ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50 ರಿಯಾಯಿತಿ: ಸರ್ಕಾರದ ಮಹತ್ವದ ಆದೇಶ! 21.11.2025 ರಿಂದ ದಿನಾಂಕ: 12.12.2025 ರವರೆಗೆ ಕಾಲಾವಕಾಶ ರಿಯಾಯಿತಿಯ ಲಾಭವನ್ನು ಪಡೆದುಕೊಳ್ಳುವಂತೆ ಆಗ್ರಹ ಸಾರ್ವಜನಿಕರಿಗೆ ಒಂದು ಮಹತ್ವದ ಸುದ್ದಿ ಇಲ್ಲಿದೆ. ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ (ಇ-ಚಲನ್) ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಲು ಕರ್ನಾಟಕ ಸರ್ಕಾರವು ಆದೇಶ ಹೊರಡಿಸಿದೆ. ಪೊಲೀಸ್ ಇಲಾಖೆಯ …
Read More »Yearly Archives: 2025
ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿ
ಕುಖ್ಯಾತ ಮನೆಗಳ್ಳರ ಬಂಧನ: ₹33 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಜಪ್ತಿ ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ, ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಶಹರದ ಲಕ್ಷ್ಮೀ ಬಡಾವಣೆಯ ಸಚೀನ ಆಶೋಕ ಗೊಂದಳಿ ಎಂಬುವರ ಮನೆಯ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಟೇಜರಿ ಬಾಗಿಲು ಒಡೆದು ಸುಮಾರು 330 …
Read More »₹2.70 ಲಕ್ಷ ಮೌಲ್ಯದ 4 ಬೈಕ್ಸ್ ಕಳವು !!! ಬೈಕ್ ಸಹಿತ ಒಬ್ಬ ಖತರ್ನಾಕ್ ಕಳ್ಳನ ಬಂಧನ
₹2.70 ಲಕ್ಷ ಮೌಲ್ಯದ 4 ಬೈಕ್ಸ್ ಕಳವು !!! ಬೈಕ್ ಸಹಿತ ಒಬ್ಬ ಖತರ್ನಾಕ್ ಕಳ್ಳನ ಬಂಧನ ಬೆಳಗಾವಿಯಲ್ಲಿ ಸರಣಿ ಮೋಟಾರ್ ಸೈಕಲ್ ಕಳ್ಳತನ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಭರ್ಜರಿ ಕಾರ್ಯಾಚರಣೆ ಒಟ್ಟು 4 ಮೋಟಾರ್ ಸೈಕಲ್‌ಗಳ ಜಪ್ತಿ ಇನ್ಸಪೆಕ್ಟರ್ ಹೊಳೆನ್ನವರ ನೇತೃತ್ವದಲ್ಲಿ ಯಶಸ್ವಿ ಕಾರ್ಯಾಚರಣೆ ಬೆಳಗಾವಿ ನಗರದಲ್ಲಿ ಇತ್ತೀಚೆಗೆ ಹೆಚ್ಚಾಗಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ, ಬೆಳಗಾವಿ ನಗರ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ, ಅಜಯ್ ಊರ್ಫ್ …
Read More »ಗ್ವಾಲಿಯರ್’ನಲ್ಲಿ ಬೆಳಗಾವಿಗೆ ಪ್ರತಿಭೆಗೆ ಗೌರವ ಬೆಳಗಾವಿಯ ಶ್ರದ್ಧಾ ಸೂರ್ಯವಂಶಿಗೆ ಚಿನ್ನ
