ್ಲ, ಬದಲಾಗಿ ಶಾಂತಿಯಾಗಿ ಇರಲಿದೆ. ತುಮಕೂರು ಜಿಲ್ಲೆಯು ಕಲೆ, ಸಾಹಿತ್ಯ ಹಾಗೂ ನಾಟಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇದನ್ನು ನಾವು …

Read More »

ಅಧಿಕಾರ ಹಸ್ತಾಂತರ ಹೇಳಿಕೆ: ರಂಗನಾಥ್, ಎಲ್.ಆರ್. ಶಿವರಾಮೇಗೌಡಗೆ ನೋಟಿಸ್

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಪರೋಕ್ಷ ಹೇಳಿಕೆ ನೀಡಿರುವ ಕುಣಿಗಲ್​ ಕ್ಷೇತ್ರದ ಶಾಸಕ ಡಾ. ರಂಗನಾಥ್ ಮತ್ತು ಎಲ್. ಆರ್. ಶಿವರಾಮೇಗೌಡಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ನೋಟಿಸ್ ನೀಡಿದೆ. ರಾಜ್ಯ ಕಾಂಗ್ರೆಸ್​ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಇಬ್ಬರು ಕಾಂಗ್ರೆಸ್ ನಾಯಕರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ಕಣಿಗಲ್ ಕೈ ಶಾಸಕ ಡಾ. ರಂಗನಾಥ್ ನಿನ್ನೆ ಮಾತನಾಡುತ್ತಾ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 140 ಸ್ಥಾನಗಳನ್ನು ಪಡೆದಿರುವುದರ ಹಿಂದೆ …

Read More »

ಉದ್ಘಾಟನೆಗೂ ಮುನ್ನವೇ ಕುಸಿದ ಕಾರವಾರ ನೂತನ ಆಸ್ಪತ್ರೆ ರೂಫ್

ಕಾರವಾರ (ಉತ್ತರ ಕನ್ನಡ) : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಹುದಿನದ ಕನಸು ಕಾಣುತ್ತಿದ್ದ ಉತ್ತರಕನ್ನಡದ ಜನರಿಗೆ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸುಮಾರು ₹190 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಕಟ್ಟಡವು ಕೊಂಚಮಟ್ಟಿಗೆ ನಿರಾಳತೆ ನೀಡಿತ್ತು. ಆದರೆ, ಈ ಅತ್ಯಾಧುನಿಕ ಸ್ಪರ್ಶದ ಕಟ್ಟಡದ ಗುಣಮಟ್ಟದ ಬಗ್ಗೆ ಮೊದಲಿನಿಂದಲೂ ಕೇಳಿಬರುತ್ತಿದ್ದ ಕಳಪೆ ಕಾಮಗಾರಿಯ ಆರೋಪಕ್ಕೆ ಇದೀಗ ಸ್ಪಷ್ಟ ಪುಷ್ಟಿ ದೊರೆತಿದೆ. ಆಸ್ಪತ್ರೆ ಕಟ್ಟಡ ಉದ್ಘಾಟನೆಗೂ ಮುನ್ನವೇ ಕಟ್ಟಡದ ಒಂದು …

Read More »

ಗಾಂಧಿ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ನಮನ

ಬೆಂಗಳೂರು/ಮೈಸೂರು: ಅಕ್ಟೋಬರ್ 2ರಂದು ದೇಶಾದ್ಯಂತ ಮಹಾತ್ಮ ಗಾಂಧಿ ಅವರ ಜಯಂತಿ ಆಚರಿಸಲಾಗುತ್ತದೆ. ಗಾಂಧೀಜಿ ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯ ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗಾಂಧಿ ಜಯಂತಿ ಅಂಗವಾಗಿ ಇಂದು ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮೂಲಕ ಸಿಎಂ ಗೌರವಾರ್ಪಣೆ ಸಲ್ಲಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ಇಂದು ಮಾಜಿ ಪ್ರಧಾನ ಮಂತ್ರಿ …

Read More »

ಮೈಸೂರು ದಸರಾ: ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗುತ್ತಿದೆ 30 ಜಿಲ್ಲೆಗಳ ಸ್ತಬ್ಧಚಿತ್ರ

ಮೈಸೂರು: ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗುವ ರಾಜ್ಯದ ನಾನಾ ಜಿಲ್ಲೆಗಳ ಸ್ತಬ್ಧಚಿತ್ರಗಳು ಅತ್ಯಂತ ಆಕರ್ಷಣೆಯಾಗಿದ್ದು, ಅವುಗಳಲ್ಲಿ ರೈಲ್ವೆ ಇಲಾಖೆ ಸ್ತಬ್ಧಚಿತ್ರವು ಅದ್ಭುತವಾಗಿ ಮೂಡಿ ಬಂದಿದೆ. 30 ಜಿಲ್ಲೆಗಳ ಸ್ತಬ್ಧಚಿತ್ರಗಳು ಸೇರಿದಂತೆ ವಿವಿಧ ನಿಗಮ, ಇಲಾಖೆಗಳ 35ಕ್ಕೂ ಹೆಚ್ಚಿನ ಸ್ತಬ್ಧಚಿತ್ರಗಳು ಜಂಬೂ ಸವಾರಿ ಮೆರವಣಿಗೆಯಲ್ಲಿ ಸಾಗುತ್ತಿವೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಕ್ತಿ ಯೋಜನೆಯ ಯಶೋಗಾಥೆ, ಹಿಂದುಸ್ಥಾನ್​ ಏರೊನಾಟಿಕ್ಸ್​ ಲಿಮಿಟೆಡ್​ ವಿಜಯದ ರನ್​ವೇ ಭಾರತದ ಆಕಾಶಕ್ಕೆ ಎಚ್ಎಎಲ್​ನ ಶಕ್ತಿ, ಭಾರತೀಯ ರೈಲ್ವೆ ಇಲಾಖೆ …

