Breaking News

Daily Archives: ನವೆಂಬರ್ 5, 2025

ಕೇತಗಾನಗಳ್ಳಿ ಸರ್ಕಾರಿ ಜಮೀನು ಒತ್ತುವರಿ; 10 ದಿನಗಳಲ್ಲಿ ಒತ್ತುವರಿ ಕುರಿತು ವರದಿ ಸಲ್ಲಿಸಲು ಸೂಚಿಸಿದ ಹೈಕೋರ್ಟ್

ಬೆಂಗಳೂರು : ರಾಮನಗರದ ಕೇತಗಾನಹಳ್ಳಿಯ ವಿವಿಧ ಸರ್ವೇ ಸಂಖ್ಯೆಗಳಲ್ಲಿ ಒತ್ತುವರಿಯಾಗಿರುವ ಸರ್ಕಾರಿ ಗೋಮಾಳ ಜಮೀನು ತೆರವಿಗೆ ಸಂಬಂಧಿಸಿದಂತೆ ಮುಂದಿನ 10 ದಿನಗಳಲ್ಲಿ ಸಂಪೂರ್ಣ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇತಗಾನಹಳ್ಳಿಯಲ್ಲಿ ಕೇಂದ್ರ ಸಚಿವ ಹೆಚ್​ ಡಿ ಕುಮಾರಸ್ವಾಮಿ ಮತ್ತವರ ಸಂಬಂಧಿಕರಿಂದ ಒತ್ತುವರಿಯಾಗಿರುವ ಜಮೀನು ತೆರವು ಮಾಡುವಂತೆ ಲೋಕಾಯುಕ್ತ ಆದೇಶವನ್ನು ಜಾರಿ ಮಾಡದ ಕ್ರಮವನ್ನು ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್​.ಆರ್. ಹಿರೇಮಠ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ …

Read More »

4.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹೊಸ ಕೆಂಚನಟ್ಟಿ ಮತ್ತು ಹೊಸೂರ ಹೆಗ್ಗೇರಿ ಗ್ರಾಮಗಳಲ್ಲಿ ತಲಾ ರೂ. 14.40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುವ ನೂತನ ಶಾಲಾ ಕೊಠಡಿ ಕಾಮಗಾರಿಗಳಿಗೆ ಇಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿದರು ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು. #rahuljarkiholi #Yamakanamaradi

Read More »

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ, ಸಂಚಲನ ಮೂಡಿಸಿದ ಮತ್ತೊಂದು ಪತ್ರ

ಬೆಂಗಳೂರು, (ನವೆಂಬರ್ 04): ಧರ್ಮಸ್ಥಳದಲ್ಲಿ (dharmasthala mass burial Case) ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಹೇಳಿಕೆ ನೀಡಿರುವ ಬುರುಡೆ ಚಿನ್ನಯ್ಯ ಜೈಲು ಪಾಲಾಗಿದ್ದು, ಈ ಪ್ರಕರಣ ಕ್ಲೈಮ್ಯಾಕ್ಸ್ ಹಂತ ತಲುಪಿದೆ ಎನ್ನುವಾಗಲೇ ಮಹಿಳಾ ಆಯೋಗ ಮಧ್ಯೆ ಪ್ರವೇಶ ಮಾಡಿದೆ. ಹೌದು..ಧರ್ಮಸ್ಥಳ ಪ್ರಕರಣದ  ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಜತೆಗೆ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆಯನ್ನು …

Read More »

ಆರ್.ಎಫ್.ಓ ಹುದ್ದೆ ಅರ್ಧ ಬಡ್ತಿ, ಅರ್ಧ ನೇರ ನೇಮಕಾತಿಗೆ ಸೂಚನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಖಾಲಿ ಇರುವ ವಲಯ ಅರಣ್ಯಾಧಿಕಾರಿ (ಆರ್.ಎಫ್.ಓ) ಹುದ್ದೆಗಳ ಪೈಕಿ ಶೇ.50ರಷ್ಟು ಹುದ್ದೆಯನ್ನು ಬಡ್ತಿಯ ಮೂಲಕ ಹಾಗೂ ಉಳಿದ ಶೇ.50ರಷ್ಟನ್ನು ನೇರ ನೇಮಕಾತಿ ಮೂಲಕ ತುಂಬಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿರುವ ಅರಣ್ಯಶಾಸ್ತ್ರ ಪದವೀಧರರು ಮತ್ತು ವಿದ್ಯಾರ್ಥಿಗಳನ್ನು ಇಂದು ಭೇಟಿ ಮಾಡಿ, ಅವರ ಅಹವಾಲು ಆಲಿಸಿ ಮಾತನಾಡಿದ …

