Breaking News

Yearly Archives: 2025

ದೇವಾಲಯ ಸುತ್ತ 200 ಮೀಟರ್ ಮಾಂಸಾಹಾರ ಸೇವನೆ ನಿಷೇಧ: ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

ಬೆಂಗಳೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದ ಹೊನ್ನೇಶ್ವರಸ್ವಾಮಿ ದೇವಸ್ಥಾನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧಿಸಿ ಪೊಲೀಸರು ಹೊರಡಿಸಿರುವ ನೋಟಿಸ್ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ಸಂಬಂಧ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ದೇವಸ್ಥಾನದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧಿಸಿ ಬಡವನಹಳ್ಳಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು 2024ರ ಜುಲೈ 13ರಂದು ಹೊರಡಿಸಿರುವ ನೋಟಿಸ್ ಪ್ರಶ್ನಿಸಿ ಹೊನ್ನೇಶ್ವರಸ್ವಾಮಿ ದೇವಸ್ಥಾನ …

Read More »

ಅಕ್ರಮ ಬೆಟ್ಟಿಂಗ್​​ ಪ್ರಕರಣ: ಶಾಸಕ ಕೆ. ಸಿ. ವೀರೇಂದ್ರ ಇ.ಡಿ. ಕಸ್ಟಡಿ ಅವಧಿ ಸೆ.8ರ ವರೆಗೆ ವಿಸ್ತರಣೆ

ಬೆಂಗಳೂರು: ಆನ್​ಲೈನ್ ಹಾಗೂ ಆಫ್​ಲೈನ್ ಮುಖಾಂತರ ಅಕ್ರಮವಾಗಿ ಬೆಟ್ಟಿಂಗ್ ನಡೆಸಿದ ಆರೋಪದಡಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ. ಸಿ. ವೀರೇಂದ್ರ (ಪಪ್ಪಿ) ಅವರ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೆ ಹಾಜರುಪಡಿಸಲಾಯಿತು. ಇದಕ್ಕೂ ಮುನ್ನ ಆರೋಪಿಯನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಬಳಿಕ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯವು ವೀರೇಂದ್ರ ಅವರನ್ನು …

Read More »

ರಾಯಬಾಗ : ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಹೋಗಿ ಚನ್ನಾಗಿ ಓದಲಿ ಎಂಬುದು ತಂದೆ ತಾಯಿ ಕನಸು ಆಗಿರುತ್ತೆ

ರಾಯಬಾಗ : ನಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಹೋಗಿ ಚನ್ನಾಗಿ ಓದಲಿ ಎಂಬುದು ತಂದೆ ತಾಯಿ ಕನಸು ಆಗಿರುತ್ತೆ.. ಆದರೆ ರಾಯಬಾಗ ತಾಲೂಕಿನ ಹಾರೂಗೇರಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಎರಡು ಜನ ಶಾಲಾ ಮಕ್ಕಳನ್ನು ಸತತವಾಗಿ ಎರಡು ಗಂಟೆಗಳ ಕಾಲ ಗುಂಡಿ ಆಗಿಯುವ ಕೆಲಸ ಮಾಡಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ… ಸತತವಾಗಿ ಎರಡು ಗಂಟೆಗಳ ಕಾಲ ಶಾಲಾ ಮಕ್ಕಳ ಕೈಯಲ್ಲಿ ಆಯುಧಗಳನ್ನು …

Read More »

ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ನಾಡಹಬ್ಬ ದಸರಾ ಉತ್ಸವಕ್ಕೆ ಆಹ್ವಾನ

ಇಂದು ಬೆಂಗಳೂರಿನಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ನಾಡಹಬ್ಬ ದಸರಾ ಉತ್ಸವಕ್ಕೆ ಆಹ್ವಾನ ನೀಡಿ ಸಚಿವ ಸತೀಶ ಜಾರಕಿಹೊಳಿಯವರನ್ನು ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಆರ್.ಬಿ. ತಿಮ್ಮಾಪುರ ಹಾಗೂ ಶ್ರೀ ಭೈರತಿ ಸುರೇಶ್ ಅವರು ಜೊತೆಗಿದ್ದರು.

Read More »

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ.

ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭ ; ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರಿಂದ ಭೂಮಿ ಪೂಜೆ. ಗೋಕಾಕ : ಮಾರ್ಕಂಡೇಯ ನಗರದ ಶ್ರೀ ಹನುಮಾನ ಮತ್ತು ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಸಭಾ ಭವನ ಕಟ್ಟಡದ ಭೂಮಿ ಪೂಜೆಯನ್ನು ಎಪಿಎಂಸಿ ಸದಸ್ಯ ಬಸವರಾಜ ಸಾಯನ್ನವರ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಸಭೆ ಸದಸ್ಯರಾದ ಶ್ರೀಮತಿ ವನಶ್ರೀ ಸಾಯನ್ನವರ, ಮಾಜಿ ನಗರ …

Read More »

