ಕೊಪ್ಪಳ: ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿಗೆ ಪಾದಯಾತ್ರೆ ಹೊರಟಿದ್ದವರ ಮೇಲೆ ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹರಿದಿರುವ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, ನಾಲ್ಕು ಜನರಿಗೆ ಗಾಯವಾಗಿದೆ. ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದ ಅನ್ನಪೂರ್ಣ(40), ಪ್ರಕಾಶ್(25) ಹಾಗೂ ಶರಣಪ್ಪ(19) ಮೃತಪಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇವರು ತಮ್ಮ …
Read More »Monthly Archives: ಅಕ್ಟೋಬರ್ 2025
ಶಾಲಾ, ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮಾ ಪಾಲಿಸಿ ಸೃಷ್ಟಿಸಿ ಕೋಟ್ಯಂತರ ವಂಚನೆ, ಇಬ್ಬರು ಸೆರೆ
ಉಡುಪಿ: ಶಾಲಾ, ಕಾಲೇಜುಗಳ ಬಸ್‌ಗಳಿಗೆ ನಕಲಿ ವಿಮಾ ಪಾಲಿಸಿ ಮಾಡಿ ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಪ್ರಕರಣ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಸಾಸ್ತಾನ ಕುಂಜಿಕೆರೆ ರಸ್ತೆಯ ರಾಕೇಶ ಎಸ್ (33) ಮತ್ತು ಶಿರಸಿಯ ಚರಣ ಬಾಬು ಮೇಸ್ತ ಬಂಧಿತರು. 2024ರ ನ.25ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಹೊಂಬಾಡಿ-ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಎಂಬಲ್ಲಿ ಶಾಲಾ ವಾಹನವೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಕುಂದಾಪುರ …
Read More »ಕುರುಬರನ್ನ ಎಸ್ಟಿಗೆ ಸೇರ್ಪಡೆಗೆ ಉಗ್ರಪ್ಪ ಉಗ್ರಾವತಾರ, ಎಲ್ಲಾ ಗೊಂದಲಗೆ ತೆರೆ ಎಳೆದ ಸಿಎಂ
ಬೆಂಗಳೂರು, (ಅಕ್ಟೋಬರ್ 07): ವಿಧಾನಸೌಧದಲ್ಲಿ ಇಂದು ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ (Valmiki Jayanti) ಕಾರ್ಯಕ್ರಮದಲ್ಲಿ ಕುರುಬ ಸಮುದಾಯವನ್ನು ಎಸ್‌ಟಿ ಸೇರ್ಪಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಿದರೆ ಸುಮ್ಮನ ಇರುವುದಿಲ್ಲ ಎಂದು ಕಾರ್ಯಕ್ರಮದಲ್ಲೇ ಮಾಜಿ ಸಂಸದ ವಿ.ಎಸ್. ಉಗ್ರಪ್ಪ (V.S Ugrappa) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆಯೇ ಗುಡುಗಿದ್ದಾರೆ. ಇನ್ನು ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ (Siddaramaiah), ಕುರುಬರನ್ನು ಪರಿಶಿಷ್ಟ ಜಾತಿ (ಎಸ್‌ಟಿ) ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ, ಆ ಶಿಫಾರಸ್ಸಿನ …
