Breaking News

Daily Archives: ನವೆಂಬರ್ 2, 2025

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಮುನವಳ್ಳಿ ಪಟ್ಟಣದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡದೇವಿ ಭುವನೇಶ್ವರಿಯ ತಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಸಂಭ್ರಮದ ಕನ್ನಡ ರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿಲಾಯಿತು. ಕನ್ನಡದ ಕಹಳೆ ನಾಡಿನ ಉದ್ದಗಲಕ್ಕೂ ಮೊಳಗಲಿ ಎಂದು ಶುಭ ಹಾರೈಸಿದೆ. ವಿವಿಧ ರಂಗಗಳಲ್ಲಿ ಸಾಧನೆಗೈದ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ವೇದಿಕೆಯಲ್ಲಿ ಅಭಿನಂದಿಸಿದೆನು. ಈ ವೇಳೆ ಪರಮ ಪೂಜ್ಯರು, ಸ್ಥಳೀಯ ಮುಖಂಡರು, ಯುವ ಮಿತ್ರರು ಉಪಸ್ಥಿತರಿದ್ದರು.

Read More »

ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರಿಗೆ ಹೂಗುಚ್ಛ ನೀಡಿದ ಸಚಿವರು ಮಂಗಳೂರು: ಮಂಗಳೂರಿನ ಬಿಜೈಯ ಹಿರಿಯ ನಾಗರಿಕ ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂಪಾಯಿ ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ …

Read More »

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ.

ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಐವರಿಗೆ ಚಾಕು ಇರಿತ. ಇಡೀ ರಾಜ್ಯ ರಾಜ್ಯೋತ್ಸವದ ಸಂಭ್ರಮದಲ್ಲಿರುವಾಗಲೇ ಗಡಿ ನಾಡು ಬೆಳಗಾವಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ನಡೆಯುವಾಗ ಐವರಿಗೆ ಚಾku ಇರಿಯಲಾಗಿದೆ. ಇವರನ್ನು ಸ್ಥಳೀಯ ಬಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ‌ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು. ಈ ಮೆರವಣೆಗೆ ಗುಂಪಿನಲ್ಲಿ ಏಕಾಏಕಿ ಬಂದ …

Read More »

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು.

ರಾಜ್ಯೋತ್ಸವ ಮೆರವಣಿಗೆ ವೇಳೆ ಪೊಲೀಸರಿಂದ‌ ಲಾಠಿ ಏಟು. ತಲೆ ಭಾಗಕ್ಕೆ ಬಲವಾಗಿ ಪೆಟ್ಟು ಬಿದ್ದು ಬಿಮ್ಸ್ ಆಸ್ಪತ್ರೆಗೆ ದಾಖಲು. ಬೀರಪ್ಪ ದಾನವ್ವಗೊಳ ಎಂಬಾತನಿಗೆ ಲಾಠಿಯಿಂದ ಹೊಡೆದು ಪೊಲೀಸರಿಂದ ಹಲ್ಲೆ ಆರೋಪ. ಭೀರಪ್ಪ‌ ಸಂಬಂಧಿ ಝರೀನಾ ಎಂಬುವವರಿಂದ ಹಲ್ಲೆ ಆರೋಪ. ವಿಜಯನಗರದ ನಿವಾಸಿಯಾಗಿರುವ ಬೀರಪ್ಪ. ಝೇಂಡಾ ಹಾರಿಸುವಾಗ ಪೊಲೀಸರೊಬ್ಬರು ತಲೆಗೆ ಹೊಡೆದಿದ್ದಾರೆ. ಮೆರವಣಿಗೆ ನೋಡಲು ಬಂದ ಯುವಕನಿಗೆ ಹೊಡೆದಿದ್ದಾರೆ‌. ತಲೆ ಭಾಗಕ್ಕೆ ಹೊಡೆದಿದ್ದಾರೆ ಸ್ಕ್ಯಾನಿಂಗ್ ಮಾಡಬೇಕು ಅಂತಾ ಪೊಲೀಸರು ಹೇಳ್ತಿದ್ದಾರೆ. ದುಡಿದು …

Read More »