ಬೆಂಗಳೂರು: ವಿಪಕ್ಷಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಹಂಚಿಕೆ ಮಾಡಿದೆ. ಈಗಾಗಲೇ ಆಡಳಿತ ಪಕ್ಷದ ಶಾಸಕರಿಗೆ 50 ಕೋಟಿ ರೂ. ಮಂಜೂರು ಮಾಡಿ, ಕ್ರಿಯಾ ಯೋಜನೆ ಸಲ್ಲಿಸಲು ಸೂಚಿಸಿದ್ದ ಸರ್ಕಾರ, ಇದೀಗ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಗೆ ತಲಾ 25 ಕೋಟಿ ರೂ. ಅನುದಾನ ನೀಡಲು ನಿರ್ಧರಿಸಿದೆ. ಅನುದಾನ ಹಂಚಿಕೆ ಸಂಬಂಧ ಪ್ರತಿಪಕ್ಷ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ …
Read More »Yearly Archives: 2025
ಗ್ರೇಟರ್ ಬೆಂಗಳೂರು ಟೌನ್ಶಿಪ್ಗೆ ವಿರೋಧ: ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತರು
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಬಳಿ ಟೌನ್ ಶಿಪ್ಗೆ ಭೂ ಸ್ವಾಧೀನ ವಿರೋಧಿಸಿ ಕಳೆದ ನಾಲ್ಕು ದಿನಗಳಿಂದ ರೈತರು ಆಹೋರಾತ್ರಿ ಧರಣಿ ನಡೆಸುತ್ತಿರುವ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು, ಇಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭೂ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಇಂದು ಭೇಟಿ ನೀಡಿತ್ತು. …
Read More »ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ ಏನು ನಮೂದಿಸಬೇಕೆಂದು ನಾಳೆ ನಿರ್ಧಾರ: ವಚನಾನಂದ ಶ್ರೀ
ಹಾವೇರಿ: ಸಾಮಾಜಿಕ – ಶೈಕ್ಷಣಿಕ ಸಮೀಕ್ಷೆ ಸಂದರ್ಭದಲ್ಲಿ ಜಾತಿ ಕಾಲಂನಲ್ಲಿ ಏನು ನಮೂದು ಮಾಡಬೇಕು ಎಂಬ ಬಗ್ಗೆ ಇದೇ ಸೆಪ್ಟಬರ್ 17 ರಂದು (ಬುಧವಾರ) ಸ್ಪಷ್ಟ ನಿರ್ಧಾರ ತಗೆದುಕೊಳ್ಳುತ್ತೇವೆ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ತಿಳಿಸಿದರು. ನಗರದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಲಿಯವರೆಗೂ ಪಂಚಮಸಾಲಿಗಳು ಯಾವುದೇ ನಿರ್ಧಾರ ಕೈಗೊಳ್ಳಬಾರದು. ಪಂಚಮಸಾಲಿ ವಿಚಾರದಲ್ಲಿ ಕರ್ನಾಟಕದ ಯಾವುದೇ ಮಠ, ಸ್ವಾಮೀಜಿಗಳ ಹೇಳಿಕೆಗಳಿಗೆ ಕಿವಿಗೊಡಬೇಡಿ ಎಂದು ಕರೆ ನೀಡಿದರು. ಪಂಚಮಸಾಲಿಗಳಿಗೂ …
Read More »ಮೈಸೂರು ಅರಮನೆಯ ದರ್ಬಾರ್ ಹಾಲ್ನಲ್ಲಿ ರತ್ನಖಚಿತ ಸ್ವರ್ಣ ಸಿಂಹಾಸನದ ಜೋಡಣೆ
ಮೈಸೂರು: ರಾಜವಂಶಸ್ಥರು ಅರಮನೆಯಲ್ಲಿ ನವರಾತ್ರಿ ಪೂಜಾ ಕೈಂಕರ್ಯಗಳನ್ನು ನಡೆಸುವ ಹಿನ್ನೆಲೆಯಲ್ಲಿ ಇಂದು ದರ್ಬಾರ್ ಹಾಲ್ನಲ್ಲಿ ಮಹಾರಾಣಿ ಪ್ರಮೋದಾದೇವಿ ಒಡೆಯರ್ ನೇತೃತ್ವದಲ್ಲಿ ಸಿಬ್ಬಂದಿ ಹಾಗೂ ನುರಿತ ಗೆಜ್ಜಗಳ್ಳಿಯವರು ರತ್ನಖಚಿತ ಸ್ವರ್ಣ ಸಿಂಹಾಸನದ ಜೋಡಣೆ ಕಾರ್ಯ ನಡೆಸಿದರು. ಇದಕ್ಕೂ ಮುನ್ನ ದರ್ಬಾರ್ ಹಾಲ್ನಲ್ಲಿ ಗಣಪತಿ ಹೋಮ, ಚಾಮುಂಡಿ ತಾಯಿಯ ಪೂಜೆ, ಹೋಮ-ಹವನಗಳನ್ನು ನೆರವೇರಿಸಲಾಯಿತು. ಬಳಿಕ ಭದ್ರತಾ ಕೊಠಡಿಯಲ್ಲಿದ್ದ ಸಿಂಹಾಸನವನ್ನು ತಂದು ಜೋಡಿಸಲಾಯಿತು. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಸಾರ್ವಜನಿಕರಿಗೆ ಅರಮನೆ …