Read More »ಮೈಸೂರಲ್ಲಿ ಕಾರು ಅಡ್ಡಗಟ್ಟಿ ಹಾಡಹಗಲೇ ವ್ಯಕ್ತಿಯ ಭೀಕರ ಕೊಲೆ
ಮೈಸೂರು: ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ನಗರದ ವಸ್ತು ಪ್ರದರ್ಶನ ಆವರಣದ ಮುಂದಿನ ರಸ್ತೆಯಲ್ಲಿ ಇಂದು ಬೆಳಗ್ಗೆ ಸುಮಾರು 11.20 ಗಂಟೆಗೆ ನಡೆದಿದೆ. ವೆಂಕಟೇಶ್ ಆಲಿಯಾಸ್ ಗಿಲಿಗಿಲಿ ನಾರಾಯಣ (45) ಕೊಲೆಯಾದ ವ್ಯಕ್ತಿ. ಕಾರಿನ ಗ್ಲಾಸ್ ಓಪನ್ ಮಾಡಿಕೊಂಡು ವೆಂಕಟೇಶ್ ತೆರಳುವಾಗ ಆಟೋ ಮತ್ತು ಬೈಕ್ನಲ್ಲಿ ಬಂದ ಕಿಡಿಗೇಡಿಗಳು, ಕಾರದ ಪುಡಿ ಎರಚಿ ದಾಳಿ ಮಾಡಿದ್ದಾರೆ. ಕೃತ್ಯ ಎಸಗುವಾಗ ನಾಲ್ಕು ಮಂದಿ ಇದ್ದರು ಎಂದು …
Read More »ಶೆಡ್ ನಲ್ಲಿ ಹೊತ್ತಿಕೊಂಡ ಬೆಂಕಿ: 7 ಕಾರ್ಮಿಕರಿಗೆ ಗಂಭೀರ ಗಾಯ
ಶೆಡ್ ನಲ್ಲಿ ಹೊತ್ತಿಕೊಂಡ ಬೆಂಕಿ: 7 ಕಾರ್ಮಿಕರಿಗೆ ಗಂಭೀರ ಗಾಯ ಶೆಡ್ ವೊಂದರಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಅವಘಡ ಸಂಭವಿಸಿದ್ದು, 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ಬಿಡದಿ ಕೈಗಾರಿಕಾ ಪ್ರದೇಶದ ಕಾಡುಮನೆ ಸರ್ಕಲ್ ಬಳಿ ಘಟನೆ ನಡೆದಿದೆ. ಶೆಡ್ ನಲ್ಲಿ ವಾಸವಾಗಿದ್ದ 7 ಕಾರ್ಮಿಕರಿಗೆ ಗಂಭೀರವಾದ ಸುಟ್ಟಗಾಯಗಳಾಗಿವೆ.ಗಾಯಾಳುಗಳನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ …
Read More »ಮಕ್ಕಳು ಆಟವಾಡುವಾಗ ಎಷ್ಟೇ ಎಚ್ಚರಿಕೆಯಿಂದಿದ್ದರೂ ಕಡಿಮೆಯೇ. ಇಲ್ಲೋರ್ವ ಬಾಲಕ ಜೋಕಾಲಿ
ಮಕ್ಕಳು ಆಟವಾಡುವಾಗ ಎಷ್ಟೇ ಎಚ್ಚರಿಕೆಯಿಂದಿದ್ದರೂ ಕಡಿಮೆಯೇ. ಇಲ್ಲೋರ್ವ ಬಾಲಕ ಜೋಕಾಲಿ ಆಡುತ್ತಿದ್ದಾಗ ಜೋಕಾಲಿಗೆ ಕಟ್ಟಿದ್ದ ಸೀರೆ ಕತ್ತಿಗೆ ಸುತ್ತಿಕೊಂಡು ಬಾಲಕ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಇಲ್ಲಿನ ಕೋನಬೇವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಬಾವಿಹಳ್ಳಿ ಮೃತ ಬಾಲಕ. ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ತೆಲಗಿ ನಿವಾಸಿಯಾಗಿದ್ದ ಬಾಲಕ ರಾಹುಲ್ ಅಜ್ಜಿಯ ಮನೆಗೆ ಬಂದಿದ್ದ. ಈ ವೇಳೆ ಜೋಕಾಲಿ ಆಡಲು ಹೋಗಿ ದುರಂತಕ್ಕೀಡಾಗಿದ್ದಾನೆ.
