Breaking News

Yearly Archives: 2025

ಅಂತಾರಾಜ್ಯ ಕಳ್ಳರಿಬ್ಬರ ಬಂಧನ

ಕೋಲಾರ: ಒಂಟಿ‌ ಮಹಿಳೆಯಿದ್ದ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮಾಲೂರು ತಾಲೂಕಿನ ಪೊಲೀಸರು ಬಂಧಿಸಿದ್ದಾರೆ. 40 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಬಂಧಿತರಿಂದ ವಶಕ್ಕೆ ಪಡೆಯಲಾಗಿದೆ. ಪಶ್ಚಿಮ ಬಂಗಾಳ ಮೂಲದ ಹುಸ್ದರ್ ಶೇಖ್ (24) ಹಾಗೂ ತಮಿಳುನಾಡು ಮೂಲದ ಉಮಾಶಂಕರ್ (27) ಬಂಧಿತ ಆರೋಪಿಗಳು. ಪ್ರಕರಣದ ವಿವರ: ಇದೇ ನವೆಂಬರ್ 4 ರಂದು ಮಾಲೂರು ತಾಲೂಕಿನ ಚಿಕ್ಕತಿರುಪತಿ ಗ್ರಾಮದ ದಿ ಎಂಪೈರಿಯನ್ ಅಪಾರ್ಟ್​ಮೆಂಟ್​ನಲ್ಲಿ ಪ್ರೀತ್ ಕಮಲ್ ಎಂಬ ಮಹಿಳೆ‌ಯಿದ್ದು, …

Read More »

31 ಕೃಷ್ಣಮೃಗಗಳು ಸತ್ತಿದ್ದು ಗಳಲೆ ರೋಗದಿಂದ,

ಬೆಳಗಾವಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಗಳಲೆ ರೋಗ(Hemorrhagic Septicemia) ಎಂಬ ಬ್ಯಾಕ್ಟೀರಿಯಾ ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಈ ಸೋಂಕು ಸಸ್ಯಾಹಾರಿ ಪ್ರಾಣಿಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತಿ ಸ್ಪಷ್ಟಪಡಿಸಿದರು. ಬುಧವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ಮಾಹಿತಿ ನೀಡಿದ ಅವರು, ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಮೃತ ಕೃಷ್ಣಮೃಗಗಳ ಅಂಗಾಂಗಳ ಮಾದರಿಯನ್ನು ಪರೀಕ್ಷೆಗೆ ರವಾನಿಸಲಾಗಿತ್ತು. …

Read More »

ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್‌.ಸಿ/ಎಸ್‌.ಟಿ ಗುತ್ತಿಗೆದಾರರಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತುಸಭೆ

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್‌.ಸಿ/ಎಸ್‌.ಟಿ ಗುತ್ತಿಗೆದಾರರ   ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು   ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.

Read More »

ಕೋರ್ಟ್‌ ಕಲಾಪದ ವೇಳೆ ಮಹಿಳೆ ಮೇಲೆ ಹಲ್ಲೆ, ಆರೋಪಿ ಬಂಧನ

ಚಿಕ್ಕೋಡಿ: ಕಲಾಪಕ್ಕೆ ಬಂದಿದ್ದ ಮಹಿಳೆಯ ಮೇಲೆ ವ್ಯಕ್ತಿಯೊಬ್ಬ ಕೋರ್ಟ್​ ಕಲಾಪದ ವೇಳೆಯೇ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಅಥಣಿ ನ್ಯಾಯಾಲಯದಲ್ಲಿ ಜರುಗಿದೆ. ಮಂಗಳವಾರ ಈ ಘಟನೆ ನಡೆದಿದ್ದು ಇಂದು ಬೆಳಕಿಗೆ ಬಂದಿದೆ. ಮೀನಾಕ್ಷಿ ರಾಮಚಂದ್ರ ಶಿಂಧೆ (50) ಹಲ್ಲೆಗೊಳಗಾದ ಮಹಿಳೆ. ಬಾಬಾಸಾಹೇಬ್ ಚೌಹಾಣ್ ಹಲ್ಲೆ ಮಾಡಿದ ಆರೋಪಿ. ಘಟನೆಯಲ್ಲಿ ಮಹಿಳೆಯು ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಆಕೆಯನ್ನು ಅಥಣಿ ಸಮುದಾಯದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಅಥಣಿ …

