Breaking News

Daily Archives: ಡಿಸೆಂಬರ್ 2, 2025

ಬೀಡಿ – ಸಿಗರೇಟ್ ಅಕ್ರಮ ಮಾರಾಟ ಬಂದ್ ಮಾಡಿದ ಜೈಲಾಧಿಕಾರಿಗಳ ವಿರುದ್ಧ ಕೈದಿಗಳ ಪ್ರತಿಭಟನೆ

ಬೆಂಗಳೂರು: ರಾಜ್ಯದ ಅತಿದೊಡ್ಡ ಜೈಲಾಗಿರುವ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅವ್ಯಾಹತವಾಗಿ ಬಳಕೆಯಾಗುತ್ತಿದ್ದ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳನ್ನ ವಶಕ್ಕೆ ಪಡೆದುಕೊಂಡಿದ್ದ ಜೈಲಧಿಕಾರಿಗಳು, ಇದೀಗ ಅಕ್ರಮವಾಗಿ ಬೀಡಿ ಹಾಗೂ ಸಿಗರೇಟ್ ಮಾರಾಟವನ್ನು ಬಂದ್​ ಮಾಡಿರುವುದನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಜೈಲಿನ ಕೈಪಿಡಿ ಅನುಸಾರ ಬೀಡಿ ಹಾಗೂ ಸಿಗರೇಟ್ ವ್ಯಾಪಾರ ಮಾಡುವುದು ಕಾನೂನುಬಾಹಿರ. ಜೈಲು ಸಿಬ್ಬಂದಿ ಅದಕ್ಷತೆ ಹಾಗೂ ಕುಮ್ಮಕ್ಕಿನಿಂದ ಬಂಧಿಗಳು ಅಕ್ರಮವಾಗಿ ನಿಷೇಧಿತ ವಸ್ತುಗಳನ್ನ ಮಾರಾಟ ಮಾಡುತ್ತಿದ್ದರು. …

Read More »

ಸರಕು ಸಾಗಣೆ, ಜನರ ಪ್ರಯಾಣ: ನವೆಂಬರ್​​ ತಿಂಗಳ ಆದಾಯದಲ್ಲಿ ನೈಋತ್ಯ ರೈಲ್ವೆ ಹೊಸ ದಾಖಲೆ

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ನವೆಂಬರ್ 2025ರಲ್ಲಿ ಸರಕು ಸಾಗಣೆ ಮತ್ತು ಆದಾಯದಲ್ಲಿ ಗಮನಾರ್ಹ ಬೆಳವಣಿಗೆಯನ್ನು ಸಾಧಿಸಿ, ಪ್ರಮುಖ ಕಾರ್ಯಾಚರಣ ಕ್ಷೇತ್ರಗಳಲ್ಲಿ ತನ್ನ ಸಕಾರಾತ್ಮಕ ಸಾಧನೆಯ ವೇಗವನ್ನು ಮುಂದುವರೆಸಿದೆ. ಈ ತಿಂಗಳು ನೈಋತ್ಯ ವಲಯವು 4.469 ಮಿಲಿಯನ್ ಟನ್ ಮೂಲ ಸರಕು ಸಾಗಣೆಯನ್ನು ನಿರ್ವಹಿಸಿದ್ದು, ಕಳೆದ ವರ್ಷ ಇದೇ ತಿಂಗಳಲ್ಲಿ ಸಾಧಿಸಿದ 3.941 ಮಿಲಿಯನ್ ಟನ್‌ಗಿಂತ ಶೇ.13.4ರಷ್ಟು ಹೆಚ್ಚಾಗಿದೆ. ಸ್ಟೀಲ್ ಕಾರ್ಖಾನೆಗೆ ಕಚ್ಚಾ ಸಾಮಗ್ರಿ (RMSP), ಪಿಗ್ ಐರನ್ ಮತ್ತು ಉಕ್ಕು, ಕಬ್ಬಿಣದ …

Read More »

ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್

ಮೈಸೂರು: ಹೆಣ್ಣು ಭ್ರೂಣ ಹತ್ಯೆಯಿಂದ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ಇಂದು ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮೈಸೂರು ವಿಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಲಿಂಗಾನುಪಾತದ ಆಧಾರದ ಮೇಲೆ ಲೆಕ್ಕ ಹಾಕುವುದರ ಬದಲು, ಏಪ್ರಿಲ್​ನಿಂದ ಅಕ್ಟೋಬರ್ ಮಾಹೆಯವರೆಗೆ ಜನನವಾದ ಮಕ್ಕಳಲ್ಲಿ ಗಂಡು …

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

ಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್. ವಿ. ದೇಶಪಾಂಡೆ ಸ್ಪಷ್ಟಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹೊಟ್ಟೆ ತುಂಬಾ ಉಪಹಾರ ಸೇವನೆ …

Read More »

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

ಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಯಿತು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ ಬದಲಾಗಿ ಇಂದಿರಾ ಆಹಾರ ಕಿಟ್ …

Read More »

ಕಾಂಗ್ರೆಸ್ ಮಾಜಿ ಶಾಸಕ ಆರ್​.ವಿ.ದೇವರಾಜ್ ನಿಧನ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ (67) ಅವರು ಸೋಮವಾರ ರಾತ್ರಿ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಸಂದರ್ಭದಲ್ಲಿ ದೇವರಾಜ್ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More »

ಕಾಂಗ್ರೆಸ್ ಪವರ್ ಫೈಟ್​​ಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಪವರ್ ಫೈಟ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಇನ್ನೊಂದೆಡೆ ಸಿಎಂ-ಡಿಸಿಎಂ ನಡುವೆ ಮತ್ತೊಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ. ಇತ್ತೀಚೆಗೆ ಸಿಎಂ ಆಯೋಜಿಸಿದ ಬ್ರೇಕ್‌ಫಾಸ್ಟ್ ಬಳಿಕ ಇಂದು ಡಿಸಿಎಂ ಡಿಕೆಶಿ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿದ್ದಾರೆ. ಬೆಳಗ್ಗೆ 9.30ಕ್ಕೆ ಡಿಕೆಶಿ ಅವರ ಸದಾಶಿವನಗರದ ನಿವಾಸದಲ್ಲಿ ಉಭಯ ನಾಯಕರು ಬ್ರೇಕ್‌ಫಾಸ್ಟ್ ಮಾಡಲಿದ್ದಾರೆ. ಕಳೆದ ಶನಿವಾರ ಸಿಎಂ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್‌ಫಾಸ್ಟ್ ಆಯೋಜಿಸಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ …

Read More »