Read More »

ಬಿಹಾರ ಫಲಿತಾಂಶ ಬಳಿಕ ಸಂಪುಟ ಪುನಾರಚನೆ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಈಗಾಗಲೇ ಸಂಪುಟ ಪುನಾರಚನೆಯ ಸುಳಿವು ನೀಡಿದ್ದಾರೆ. ಈ ನಿಟ್ಟಿ‌ನಲ್ಲಿ ಚರ್ಚೆ ನಡೆಸಲು ನ.15ರಂದು ದೆಹಲಿಗೆ ತೆರಳುವುದಾಗಿಯೂ ಅವರು ತಿಳಿಸಿದ್ದಾರೆ. ಅಲ್ಲಿಗೆ ಸಂಪುಟ ಪುನಾರಚನೆಯತ್ತ ಚಿತ್ತ ಹರಿಸಿರುವ ಹಲವು ಕೈ ಶಾಸಕರ ಕನಸು ಚಿಗುರೊಡೆದಿದೆ. ಇದೀಗ ಮಂತ್ರಿಗಿರಿಯ ಕನಸು ನನಸಾಗುವ ನಿರೀಕ್ಷೆಯಲ್ಲಿ ಹಲವು ಶಾಸಕರಿದ್ದಾರೆ. ಬಿಹಾರ ಫಲಿತಾಂಶದ ಬಳಿಕ ಸಂಪುಟ ಪುನಾರಚನೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಕಾಂಗ್ರೆಸ್ ನಾಯಕರೇ ತಿಳಿಸಿದ್ದಾರೆ. ಹಿರಿಯರಿಗೆ ಕೊಕ್ ಬಗ್ಗೆ ಚರ್ಚೆ: ಸಂಪುಟ …

Read More »

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ

ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ ತರಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಇದಕ್ಕೆ ಸಂಬಂಧಿಸಿದ ಮಸೂದೆ ಮಂಡಿಸುವ ನಿರೀಕ್ಷೆ ಇದೆ. ಕಾರ್ಮಿಕ ಇಲಾಖೆಯು ಈಗಾಗಲೇ ಕರ್ನಾಟಕ ಗೃಹ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯ ಕರಡನ್ನು ಪ್ರಕಟಿಸಿದ್ದು, 30 ದಿನಗಳೊಳಗೆ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳನ್ನು ಕೋರಿದೆ. ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್, …

Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಅರ್ಜಿ ಪುನರ್ ಪರಿಶೀಲಿಸುವಂತೆ ಕೋರಿ ಸುಪ್ರೀಂ​ಗೆ ಪವಿತ್ರಾಗೌಡ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ, ರದ್ದುಗೊಂಡಿರುವ ಜಾಮೀನು ಅರ್ಜಿಯನ್ನು ಪುನರ್ ಪರಿಶೀಲಿಸಬೇಕೆಂದು ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ಧಾರೆ. ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಏಳು ಮಂದಿ ಆರೋಪಿಗಳಿಗೆ ಕಳೆದ ಆಗಸ್ಟ್ 14 ರಂದು ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿತ್ತು. ಅಂದಿನಿಂದ ಏಳು ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ಧಾರೆ. ಸೋಮವಾರ 17 ಮಂದಿ ಆರೋಪಿಗಳ ಮೇಲೆ ದೋಷಾರೋಪ ನಿಗದಿ ಮುಕ್ತಾಯಗೊಂಡಿತ್ತು. ಈ ಮಧ್ಯೆ ಜಾಮೀನು ಅರ್ಜಿ …

Read More »