Read More »

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅವರು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಉಡುಪಿ: “ಯಕ್ಷಗಾನದೊಳಗಡೆ ಹೋಮೊಸೆಕ್ಸ್ ಬೆಳೆಯುತ್ತದೆ ಮತ್ತು ಯಕ್ಷಗಾನದಲ್ಲಿ ಅದು ಅನಿವಾರ್ಯ. ಸ್ತ್ರೀ ವೇಷಧಾರಿಗಳಿಗೆ ಅಲ್ಲಿ ಹೆಚ್ಚು ಒತ್ತಡ ಇರುತ್ತದೆ. ಸ್ತ್ರೀ ವೇಷ ಕಲಾವಿದ ಅದನ್ನು ನಿರಾಕರಿಸಿದರೆ ಮರುದಿವಸ ಭಾಗವತರು ಅವನಿಗೆ ಹೆಚ್ಚು ಪದ್ಯ ಕೊಡುವುದಿಲ್ಲ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ್ ಬಿಳಿಮಲೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಉಡುಪಿಯಲ್ಲಿಂದು ಯಕ್ಷಗಾನ ಅಕಾಡೆಮಿ ರಾಜ್ಯಾದ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದ …

Read More »

ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ ಮಾದರಿ ಕಲಾಪ ವೀಕ್ಷಣೆ: ಸ್ಪೀಕರ್ ಯು.ಟಿ. ಖಾದರ್

ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ 30 ವಿದ್ಯಾರ್ಥಿಗಳಿಗೆ 10 ದಿನ ಪೂರ್ತಿ ಕಾರ್ಯ ಕಲಾಪ ವೀಕ್ಷಣೆಗೆ ಅವಕಾಶ ನೀಡಲಾಗುವುದು. ಇದು ಇಂಟರ್ನಶಿಪ್ ರೀತಿ ಇರಲಿದೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು. ಡಿ.8ರಿಂದ 19ರ ವರೆಗೆ ಬೆಳಗಾವಿಯಲ್ಲಿ 10 ದಿನ ಅಧಿವೇಶನ‌ ಹಿನ್ನೆಲೆಯಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಸಂಸದೀಯ ವ್ಯವಸ್ಥೆಯ ಕುರಿತು ಅರಿವು ಮೂಡಿಸಲು …

Read More »

ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಹೊಸ ಇತಿಹಾಸ ಸೃಷ್ಟಿಸಲಿದೆ ನವೆಂಬರ್ 28ರ ಕಾರ್ಯಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಪೂರ್ವ ಭಾವಿ ಸಭೆ ಕಾಂಗ್ರೆಸ್ ಸರ್ಕಾರ ಅಂದರೆ ಗ್ಯಾರಂಟಿ ಸರ್ಕಾರ ರಾಮನಗರ : ಕರ್ನಾಟಕದಲ್ಲಿ ಅಂಗನವಾಡಿ ಆರಂಭಗೊಂಡು‌ 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನವೆಂಬರ್ 28ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುವುದು. ಇದೊಂದು …

Read More »

