ರಾಯಚೂರು: ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಪಲ್ಟಿಯಾಗಿ ಕಂಡಕ್ಟರ್ ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಂಚೇಸೂಗೂರು ಗ್ರಾಮದ ಬಳಿ ಮಂಗಳವಾರ ಸಂಭವಿಸಿದೆ. ಬಸವರಾಜ್ (36) ಮೃತ ನಿರ್ವಾಹಕ ಎಂದು ಗುರುತಿಸಲಾಗಿದೆ. ಇವರು ಮೂಲತಃ ಲಿಂಗಸೂಗೂರು ತಾಲೂಕಿನವರು ಎಂದು ತಿಳಿದು ಬಂದಿದೆ. ಅಂಜಳ – ದೇವದುರ್ಗ ಮಾರ್ಗದ ಬಸ್ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತದದಲ್ಲಿ ತೀವ್ರ ಗಾಯಗೊಂಡಿದ್ದ ಇವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಫಂದಿಸದೆ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ, …
Read More »Monthly Archives: ಡಿಸೆಂಬರ್ 2025
ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ: ಸುವರ್ಣಸೌಧಕ್ಕೆ ಮುತ್ತಿಗೆ ಯತ್ನ, ವಿಜಯೇಂದ್ರ, ಸಿ.ಟಿ. ರವಿ ಪೊಲೀಸ್ ವಶಕ್ಕೆ
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಬೆಳೆ ಪರಿಹಾರ ನೀಡದೇ ರೈತ ವಿರೋಧಿ ನಿಲುವು ಅನುಸರಿಸುತ್ತಿದೆ ಎಂದು ಆರೋಪಿಸಿ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹಲಗಾ ಗ್ರಾಮದ ಬಳಿ ನಡೆಯಿತು. ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ಮಂಗಳವಾರ ಬೃಹತ್ ಪ್ರತಿಭಟನಾ ಸಮಾವೇಶ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ …
Read More »ರಮೇಶ್ ಜಾರಕಿಹೊಳಿ – ವಿಜಯೇಂದ್ರ ಪರಸ್ಪರ ಮುಖಾಮುಖಿ;
ಬೆಳಗಾವಿ : ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಈ ವೇಳೆ ಇಬ್ಬರೂ ಪರಸ್ಪರ ಕುಶಲೋಪರಿ ನಡೆಸಿದರು. ರಮೇಶ್ ಜಾರಕಿಹೊಳಿ ನೇರವಾಗಿ ಮೆಟ್ಟಿಲು ಏರಿ ಅಧಿವೇಶನಕ್ಕೆ ಹೋಗುವಾಗ ಅತ್ತ ಕಡೆಯಿಂದ ಬಂದ ವಿಜಯೇಂದ್ರ ಅವರು ಜಾರಕಿಹೊಳಿ ಬಳಿ ಹೋಗಿ ಮಾತನಾಡಿಸಿದರು.ಇಬ್ಬರ ನಡುವೆ ಏನು ಮಾತುಕತೆ ಆಯ್ತು? ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ್ …
Read More »ಮದ್ಯ ಸೇವಿಸಿ ಅನಾರೋಗ್ಯಕ್ಕೆ ಒಳಗಾದವರ ಚಿಕಿತ್ಸೆಗೆ ಅಬಕಾರಿ ಇಲಾಖೆ ಆದಾಯದಲ್ಲಿ ಶೇ.20ರಷ್ಟು ಹಣ ಮೀಸಲಿಡಿ: ವಿಪಕ್ಷ ಸದಸ್ಯರ ಆಗ್ರಹ
ಬೆಳಗಾವಿ: ಮದ್ಯಪಾನ ವಿಪರೀತ ಸೇವನೆಯಿಂದ ಮನುಷ್ಯನ ಯಕೃತ್ (ಲಿವರ್) ತೊಂದರೆ ಜೊತೆಗೆ ಜಾಂಡೀಸ್ ಖಾಯಿಲೆಗೆ ತುತ್ತಾಗಲಿದ್ದಾರೆ. ಅವರಿಗೆ ಉತ್ತಮ ಚಿಕಿತ್ಸೆಗೆ ಒದಗಿಸುವ ಉದ್ದೇಶದಿಂದ ಅಬಕಾರಿ ಇಲಾಖೆಗೆ ಬರುವ ಆದಾಯದಲ್ಲಿ ಶೇ.20ರಷ್ಟು ಹಣವನ್ನು ಮೀಸಲಿಡಬೇಕು ಎಂದು ವಿಧಾನಪರಿಷತ್ನಲ್ಲಿ ವಿರೋಧ ಪಕ್ಷ ಒತ್ತಾಯಿಸಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಮೇಲ್ಮನೆ ಸದಸ್ಯರಾದ ಎನ್.ರವಿಕುಮಾರ್, ಕೆ.ಎಸ್.ನವೀನ್, ಸಿ.ಟಿ.ರವಿ, ಶಿವಕುಮಾರ್, ರಮೇಶ್ ಬಾಬು, ಭಾರತಿ ಶೆಟ್ಟಿ. ಬಿ.ಕೆ.ಹರಿಪ್ರಸಾದ್ ಸೇರಿದಂತೆ ಇನ್ನಿತರರು ನಿಯಮ 330ರ ಅಡಿ ಮಾತನಾಡಿದರು. …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ
ಬೆಳಗಾವಿ: ಗೋಕಾಕ್ ಜಿಲ್ಲೆ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕ್ ಜಿಲ್ಲಾ ವಿಭಜನೆ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಒತ್ತಾಯಿಸಿತು. ಸೋಮವಾರ ಸಂಜೆ ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗ ತಮ್ಮ ಮನವಿ ಸಲ್ಲಿಸಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ, ಗೋಕಾಕ್ ಶೂನ್ಯ ಸಂಪಾದನಾ ಮಠದ ಮುರುಘ ರಾಜೇಂದ್ರ ಸ್ವಾಮೀಜಿ, ಅಂಕಲಗಿ ಅಡವಿ ಸಿದ್ದೇಶ್ವರ …
Read More »ಸಿಎಂ ಬದಲಾವಣೆ ಎಂಬುದು ಸೀಜ್ ಆಗಿರುವ ವಿಚಾರ: ಸತೀಶ್ ಜಾರಕಿಹೊಳಿ
ಬೆಳಗಾವಿ: ಸಿಎಂ ಬದಲಾವಣೆ ವಿಚಾರ ಸದ್ಯಕ್ಕೆ ಸೀಜ್ ಆಗಿರುವ ವಿಚಾರ. ಆ ವಿಚಾರ ಹೈಕಮಾಂಡ್ ಅಂಗಳದಲ್ಲಿ ಇರುವುದರಿಂದ ಯಾವುದೇ ವಿಚಾರವನ್ನು ನಾನು ಮಾತನಾಡುವುದಿಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು. ವಿಧಾನಪರಿಷತ್ ಸದಸ್ಯ ಯತೀಂದ್ರ ಅವರು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಮಾಧ್ಯಮದವರ ಜೊತೆ ಮಾತನಾಡುತ್ತಾ, ನಮ್ಮ ತಂದೆ ಸಿದ್ದರಾಮನ್ಯವರೇ ಐದು ವರ್ಷ ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾವುದೇ ಬದಲಾವಣೆ ಇಲ್ಲ. ಜನವರಿ ತಿಂಗಳಿನಲ್ಲಿ ಹೈಕಮಾಂಡ್ ಬದಲಾವಣೆ …
Read More »ಸಿದ್ದರಾಮಯ್ಯನವರೇ ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಾರೆ: ಎಂಎಲ್ಸಿ ಯತೀಂದ್ರ
ಬೆಳಗಾವಿ : ನಮ್ಮ ತಂದೆ ಐದು ವರ್ಷ ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಾರೆ. ಯಾವುದೇ ಬದಲಾವಣೆ ಇಲ್ಲ. ಜನವರಿ ತಿಂಗಳಿನಲ್ಲಿ ಹೈಕಮಾಂಡ್ ಬದಲಾವಣೆ ಮಾಡುತ್ತಾರೆ ಎನ್ನುವುದು ಎಷ್ಟು ಸರಿ? ಯಾವುದೇ ಗೊಂದಲ ನಮ್ಮಲ್ಲಿ ಇಲ್ಲ. ಸಿದ್ದರಾಮಯ್ಯನವರೇ ಸಿಎಂ ಸ್ಥಾನದಲ್ಲಿ ಮುಂದುವರೆಯುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸ್ಪಷ್ಟನೆ ನೀಡಿದ್ದಾರೆ. ಅವರು ಇಂದು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಮಾಧ್ಯಮದವರ ಜೊತೆ ಮಾತನಾಡುತ್ತಾ, ‘ಯಾವುದೇ ಬದಲಾವಣೆ ಆಗುವುದಿಲ್ಲ. ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುವುದರಿಂದ ಏನು …
Read More »ಮಾಜಿ ಸಚಿವ ಕೆ. ಎನ್. ರಾಜಣ್ಣ ಅವರು ಸಿಎಂ ಸ್ಥಾನದ ಬದಲಾವಣೆ ಕುರಿತು ಮಾತನಾಡಿದ್ದಾರೆ.
