ಬೆಳಗಾವಿ: ರೈತರು ಮತ್ತು ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಡಿ.9ರಂದು ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಅವರ ನೇತೃತ್ವದಲ್ಲಿ ದೊಡ್ಡ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ. ಸುಮಾರು 20 ಸಾವಿರ ರೈತರು ಸೇರಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬೆಳಗಾವಿ ಖಾಸಗಿ ಹೋಟೆಲ್ನಲ್ಲಿ ಬುಧವಾರ ಬೆಳಗಾವಿ ಜಿಲ್ಲಾ ಮಟ್ಟದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. …
Read More »
Laxmi News 24×7