ಬೆಂಗಳೂರು: 2023 ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್ನ ಈ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗೆದ್ದಾಗಲೆಲ್ಲ ಚೆನ್ನಾಗಿದೆ. ಗೆಲ್ಲದೇ ಇದ್ದಾಗ ಇವಿಎಂ ಎಂಬ ಧೋರಣೆಯು ಅತ್ಯಂತ ಹಳೆಯ …
Read More »Yearly Archives: 2025
ನಾಳೆ ಹಿಂದೂ ಮಹಾ ಮಂಡಳ ಗಣಪತಿ ಮೆರವಣಿಗೆ: ಶಿವಮೊಗ್ಗ ನಗರ ಕೇಸರಿಮಯ
ಶಿವಮೊಗ್ಗ : ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಶಿವಮೊಗ್ಗದ ಹಿಂದೂ ಮಹಾಮಂಡಲದ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯಲಿದೆ. ಗಣೇಶ ಚತುರ್ಥಿ ನಂತರ 11 ದಿನಕ್ಕೆ ಬರುವ ಅನಂತ ಚತುರ್ಥಿಯಂದು ಗಣೇಶನ ರಾಜಬೀದಿ ಉತ್ಸವ ನಡೆಯುವುದು ವಾಡಿಕೆ. ಇದರಿಂದಾಗಿ ನಾಳೆಯ ರಾಜಬೀದಿ ಉತ್ಸವಕ್ಕೆ ಹಿಂದೂ ಕೇಸರಿ ಅಲಂಕಾರ ಸಮಿತಿಯವರು ಶಿವಮೊಗ್ಗ ನಗರವನ್ನು ಸಂಪೂರ್ಣ ಕೇಸರಿಮಯ ಮಾಡಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯು 1 ಸಾವಿರ ಸಿಬ್ಬಂದಿಯನ್ನ ನಿಯೋಜಿಸಿದೆ. ಸಮುದ್ರ ಮಂಥನದ ಅಲಂಕಾರ : ಹಿಂದೂ ಕೇಸರಿ ಅಲಂಕಾರ …
Read More »ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸಂಬಂಧ ಸಿಎಂ ಕಾರಿನ ಮೇಲೆ ದಾಖಲಾದ ಪ್ರಕರಣ ಸಂಬಂಧ ದಂಡ ಪಾವತಿ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50 ರಷ್ಟು ದಂಡ ಪಾವತಿಗೆ ಸರ್ಕಾರ ರಿಯಾಯಿತಿ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುವಲ್ಲಿ ನಿರತರಾಗಿದ್ದಾರೆ. ಇದುವರೆಗೂ 40 ಕೋಟಿಗಿಂತ ಹೆಚ್ಚು ದಂಡ ಪಾವತಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ಕೂಡ ದಂಡ ಪಾವತಿಯಾಗಿದೆ. ಸಿಎಂ ಕಾರಿನ ಮೇಲೆ 7 ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೋವಾ-ಕ್ರಿಸ್ಟಾ ಕಾರು 2024ರಿಂದ ಈವರೆಗೂ ಏಳು ಸಂಚಾರ ನಿಯಮಗಳ ಉಲ್ಲಂಘಿಸಿವೆ. …
Read More »ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ
ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ನಗರದ ಲಕ್ಷ್ಮೀ ಟಾಕೀಸ್ ಎದುರು ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆಯನ್ನು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಸದಾನಂದ ಕಲಾಲ, ಮಾಲೀಕರಾದ ಮೋಹನ್ ಶೆಟ್ಟಿ, ರಮೇಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಅರುಣ ಶೆಟ್ಟಿ, ಜಾದವ್ ಹಾಗೂ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು
Read More »*ನಾಳೆ ವಿಜಯಪುರ ಜಿಲ್ಲೆಗೆ ನಾಡದೊರೆ: ಹಲವು ಸಮಸ್ಯೆಗಳಿಗೆ ನೀಡುವವರೇ ಪರಿಹಾರ?*
ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಬಾಗಿನ ಅರ್ಪಿಸಲಿದ್ದಾರೆ. ಈ ಮಧ್ಯೆ, ಹಲವಾರು ಸಂಘಟನೆಗಳು ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಲು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ. ಈ ಕುರಿತುವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ. ಇದರಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. …