ಕಿರ್ಲೋಸ್ಕರ್​ನಿಂದ ರಾಜ್ಯದಲ್ಲಿ ₹3,000 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ್

ಕಿರ್ಲೋಸ್ಕರ್​ನಿಂದ ರಾಜ್ಯದಲ್ಲಿ ₹3,000 ಕೋಟಿ ಹೂಡಿಕೆ: ಸಚಿವ ಎಂ.ಬಿ. ಪಾಟೀಲ್ ಪುಣೆ/ಬೆಂಗಳೂರು: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು.‌ ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಉನ್ನತ ಮಟ್ಟದ ನಿಯೋಗದೊಂದಿಗೆ ರೋಡ್ ಶೋ ನಡೆಸಿದ ಅವರು, ಹೂಡಿಕೆ ಕುರಿತು ಹತ್ತಕ್ಕೂ ಹೆಚ್ಚು ಉದ್ಯಮಿಗಳನ್ನು ಭೇಟಿಯಾಗಿ, ಮಾತುಕತೆ ನಡೆಸಿದರು. …

Read More »

ಬೆಳಗಾವಿ ಅಹೋರಾತ್ರಿ ಪ್ರತಿಭಟನೆಯಲ್ಲಿ ಭಾಗಿಯಾದ ಬಿ ವೈ ವಿಜಯೇಂದ್ರ

ಚಿಕ್ಕೋಡಿ(ಬೆಳಗಾವಿ): ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ರೈತರು ಚಳಿ, ಗಾಳಿಯೆನ್ನದೆ ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಯು 7ನೇ ದಿನಕ್ಕೆ ಕಾಲಿಟ್ಟಿದೆ. ವಿಜಯೇಂದ್ರಗೆ ಹುಟ್ಟಹಬ್ಬದ ಶುಭಾಶಯ ಕೋರಿದ ರೈತರು: ರೈತರ ಅಹೋರಾತ್ರಿ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರೂ ಭಾಗವಹಿಸಿದರು. ಪ್ರತಿಭಟನೆಯ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು, ತಮ್ಮ ಹುಟ್ಟುಹಬ್ಬದ ನಡುವೆಯೂ ರೈತರ …

Read More »

ಬೆಳಗಾವಿಯಲ್ಲಿ ಅಬ್ದುಲ್ ಕಲಾಂ ಆಲ್ ಇಂಡಿಯಾ ಕ್ಯಾರಮ್ ಟೂರ್ನಾಮೆಂಟ್’

ಬೆಳಗಾವಿಯಲ್ಲಿ ಅಬ್ದುಲ್ ಕಲಾಂ ಆಲ್ ಇಂಡಿಯಾ ಕ್ಯಾರಮ್ ಟೂರ್ನಾಮೆಂಟ್’ ಬೆಳಗಾವಿಯ ಯಂಗ್ ಕಮೀಟಿಯ ವತಿಯಿಂದ ಆಯೋಜನೆ ಅಬ್ದುಲ್ ಕಲಾಂ ಆಲ್ ಇಂಡಿಯಾ ಕ್ಯಾರಮ್ ಟೂರ್ನಾಮೆಂಟ್’ ವಿವಿಧ ಗಣ್ಯರಿಂದ ಚಾಲನೆ ಬೆಳಗಾವಿಯ ಯಂಗ್ ಕಮೀಟಿಯ ವತಿಯಿಂದ ಅಬ್ದುಲ್ ಕಲಾಂ ಆಲ್ ಇಂಡಿಯಾ ಕ್ಯಾರಮ್ ಟೂರ್ನಾಮೆಂಟ್’ನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಯಂಗ್ ಕಮೀಟಿಯ ವತಿಯಿಂದ ಅಬ್ದುಲ್ ಕಲಾಂ ಆಲ್ ಇಂಡಿಯಾ ಕ್ಯಾರಮ್ ಟೂರ್ನಾಮೆಂಟ್’ನ್ನು ಹಮ್ಮಿಕೊಳ್ಳಲಾಗಿತ್ತು. ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ವಿವಿಧ ಗಣ್ಯರು, ಟೂರ್ನಾಮೆಂಟಿಗೆ …

Read More »