ಲಿಂಗಾಯತರು ‘ಲಿಂಗಾಯತ ಧರ್ಮ’ ಎಂದು ಬರೆಸಿರಿ ರಾಜ್ಯದಲ್ಲಿ ಸರ್ಕಾರ ಜಾತಿಗಣತಿ ಪ್ರಾರಂಭಿಸಿದ್ದು, ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿಗಳನ್ನು ಸಮೀಕ್ಷೆ ಮಾಡುವುದು ಇದರ ಉದ್ದೇಶವಾಗಿದೆ. ತರಾತುರಿಯಲ್ಲಿ ನಡೆಯುತ್ತಿರುವ ಈ ಸಮೀಕ್ಷೆಯಿಂದಾಗಿ ಜನರಲ್ಲಿ, ಅದರಲ್ಲೂ ವಿಶೇಷವಾಗಿ ಲಿಂಗಾಯತರಲ್ಲಿ ಸಾಕಷ್ಟು ಗೊಂದಲವುಂಟಾಗಿದೆ. ಸಣ್ಣ ಸಣ್ಣ ಸಮುದಾಯಗಳು ಲಿಂಗಾಯತ ಧರ್ಮದಿಂದ ದೂರ ಸರಿಯುತ್ತಿರುವ ಈ ಸಂದರ್ಭದಲ್ಲಿ ಅಖಂಡ ಲಿಂಗಾಯತ ಸಮಾಜವನ್ನು ಗಟ್ಟಿಯಾಗಿ ಉಳಿಸಿಕೊಳ್ಳಲು ಎಲ್ಲರೂ ತಮ್ಮ ಪ್ರತಿಷ್ಠೆಯನ್ನು ಬದಿಗಿರಿಸಿ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಾಗಿದೆ. ಸಂವಿಧಾನದ ಕಲಂ …
Read More »Yearly Archives: 2025
ವಿದ್ಯಾರ್ಥಿಗಳು ಕೃತಜ್ಞತಾ ಮನೋಭಾವನೆ ರೂಡಿಸಿಕೊಳ್ಳಿ. ಪೊಲೀಸ್ ಕಮಿಷನರ್ ಏನ್. ಶಶಿಕುಮಾರ್
ವಿದ್ಯಾರ್ಥಿಗಳು ಕೃತಜ್ಞತಾ ಮನೋಭಾವನೆ ರೂಡಿಸಿಕೊಳ್ಳಿ. ಪೊಲೀಸ್ ಕಮಿಷನರ್ ಏನ್. ಶಶಿಕುಮಾರ್. ಧಾರವಾಡ- ಸಮಯದ ಕುರಿತು ಅರಿವಿರಲಿ, ಸಮಯವನ್ನು ಗೌರವಿಸಿದರೆ, ಅದು ನಿಮ್ಮನು ಗೌರವಿಸುತ್ತದೆ. ಸಮಯ ನಿರ್ವಹಣೆ ಮಾಡಿ. ಚೆನ್ನಾಗಿ ಓದಿ, ಜೀವನದಲ್ಲಿ ನಿರಂತರ ಪ್ರಯತ್ನ ವಿರಲಿ. ಕಲಿಸಿದ ಗುರು ಗಳು,ತಂದೆ -ತಾಯಿಗೆ ಕೀರ್ತಿ ತನ್ನಿ. ಜತೆಗೆ ವಿದ್ಯಾರ್ಥಿಗಳು ಕೃತಜ್ಞತಾ ಮನೋಭಾನೆ ಬೆಳಸಿಕೊಳ್ಳಬೇಕು ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯಕ್ತರಾದ ಎನ್ ಶಶಿಕುಮಾರವರು ತಿಳಿಸಿದರು. ಧಾರವಾಡದ ಎಸ್ ಜೆ ಎಮ್ …
Read More »ಮಾಜಿ ಸೈನಿಕರಿಗೆ ಉಚಿತ ಹಾಗೂ ಸಮರ್ಥ ಕಾನೂನು ಸೇವೆ
ಮಾಜಿ ಸೈನಿಕರಿಗೆ ಉಚಿತ ಹಾಗೂ ಸಮರ್ಥ ಕಾನೂನು ಸೇವೆ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಸೈನಿಕರು ಹಾಗೂ ಮಾಜಿ ಸೈನಿಕರು, ವೀರನಾರಿಯರಿಗೆ ಉಚಿತ ಮತ್ತು ಸಮರ್ಥ ಕಾನೂನು ಸೇವೆಯನ್ನು ಒದಗಿಸಲು ವೀರ ಪರಿವಾರ್ ಸಹಾಯಕ ಯೋಜನೆ 2025 ರ ಹೆಸರಿನಲ್ಲಿ ಪ್ರಾರಂಭವಾಗಿರುವ ಸೇವೆಯ ಸದುಪಯೋಗವನ್ನು ಜಿಲ್ಲೆಯ ಸಮಸ್ತ ಸೈನಿಕರು, ಮಾಜಿ ಸೈನಿಕರು ವೀರನಾರಿಯರು ಪಡೆದುಕೊಳ್ಳಬೇಕೆಂದು ಮಹಾಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ ಪೂಜೇರಿ ತಿಳಿಸಿದ್ದಾರೆ. ಇತ್ತೀಚಿಗೆ ಈ ಸೇವೆಗೆ ಬೆಳಗಾವಿಯ ಸೈನಿಕ …
Read More »“ಆರೋಗ್ಯವೇ ಭಾಗ್ಯ – ಜನಸೇವೆಯೇ ಜನಾರ್ದನ ಸೇವೆ”
