ಕಾರವಾರ: ಕುಡಿದು ವಾಹನ ಚಲಾಯಿಸಿದ ಪ್ರಕರಣ, ಭ್ರಷ್ಟಾಚಾರ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಹಾಗೂ ಹೆಡ್ ಕಾನ್‌ಸ್ಟೇಬಲ್ ಅಶೋಕ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ. ಕೆಲವು ದಿನಗಳ ಹಿಂದೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಅವರ ವಿರುದ್ಧ ‘ಡ್ರಿಂಕ್ ಆ್ಯಂಡ್ ಡ್ರೈವ್’ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನಡೆದ ಪ್ರಾಥಮಿಕ …
Read More »Monthly Archives: ಡಿಸೆಂಬರ್ 2025
ಕಿಚ್ಚನ ‘ಮಾರ್ಕ್ಸಿನಿಮಾ ಕಟೌಟ್‌ಗೆ ಮದ್ಯ ಸುರಿದು ಅಭಿಮಾನ!
ಶಿವಮೊಗ್ಗ: ಕೊನೆಗೂ ಫ್ಯಾನ್ಸ್ ಕಾತರ ಕೊನೆಗೊಂಡಿದೆ. ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಮುಖ್ಯಭೂಮಿಕೆಯ ಬಹುನಿರೀಕ್ಷಿತ ‘ಮಾರ್ಕ್’ ಇಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಎಲ್ಲೆಡೆ ಸಂಭ್ರಮಾಚರಣೆ ಜೋರಾಗಿದೆ. ಶಿವಮೊಗ್ಗ ನಗರದಲ್ಲಿ ಮಾಲ್ ಸಹಿತ 4 ಚಿತ್ರಮಂದಿರಗಳಲ್ಲಿ ಸುದೀಪ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಿನಿಮಾ ಬಿಡುಗಡೆ ಆಗಿದೆ. ಬೆಳಗ್ಗೆ 6 ಗಂಟೆಗೆ ಫ್ಯಾನ್ಸ್ ಶೋ ನಡೆಯಿತು. ಈ ಶೋನಲ್ಲಿ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಮೆಚ್ಚಿನ ನಟನನ್ನು ಬಿಗ್ ಸ್ಕ್ರೀನ್ನಲ್ಲಿ ಕಣ್ತುಂಬಿಕೊಂಡರು. ಒಂದು …
Read More »ಆರಾಧನಾ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಅರ್ಥಪೂರ್ಣ ‘ವಿಶ್ವ ವಿಕಲಚೇತನರ ದಿನಾಚರಣೆ’
ಆರಾಧನಾ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಅರ್ಥಪೂರ್ಣ ‘ವಿಶ್ವ ವಿಕಲಚೇತನರ ದಿನಾಚರಣೆ’ ವಿಕಲಚೇತನರು ಮನಸ್ಸು ಮಾಡಿದರೆ ಸಾಮಾನ್ಯರಂತೆ ಸಾಧನೆ ಮಾಡಬಲ್ಲರು; ಬಸಪ್ಪ ಸುಣಧೋಳಿ ಬೆಳಗಾವಿ: ನಗರದ ಕಿಲ್ಲಾ ಪ್ರದೇಶದಲ್ಲಿರುವ ಆರಾಧನಾ ಬುದ್ಧಿಮಾಂದ್ಯ ಮಕ್ಕಳ ಶಾಲೆಯಲ್ಲಿ ಕ್ರಾಂತಿ ಮಹಿಳಾ ಮಂಡಳ ಹಾಗೂ ಉಮಾ ಸಂಗೀತ ಪ್ರತಿಷ್ಠಾನ (ಹಿಂದ್ವಾಡಿ) ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ‘ವಿಶ್ವಾಸ್’ ಸಂಸ್ಥೆಯ ಸಂಸ್ಥಾಪಕರು ಹಾಗೂ ಕಾರ್ಯದರ್ಶಿಗಳಾದ ಬಸಪ್ಪ ಸುಣಧೋಳಿ ಅವರು …
Read More »ವಿಕಸಿತ್ ಭಾರತ್ – ಜಿ.ಆರ್.ಎ.ಎಮ್.ಜಿ ಬಿಲ್ 2025″ನ್ನು ರದ್ಧುಗೊಳಿಸಿ ನರೇಗಾ ಕೂಲಿ ಕಾರ್ಮಿಕರಿಂದ ಬೆಳಗಾವಿಯಲ್ಲಿ ಪ್ರತಿಭಟನೆ
