Breaking News

Daily Archives: ಡಿಸೆಂಬರ್ 9, 2025

ಮದ್ಯ ಸೇವಿಸಿ ಅನಾರೋಗ್ಯಕ್ಕೆ ಒಳಗಾದವರ ಚಿಕಿತ್ಸೆಗೆ ಅಬಕಾರಿ ಇಲಾಖೆ ಆದಾಯದಲ್ಲಿ ಶೇ.20ರಷ್ಟು ಹಣ ಮೀಸಲಿಡಿ: ವಿಪಕ್ಷ ಸದಸ್ಯರ ಆಗ್ರಹ

ಬೆಳಗಾವಿ: ಮದ್ಯಪಾನ ವಿಪರೀತ ಸೇವನೆಯಿಂದ ಮನುಷ್ಯನ ಯಕೃತ್ (ಲಿವರ್) ತೊಂದರೆ ಜೊತೆಗೆ ಜಾಂಡೀಸ್ ಖಾಯಿಲೆಗೆ ತುತ್ತಾಗಲಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆಗೆ ಒದಗಿಸುವ ಉದ್ದೇಶದಿಂದ ಅಬಕಾರಿ ಇಲಾಖೆಗೆ ಬರುವ ಆದಾಯದಲ್ಲಿ ಶೇ.20ರಷ್ಟು ಹಣವನ್ನು ಮೀಸಲಿಡಬೇಕು ಎಂದು ವಿಧಾನಪರಿಷತ್​ನಲ್ಲಿ ವಿರೋಧ ಪಕ್ಷ ಒತ್ತಾಯಿಸಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಮೇಲ್ಮನೆ ಸದಸ್ಯರಾದ ಎನ್.ರವಿಕುಮಾರ್, ಕೆ.ಎಸ್.ನವೀನ್, ಸಿ.ಟಿ.ರವಿ, ಶಿವಕುಮಾರ್, ರಮೇಶ್ ಬಾಬು, ಭಾರತಿ ಶೆಟ್ಟಿ. ಬಿ.ಕೆ.ಹರಿಪ್ರಸಾದ್ ಸೇರಿದಂತೆ ಇನ್ನಿತರರು ನಿಯಮ 330ರ ಅಡಿ ಮಾತನಾಡಿದರು. …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ

ಬೆಳಗಾವಿ: ಗೋಕಾಕ್ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿತು. ಸೋಮವಾರ ಸಂಜೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ತಮ್ಮ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಗೋಕಾಕ್ ಶೂನ್ಯ ಸಂಪಾದನಾ ಮಠದ ಮುರುಘ ರಾಜೇಂದ್ರ ಸ್ವಾಮೀಜಿ, ಅಂಕಲಗಿ ಅಡವಿ ಸಿದ್ದೇಶ್ವರ …

Read More »

ಸಿಎಂ ಬದಲಾವಣೆ ಎಂಬುದು ಸೀಜ್ ಆಗಿರುವ ವಿಚಾರ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಸಿಎಂ ಬದಲಾವಣೆ ವಿಚಾರ ಸದ್ಯಕ್ಕೆ ಸೀಜ್ ಆಗಿರುವ ವಿಚಾರ. ಆ ವಿಚಾರ ಹೈಕಮಾಂಡ್ ಅಂಗಳದಲ್ಲಿ ಇರುವುದರಿಂದ ಯಾವುದೇ ವಿಚಾರವನ್ನು ನಾನು ಮಾತನಾಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ವಿಧಾನಪರಿಷತ್ ಸದಸ್ಯ ಯತೀಂದ್ರ ಅವರು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಮಾಧ್ಯಮದವರ ಜೊತೆ ಮಾತನಾಡುತ್ತಾ, ನಮ್ಮ ತಂದೆ ಸಿದ್ದರಾಮನ್ಯವರೇ ಐದು ವರ್ಷ ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾವುದೇ ಬದಲಾವಣೆ ಇಲ್ಲ. ಜನವರಿ ತಿಂಗಳಿನಲ್ಲಿ ಹೈಕಮಾಂಡ್ ಬದಲಾವಣೆ …

Read More »