ಯಾದಗಿರಿ, (ಜೂನ್ 26): ಜಿಲ್ಲೆಯ ಬೆಂಡೆಬೆಂಬಳಿ ಗ್ರಾಮದಲ್ಲಿ (Bendebembli village) ಹಿಂದೂ–ಮುಸ್ಲಿಂ (Hindu Muslim) ಭಾವೈಕ್ಯತೆ ಸಮ್ಮಿಲನವಾಗಿದೆ. ಹೌದು…ದೇವಸ್ಥಾನವನ್ನು (Temple) ತೆಗೆದು ದರ್ಗಾವನ್ನು ನಿರ್ಮಾಣ ಮಾಡಿ ಅದಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ ಮಾಡಲಾಗಿದೆ. ಈ ರೀತಿಯ ಭಾವೈಕ್ಯತೆ ಯಾದಗಿರಿಯ (Yadgir) ಬೆಂಡೆಬೆಂಬಳಿ ಗ್ರಾಮ ಸಾಕ್ಷಿಯಾಗಿದೆ. ಹಿಂದೂ ಮುಸ್ಲಿಂ ಎನ್ನದೇ ಇಡೀ ಗ್ರಾಮದ ಜನ ಸೇರಿ ಲಕ್ಷಾಂತರ ರೂ. ಖರ್ಚು ಮಾಡಿ ಹಿಂದೂ ವ್ಯಕ್ತಿ ಹೆಸರಿನಲ್ಲಿ ದರ್ಗಾವನ್ನು ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಬೆಂಡೆಬೆಂಬಳಿ ಎನ್ನುವ ಒಂದು ಹಳ್ಳಿ ಸಮಾಜಕ್ಕೆ ಭಾವೈಕ್ಯತೆ ಸಂದೇಶ …
Read More »Yearly Archives: 2025
8ನೇ ಕ್ಲಾಸ್ ಓದಿರುವ ರಿಂಕು ಸಿಂಗ್ಗೆ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ನೌಕರಿ;
ಟೀಂ ಇಂಡಿಯಾದ ಯುವ ಕ್ರಿಕೆಟಿಗ ರಿಂಕು ಸಿಂಗ್ (Rinku Singh) ಇತ್ತೀಚಿನ ದಿನಗಳಲ್ಲಿ ತಮ್ಮ ವೈಯಕ್ತಿಕ ಬದುಕಿನಿಂದ ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಜೌನ್‌ಪುರದ ಮಚ್ಲಿಶಹರ್ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ (Priya Saroj) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂದಿನ ನವೆಂಬರ್ ತಿಂಗಳಲ್ಲಿ ರಿಂಕು ಹಾಗೂ ಪ್ರಿಯಾ ಅವರ ವಿವಾಹ ನಡೆಯಬೇಕಿತ್ತು. ಆದರೆ ರಿಂಕು ಅವರ ಬಿಡುವಿಲ್ಲದ ಕ್ರಿಕೆಟ್ ವೇಳಾಪಟ್ಟಿಯಿಂದಾಗಿ ವಿವಾಹ …
Read More »ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ ಸಾರ್ವಜನಿಕರ ಎದುರೇ ಬ್ಲೇಡ್ನಿಂದ …
Read More »ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ
ಹಾವೇರಿ, ಜೂನ್ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ. ತಹಶೀಲ್ದಾರ್ಗೆ …
Read More »3 ತಿಂಗಳಿನಿಂದ ಹಣ ಬಾರದೇ ಗೃಹಲಕ್ಷ್ಮೀಯರು ಕಂಗಾಲು
ಹುಬ್ಬಳ್ಳಿ, (ಜೂನ್ 26): ರಾಜ್ಯದಲ್ಲಿ ತಾವು ಅಧಿಕಾರಕ್ಕೆ ಬಂದ್ರೆ ಪ್ರತಿಯೊಬ್ಬ ಗೃಹಲಕ್ಷ್ಮಿಯರಿಗೆ ಎರಡು ಸಾವಿರ ಹಣ ನೀಡುವುದಾಗಿ ಕಾಂಗ್ರೆಸ್ (Congress) ನಾಯಕರು ಹೇಳಿದ್ದರು. ಅದರಂತೆ ಅಧಿಕಾರಕ್ಕೆ ಬಂದಮೇಲೆ 2023 ರ ಜುಲೈ ತಿಂಗಳಿಂದ ಈ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Guarantee Scheme )ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಸರಿಸುಮಾರು 1.25 ಕೋಟಿ ಗೃಹಣಿಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಈ ಯೋಜನೆಗಾಗಿಯೇ ಕಳೆದ ಬಜೆಟ್ ನಲ್ಲಿ ಸರ್ಕಾರ ಬಜೆಟ್ ನಲ್ಲಿ 28608 ಕೋಟಿ ರೂಪಾಯಿ ಮೀಸಲಿಡಲಾಗಿದೆ. …