ವಿಕಸಿತ್ ಭಾರತ್ – ಜಿ.ಆರ್.ಎ.ಎಮ್.ಜಿ ಬಿಲ್ 2025″ನ್ನು ರದ್ಧುಗೊಳಿಸಿ ನರೇಗಾ ಕೂಲಿ ಕಾರ್ಮಿಕರಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಳೆಯ ನರೇಗಾ ಕಾನೂನನ್ನು ಜಾರಿಗೆ ತನ್ನಿ ಜಿಲ್ಲಾಧಿಕಾರಿಗಳ ಮೂಲಕ ಪಿಎಂಗೆ ಮನವಿ ಉದ್ಯೋಗ ಖಾತ್ರಿ ಹೊಸ ಕಾನೂನುನನ್ನು ವಿರೋಧಿಸಿ ಇಂದು ಖಾನಾಪೂರದ ಜಾಗೃತ ಮಹಿಳಾ ಒಕ್ಕೂಟ, ಗ್ರಾಮೀಣ-ಕೂಲಿ ಕಾರ್ಮಿಕರ ಸಂಘಟನೆಯ ವತಿಯಿಂದ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು. ಗ್ರಾಮೀಣ ಭಾಗದ ಬಡ ಕುಟುಂಬಗಳ ಜೀವನಾಡಿಯಾಗಿರುವ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ …
Read More »ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು
ಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ ಅಸುನೀಗಿದೆ. ಮೃಗಾಲಯದ ಸುಮಾರು 4 ವರ್ಷ 10 ತಿಂಗಳು ವಯಸ್ಸಿನ ತಾಯಮ್ಮ ಎಂಬ ಹೆಸರಿನ ಹೆಣ್ಣು ಹುಲಿಯನ್ನು 2014 ಮಾರ್ಚ್ 28ರಂದು ಬಂಡೀಪುರದಿಂದ ರಕ್ಷಿಸಿ ತರಲಾಗಿತ್ತು. ತಾಯಮ್ಮ ಹುಲಿಯು ಇತ್ತೀಚೆಗೆ ಆಹಾರವನ್ನು ತ್ಯಜಿಸಿ ರಕ್ತಕಣ (haemoprotozoa) ನಿಂದ ಬಳಲುತ್ತಿತ್ತು. ಹುಲಿಗೆ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಡಿ.17, 20 ಮತ್ತು 23ರಂದು ಮೃಗಾಲಯವು …
Read More »ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಕೊಲೆ; ಅರ್ಧ ಗಂಟೆಯಲ್ಲೇ ಆರೋಪಿಗಳ ಬಂಧನ
ಹುಬ್ಬಳ್ಳಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ. ವಿಠ್ಠಲ ಕರಾಡೆ(29) ಕೊಲೆಯಾದ ಯುವಕ. ಕೊಲೆ ಮಾಡಿದ ಆರೋಪಿಗಳನ್ನು ಘಟನೆ ನಡೆದ ಅರ್ಧ ಗಂಟೆಯಲ್ಲೇ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಿದ್ದೇನು? ಮೂಲತಃ ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮದ ನಿವಾಸಿಯಾದ ವಿಠ್ಠಲನನ್ನು, ಹುಣಸಿಕಟ್ಟಿ ಗ್ರಾಮಕ್ಕೆ ಪತ್ನಿ ಮನೆಗೆ ಬಂದಿದ್ದಾಗ ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಿಸಾಕಿದ್ದರು. ಹುಬ್ಬಳ್ಳಿ, ಕಲಘಟಗಿ, ತಡಸ ಸೇರಿದಂತೆ ಧಾರವಾಡ ಸುತ್ತಮುತ್ತಲು ಬೈಕ್ …
Read More »ಹುಬ್ಬಳ್ಳಿ ಗರ್ಭಿಣಿ ಕೊಲೆ ಪ್ರಕರಣ: ಕರ್ತವ್ಯಲೋಪದಡಿ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು, ಸಂತ್ರಸ್ತ ಕುಟುಂಬ ಭೇಟಿ ಮಾಡಿದ ಡಿಸಿ, ಶಾಸಕರು
ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಅನ್ಯಜಾತಿ ಯುವಕನ ಮದುವೆಯಾಗಿದ್ದಕ್ಕೆ ಗರ್ಭಿಣಿ ಮೇಲೆ ಆಕೆಯ ತಂದೆ, ಕುಟುಂಬಸ್ಥರು ಹಲ್ಲೆಗೈದು, ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದ ಮೇಲೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಠಾಣೆಯ ವಿಶೇಷ ವಿಭಾಗದ ಕಾನ್‌ಸ್ಟೇಬಲ್ ಸಂಗಮೇಶ ಸಾಗರ ಮತ್ತು ಬೀಟ್ ಕಾನ್‌ಸ್ಟೇಬಲ್ ಚಂದ್ರಕಾಂತ ರಾಥೋಡ ಅಮಾನತಾಗಿರುವ ಪೊಲೀಸ್ ಸಿಬ್ಬಂದಿ. ಕೃತ್ಯದ ಕುರಿತು ಸರಿಯಾದ ಮಾಹಿತಿ ನೀಡದ ಕಾರಣ ಇಲಾಖೆಯ ಆಂತರಿಕ ತನಿಖೆ …
Read More »ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ 10 ಮಂದಿ ಸಜೀವ ದಹನ?
ಚಿತ್ರದುರ್ಗ: ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, 10 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಈ ಸಂದರ್ಭದಲ್ಲಿ ಚಿತ್ರದುರ್ಗದ ಹಿರಿಯೂರಿನ ಜವನಗೊಂಡನಹಳ್ಳಿ ಎಂಬಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ …
Read More »ಪೋಕ್ಸೊ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಡ: ಸಂಜಯ ಪಾಟೀಲ ಆರೋಪ
ಪೋಕ್ಸೊ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಡ: ಸಂಜಯ ಪಾಟೀಲ ಆರೋಪ ಬೆಳಗಾವಿ :ಗ್ರಾಮೀಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕನ ವಿರುದ್ಧ ಪೋ ಕಾಯ್ದೆಯಡಿ ಪ್ರಕರಣ ದಾಖಲಿಸದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಆರೋಪಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಂಭೀರವಾಗಿ ಪ್ರಕರಣವನ್ನು ಪರಿಗಣಿಸಿ ಸಂತ್ರಸ್ತೆ ವಿದ್ಯಾರ್ಥಿನಿಗೆ …
Read More »ಚೆನ್ನೈ ಮಾಲಾಧಾರಿ ಜೀವ ಉಳಿಸಿದ ಗೋಕಾಕ ಹೊಟೆಲ್ ಉದ್ಯಮಿ ಪ್ರಭಾಕರ ಶೆಟ್ಟಿ
ಚೆನ್ನೈ ಮಾಲಾಧಾರಿ ಜೀವ ಉಳಿಸಿದ ಗೋಕಾಕ ಹೊಟೆಲ್ ಉದ್ಯಮಿ ಪ್ರಭಾಕರ ಬೆಟ್ಟ ಏರುವಾಗ ಕುಸಿದ ವ್ಯಕ್ತಿಯ ಜೀವ ಉಳಿಸಿದ ಪ್ರಭಾಕರ ಶೆಟ್ಟಿ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಚೆನ್ನೈಮೂಲದ ಮಾಲಾಧಾರಿಯೊಬ್ಬರಿಗೆ ಬೆಳಗಾವಿ ನಗರದ ಹೋಟೆಲ್ ಉದ್ಯಮಿ ಪ್ರಭಾಕರ ಶೆಟ್ಟಿ ಅವರುತುರ್ತು ಚಿಕಿತ್ಸೆ ನೀಡಿ ಜೀವ ಉಳಿಸಿದ ಘಟನೆ ಕೇರಳದ ನೀಲಿಮಲೆ ಬೆಟ್ಟದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆಬಂದಿದೆ. ಬೆಳಗಾವಿ ನಗರದ ಪ್ರಭಾಕರ ಶೆಟ್ಟಿ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ …
Read More »
Laxmi News 24×7