“ಆರೋಗ್ಯವೇ ಭಾಗ್ಯ – ಜನಸೇವೆಯೇ ಜನಾರ್ದನ ಸೇವೆ” ನಿಪ್ಪಾಣಿ ಕ್ಷೇತ್ರದ ಕಾರದಗಾ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷ ಗ್ರಾಮೀಣ ಮಂಡಲ ವತಿಯಿಂದ ಜಗತ್ತು ಕಂಡ ಅಪ್ರತಿಮ ನಾಯಕರಾದ ಸನ್ಮಾನ್ಯ ಪ್ರಧಾ ನಮಂತ್ರಿಗಳಾದ ಶ್ರೀ Narendra Modi ಜಿ ಅವರ ಜನ್ಮದಿನದ ಅಂಗವಾಗಿ “ಸೇವಾಪಾಕ್ಷಿಕ” ಅಭಿಯಾನದಡಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ,ಚಾಲನೆ ನೀಡಿ, ಮಾತನಾಡಲಾಯಿತು. ಆರೋಗ್ಯದ ಕುರಿತಂತೆ ಜಾಗೃತಿ ಮೂಡಿಸುವ ಜೊತೆಗೆ ಪ್ರಧಾನಮಂತ್ರಿಗಳ ಸೇವಾ ಮನೋಭಾವನೆ ಮತ್ತು ಬದ್ಧತೆಯನ್ನು …
Read More »‘ಕಾವೇರಿ ಆರತಿ’ಗೆ ಚಾಲನೆ: ಐತಿಹಾಸಿಕ ಕಾರ್ಯಕ್ರಮ ಕಣ್ತುಂಬಿಕೊಂಡ ಪ್ರವಾಸಿಗರು
ಮಂಡ್ಯ: ಕನ್ನಡ ನಾಡಿನ ಜೀವನದಿ, ಧಾರ್ಮಿಕ, ಸಾಂಸ್ಕೃತಿಯ ಪ್ರತೀಕವಾಗಿರುವ ಕಾವೇರಿ ನದಿಗೆ ಪ್ರಪ್ರಥಮ ಬಾರಿಗೆ “ಕಾವೇರಿ ಆರತಿ” ನೆರವೇರಿತು. ಕಾವೇರಮ್ಮನ ಒಡಲು ಸದಾ ತುಂಬಿರಬೇಕು. ಕೆಆರ್ಎಸ್ ವರ್ಷ ಪೂರ್ತಿ ಭರ್ತಿಯಾಗಿರಬೇಕು. ನಾಡು ಸುಖ, ಶಾಂತಿ ಸಮೃದ್ಧಿಯಿಂದ ಕೂಡಿರಲೆಂದು ಡಿ.ಕೆ.ಶಿವಕುಮಾರ್ ಅವರು ಕಾವೇರಿ ಮಾತೆಗೆ ಆರತಿ ಬೆಳಗಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದರು. ಮಧುವಣಗಿತ್ತಿಯಂತೆ ಸಿಂಗಾರಗೊಂಡಿದ್ದ ಕೃಷ್ಣರಾಜ ಸಾಗರದ ಬೃಂದಾವನದಲ್ಲಿ ಗೋಧೂಳಿ ಮುಹೂರ್ತದಲ್ಲಿ ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡಿ, ತಾಯಿ ಕಾವೇರಿಗೆ ಆರತಿ …
Read More »ಕಾನೂನುಬಾಹಿರ ಚಟುವಟಿಕೆ ನಿಯಂತ್ರಿಸಲು ವಾರಕ್ಕೆರಡು ದಿನ ನಗರದಲ್ಲಿ ವಿಶೇಷ ಗಸ್ತು: ಬೆಂ.ನಗರ ಪೊಲೀಸ್ ಕಮಿಷನರ್
ಬೆಂಗಳೂರು: ನಗರದಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದ್ದು, ವಾರದಲ್ಲಿ ಎರಡು ದಿನ ವಿಶೇಷ ಗಸ್ತು ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ತಿಳಿಸಿದ್ದಾರೆ. ಮಲ್ಲೆಶ್ವರದ 18ನೇ ಅಡ್ಡ ರಸ್ತೆಯಲ್ಲಿರುವ ಮೈದಾನದಲ್ಲಿ ಉತ್ತರ ವಿಭಾಗದ ಪೊಲೀಸರು ಹಮ್ಮಿಕೊಂಡಿದ್ದ ರಾಣಿ ಚೆನ್ನಮ್ಮ ಪಡೆ-ಮಹಿಳಾ ಜಾಗೃತಿ ಕಾರ್ಯಕ್ರಮಕ್ಕೂ ಮುನ್ನ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಸಾರ್ವಜನಿಕರಲ್ಲಿ ಸ್ಥೈರ್ಯ ಮೂಡಿಸಲು ನಗರದಾದ್ಯಂತ ಪೊಲೀಸರು ನಾಕಾಬಂದಿ ಹಾಕಿ ಪರಿಶೀಲಿಸುತ್ತಿದ್ದಾಗ ಮಾದಕ ವಸ್ತುಗಳು ಪತ್ತೆಯಾಗಿವೆ. ಅಲ್ಲದೇ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿಂಗಳಾಪುರ ಗ್ರಾಮದ ಶ್ರೀ ಸದ್ಗುರು ಸಿದ್ಧಾರೂಢ ಮಹಾರಾಜರು ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ, ₹10 ಲಕ್ಷ ದಂಡ