ಏಕತಾ ನಡಿಗೆ ಅಭಿಯಾನಕ್ಕೆ ಜಗದೀಶ್ ಶೆಟ್ಟರ್ ಚಾಲನೆ

ಏಕತಾ ನಡಿಗೆ ಅಭಿಯಾನಕ್ಕೆ ಜಗದೀಶ್ ಶೆಟ್ಟರ್ ಚಾಲನೆ ಉಕ್ಕಿನ ಮನುಷ್ಯ ಪಟೇಲ್‌ಗೆ ಗೌರವ ಸಮರ್ಪಣೆ ಬೆಳಗಾವಿಗರಿಂದ ಉತ್ತಮ ಪ್ರತಿಕ್ರಿಯೆ ಹಲವರು ಏಕತಾ ನಡಿಗೆಯಲ್ಲಿ ಭಾಗಿ ಬೆಳಗಾವಿ: ಭಾರತದ ಉಕ್ಕಿನ ಮನುಷ್ಯ, ಸರದಾರ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ ಬೆಳಗಾವಿಯಲ್ಲಿ ಇಂದು ‘ಏಕತಾ ನಡಿಗೆ ಅಭಿಯಾನ’**ವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕೇಂದ್ರ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ಈ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಅಭಿಯಾನಕ್ಕೆ ಮಾಜಿ …

Read More »

ಬೆಳಗಾವಿಯ ಸಾಯಿರಾಜ್ ಟ್ರೋಫಿಗೆ ಶಾಸಕ ಅಭಯ್ ಪಾಟೀಲ್ ಚಾಲನೆ

ಬೆಳಗಾವಿಯ ಸಾಯಿರಾಜ್ ಟ್ರೋಫಿಗೆ ಶಾಸಕ ಅಭಯ್ ಪಾಟೀಲ್ ಚಾಲನೆ ಸಾಯಿರಾಜ್ ಟ್ರೋಫಿಗೆ ಇಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಇಂದು ವಿಧ್ಯುಕ್ತವಾಗಿ ಚಾಲನೆ ನೀಡಿದರು. ಬೆಳಗಾವಿ ನಗರದ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಪ್ರತಿಷ್ಠಿತ ಕ್ರಿಕೆಟ್ ಸಾಯಿರಾಜ್ ಟ್ರೋಫಿಗೆ ಇಂದು ದಕ್ಷಿಣ ಶಾಸಕ ಅಭಯ್ ಪಾಟೀಲ್ ಅವರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಹಾಪೌರ ಮಂಗೇಶ್ ಪವಾರ್, ಉಪಮಹಾಪೌರ ವಾಣಿ ಜೋಷಿ ಸೇರಿದಂತೆ ಇನ್ನುಳಿದ ಗಣ್ಯರು …

Read More »

ಖಾನಾಪೂರ ತಹಶೀಲ್ದಾರರಾಗಿ ಮಂಜುಳಾ ಕೆ. ನಾಯಕ್ ನೇಮಕ ; ದುಂಡಪ್ಪ ಕೋಮಾರ್ ವರ್ಗಾವಣೆ

ಖಾನಾಪೂರ :- ಖಾನಾಪೂರ ತಾಲೂಕಿನಲ್ಲಿ ಆಡಳಿತಾತ್ಮಕ ಬದಲಾವಣೆ ಸಂಭವಿಸಿದ್ದು, ತಾಲೂಕಿನ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ವರ್ಗಾಯಿಸಲಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಮಯ್ಯ ಅವರು ಈ ಸಂಬಂಧ ಆದೇಶಗಳನ್ನು ಹೊರಡಿಸಿದ್ದು, ಅವರ ಸ್ಥಾನಕ್ಕೆ ಶ್ರೀಮತಿ ಮಂಜುಳಾ ಕೆ. ನಾಯಕ್ ಅವರನ್ನು ಖಾನಾಪೂರದ ಹೊಸ ತಹಶೀಲ್ದಾರರಾಗಿ ನೇಮಕ ಮಾಡಲಾಗಿದೆ. ಈ ಕ್ರಮಕ್ಕೆ ಕಾರಣವಾದದ್ದು ಒಂದು ಕೃಷಿ ಸಂಬಂಧಿತ ಪ್ರಕರಣ. ಆ ಸಂಬಂಧಿತ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯವು ಸರ್ವೇ ಕಾರ್ಯವನ್ನು ನಡೆಸುವಂತೆ ಸ್ಪಷ್ಟ ಆದೇಶ …

Read More »