Breaking News

Yearly Archives: 2025

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಕುರಿತು ವಾಗ್ದಾಳಿ

ಮೈಸೂರು : ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಕ್ಕೆ ಬಂದಾಗಿನಿಂದ ಕೇಂದ್ರದ ಜೊತೆ ಸಂಘರ್ಷದ ಹಾದಿ ತುಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದರು. ನೀತಿ ಆಯೋಗದ ಸಭೆಗೆ ಸಿಎಂ ಹಾಗೂ ಸಂಬಂಧಿಸಿದವರು ಗೈರಾಗಿದ್ದ ವಿಚಾರವಾಗಿ ಭಾನುವಾರ ಮಾಧ್ಯಮಗಳಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದರು. ಸಭೆಗೆ ಗೈರಾಗಿದ್ದ ಬಗ್ಗೆ ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು. ಸಭೆಗೆ ಗೈರಾಗುವ ಮೂಲಕ ರಾಜ್ಯದ ಜನತೆಗೆ ಅನ್ಯಾಯ ಮಾಡುತ್ತಿದ್ದಾರೆ. ತಮಿಳುನಾಡು ಸಿಎಂ …

Read More »

ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಯುವಕ-ಯುವತಿಯರನ್ನು ವಶಕ್ಕೆ ಪಡೆದ ಪೊಲೀಸರು

ದೇವನಹಳ್ಳಿ(ಬೆಂಗಳೂರು ಗ್ರಾ.): ಇಲ್ಲಿನ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಇಂದು ಬೆಳಗ್ಗೆ ದಾಳಿ ಮಾಡಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶಾನ್ಯ ವಲಯ ಡಿಸಿಪಿ ವಿ.ಜೆ.ಸಜೀತ್ ಅವರು ಪ್ರತಿಕ್ರಿಯೆ ನೀಡಿದ್ದು, “NDPS ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ದೇವನಹಳ್ಳಿಯ ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ …

Read More »

ನನಗೆ ಮೈಸೂರು ಸ್ಯಾಂಡಲ್​ ಸೋಪ್​ ರಾಯಭಾರಿಯಾಗುವ ಆಸೆ ಇಲ್ಲ: ಯದುವೀರ್

ಮೈಸೂರು:‌ ಮೈಸೂರು ಸ್ಯಾಂಡಲ್ ಸೋಪಿಗೆ ನನಗೆ ವೈಯಕ್ತಿಕವಾಗಿ ರಾಯಭಾರಿಯಾಗುವ ಆಸೆ ಇಲ್ಲ ಎಂದು ರಾಜವಂಶಸ್ಥರು, ಬಿಜೆಪಿ ಸಂಸದರೂ ಆಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟಪಡಿಸಿದರು. “ಮೈಸೂರು ಸ್ಯಾಂಡಲ್ ಸೋಪಿಗೆ ಸೂಕ್ತ ರಾಯಭಾರಿ ಎಂದರೆ ನಮ್ಮ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಬ್ರ್ಯಾಂಡೂ ನಮ್ದೇ ಬ್ರ್ಯಾಂಡು ಅಂಬಾಸಿಡರು ನಮ್ಮವ್ರೇ ‘ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಚಾರವಾಗಿ, ನಗರದ ಖಾಸಗಿ ಹೋಟೆಲ್​ನಲ್ಲಿಂದು ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು”ರಾಜಮನೆತನ ಕಮರ್ಷಿಯಲ್ ಆಗಿ …

Read More »

ಮಂಜುನಾಥ ರಾವ್​ ನಿವಾಸಕ್ಕೆ ಅಸ್ಸೋಂ ಸಚಿವ ಭೇಟಿ, ₹5 ಲಕ್ಷ ಪರಿಹಾರ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ನಿವಾಸಕ್ಕೆ ಭಾನುವಾರ ಅಸ್ಸೋಂನ ಸಚಿವ ಬಿಮಲ್ ಬೋರಾಹ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಂಗಳೂರಿನಿಂದ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಬಿಮಲ್ ಬೋರಾಹ್, ವಿಜಯನಗರದ ಮಂಜುನಾಥ ರಾವ್ ಅವರ ಮನೆಗೆ ಭೇಟಿ ನೀಡಿ, ಮಂಜುನಾಥ ರಾವ್ ಆವರ ಫೋಟೋಗೆ ಪುಷ್ಪ ನಮನ ಸಲ್ಲಿಸಿದರು. ನಂತರ ರಾವ್ ಅವರ ತಾಯಿ ಸುಮತಿ, ಪತ್ನಿ ಪಲ್ಲವಿ ಹಾಗೂ ಮಗ ಅಭಿರಾಮ್ ಅವರಿಗೆ …