ಗ್ವಾಲಿಯರ್’ನಲ್ಲಿ ಬೆಳಗಾವಿಗೆ ಪ್ರತಿಭೆಗೆ ಗೌರವ ಬೆಳಗಾವಿಯ ಶ್ರದ್ಧಾ ಸೂರ್ಯವಂಶಿಗೆ ಚಿನ್ನ ಗ್ವಾಲಿಯರ್’ನಲ್ಲಿ ಬೆಳಗಾವಿಗೆ ಪ್ರತಿಭೆಗೆ ಗೌರವ ಬೆಳಗಾವಿಯ ಶ್ರದ್ಧಾ ಸೂರ್ಯವಂಶಿಗೆ ಚಿನ್ನ ಸಿ.ಬಿ.ಎಸ್.ಇ ನ್ಯಾಷನಲ್ ಕರಾಟೆ ಚಾಂಪಿಯನ್ ಬೆಳಗಾವಿಯ ಅಂಗಡಿ ಕಾಲೇಜಿನ ವಿದ್ಯಾರ್ಥಿನಿ ಬೆಳಗಾವಿಯ ಅಂಗಡಿ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ, ಶ್ರದ್ಧಾ ಸೂರ್ಯವಂಶಿ, ಅವರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ CBSE ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 9ನೇ ತರಗತಿಯ ಚಾಂಪಿಯನ್ ಶ್ರದ್ಧಾ ಅವರು …
Read More »ದೇಣಿಗೆ ಕೊಡಿಸುವ ನೆಪದಲ್ಲಿ ವಂಚನೆ: ಎರಡು ದಿನದಲ್ಲೇ 2 ಕೋಟಿ ರೂ ಪಂಗನಾಮ
ಬಾಗಲಕೋಟೆ, ನವೆಂಬರ್ 20: ದೇಣಿಗೆ ಕೊಡಿಸುವ ನೆಪದಲ್ಲಿ ನಗರದ ಅದೊಂದು ಎನ್‌ಜಿಓಗೆ (NGO) ಕೊಟ್ಯಂತರ ರೂ ವಂಚಿಸಿರುವುದು ಬೆಳಿಕಿಗೆ ಬಂದಿದೆ. ಅಂತರರಾಜ್ಯ ವಂಚಕರಿಂದ ಕೇವಲ ಎರಡೇ ದಿನದಲ್ಲಿ ಬರೋಬ್ಬರಿ 2 ಕೋಟಿ ರೂ.ಗೂ ಅಧಿಕ ಹಣ ವಂಚಿಸಲಾಗಿದೆ (Fraud). ಸಿಎಸ್ಆರ್ ದೇಣಿಗೆ ಹೆಸರಲ್ಲಿ ವಂಚಿಸಲಾಗಿದೆ. ಸದ್ಯ ಬಾಗಲಕೋಟೆ ಸಿಇಎನ್ ಪೋಲಿಸ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆದಿದೆ. ಹಣ ನೆರವು ಕೋರಿದ್ದೇ ಮುಳುವಾಯ್ತಾ? ಬಾಗಲಕೋಟೆ ಜಿಲ್ಲೆಯ ಜಮಖಂಡಿ ಮೂಲದ ಜಯಭಾರತ ಮಾತೆ ನಗರ ಹಾಗೂ ಗ್ರಾಮೀಣ …
Read More »ಬೆಂಗಳೂರಲ್ಲಿ ವಾಹನ ಅಡ್ಡಗಟ್ಟಿ ₹7.11 ಕೋಟಿ ದರೋಡೆ ಪ್ರಕರಣ: ಆರೋಪಿಗಳು ಆಂಧ್ರಕ್ಕೆ ಪರಾರಿ ಶಂಕೆ; ಪತ್ತೆಗೆ ಇಂಚಿಂಚು ಶೋಧ
ಬೆಂಗಳೂರು : ನಗರದ ವಿವಿಧ ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಎಜೆನ್ಸಿಯ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ದರೋಡೆ ಮಾಡಿದ ಪ್ರಕರಣ ಸಂಬಂಧ ಆರೋಪಿಗಳ ಜಾಡು ಪತ್ತೆ ಹಚ್ಚಿ ಹೆಡೆಮುರಿಕಟ್ಟಲು ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. ಬುಧವಾರ (ನ.19) ಹಾಡಹಾಗಲೇ ಆರ್ಬಿಐ ಅಧಿಕಾರಿಗಳ ಸೋಗಿನಲ್ಲಿ ವಾಹನ ಅಡ್ಡಗಟ್ಟಿ ಮಹಾದರೋಡೆ ಮಾಡಿರುವ ಆರೋಪಿಗಳನ್ನು ಬಂಧಿಸಲು ಇಬ್ಬರು ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಸಿಸಿಟಿವಿ, ಟವರ್ …
Read More »ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶು ಮರಣ ಪ್ರಕರಣ: ಡಿಸಿ ಭೇಟಿ, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ
ಹಾವೇರಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಾರಿಡಾರ್ನಲ್ಲಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆಯಲಾರಂಭಿಸಿದೆ. ಮಹಿಳಾ ಯೋಗ, ರಾಜ್ಯ ಉಚ್ಚನ್ಯಾಯಾಲಯ ಮತ್ತು ಮಕ್ಕಳ ರಕ್ಷಣಾ ಘಟಕದ ದೂರಿನ ಮೇರೆಗೆ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ್ ದಾನಮ್ಮನವರ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರು. ಘಟನೆ ಕುರಿತಂತೆ ತನಿಖಾ ತಂಡ ರಚಿಸಲಾಗಿದ್ದು ತಂಡದ ಸದಸ್ಯರು ಸಿಸಿಟಿವಿ ದೃಶ್ಯಗಳನ್ನು ವೀಕ್ಷಣೆ ನಡೆಸಿದರು. ಒಂದು ಗಂಟೆ ಕಾಲ ಸಿಸಿಟಿವಿ …
Read More »ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರಕ್ಕೂ SIT ವರದಿ; ಬೆಳಗಾವಿ ಅಧಿವೇಶನದಲ್ಲಿ ತಿಳಿಸುತ್ತೇವೆ ಎಂದ ಜಿ.ಪರಮೇಶ್ವರ್
ಧರ್ಮಸ್ಥಳ ಪ್ರಕರಣದ ಬಗ್ಗೆ ಸರ್ಕಾರಕ್ಕೂ SIT ವರದಿ; ಬೆಳಗಾವಿ ಅಧಿವೇಶನದಲ್ಲಿ ತಿಳಿಸುತ್ತೇವೆ ಎಂದ ಜಿ.ಪರಮೇಶ್ವರ್ ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಸರ್ಕಾರಕ್ಕೂ ವಿಶೇಷ ತನಿಖಾ ತಂಡ (ಎಸ್ಐಟಿ) ವರದಿ ನೀಡಲಿದ್ದು, ಬೆಳಗಾವಿ ಅಧಿವೇಶನದಲ್ಲಿ ಅದರಲ್ಲಿನ ಅಂಶಗಳನ್ನು ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ. ಅದರಲ್ಲಿ ಏನಿದೆ, ಸತ್ಯ ಏನು ಎಲ್ಲವೂ ಗೊತ್ತಾಗುತ್ತದೆ. …
Read More »ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು.
ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ …
Read More »ಬಿಎಂಟಿಸಿ ಬಸ್ನಿಂದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ
ಬೆಂಗಳೂರು: ರಾಜಧಾನಿಯಲ್ಲಿ ಬಿಎಂಟಿಸಿ ಬಸ್ಗಳಿಂದ ಆಗುತ್ತಿರುವ ಅವಾಂತರ ಮುಂದುವರೆದಿದ್ದು, ಇಂದು ನಗರದ ಎರಡು ಪ್ರತ್ಯೇಕ ಕಡೆಗಳಲ್ಲಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ 1: ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್ ಆತನ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ವೆಂಕಟರಾಮಯ್ಯ (63) ಸಾವನ್ನಪ್ಪಿದ ವೃದ್ಧ. ಬೊಮ್ಮನಹಳ್ಳಿ ರೂಪೇನಾ ಅಗ್ರಹಾರ …
Read More »
Laxmi News 24×7