Read More »ಪತ್ನಿ ದೈಹಿಕ ಸಂಪರ್ಕಹೊಂದಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಪತ್ನಿ ದೈಹಿಕ ಸಂಪರ್ಕಹೊಂದಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಈ ಘಟನೆ ನಡೆದಿದೆ. ಮಾರಮ್ಮ ಪತಿಯಿಂದ ಕೊಲೆಯಾದ ಮಹಿಳೆ. ಸಂಗಪ್ಪ ಪತ್ನಿಯನ್ನೇ ಕೊಲೆಗೈದ ಪತಿ.ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯನ್ನೇ ಕೊಲೆಗೈದಿದ್ದಾನೆ. ಪತ್ನಿ ಹತ್ಯೆ ಬಳಿಕ ಸಂಗಪ್ಪ ಪೊಲೀಸ್ ಠಾಣೆಗೆ ಬಂಧು ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Read More »ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಮತದಾರರ ಸಭೆ ಹುಕ್ಕೇರಿಗೆ ರಾಜೇಂದ್ರ ಪಾಟೀಲ ಅಭ್ಯರ್ಥಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ
ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಮತದಾರರ ಸಭೆ ಹುಕ್ಕೇರಿಗೆ ರಾಜೇಂದ್ರ ಪಾಟೀಲ ಅಭ್ಯರ್ಥಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಘೋಷಣೆ ಬೆಳಗಾವಿ- ಇದೇ ತಿಂಗಳು ನಡೆಯುವ ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನಿಂದ ರಾಜೇಂದ್ರ ಪಾಟೀಲ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಘೋಷಿಸಿದರು. ಮಂಗಳವಾರದಂದು ನಗರದ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಿದ್ದ ಹುಕ್ಕೇರಿ ತಾಲೂಕಿನ 41 ಪಿಕೆಪಿಎಸ್ ಗಳ …
Read More »ಮುಚ್ಚುವ ಹಂತದಲ್ಲಿದ್ದ ಕಾರ್ಖಾನೆ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿಯ ಪಥದಲ್ಲಿ
ನಿಪ್ಪಾಣಿ: ಮುಚ್ಚುವ ಹಂತದಲ್ಲಿದ್ದ ಕಾರ್ಖಾನೆ ಕೆಲವೇ ವರ್ಷಗಳಲ್ಲಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇದಕ್ಕೆಲ್ಲ ನಮ್ಮ ಕಾರ್ಖಾನೆಯ ಸಿಬ್ಬಂದಿಯ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮವೆ ಕಾರಣ. ಅವರೇ ನಮ್ಮ ಶಕ್ತಿ, ಅವರಿಗೆ ದಸರಾ ಮತ್ತು ದೀಪಾವಳಿ ಹಬ್ಬಕ್ಕಾಗಿ ಒಂದು ತಿಂಗಳಿನ ಬೋನಸ್ ನೀಡಲು ನಮ್ಮ ಆಡಳಿತ ಮಂಡಳಿ ತಿರ್ಮಾನಿಸಿದೆ. ಕಳೆದ ೨೫ ವರ್ಷದಲ್ಲಿ ಇದು ಗರಿಷ್ಠ ಬೋನಸ್ ಆಗಿದೆ ಎಂದು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ರವಿವಾರ ನಗರದ ಹೊರವಲಯದಲ್ಲಿರುವ …
Read More »ಪತಿಯ ಮೇಲೆ ಪತ್ನಿ ಕಾದ ಎಣ್ಣೆ ಸುರಿದು ಹತ್ಯೆಗೆ ಯತ್ನ?
ಪತಿಯ ಮೇಲೆ ಪತ್ನಿ ಕಾದ ಎಣ್ಣೆ ಸುರಿದು ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಭಾಷ್ ಪಾಟೀಲ್ (55) ಮೇಲೆ ಪತ್ನಿ ವೈಶಾಲಿ ಕಾದ ಎಣ್ಣೆ ಸುರಿದಿದ್ದಾಳೆ. ಸುಭಾಷ್ ಪಾಟೀಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಭಾಷ್ ಸಿಲಿಂಡರ್ ವಿತರಣೆ ಕೆಲಸ ಮಾಡುತ್ತಿದ್ದರು. ಪತ್ನಿ ವೈಶಾಲಿಗೆ ಪತಿ ಮೇಲೆ ಅನುಮಾನ. ಪತಿ ಬೇರೆ ಮಹಿಳೆ ಜೊತೆ ಅನಿಅತಿಕ ಸಂಬಂಧ ಹೊಂದಿರುವ …
Read More »