ಬೆಂಗಳೂರು: ಅಕ್ರಮ ನೀರು ಸೋರಿಕೆಗೆ ಕಡಿವಾಣ ಹಾಕುವ ಮೂಲಕ, ಕಲುಷಿತ ನೀರು ಪತ್ತೆ ಹಚ್ಚಿ ಪರಿಶುದ್ಧ ನೀರು ನೀಡುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಅಳವಡಿಸಿಕೊಂಡಿರುವ ನೂತನ ರೋಬೋಟಿಕ್ ತಂತ್ರಜ್ಞಾನ ದೇಶಕ್ಕೆ ಮಾದರಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶಂಸಿದ್ದಾರೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಕ್ರಮ ಸಂಪರ್ಕ ಪತ್ತೆ ಮತ್ತು ನೀರಿನ ಸೋರಿಕೆ ತಡೆಗೆ ನೂತನವಾಗಿ ರಚಿಸಿರುವ ನೀಲಿ ಪಡೆ ಮತ್ತು ರೊಬೋಟಿಕ್ ತಂತ್ರಜ್ಞಾನ ಅಳವಡಿಕೆ ಯೋಜನೆಗಳಿಗೆ ಚಾಲನೆ ನೀಡಿ …
Read More »Daily Archives: ನವೆಂಬರ್ 20, 2025
ಅಂತಾರಾಜ್ಯ ಕಳ್ಳರಿಬ್ಬರ ಬಂಧನ
ಕೋಲಾರ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮಾಲೂರು ತಾಲೂಕಿನ ಪೊಲೀಸರು ಬಂಧಿಸಿದ್ದಾರೆ. 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ಬಂಗಾಳ ಮೂಲದ ಹುಸ್ದರ್ ಶೇಖ್ (24) ಹಾಗೂ ತಮಿಳುನಾಡು ಮೂಲದ ಉಮಾಶಂಕರ್ (27) ಬಂಧಿತ ಆರೋಪಿಗಳು. ಪ್ರಕರಣದ ವಿವರ: ಇದೇ ನವೆಂಬರ್ 4 ರಂದು ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದ ದಿ ಎಂಪೈರಿಯನ್ ಅಪಾರ್ಟ್ಮೆಂಟ್ನಲ್ಲಿ ಪ್ರೀತ್ ಕಮಲ್ ಎಂಬ ಮಹಿಳೆಯಿದ್ದು, …
Read More »31 ಕೃಷ್ಣಮೃಗಗಳು ಸತ್ತಿದ್ದು ಗಳಲೆ ರೋಗದಿಂದ,
ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಗಳಲೆ ರೋಗ(Hemorrhagic Septicemia) ಎಂಬ ಬ್ಯಾಕ್ಟೀರಿಯಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಈ ಸೋಂಕು ಸಸ್ಯಾಹಾರಿ ಪ್ರಾಣಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತಿ ಸ್ಪಷ್ಟಪಡಿಸಿದರು. ಬುಧವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಮಾಹಿತಿ ನೀಡಿದ ಅವರು, ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಮೃತ ಕೃಷ್ಣಮೃಗಗಳ ಅಂಗಾಂಗಳ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿತ್ತು. …
Read More »ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್.ಸಿ/ಎಸ್.ಟಿ ಗುತ್ತಿಗೆದಾರರಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತುಸಭೆ
ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್.ಸಿ/ಎಸ್.ಟಿ ಗುತ್ತಿಗೆದಾರರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.
Read More »
Laxmi News 24×7