ನಾಡಹಬ್ಬ ದಸರಾ 2025ಗೆ ಸಿದ್ಧತೆ ಆರಂಭ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಧಿಕೃತ ಆಹ್ವಾನ

ನಾಡಹಬ್ಬ ದಸರಾ 2025ಗೆ ಸಿದ್ಧತೆ ಆರಂಭ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅಧಿಕೃತ ಆಹ್ವಾನನಾಡಹಬ್ಬ ದಸರಾ 2025ಗೆ ಸಿದ್ಧತೆ ಆರಂಭಮುಖ್ಯಮಂತ್ರಿಸಿದ್ದರಾಮಯ್ಯರಿಗೆ ಅಧಿಕೃತ ಆಹ್ವಾನಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪನೇತೃತ್ವಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಇಂದು ಮೈಸೂರು ಜಿಲ್ಲಾಡಳಿತದೊಂದಿಗೆ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಾಡಹಬ್ಬ ದಸರಾ-2025 ರ ಆಹ್ವಾನ ಪತ್ರಿಕೆ ನೀಡಿದರು. ಈ ಸಂದರ್ಭ ರಾಜ್ಯ ಸರ್ಕಾರದ ಮುಖ್ಯ …

Read More »

ಮುಡಾ: ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಅಕ್ರಮವಾಗಿ ನಿವೇಶನ ಪಡೆದ ಆರೋಪ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕ ಸದಸ್ಯ ಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಇಂದು ಮುಂದೂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಕ್ಷೇಪಾರ್ಹ ಜಮೀನಿನ ಮೂಲ ಮಾಲೀಕ ಜೆ.ದೇವರಾಜು ಎಂಬವರು ಸಲ್ಲಿಸಿರುವ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು …

Read More »

ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಶಿಫಾರಸು

ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂಗೆ ಕ್ಲೀನ್ ಚಿಟ್, ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಮಾಧ್ಯಮಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್ ಅವರು, ಸ್ಥಳೀಯ …

Read More »

ದಸರಾ ಮಹೋತ್ಸವದ ಮುನ್ನುಡಿಯ ಸಡಗರಕ್ಕೆ ಸಿದ್ಧತೆ

ಮೈಸೂರು : ದಸರಾ ಮಹೋತ್ಸವಕ್ಕೂ ಮುನ್ನ ನಡೆಯುವ ‘ಯುವ ಸಂಭ್ರಮ’ದ ಸಾಂಸ್ಕೃತಿಕ ರಂಗು ಸೆ.10 ರಿಂದ 17ರ ವರೆಗೆ ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯಲಿದೆ. ಈ ಬಾರಿ 14 ವಿಶಿಷ್ಟ ವಸ್ತುವಿಷಯಗಳಡಿ (ಥೀಮ್) ರಾಜ್ಯದ ವಿವಿಧ ಕಾಲೇಜಿನ ಸುಮಾರು 400-500 ತಂಡಗಳು ಭಾಗವಹಿಸಲಿವೆ. ಯುವ ಸಂಭ್ರಮವನ್ನು ಯುವ ರಾಜ್ ಕುಮಾರ್ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮದ ಶೀರ್ಷಿಕೆ ಗೀತೆಯನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿದ್ದಾರೆ. ದಸರಾ ಮಹೋತ್ಸವದ ಆರಂಭಕ್ಕೂ …

Read More »

ಜಿಎಸ್​ಟಿ ದರ ಇಳಿಕೆಯಿಂದ ಜನರಿಗೆ ಅನುಕೂಲ, ರಾಜ್ಯಗಳಿಗೆ ನಷ್ಟ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್​ಟಿ ವ್ಯವಸ್ಥೆ ಜಾರಿಗೆ ತಂದು ಜನರಿಗೆ ಸಾಕಷ್ಟು ಹೊರೆ ಮಾಡಿದ್ದರು. ಬಡವರು, ಮಧ್ಯಮವರ್ಗದ ಮೇಲೆ ಹೊಡೆತ ಬಿದ್ದಿತ್ತು. ರಾಜ್ಯದಿಂದ 4.5 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹವಾಗಿ ಕೇಂದ್ರ ಸರ್ಕಾರಕ್ಕೆ ಹೋಗುತ್ತಿತ್ತು. ಅಲ್ಲಿಂದ ನಮಗೆ ತೀರಾ ಕಡಿಮೆ ವಾಪಸ್​ ಬರುತ್ತಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಇಲ್ಲಿ ಸುದ್ದಿಗಾರರೊಂದಿ​​​​​ಗೆ ಮಾತನಾಡಿದ ಅವರು, ಜಿಎಸ್​​ಟಿ ಸ್ತರ, ದರ ಇಳಿಕೆಯ ಬಳಿಕ ಕರ್ನಾಟಕಕ್ಕೆ 15 ಸಾವಿರ ಕೋಟಿ ಕೊರತೆಯಾಗುವುದು. ಇದನ್ನು …

Read More »