Breaking News

Yearly Archives: 2025

ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿದ ತಾಯಿ! –

ಬಳ್ಳಾರಿ: ಕೌಟುಂಬಿಕ ಕಲಹದಿಂದ ಬೇಸತ್ತ ಕುರಿಗಾಹಿ ಕುಟುಂಬದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಸಿದ್ದವ್ವ (29) ತನ್ನ ಏಳು, ಐದು ಮತ್ತು ಮೂರು ವರ್ಷದ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ಜಮೀನೊಂದರ ಕೃಷಿ ಹೊಂಡದಲ್ಲಿ ಇವರೆಲ್ಲರ ಮೃತದೇಹ ಬುಧವಾರ ಪತ್ತೆಯಾಗಿವೆ. ಮತ್ತೊಂದು ಕುರಿ ಗುಂಪಿನಲ್ಲಿದ್ದ ಲಕ್ಷ್ಮೀಯ ಮಗ ಅಭಿಷೇಕ್ (9) ಬದುಕುಳಿದಿದ್ದಾನೆ. ಮಹಾರಾಷ್ಟ್ರದ …

Read More »

ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಕರೆ

ಮೈಸೂರು: ನಗರದ ಬನ್ನೂರು ರಸ್ತೆಯಲ್ಲಿನ ಜ್ಞಾನಸರೋವರ ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸತತ ಆರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ ಸ್ಥಳೀಯ ಪೊಲೀಸರು, ಬೆದರಿಕೆ ಸಂದೇಶ ಹುಸಿ ಎಂದು ಖಚಿತ ಪಡಿಸಿದ್ದಾರೆ. ಆದರೆ, ಬಾಂಬ್ ಬೆದರಿಕೆ ಸಂದೇಶದಿಂದ ಶಾಲಾ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಮಧ್ಯಾಹ್ನ ಶಾಲೆಯ ಇ-ಮೇಲ್​ ಐಡಿಗೆ ಕಿಡಿಗೇಡಿಯೊಬ್ಬ ಅಹಮದಬಾದ್‌ನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯ ಸಿಗದೇ ಇದ್ದರೆ …

Read More »

ಇಂಗ್ಲಿಷ್ ಕಾಲುವೆಯ 48.3 ಕಿ.ಮೀ ಈಜಿ ಸಾಧನೆ: ಇನ್ಸ್​ಪೆಕ್ಟರ್ ಮುರುಗೇಶ ಚನ್ನಣ್ಣವರ್ ತಂಡದಿಂದ ಮತ್ತೊಂದು ಮೈಲಿಗಲ್ಲು

ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್​​ಪೆಕ್ಟರ್​​ ಮುರುಗೇಶ ಚನ್ನಣ್ಣವರ್​ ಹಾಗೂ ಕೆಎಂಸಿಆರ್‌ಐ ಎಂಬಿಬಿಎಸ್ ವಿದ್ಯಾರ್ಥಿ ಅಮನ್ ಶಾನಭಾಗ್​ ಜತೆಗೂಡಿ ಲಂಡನ್‌ನಲ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಭಾರತದ 6 ಜನರ ತಂಡ ಇಂಗ್ಲೆಂಡ್ ಮತ್ತು ಫ್ರಾನ್ಸ್ ಮಧ್ಯದ ವಿಶ್ವದ ಅತಿ ಕ್ಲಿಷ್ಟಕರವಾದ ಇಂಗ್ಲಿಷ್ ಕಾಲುವೆ ಈಜುವ ಮೂಲಕ ಮೈಲಿಗಲ್ಲು ಸಾಧಿಸಿದ್ದಾರೆ. ಸಮುದ್ರದಲ್ಲಿ 13 ಡಿಗ್ರಿ ಸೆಲ್ಸಿಯಸ್ ತಂಪು ವಾತಾವರಣ. ಅತಿಯಾದ ಅಲೆಗಳ ನಡುವೆ 48.3 ಕಿ.ಮೀ. ಅನ್ನು 13.37 ಗಂಟೆಗಳಲ್ಲಿ ಈಜಿ …

Read More »

ಕಾರ್ಮಿಕರ ಕೆಲಸದ ಅವಧಿ 9 ರಿಂದ 10 ಗಂಟೆಗೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ಕಾರ್ಮಿಕರ ಕೆಲಸದ ಸಮಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ ಕೆಲಸದ ಅವಧಿ ದಿನಕ್ಕೆ 9 ಗಂಟೆ ಮೀರಬಾರದು ಮತ್ತು ಗರಿಷ್ಠ ಒಟಿ 10 ಗಂಟೆಗಳನ್ನು ಮೀರಬಾರದು ಎಂಬ ನಿಯಮವಿದೆ. ಈಗ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು …

Read More »

ಲೋಕಾಯುಕ್ತ ಹೆಸರಲ್ಲಿ ಹಣ ವಸೂಲಿ: ಹೆಡ್​ ಕಾನ್​ಸ್ಟೇಬಲ್​ ನಿಂಗಪ್ಪ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್​ ತಡೆ

ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಲೋಕಾಯುಕ್ತದ ಮಾಜಿ ಹೆಡ್‌ ಕಾನ್‌ಸ್ಟೆಬಲ್‌ ನಿಂಗಪ್ಪ ಸಾವಂತ್‌ ವಿರುದ್ಧದ ಪೊಲೀಸ್‌ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣ ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಕೋರಿ ಹೊಳಲ್ಕೆರೆ ತಾಲೂಕು ತಾಳಿಕಟ್ಟೆಯ ನಿಂಗಪ್ಪ ಸಾವಂತ್‌ (45) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌. ಆರ್‌. ಕೃಷ್ಣಕುಮಾರ್ ಅವರ ಈ ಆದೇಶ …

Read More »

ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಸಿಗುತ್ತೆ?

ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ  (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ ಪಿ.ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನದಿಂದ ಪರಿಹಾರ ಪಾವತಿಸಲು ಆದೇಶ ಹೊರಡಿಸಿದೆ. 1-4-2025ರಿಂದ …

Read More »

ಸಿಎಂ ಬದಲಾವಣೆ ಪ್ರಸ್ತಾಪ ಆಗೇ ಇಲ್ಲಾ : ಶಾಸಕ ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ : ಸಿಎಂ ಬದಲಾವಣೆ ಪ್ರಸ್ತಾಪ ಆಗೇ ಇಲ್ಲಾ : ಶಾಸಕ ಪ್ರಸಾದ ಅಬ್ಬಯ್ಯ ಸಿಎಂ ಬದಲಾವಣೆ ಪ್ರಸ್ತಾಪ ಆಗೇ ಇಲ್ಲಾ. ಸುಮ್ಮನೆ ಬೇರೆ ಬೇರೆಯವರು ಏನೇನೋ ಮಾತಾಡ್ತಾರೆ. ಏನೇ ಇದ್ರು ನಿರ್ಧಾರ ಹೈಕಮಾಂಡ್ ಗೆ ಬಿಟ್ಟಿದ್ದು ಸಚಿವ ಸಂಪುಟ ಪುನರ್ ರಚನೆ ಆದ್ರೆ ನಾವು ಕೂಡ ಸಚಿವ ಆಕಾಂಕ್ಷಿ ಇದ್ದೇನೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು ನಾನು ಮೂರು ಬಾರಿ ನನ್ನ ಕ್ಷೇತ್ರದ …

Read More »

ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ….

ಬೆಳಗಾವಿಯ ಪ್ರವೇಶ ದ್ವಾರದಂತಿರುವ ಗಾಂಧಿನಗರ ಅಸ್ವಚ್ಛತೆಯಿಂದಾಗಿ ಈಗ ‘ಗಂಧಗಿ’ ನಗರದಂತಾಗಿದೆ…. ಚರಂಡಿ ದುರಸ್ತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿರುವ ಹಳೆ ಗಾಂಧಿನಗರ, ದೀಪಕ ಗಲ್ಲಿ ಸುಭಾಷ ಗಲ್ಲಿ ನಿವಾಸಿಗಳು ಸ್ಮಾರ್ಟ್ ಸಿಟಿ ಎಂದು ಹೇಳುತ್ತಿರುವ ಬೆಳಗಾವಿಯ ವಿವಿಧ ಬಡಾವಣೆಗಳು ಸಮಸ್ಯೆಯ ಆಗರಗಳಾಗಿವೆ ಹಳೆ ಗಾಂಧಿನಗರ, ದೀಪಕ್ ಗಲ್ಲಿ, ಸುಭಾಷ್ ಗಲ್ಲಿಯ ಚರಂಡಿ, ರಸ್ತೆಗಳು ದುರಸ್ತಿಯಾಗದೆ ಕಸದ ರಾಶಿಯಿಂದ ಬೇಸತ್ತ ನಾಗರಿಕರು ಪಾಲಿಕೆಯ ನಿರ್ಲಕ್ಷಕ್ಕೆ ಹಿಡಿ ಶಾಪ …

Read More »

ಕೆಪಿಟಿಸಿಎಲ್​ನಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ: ಸಿಎಂ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿಯಿರುವ 35 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಸಿಎಂ, ನಿಗಮದಲ್ಲಿ ತೆರವಾಗಿರುವ 35 ಸಾವಿರ ಹುದ್ದೆಗಳನ್ನು ಹಂತ- ಹಂತವಾಗಿ ತುಂಬಲಾಗುವುದು.‌ ಜೊತೆಗೆ ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಖಾಯಂಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದರು. ನಮ್ಮದು ನುಡಿದಂತೆ …

Read More »

ಬಂಧನ ಭೀತಿಯಿಂದ ಪಾರಾಗಲು ನಿರೀಕ್ಷಣಾ ಜಾಮೀನಿಗೆ ಮೊರೆ ಹೋದ ಲೋಕಾಯುಕ್ತ ಐಪಿಎಸ್

ಬೆಂಗಳೂರು: ಭ್ರಷ್ಟರ ವಿರುದ್ಧ ಸಮರ ಸಾರಬೇಕಿದ್ದ ಲೋಕಾಯುಕ್ತ ಅಧಿಕಾರಿಗಳೇ ಭ್ರಷ್ಟರಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಅಬಕಾರಿ ಇಲಾಖೆಯ ಅಧಿಕಾರಿಗಳನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಹೆಡ್ ಕಾನ್ ಸ್ಟೇಬಲ್ ನಿಂಗಪ್ಪ ಜೊತೆ ಸಂಪರ್ಕದಲ್ಲಿದ್ದ ಲೋಕಾಯುಕ್ತ ಎಸ್ಪಿ-1 ಆಗಿದ್ದ ಶ್ರೀನಾಥ್ ಮಹದೇವನ್ ಜೋಷಿ ಅವರು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಲೋಕಾಯುಕ್ತ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಲೋಕಾಯುಕ್ತದಲ್ಲಿ ಲಂಚಾವತಾರ ಆರೋಪ ಭುಗಿಲೆದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ …

Read More »