Read More »ತುಂಬಿ ಹರಿಯುತ್ತಿರುವ ಹಾಲಾತ್ರಿ ಹಳ್ಳದಲ್ಲಿ ಥಾರ್ ದಾಟಿಸಿದ ಚಾಲಕ
ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಖಾನಾಪುರದ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರ ನಡುವೆಯೂ ಒಬ್ಬ ಚಾಲಕ ಹರಿಯುವ ನೀರಿನಲ್ಲೇ ವಾಹನ ದಾಟಿಸಿ, ದುಸ್ಸಾಹಸ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಗಾವಿ, ಖಾನಾಪುರ, ಹೆಮ್ಮಡಗಾ-ಅನಮೋಡ ಮಾರ್ಗವಾಗಿ ಗೋವಾ ಸಂಪರ್ಕಿಸುವ ರಸ್ತೆಯಲ್ಲಿರುವ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳದ ಸೇತುವೆಯ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. …
Read More »45 ಕೋಟಿ ಮೌಲ್ಯದ 4 ಸಾವಿರ ಕೆ.ಜಿ ಡ್ರಗ್ಸ್ ನಾಶ, ದಂಧೆಯಲ್ಲಿದ್ದ 200ಕ್ಕೂ ಹೆಚ್ಚು ವಿದೇಶಿಗರ ಗಡಿಪಾರು: ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಕಳೆದೊಂದು ವರ್ಷದಲ್ಲಿ 4 ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನ ವಶಪಡಿಸಿಕೊಳ್ಳಲಾಗಿದೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದು, 200ಕ್ಕೂ ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನಕ್ಕೆ ಚಾಲನೆ ನೀಡಿ …
Read More »ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ
ಬೆಂಗಳೂರು: ”ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ನಾನು ಅದರ ಬಗ್ಗೆ ಏನೂ ಕೇಳಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ” ಎಂದರು. …
Read More »4 ಹುಲಿಗಳ ಅಸಹಜ ಸಾವು
4 ಹುಲಿಗಳ ಅಸಹಜ ಸಾವು ಬೆಂಗಳೂರು/ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಸಾವನ್ನಪ್ಪಿವೆ. ಹಲಿ ಮತ್ತು ಮರಿಗಳ ಈ ಅಸಹಜ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 …
Read More »ಸಮಾಧಾನ, ಅಸಮಾಧಾನ ಅಂತಾ ನಂದೇನೂ ಇಲ್ಲ:ಬಿ.ಆರ್.ಪಾಟೀಲ್
ಬೆಂಗಳೂರು : ಸಮಾಧಾನ, ಅಸಮಾಧಾನ ನಂದೇನೂ ಇಲ್ಲ. ನಡೆದಿದ್ದನ್ನು ಅವರಿಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ಬಿ. ಆರ್. ಪಾಟೀಲ್ ತಿಳಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ. ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ. ಅವರು ಸಮಾಧಾನದಿಂದ ನಮ್ಮ ವಿಚಾರಗಳನ್ನು ಕೇಳಿದ್ದಾರೆ. …
Read More »