ಚಿಕ್ಕೋಡಿ: ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ ಅಪರಾಧಿಗೆ 10 ಲಕ್ಷ ರೂಪಾಯಿ ದಂಡದ ಜೊತೆಗೆ ಮರಣದಂಡನೆ ಶಿಕ್ಷೆ ವಿಧಿಸಿ ಬೆಳಗಾವಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ಶೀಘ್ರಗತಿ ಪೊಕ್ಸೊ ನ್ಯಾಯಾಲಯ-1 ಇಂದು ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶರಾದ ಸಿ.ಎಂ.ಪುಷ್ಪಲತಾ ಅವರು ತೀರ್ಪು ನೀಡಿದ್ದಾರೆ. ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ಭರತೇಶ ಮಿರ್ಜಿ(28) ಎಂಬಾತ ಕಠಿಣ ಶಿಕ್ಷೆಗೆ ಗುರಿಯಾದ ಅಪರಾಧಿ. 2019ರ ಸೆಪ್ಟೆಂಬರ್ 10ರಂದು ಕುಡಚಿ ಪೊಲೀಸ್ …
Read More »ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ದಂಪತಿಗಳು
ಮೈಸೂರು: ಸಾಂಪ್ರದಾಯಿಕ ಉಡುಗೆ ತೊಟ್ಟು ನವ ವಧುವರರಂತೆ ಕಂಗೊಳಿಸುತ್ತಿದ್ದ ಜೋಡಿಗಳು ಬೆಳ್ಳಂಬೆಳಿಗ್ಗೆ ಟಾಂಗಾ ಸವಾರಿ ಮಾಡಿ, ಇತಿಹಾಸ ಸಾರುವ ಪಾರಂಪರಿಕ ಕಟ್ಟಡಗಳನ್ನು ವೀಕ್ಷಿಸಿದರು. ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ರಂಗಚಾರ್ಲು ಪುರಭವನದಲ್ಲಿ ಪಾರಂಪರಿಕ ಕಟ್ಟಡ ಮತ್ತು ಇತಿಹಾಸದ ಮಾಹಿತಿ, ಪಾರಂಪರಿಕ ಉಡುಗೆಗಳನ್ನು ಪ್ರಚಲಿತಗೊಳಿಸುವುದು ಹಾಗೂ ನಶಿಸಿ ಹೋಗುತ್ತಿರುವ ಪಾರಂಪರಿಕ ಟಾಂಗಾಗಳ ಉಳಿಸುವಿಕೆ ಉದ್ದೇಶದಿಂದಾಗಿ ಟಾಂಗಾ ಸವಾರಿ ಆಯೋಜಿಸಲಾಗಿತ್ತು. …
Read More »ಸಿಲಿಂಡರ್ ಸ್ಫೋಟಕ್ಕೆ ಮನೆ ಧ್ವಂಸ; 8 ಮಂದಿಗೆ ಗಾಯ
ವಿಜಯನಗರ: ಹೊಸಪೇಟೆ ತಾಲೂಕಿನ ಗಾದಿಗನೂರಿನಲ್ಲಿ ಇಂದು ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ 8 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಸ್ಫೋಟಕ್ಕೆ ಮನೆ ಕುಸಿದು ಬಿದ್ದಿದೆ. ಮನೆಯ ಯಜಮಾನಿ ಕವಿತಾ ಅವರ ಸ್ಥಿತಿ ಗಂಭೀರವಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಗ್ರಾಮೀಣ ಠಾಣೆ ಪೊಲೀಸರು ತಿಳಿಸಿದ್ದಾರೆ. ಹೊಸಪೇಟೆ ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ವಕೀಲ ಹಾಲಪ್ಪ ಅವರಿಗೆ ಸೇರಿದ ಮನೆ ಇದು. ಮನೆಯಲ್ಲಿ ಸುಮಾರು 10 ಮಂದಿ ಇದ್ದರು. ಬೆಳಗ್ಗೆ …
Read More »
Laxmi News 24×7