ಬೆಳಗಾವಿ : ಕಾಂಗ್ರೆಸ್ನಲ್ಲಿ ಕೆಲವರು ಸಿಎಂ ಆಗುವುದಕ್ಕೆ ರೆಡಿ ಆಗಿದ್ದಾರೆ. ಆದರೆ, ಒಬ್ಬರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ ಎಂದು ಮತ್ತೊಮ್ಮೆ ಡಿ. ಕೆ. ಶಿವಕುಮಾರ್ ವಿರುದ್ಧ ಮಾಜಿ ಸಚಿವ ಕೆ. ಎನ್. ರಾಜಣ್ಣ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಅವರು ಇಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡುತ್ತಾ, ಅಧಿವೇಶನದ ನಂತರ ಯಾವುದೇ ಬದಲಾವಣೆ ಆಗುವುದಿಲ್ಲ. ರಾಜಕಾರಣ ಎಂಬುದು ನಿಂತ ನೀರಲ್ಲ, ಯಾವತ್ತೂ ಚಲನಶೀಲತೆ ಇರಬೇಕು, ನಮ್ಮ ಪಕ್ಷದ ರೀತಿಯಲ್ಲೂ ಬೇರೆ …
Read More »ಮೃಗಾಲಯದ ವನ್ಯಜೀವಿಗಳ ಸಾವಿನ ಸಂಖ್ಯೆ ಇಳಿಮುಖ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಳಗಾವಿ: ಗಳಲೆ ರೋಗದ ಸೋಂಕಿನಿಂದ ಬೆಳಗಾವಿಯ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿದ್ದ ಇನ್ನಿತರ ಪ್ರಾಣಿಗಳಿಗೆ ಸೋಂಕು ಪಸರಿಸದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು. ವಿಧಾನಪರಿಷತ್ನಲ್ಲಿಂದು ಪ್ರತಿಪಕ್ಷ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಕಿರು ಮೃಗಾಲಯದಲ್ಲಿ ನವೆಂಬರ್ 13ರಿಂದ 17ರ ವರೆಗೆ ಒಟ್ಟು 31 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃಗಾಲಯದ ವೈದ್ಯರು, ಪಶು ಸಂಗೋಪನಾ ಇಲಾಖೆಯ ಸ್ಥಳೀಯ ವೈದ್ಯರು ಮರಣೋತ್ತರ ಪರೀಕ್ಷೆ …
Read More »ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆ
ಬೆಂಗಳೂರು : ಒಂದೇ ಕುಟುಂಬದ ಮೂರು ಜನರು ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಗರದ ತಾವರೆಕೆರೆಯ 1ನೇ ಮುಖ್ಯರಸ್ತೆಯಲ್ಲಿ ನಡೆದಿದೆ. ಮಾದಮ್ಮ (68), ಅವರ ಪುತ್ರಿ ಸುಧಾ (38) ಹಾಗೂ ಸುಧಾ ಅವರ 14 ವರ್ಷ ವಯಸ್ಸಿನ ಪುತ್ರ ಶವವಾಗಿ ಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ, ಸುದ್ದುಗುಂಟೆಪಾಳ್ಯ ಠಾಣೆ ಪೊಲೀಸರು ಹಾಗೂ ಸೋಕೋ ತಂಡದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …
Read More »
Laxmi News 24×7