ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಗೌರಿ ಹುಣ್ಣಿಮೆಯಂದು ಹಾಗೂ ಛಟ್ಟಿ ಅಮವಾಸ್ಯೆವರೆಗೆ ಪ್ರತಿ ಶುಕ್ರವಾರ, ಭಾನುವಾರ ಮತ್ತು ಮಂಗಳವಾರದಂದು ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಶೀಗಿ ಹುಣ್ಣಿಮೆಯಿಂದ ದೀಪಾವಳಿ ಅಮವಾಸೆಯವರೆಗಿನ ಅವಧಿಯಲ್ಲಿ ಮಾಡಲಾಗಿದ್ದ …
Read More »Daily Archives: ನವೆಂಬರ್ 4, 2025
: ಸಾವಿನಲ್ಲೂ ಒಂದಾದ ದಂಪತಿ
ಬಾಗಲಕೋಟೆ: ಗಂಡ ಹೃದಯಘಾತವಾಗಿ ಮೃತಪಟ್ಟ ಸುದ್ದಿ ಕೇಳಿ ಹೆಂಡತಿಯೂ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಈ ಮೂಲಕ ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ. ಶಶಿಧರ ಪತ್ತಾರ(40) ಎಂಬವರಿಗೆ ಸೋಮವಾರ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಕಾರಿ ಆಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಾವಿನ ಸುದ್ದಿ ತಿಳಿದ ತಕ್ಷಣ ಆಘಾತಕ್ಕೆ ಹೆಂಡತಿಯೂ ಹೃದಯಾಘಾತಗೊಂಡು ಸಾವನ್ನಪ್ಪಿದ್ದಾರೆ. ಪತ್ನಿ ಸರೋಜಾ (35) ಹೃದಯಾಘಾತಗೊಂಡು ಸಾವನ್ನಪ್ಪಿದವರು. ಹದಿನೈದು …
Read More »ರಾತ್ರಿ ವೇಳೆ ಹುಲಿ ಮರಿಗಳ ಜೊತೆ ವಿಡಿಯೋ: ಅರಣ್ಯ ಸಚಿವರಿಗೆ ಸಾಮಾಜಿಕ ಕಾರ್ಯಕರ್ತ ದೂರು
ಚಾಮರಾಜನಗರ: ಒಂದೆಡೆ ವನ್ಯಜೀವಿ ಹಾಗೂ ಮಾನವ ಸಂಘರ್ಷ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಅರಣ್ಯ ಇಲಾಖೆಯ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿವೆ. ತಾಯಿಯಿಂದ ಬೇರ್ಪಟ್ಟಿದ್ದ ಮೂರು ಹುಲಿ ಮರಿಗಳ ಜೊತೆ ಖಾಸಗಿ ವ್ಯಕ್ತಿಗಳು ರಾತ್ರಿ ಹೊತ್ತು ವಿಡಿಯೋ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೇಡಗುಳಿ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಪುಣಜನೂರು-ಬೇಡಗುಳಿ ರಸ್ತೆಯಲ್ಲಿ ಕಳೆದ ಅ.14 ರಂದು ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಪತ್ತೆಯಾಗಿದ್ದವು. ಖಾಸಗಿ ವ್ಯಕ್ತಿಗಳು ಆ ಮರಿಗಳನ್ನು ಹಿಡಿದು ವಿಡಿಯೋ …
Read More »ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ. ಮೇಟಿ ನಿಧನ
