ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಕ್ತಿ ಕಾಲೊನಿ ಗ್ರಾಮದ ಲೋಕೇಶ್ ಎಂಬವರ ಬಾಳೆತೋಟದಲ್ಲಿ ಇಂದು ಬೆಳಗ್ಗೆ ಹುಲಿ ಕಾಣಿಸಿಕೊಂಡು ಘರ್ಜಿಸುತ್ತಾ ಬೀಡುಬಿಟ್ಟಿತ್ತು. ಗ್ರಾಮಸ್ಥರು ಈ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದರು. ವಿಷಯ ತಿಳಿಯುತ್ತಿದ್ದಂತೆಯೇ ಬಂಡೀಪುರ ಹುಲಿ ರಕ್ಷಿತಾರಣ್ಯದ ಮದ್ದೂರು ವಲಯ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ, ಸಂಜೆಯ ಹೊತ್ತಿಗೆ ಸೆರೆ ಹಿಡಿದಿದ್ದಾರೆ. …
Read More »Yearly Archives: 2025
ಜೈನ ಧರ್ಮದ ಬೃಹತ್ ಸಿದ್ಧಚಕ್ರ ಮಹೋತ್ಸವಕ್ಕೆ ತೆರೆ
ಹಾವೇರಿ: ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ ನಡೆಯುತ್ತಿದ್ದ ಜೈನ ಧರ್ಮದ ಬೃಹತ್ ಸಿದ್ಧಚಕ್ರ ಮಹೋತ್ಸವಕ್ಕೆ ಭಾನುವಾರ (ಇಂದು) ತೆರೆ ಬಿದ್ದಿದೆ. ಸಿದ್ಧಚಕ್ರ ಮಹೋತ್ಸವದ ಸಮಾರೋಪ ಅಂಗವಾಗಿ ಧರ್ಮಯಾತ್ರೆ ನಡೆಸಲಾಯಿತು. ನಗರದ ರಜನಿ ಕಲ್ಯಾಣ ಮಂಟಪದಿಂದ ಆರಂಭವಾದ ಧರ್ಮಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಹೊಸಮನಿ ಸಿದ್ದಪ್ಪ ವೃತ್ತ, ಜೈನಬಸದಿ, ಮೇಲಿನಪೇಟೆ ಮಹಾತ್ಮಾಗಾಂಧಿ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು ಬೃಹತ್ ಸಿದ್ಧಚಕ್ರ ಮಹಾಮಂಡಲ ವಿಧಾನ ಮಹೋತ್ಸವದ ಧರ್ಮಯಾತ್ರೆಯಲ್ಲಿ ಆನೆ, ಕುದುರೆ, ರಥ, ಸಾರೋಟಗಳ …
Read More »ಚಿಕ್ಕೋಡಿ ಜಿಲ್ಲೆ ರಚನೆಗೆ ಬಹಳ ದಿನ ಹಿಡಿಯಲ್ಲ: ಸಚಿವ ಹೆಚ್.ಕೆ.ಪಾಟೀಲ್
ಚಿಕ್ಕೋಡಿ: “ಚಿಕ್ಕೋಡಿ ಜಿಲ್ಲಾ ರಚನೆಗೆ ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿಗಳೊಂದಿಗೆ ಸಭೆ ಮಾಡಿದ್ದಾರೆ. ಮುಂದಿನ ಹೆಜ್ಜೆಗಳನ್ನಿಡಲು ಬೇಗ ಪ್ರಕ್ರಿಯೆ ಆರಂಭವಾಗಬಹುದು” ಎಂದು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು. ಚಿಕ್ಕೋಡಿ ನ್ಯಾಯಾಲಯದ ನೂತನ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಈ ಕುರಿತಾಗಿ ಸಿಎಂ ಸಿದ್ದರಾಮಯ್ಯನವರು ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಸಭೆ ಮಾಡಿದ್ದಾರೆ. ಸಚಿವರೂ ಕೂಡ ಚಿಕ್ಕೋಡಿ, ಬೆಳಗಾವಿ, ಗೋಕಾಕ್ ಜನರೊಂದಿಗೆ ಸಭೆ ನಡೆಸಿದ್ದಾರೆ” ಎಂದರು. …
Read More »ಗೊಂದಲಕ್ಕೆ ಹೈಕಮಾಂಡ್ ಹೊಣೆಯಲ್ಲ, ಸ್ಥಳೀಯ ನಾಯಕರೇ ಬಗೆಹರಿಸಬೇಕು: ಖರ್ಗೆ
ಕಲಬುರಗಿ: ರಾಜ್ಯದಲ್ಲಿನ ನಾಯಕತ್ವ ಗೊಂದಲವನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕು. ಪ್ರತಿಯೊಂದಕ್ಕೂ ಹೈಕಮಾಂಡ್ ಹೆಸರನ್ನು ಎಳೆದು ತರುವುದು ಸರಿಯಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮುಖ್ಯಮಂತ್ರಿ ಹುದ್ದೆ ಕುರಿತ ಗೊಂದಲಗಳನ್ನು ಬಗೆಹರಿಸುವಂತೆ ಕಾಂಗ್ರೆಸ್ ಮುಖಂಡ ಸುದರ್ಶನ್ ಅವರು ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ಪತ್ರ ಇನ್ನೂ ನಮ್ಮ ಕೈ ಸೇರಿಲ್ಲ. ದೆಹಲಿಗೆ ಹೋದ ಬಳಿಕ ಪತ್ರದ ವಿಷಯ ತಿಳಿಯಲಿದೆ. ಯಾವ ಉದ್ದೇಶಕ್ಕೆ ಪತ್ರ ಬರೆದಿದ್ದಾರೆ, …