Read More »

ಬೆಂಬಲ ಬೆಲೆಯಲ್ಲಿ ಸೋಯಾಬಿನ್‌, ಶೇಂಗಾ ಖರೀದಿ; ನೋಂದಣಿ, ಖರೀದಿ ಏಕಕಾಲಕ್ಕೆ ಆರಂಭಿಸಿ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಸೋಯಾಬಿನ್‌ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಸೂಚಿಸಿದ್ದಾರೆ. ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328 ರೂ. ಹಾಗೂ ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೀದರ್‌, ಬೆಳಗಾವಿ, ಧಾರವಾಡ, …

Read More »

ಮಹಾತ್ಮ ಗಾಂಧಿ ಭೇಟಿ ನೀಡಿದ್ದ ಗಾಂಧಿ ನಗರ

ದಾವಣಗೆರೆ : ಭಾರತ ದೇಶವನ್ನು ಆಂಗ್ಲರ ಕಪಿಮುಷ್ಟಿಯಿಂದ ಬಿಡುಗಡೆ ಮಾಡಬೇಕು ಎಂದು ಸ್ವಾತಂತ್ರ್ಯ ಹೋರಾಟಕ್ಕೆ ಧುಮ್ಮಿಕ್ಕಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಜನರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದರು. ಈ ಸಂಬಂಧ ಅವರು 1934ರಲ್ಲಿ ದಾವಣಗೆರೆ ಜಿಲ್ಲೆಯ ಎಕೆ ಹಟ್ಟಿಗೆ ಭೇಟಿ ನೀಡಿದ್ದರು. ಅಲ್ಲದೇ, ಗಾಂಧಿಜೀ ಅವರು ಹರಿಜನರೊಂದಿಗೆ ಸಂವಾದ ನಡೆಸಿದ್ದಕ್ಕಾಗಿ ಇಲ್ಲಿಗೆ ಗಾಂಧಿನಗರ ಎಂದು ನಾಮಕರಣ ಕೂಡಾ ಮಾಡಲಾಗಿದೆ. ಎಕೆ ಹಟ್ಟಿಯಿಂದ ಗಾಂಧಿ ನಗರ ಎಂದು ನಾಮಕರಣ: ಈ ಸಂವಾದದಲ್ಲಿ …

Read More »

ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಮೈಸೂರು: ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿರುವ ತಾಯಿ ಚಾಮುಂಡೇಶ್ವರಿಗೆ ಗಣ್ಯರು ಪುಷ್ಪಾರ್ಚನೆ ಮಾಡಿದರು. ಅಂಬಾವಿಲಾಸ ಅರಮನೆ ಆವರಣದಲ್ಲಿ ಸಂಜೆ 4.42 ರಿಂದ 5.06 ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ.ಎಚ್.ಸಿ. ಮಹದೇವಪ್ಪ, ಶಿವರಾಜ ಎಸ್.ತಂಗಡಗಿ, ಯದುವಂಶಸ್ಥ, ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತರೆಡ್ಡಿ, ನಗರ ಪೊಲೀಸ್ ಆಯುಕ್ತ …

Read More »

ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರು ಗಾಂಧಿ ಜಯಂತಿ ಆಚರಿಸಿಲ್ಲ ಎಂಬ ಆರೋಪ

ಚಿಕ್ಕೋಡಿ (ಬೆಳಗಾವಿ) : ದೇಶಾದ್ಯಂತ ಇವತ್ತು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 156ನೇ ಜನ್ಮ ದಿನವನ್ನು ಆಚರಣೆ ಮಾಡಲಾಗಿದೆ. ಆದರೆ, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರು ಗಾಂಧಿ ಜಯಂತಿಯನ್ನು ಆಚರಿಸದೇ ಕರ್ತವ್ಯ ಲೋಪ ಎಸಗಿರುವ ಆರೋಪ ಕೇಳಿ ಬಂದಿದೆ. ರಾಷ್ಟ್ರಪತಿ, ಪ್ರಧಾನಿ ಹಾಗೂ ಮುಖ್ಯಮಂತ್ರಿ ಸೇರಿದಂತೆ ಎಲ್ಲರೂ ಕೂಡ ಗಾಂಧಿ ಜಯಂತಿಯನ್ನು ಆಚರಿಸಿಕೊಂಡು ಬಂದು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಆದರೆ ಝುಂಜರವಾಡ ಗ್ರಾಮದ …

Read More »