ಬಾಗಲಕೋಟೆ/ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ (79) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹೆಚ್.ವೈ. ಮೇಟಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಮೇಟಿ ಅವರನ್ನು ಸಿಎಂ …
Read More »ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯ ತೀರ್ಪು ಅನ್ನು ದ್ವಿಸದಸ್ಯ ಪೀಠ ಕಾಯ್ದಿರಿಸಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ತೆರವುಗೊಳಿಸುವಂತೆ ರಾಜ್ಯ ಸರ್ಕಾರವು ದ್ವಿದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಮತ್ತು ಗೀತಾ ಕೆ.ಬಿ ಅವರಿದ್ದ ದ್ವಿಸದಸ್ಯ ಪೀಠದಲ್ಲಿ ಈ ಕುರಿತು ಇಂದು ವಿಚಾರಣೆ …
Read More »ನಕಲಿ ನೋಟು ಜಾಲದ 10 ಮಂದಿ ಸೆರೆ
ಬೆಂಗಳೂರು: ನೋಟಿನ ಮಳೆ ಸುರಿಸುವುದಾಗಿ ಅಮಾಯಕರನ್ನು ವಂಚಿಸುತ್ತಿದ್ದ ಜಾಲವನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಈ ಹಿಂದೆ ಚಲಾವಣೆಯಿಂದ ಹಿಂಪಡೆಯಲಾದ 2 ಸಾವಿರ ರೂ. ಮುಖಬೆಲೆಯ ಅಸಲಿ ನೋಟುಗಳ ಸೀರೀಸ್ ನಂಬರ್ ತಿರುಚಿರುವ ನಕಲಿ ನೋಟುಗಳ ಕುರಿತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI)ದ ವ್ಯವಸ್ಥಾಪಕರು ನೀಡಿದ್ದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಮೋಹನ್ ಕೆ, ಶ್ರೀನಿವಾಸ್ ಮೂರ್ತಿ, ರಾಜು, ಬಸವರಾಜ್, ಮುನಿಶಾಮಪ್ಪ, ಮಲ್ಲಿಕಾರ್ಜುನ್, ರಾಮಕೃಷ್ಣ, ಪಳ್ಳಿ ಮುರುಳೀಧರ್, ರಾಮಚಂದ್ರ …
Read More »ಮಹಿಳೆ ಮೇಲೆ ಹಲ್ಲೆ ಆರೋಪ: ಪೊಲೀಸರ ತಪ್ಪು ಸಾಬೀತಾದರೆ ಕ್ರಮ- ಕಮೀಷನರ್
ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆಯ ಮೇಲೆ ವರ್ತೂರು ಪೊಲೀಸ್ ಠಾಣೆಯ ಸಿಬ್ಬಂದಿ ಅಮಾನವೀಯವಾಗಿ ಹಲ್ಲೆಗೈದಿರುವ ಆರೋಪದ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ವೈಟ್‌ಫೀಲ್ಡ್ ವಿಭಾಗದ ಡಿಸಿಪಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ಇಂದು ಪ್ರತಿಕ್ರಿಯಿಸಿದ ಅವರು, ಪೊಲೀಸ್ ಸಿಬ್ಬಂದಿಯ ತಪ್ಪು ಸಾಬೀತಾದರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು. ಘಟನೆಯ ವಿವರ: ಸುಂದರಿ ಬೀಬಿ (34) ಅವರು ವರ್ತೂರು ಠಾಣಾ ವ್ಯಾಪ್ತಿಯ …
Read More »101 ಕೆ.ಜಿ ತೂಕದ ಚೀಲ ಹೊತ್ತು ಅಂಜನಾದ್ರಿ ಬೆಟ್ಟವೇರಿದ ಯುವಕ