Read More »ಹಾನಗಲ್ನಲ್ಲಿ ನಡೆದಿದ್ದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ.
ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ, ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಮಹ್ಮಮದ್ ಸಾದಿಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ, ಶೋಯಿಬ್ ಮುಲ್ಲಾ ಹಾಗೂ ತೌಸಿಪ್ ಅಹ್ಮದ್ ಚೌಟಿ ಎಂಬವರು ಗಡಿಪಾರಾದವರು ಎಂದು ಗುರುತಿಸಲಾಗಿದೆ. ಗ್ಯಾಂಗ್ ರೇಪ್ ಆರೋಪಿಗಳನ್ನು ಗಡಿಪಾರು …
Read More »ನನ್ನ ಮತ್ತು ಸಿದ್ದರಾಮಯ್ಯನವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದ ಡಿಸಿಎಂ
ಬೆಂಗಳೂರು: “ನನಗೆ ಕಾಂಗ್ರೆಸ್ನ ಯಾವುದೇ ನಾಯಕರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ, “ಅವರಿಗೆ ಸಿಎಂ ಆಪ್ತರೇನು?. ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ?. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್ನವನು. …
Read More »ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ
ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ …
Read More »ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರ ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ: ನಮ್ಮನ್ನು ಯಾರಾದರೂ ದೆಹಲಿಗೆ ಕರೆದರೆ ನಾವು ಹೋಗುವುದಕ್ಕೆ ಸಿದ್ಧರಿದ್ದೇವೆ. ಆದರೆ ಯಾರಾದರೂ ಕರೆಯಬೇಕಲ್ಲವೇ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿಂದು ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸ ಮಾಡುತ್ತಿದ್ದಾರೆ, ತಾವೂ ಹೋಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮನ್ನು ಕರೆದರೆ ನಾವು ರೆಡಿ ಇದ್ದೇವೆ, ಯಾರಾದ್ರೂ ಕರೆಯಬೇಕಲ್ಲವೇ? ಎಂದು ಕೇಳಿದರು. ಇವತ್ತು ಚಿಕ್ಕೋಡಿ ನ್ಯಾಯಾಲಯದ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮವಿತ್ತು. …
Read More »ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಬೆಳಗಾವಿ: ರಾಜ್ಯದೆಲ್ಲೆಡೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕೆಯ ಅಭಿಯಾನಕ್ಕೆ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ …
Read More »ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 1.90 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಬೆಳಗಾವಿ: ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದ್ದು, ಇದಕ್ಕಾಗಿ 1.90 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ನಿಲಜಿ ಗ್ರಾಮದ ಶ್ರೀ ಮಹಾಲಕ್ಷ್ಮಿ …
Read More »
Laxmi News 24×7