ಬೆಂಗಳೂರು, ನವೆಂಬರ್ 10: ಪರಪ್ಪನ ಅಗ್ರಹಾರ ಜೈಲಲ್ಲ (Parappana Agrahara Jail) ಐಷಾರಾಮಿ ರೆಸಾರ್ಟ್! ಐಸಿಸ್ ಉಗ್ರ ಜುಹಾದ್, ವಿಕೃತ ಕಾಮಿ ಉಮೇಶ್ ರೆಡ್ಡಿ, ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಜೈಲು ಸೇರಿದ ತೆಲುಗು ನಟ ತರುಣ್ ಇವರೆಲ್ಲ ಜೈಲಿನಲ್ಲಿ ಬಿಂದಾಸ್ ಆಗಿದ್ದಾರೆ. ಇವರು ಜಾಲಿ ಲೈಫ್ ಮಾಡುತ್ತಿರುವುದಕ್ಕೆ ಸಂಬಂಧಿಸಿದ ವೈರಲ್ ಆಗಿರುವ ವಿಡಿಯೋಗಳು ಸರ್ಕಾರವನ್ನೇ ನಡುಗಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತ ಜೈಲಧಿಕಾರಿಗಳು, ಜೈಲಿನ ಎಲ್ಲಾ ಬ್ಯಾರಕ್‌ಗಳನ್ನು ಪರಿಶೀಲನೆ ಮಾಡಿದ್ದಾರೆ. ನೂರಕ್ಕೂ ಹೆಚ್ಚು ಜೈಲಿನ ಸಿಬ್ಬಂದಿ …
Read More »Daily Archives: ನವೆಂಬರ್ 10, 2025
ಪದವಿ ಮುಗಿದ ನಂತರವೇ ನಿಜವಾದ ಜೀವನ ಆರಂಭ
ಮೈಸೂರು: ಶಿಕ್ಷಣ ಮುಗಿದ ನಂತರ ಜೀವನ ಮುಗಿದಂತಾಗುವುದಿಲ್ಲ. ಅದು ನಿಮ್ಮ ಹೊಸ ಪ್ರಯಾಣದ ಎಂದು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ನೂತನ ಪದವೀಧರರಿಗೆ ಕಿವಿಮಾತು ಹೇಳಿದರು. ನಗರದ ಜೆಎಸ್‌ಎಸ್ ವೈದ್ಯಕೀಯ ಕಾಲೇಜು ಆವರಣದಲ್ಲಿ ನಡೆದ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 16ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಿಮ್ಮ ಗುರಿಗಳು, ಕನಸುಗಳು ಮತ್ತು ಭವಿಷ್ಯವನ್ನು ಉಜ್ವಲಗೊಳಿಸಲು ನೀವು ಪ್ರಯತ್ನಿಸಬೇಕು. ಎಲ್ಲರೂ ಯಶಸ್ವಿಯಾಗಲು ಸಾಧ್ಯವಿದೆ ಎಂದು ಸಲಹೆ …
Read More »ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮ…
ಧಾರವಾಡ : ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಭವನದಲ್ಲಿ ಜಿ.ಬಿ.ಜೋಶಿ ಮೆಮೋರಿಯಲ್ ಟ್ರಸ್ಟ್ ಹಾಗೂ ಕ್ಷಮತಾ ಹುಬ್ಬಳ್ಳಿ ಸಹಯೋಗದಲ್ಲಿ ಆಯೋಜಿಸಿದ ಖ್ಯಾತ ಹಾಸ್ಯ ನಟ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ನುಡಿನಮನ ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿಗಳು, ಸಾಹಿತಿಗಳು ಹಾಗೂ ಗಣ್ಯರು ಅನಿಸಿಕೆ ಹಂಚಿಕೊಂಡರು. ಪತ್ರಕರ್ತ ಡಾ. ಬಂಡು ಕುಲಕರ್ಣಿ ಮಾತನಾಡಿ, ಯಶವಂತ ಸರದೇಶಪಾಂಡೆ ಪ್ರಯೋಗಶೀಲ ವ್ಯಕ್ತಿ. ಕೇವಲ ರಂಗಭೂಮಿಯಷ್ಟೇ ಅಲ್ಲ, ಸಿನೆಮಾ ಕ್ಷೇತ್ರದಲ್ಲಿಯೂ ಪ್ರಯೋಗಗಳನ್ನು ಮಾಡಿ ಯಶ ಕಂಡರು. ತಮಗನಿಸಿದ್ದನ್ನು ಮಾಡುವುದರಲ್ಲಿ …
Read More »ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’
ಬೆಳಗಾವಿಯಲ್ಲಿ ಇತಿಹಾಸ ನಿರ್ಮಿಸಿದ ‘ನಮಾಮಿ ಗಂಗೆ’ ವೈಜಯಂತಿ ಕಾಶಿ ಉಪಸ್ಥಿತಿಯಲ್ಲಿ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಮನಮೋಹಕ ಪ್ರದರ್ಶನ ಬೆಳಗಾವಿ : ಗಂಗಾ ನದಿಯ ಕಥಾನಕವನ್ನು ಬಿಂಬಿಸುವ ನಮಾಮಿ ಗಂಗೆ ಎನ್ನುವ 56 ನಿಮಿಷಗಳ ಅದ್ಭುತ ನೃತ್ಯ ರೂಪಕ ಪ್ರದರ್ಶನದ ಮೂಲಕ ಬೆಳಗಾವಿಯ ಶಾಂತಲಾ ನಾಟ್ಯಾಲಯದ ವಿದ್ಯಾರ್ಥಿಗಳು ಶನಿವಾರ ಸಂಜೆ ಹೊಸ ಇತಿಹಾಸ ನಿರ್ಮಾಣ ಮಾಡಿದರು. ಶಾಂತಲಾ ನಾಟ್ಯಾಲಯದ 36ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಲೋಕಮಾನ್ಯ ರಂಗಮಂದಿರದಲ್ಲಿ …
Read More »
Laxmi News 24×7