ಗಂಗಾವತಿ(ಕೊಪ್ಪಳ): ದೇವರ ಮೇಲಿನ ನಂಬಿಕೆ ಮತ್ತು ವಿಶ್ವಾಸ ಎಂತಹ ಛಲದ ಸಾಧನೆಗೂ ಪ್ರೇರಣೆ ನೀಡುತ್ತದೆ ಎನ್ನುವುದಕ್ಕೆ ಯುವಕಯೊಬ್ಬ ಸಾಕ್ಷಿಯಾಗಿದ್ದಾನೆ. ಹನುಮಪ್ಪನ ಮೇಲೆ ಇರಿಸಿದ್ದ ಭಕ್ತಿ, ಈ ಯುವಕನಿಗೆ ನೂರು ಕೆ.ಜಿ. ಭಾರದ ಮೂಟೆ ಹೊತ್ತು ಬೆಟ್ಟ ಹತ್ತುವಂತೆ ಮಾಡಿದೆ. ಕಡಿದಾದ ರಸ್ತೆ ಮತ್ತು ಮೆಟ್ಟಿಲು ಮಾರ್ಗ ಹೊಂದಿರುವ ತಾಲೂಕಿನ ಅಂಜನಾದ್ರಿಯ ಹನುಮಪ್ಪನ ಬೆಟ್ಟ ಹತ್ತುವುದು ಎಂದರೆ ಸಾಮಾನ್ಯ ಜನರಿಗೆ ಪ್ರಯಾಸವಾಗುತ್ತದೆ. ಅಂಥಹದ್ದರಲ್ಲಿ ಯುವಕನೊಬ್ಬ ಬರೋಬ್ಬರಿ 101 ಕೆ.ಜಿ ಭಾರದ ಜೋಳದ ಚೀಲ …
Read More »ಮಠಗಳಿಂದಲೆ ಭಾರತೀಯ ಸಂಸ್ಕೃತಿ ಉಳಿದಿದೆ: ಡಾ. ಅಲ್ಲಮಪ್ರಭು ಸ್ವಾಮೀಜಿ*
ಮಠಗಳಿಂದಲೆ ಭಾರತೀಯ ಸಂಸ್ಕೃತಿ ಉಳಿದಿದೆ: ಡಾ. ಅಲ್ಲಮಪ್ರಭು ಸ್ವಾಮೀಜಿ* ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ ಭಾರತ. ಮಠಗಳಿಂದಲೆ ಭಾರತೀಯ ಸಂಸ್ಕೃತಿ ಉಳಿದು ಬೆಳೆದಿದೆ. ಅಧ್ಯಾತ್ಮ ಕ್ಷೇತ್ರದಲ್ಲಿ ಇಡೀ ಜಗತ್ತಿಗೆ ಮಾದರಿಯಾದ ದೇಶ ನಮ್ಮದು. ಈ ಆಧ್ಯಾತ್ಮಿಕ ಚಿಂತನೆಗಳನ್ನು ಮಠಗಳು ಜನರಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತ ಬಂದಿವೆ. ಸಂಸ್ಕೃತಿ ಸಂಸ್ಕಾರ ಸದ್ಗುಣಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮಠಗಳು ಶ್ರಮಿಸುತ್ತ ಬಂದಿವೆ ಎಂದು ಡಾ. ಅಲ್ಲಮಪ್ರಭು ಸ್ವಾಮೀಜಿ ಹೇಳಿದರು. ಕಾರಂಜಿಮಠದಲ್ಲಿ …
Read More »ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ಹೊಸ ಕಟ್ಟಡ ಉದ್ಘಾಟಿಸಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ
ಚಿಕ್ಕೋಡಿ :ನೂತನವಾಗಿ ನಿರ್ಮಾಣವಾದ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಉದ್ಘಾಟಿಸಿದರು. ಬಳಿಕ ಮಾಧ್ಯಮಗಳ ಜೊತಗೆ ಮಾತನಾಡಿದ ಪ್ರಿಯಂಕಾ ಜಾರಕಿಹೊಳಿ ನಾಗರಮುನ್ನೋಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದ್ದು ಸಂತಸ ತಂದಿದೆ.ಈ ಕಚೇರಿಯು ಕಾಂಗ್ರೆಸ್ ಕಾರ್ಯಕರ್ತರಿಗೆ ಹಾಗೂ ಜನರಿಗೆ ಅನುಕೂಲವಾಗಲಿ ಹಾಗೂ ಪಕ್ಷ ಸಂಘಟನೆಗಾಗಿ ಕಚೇರಿ ಅನುಕೂಲವಾಗಲಿದೆ. ಕೆಪಿಸಿಸಿ ಕಾರ್ಯದರ್ಶಿ ಮಹಾವೀರ ಮೊಹಿತೆ ಅವರಿಗೆ ಪಕ್ಷದಲ್ಲಿ ಒಳ್ಳೆಯ ಸ್ಥಾನಮಾನ ಸಿಗಲಿ ಎಂದು ಹಾರೈಸಿಸಿದರು. ವಿಧಾನ ಪರಿಷತ್ …
Read More »
Laxmi News 24×7