Read More »ತಾಯಿ ಪಿಂಚಣಿ ಹಣಕ್ಕಾಗಿ ಸಹೋದರರ ಜಗಳ; ಅಣ್ಣನ ಕೊಲೆಯಲ್ಲಿ ಅಂತ್ಯ
ಚಿಕ್ಕಬಳ್ಳಾಪುರ: ವೃದ್ಧ ತಾಯಿಗೆ ಬರುತ್ತಿದ್ದ ಪಿಂಚಣಿ ಹಣ ಹಂಚಿಕೆ ವಿಚಾರಕ್ಕೆ ಮೂವರು ಸಹೋದರರ ನಡುವೆ ಜಗಳವಾಗಿದ್ದು, ವಿಕೋಪಕ್ಕೆ ತಿರುಗಿ ಅಣ್ಣನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ನರಸಿಂಹಮೂರ್ತಿ (45) ಕೊಲೆಯಾದ ಸಹೋದರ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊಲೆ ಆರೋಪಿಗಳಾದ ರಾಮಾಂಜಿ (39) ಮತ್ತು ಗಂಗಾಧರಪ್ಪ (39) ಎಂಬವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೌರಿಬಿದನೂರು ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಯಾದ …
Read More »ಮಳೆ ಅಬ್ಬರಕ್ಕೆ ನಲುಗಿದ ಅನ್ನದಾತ
ಹಾವೇರಿ: ಭಾರಿ ಮಳೆಯಿಂದ ಜಿಲ್ಲೆಯ ಹಲವೆಡೆ ಬೆಳೆಗಳೆಲ್ಲ ರೋಗಕ್ಕೆ ತುತ್ತಾಗಿದ್ದು, ಬೇಸತ್ತ ರೈತನೋರ್ವ ಹತ್ತಿ ಬೆಳೆಯನ್ನು ಟ್ರ್ಯಾಕ್ಟರ್ ರೂಟರ್ ಹೊಡೆದು ನಾಶ ಮಾಡಿದ್ದಾರೆ. ಈ ವರುಷ ಉತ್ತಮ ಮುಂಗಾರು ಪೂರ್ವ ಮಳೆ ಆಗಿರುವ ಹಿನ್ನೆಲೆಯಲ್ಲಿ, ರೈತರು ಹೆಚ್ಚಿನ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಬೆಳೆಗಳು ನಾಶವಾಗಿವೆ. ಗೋವಿನಜೋಳ, ಹತ್ತಿ, ಸೋಯಾಬಿನ್, ಶೇಂಗಾ ಬೆಳೆಗಳಿಗೆ ಹಲವು ರೋಗಗಳು ಕಾಣಿಸಿಕೊಂಡಿವೆ. ಕೆಂಪುರೋಗ, ಬೂದಿರೋಗ ಸೇರಿದಂತೆ ಹಲವು ರೋಗಗಳಿಂದ ಬೆಳೆಗಳು …
Read More »ಏರ್ಗನ್ನಿಂದ ಹಾರಿದ ಗುಂಡು: ಶಿರಸಿಯಲ್ಲಿ 9 ವರ್ಷದ ಬಾಲಕ ಸಾವು
ಶಿರಸಿ(ಉತ್ತರಕನ್ನಡ): ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕನ ಕೈಯ್ಯಿಂದ ಏರ್ಗನ್ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು (ಅಣ್ಣ, ತಮ್ಮ) ಆಟವಾಡುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ಬಾಲಕ ಸ್ಥಳದಲ್ಲೇ ಮೃತಪಟ್ಟಿದೆ. ಅಣ್ಣ ತಮ್ಮ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ …
Read More »ರಾಜ್ಯಾದ್ಯಂತ ಇಂದಿನಿಂದ ಮಳೆ ಅಬ್ಬರ
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಅಬ್ಬರ ಕಡಿಮೆಯಾದರೂ, ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ ಆಗಲಿರುವ ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, …
Read More »ಗಣೇಶ ವಿಸರ್ಜನೆಗೆ ಮೂರು ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ: ಕಮಿಷನರ್ ಭೂಷಣೆ ಬೋರಸೆ
ಬೆಳಗಾವಿ: ಗಣೇಶನ ವಿಸರ್ಜನೆಗೆ ಸೂಕ್ತ ಬಂದೋಬಸ್ತ್ ಒದಗಿಸಲು ಬೇರೆ ಜಿಲ್ಲೆಯಿಂದ 3 ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರು ತಿಳಿಸಿದರು. ತಮ್ಮ ಕಚೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದೆ ಶನಿವಾರ ನಡೆಯಲಿರುವ ಗಣೇಶನ ವಿಸರ್ಜನೆಯ ಭವ್ಯ ಮೆರವಣಿಗೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಗಣೇಶ ವಿಸರ್ಜನೆಗೆ ನಿಯಮಗಳನ್ನು ಪಾಲಿಸಿ ಶಾಂತಿಯುತವಾಗಿ ಸಹಕರಿಸಬೇಕೆಂದು ಎಂದು ಕರೆ ನೀಡಿದರು. ಗಣೇಶ ವಿಸರ್ಜನೆಗೆ …
Read More »
Laxmi News 24×7