Read More »ಸಂಕಷ್ಟ ಬಂದಾಗ ಸಿದ್ಧರಾಮಯ್ಯಗೆ ಕುರುಬರು ನೆನಪಾಗ್ತಾರೆ: ಹೆಚ್.ವಿಶ್ವನಾಥ್
ಮೈಸೂರು: ಸಿಎಂ ಸಿದ್ಧರಾಮಯ್ಯ ತಮ್ಮ ಬೆಳವಣಿಗೆಗಾಗಿ ಕುರುಬರ ತನು ಮನ ಎಲ್ಲವನ್ನೂ ಬಳಸಿಕೊಂಡು ಮೇಲೆ ಬಂದಿದ್ದಾರೆ. ಆದರೆ ಕುರುಬ ಸಮುದಾಯಕ್ಕಾಗಿ ಅವರು ಯಾವುದೇ ಕೊಡುಗೆಗಳನ್ನು ನೀಡಿಲ್ಲ. ಈಗ ತಮಗೆ ಸಂಕಷ್ಟ ಬಂದಿದೆ. ಅದಕ್ಕಾಗಿ ಕುರುಬರು ನೆನಪಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಇದು ಸ್ವಾಗತಾರ್ಹ ಎಂದರು. ಸಿದ್ದರಾಮಯ್ಯ …
Read More »ಎರಡು ನೂರಾ ಒಂದನೇ ಜಯಂತೋತ್ಸವ ವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಅರ್ಥಪೂರ್ಣವಾಗಿ ಆಚರಿಸಬೇಕೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಭಿವೃದ್ಧಿಪರ ಹೋರಾಟ ಸಮಿತಿಯು ಆಗ್ರಹ
ಬೆಳಗಾವಿ: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮದ ಕಹಳೆ ಮೊಳಗಿಸಿದ ವೀರರಾಣಿ ಕಿತ್ತೂರ ಚನ್ನಮ್ಮಾಜಿಯವರ ೨೦೦ನೇ ಜಯಂತಿಯನ್ನು ಕಳೆದ ವರ್ಷ ಅದ್ದೂರಿಯಾಗಿ ಆಚರಿಸಲಾಗಿದೆ ಈ ಬಾರಿಯೂ ಈ ಬಾರಿಯೂ ಎರಡು ನೂರಾ ಒಂದನೇ ಜಯಂತೋತ್ಸವ ವನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಅರ್ಥಪೂರ್ಣವಾಗಿ ಆಚರಿಸಬೇಕೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಭಿವೃದ್ಧಿಪರ ಹೋರಾಟ ಸಮಿತಿಯು ಆಗ್ರಹಿಸಿದೆ ಈ ಸಂಬಂಧವಾಗಿ ಆರ್ ಸಿ ಯು ಕುಲಪತಿಗಳಾದ ಪ್ರೊ.ಸಿ.ಎಂ. ತ್ಯಾಗರಾಜ ಅವರನ್ನು ಭೇಟಿ ಮಾಡಿದ ನಿಯೋಗವು ಮನವಿಯನ್ನು …
Read More »ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ರಾಜ್ಯದ ಮೊದಲ ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ಸ್ ಅಸೋಸಿಯೇಷನ್ ಲೋಗೋ ಬಿಡುಗಡೆ ಮಾಡೋ ಮೂಲಕ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ನಂತರ ಎಲೆಕ್ಟ್ರಾನಿಕ್ ಮೀಡಿಯಾದವರಂತೆ ಸಚಿವ ಸಂತೋಷ ಲಾಡ್ ಕ್ಯಾಮರಾ ಮ್ಯಾನ್ ಆದ್ರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಚಿಟ್‌ಚಾಟ್ ಮಾಡಿರುವ ಒಂದು ಅದ್ಭುತ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದಿದೆ. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ …
Read More »ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ, ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಬೇಕು- ಸಿ.ಎಂ.
ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ, ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಬೇಕು- ಸಿ.ಎಂ. – ಕೃಷಿಕ್ರಾಂತಿ-ಹಸಿರು ಕ್ರಾಂತಿ ವೇಗದಲ್ಲಿ ಆಹಾರ ಉತ್ಪಾದನೆ ಆಗುತ್ತಿಲ್ಲ. ಈ ಬಗ್ಗೆ ಕೃಷಿ ವಿವಿಗಳು ಹೆಚ್ಚಿನ ಅಧ್ಯಯನ ನಡೆಸಿ ಪರಿಹಾರ ಹುಡುಕಿ ರೈತಸ್ನೇಹಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಸೋಮವಾರ ಧಾರವಾಡ ಕೃಷಿ ವಿಶ್ವವಿದ್ಯಾಲಯ ಆಯೋಜಿಸಿದ್ದ ಕೃಷಿ ಮೇಳವನ್ನು ಉದ್ಘಾಟಿಸಿ, ಶ್ರೇಷ್ಠ ಕೃಷಿಕ …
Read More »ಜಾತಿಗಣತಿ ಹೊತ್ತಲ್ಲೇ ಲಿಂಗಾಯತ ಪ್ರತ್ಯೇಕ ಧರ್ಮದ ಜಗಳ
ದಾವಣಗೆರೆ, ಸೆಪ್ಟೆಂಬರ್ 16: ಜಾತಿಗಣತಿಯಲ್ಲಿ (Caste Census) ಕ್ರಿಶ್ಚನ್ ಸಮುದಾಯದಲ್ಲಿನ ಉಪಜಾತಿಗಳ ಕಾಲಂ ಈಗಾಗಲೇ ಭಾರಿ ವಿವಾದ ಸೃಷ್ಟಿಸಿದೆ. ಇದೀಗ, ಲಿಂಗಾಯತ ಪ್ರತ್ಯೇಕ ಧರ್ಮದ ವಿವಾದವೂ ಈಗ ಮತ್ತೆ ಮುನ್ನೆಲೆಗೆ ಬರುತ್ತಿದೆ. ಜಾತಿಗಣತಿಯಲ್ಲಿ ಧರ್ಮದ ಕಾಲಂನಲ್ಲಿ ಕಡ್ಡಾಯವಾಗಿ ಲಿಂಗಾಯತ ಧರ್ಮ (Lingayat) ಎಂದು ಬರೆಸಲು ಸ್ವಾಮೀಜಿಗಳು ಸೂಚನೆ ನೀಡಿದ್ದಾರೆ. ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಅಭಿಪ್ರಾಯಕ್ಕೆ ಬರಲಾಗಿದ್ದು, ಧರ್ಮದ ಕಾಲಂನಲ್ಲಿ ಇತರೆ ಎಂಬ ಆಯ್ಕೆಯಲ್ಲಿ ಲಿಂಗಾಯತ ಧರ್ಮ ಎಂದು ಬರೆಯುವಂತೆ ದಾವಣಗೆರೆಯ ಬಾಪೂಜಿ ಸಮುದಾಯ ಭವನದಲ್ಲಿ ನಡೆದ ಬಸವ …
Read More »ಕೊಯಮತ್ತೂರಿನ ಒಂದು ಕಂಪನಿಯು ತಮ್ಮ “ಒಟ್ಟಿಗೆ ನಾವು ಬೆಳೆಯುತ್ತೇವೆ”
ಕೊಯಮತ್ತೂರಿನ ಒಂದು ಕಂಪನಿಯು ತಮ್ಮ “ಒಟ್ಟಿಗೆ ನಾವು ಬೆಳೆಯುತ್ತೇವೆ” ಉಪಕ್ರಮದಡಿಯಲ್ಲಿ 140 ಉದ್ಯೋಗಿಗಳಿಗೆ ಒಟ್ಟು 14.5 ಕೋಟಿ ರೂ. ಬೋನಸ್‌ಗಳನ್ನು ನೀಡುವ ಮೂಲಕ ಉದ್ಯೋಗಿ ಮೆಚ್ಚುಗೆಯಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸಿದೆ. ಈ ಕಾರ್ಯವು ಕೇವಲ ಕಾರ್ಯಕ್ಷಮತೆಯ ಮಾಪನಗಳಿಗಿಂತ ನಿಷ್ಠೆ ಮತ್ತು ದೀರ್ಘಕಾಲೀನ ಬದ್ಧತೆಯನ್ನು ಪ್ರತಿಫಲಿಸುತ್ತದೆ, ಅಲ್ಪಾವಧಿಯ ಫಲಿತಾಂಶಗಳಿಗಿಂತ ಸಮರ್ಪಣೆಯ ಮೌಲ್ಯವನ್ನು ಎತ್ತಿ ತೋರಿಸುತ್ತದೆ. 2022 ರ ಮೊದಲು ಅಥವಾ ಸಮಯದಲ್ಲಿ ಸೇರಿದ ಮತ್ತು ಕನಿಷ್ಠ ಮೂರು ವರ್ಷಗಳ ಕಾಲ ಉಳಿದುಕೊಂಡಿರುವ …
Read More »
Laxmi News 24×7