Read More »

ಯತ್ನಾಳ್ ಕಾಟವನ್ನೇ ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗ್ತಾ ಇಲ್ಲ:ಜಮೀರ್ ಅಹ್ಮದ್

ದಾವಣಗೆರೆ: ಬಿಜೆಪಿಯವರಿಗೆ ಯತ್ನಾಳ್ ಕಾಟವನ್ನೇ ಸಹಿಸಿಕೊಳ್ಳಲು ಆಗ್ತಾ ಇಲ್ಲ, ನಮ್ಮ ಪಕ್ಷದ ವಿಚಾರ ಏನಕ್ಕೆ ಬೇಕು? ಮೊದಲು ಯತ್ನಾಳ್ ವಿಚಾರವನ್ನು ಸರಿಪಡಿಸಿಕೊಳ್ಳಿ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಬಿಜೆಪಿ ನಾಯಕರ ವಿರುದ್ದ ಗರಂ ಆದರು. ದಾವಣಗೆರೆಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತಮನ್ನಾ ಭಾಟಿಯಾ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಟಿ ತಮನ್ನಾ ಭಾಟಿಯಾ ಆಯ್ಕೆ ವಿಚಾರಕ್ಕೆ ಬೇಸರ ವ್ಯಕ್ತಪಡಿಸಿದರು. “ನಮ್ಮ ರಾಜ್ಯದಲ್ಲಿ ನಟಿಯರು ತುಂಬಾ …

Read More »

18 ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್; ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಾಪಸ್​​ ಪಡೆಯಲು ತೀರ್ಮಾನಿಸಲಾಗಿದೆ. ಕಳೆದ ಅಧಿವೇಶನದಲ್ಲಿ ಸದನದಿಂದ ಅಮಾನತ್ತಾದ 18 ಶಾಸಕರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದ್ದು, ಎರಡು ತಿಂಗಳ ನಂತರ ಅಮಾನತು ಆದೇಶ ವಾಪಸ್ ಪಡೆಯಲಾಗಿದೆ. ಭಾನುವಾರ ಸಂಜೆ ವಿಧಾನಸೌಧದಲ್ಲಿ ಸ್ಪೀಕರ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಹೆಚ್​.ಕೆ.ಪಾಟೀಲ್, ಸಭಾಪತಿ ರುದ್ರಪ್ಪ ಲಮಾಣಿ, ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರು …

Read More »

ಮುಂಗಾರು ಮೊದಲೇ ತುಂಬಿದ ತುಂಗೆ

ಶಿವಮೊಗ್ಗ: ಮುಂಗಾರುಪೂರ್ವ ಮಳೆಗೆ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, 5 ಕ್ರಸ್ಟ್ ಗೇಟುಗಳ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಅಣೆಕಟ್ಟಾಗಿದೆ. ಅಣೆಕಟ್ಟೆಗೆ 7,500 ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್​ಗಳ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಆಗ ಡ್ಯಾಂನಿಂದ ಇನ್ನಷ್ಟು ನೀರು ನದಿಗೆ ಬಿಡುವ …

Read More »

ಶಾಲೆ ಪುನಾರಂಭದಲ್ಲೇಕೊರೊನಾ ಕಂಟಕ: ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು, ಮೇ 25: ರಾಜ್ಯದಲ್ಲಿ ಕೊರೊನಾ (Karnataka Covid) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಹುಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೊನಾ (Coronavirus) ಸೋಂಕಿತ ವೃದ್ಧರೊಬ್ಬರು ಶನಿವಾರ (ಮೇ.24) ಬೆಂಗಳೂರಿನಲ್ಲಿ ಮೃತಪಟ್ಟಿದ್ದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಮತ್ತು ರಾಜಾಜಿನಗರದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಮುಂದಿನ ವಾರ ಮೇ.29ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನಾರಂಭವಾಗುತ್ತವೆ. ಮಕ್ಕಳನ್ನು ಶಾಲೆಗೆ ಕಳುಹಿಸುವುದು ಹೇಗೆ ಅಂತ ಪೋಷಕರು ಆತಂಕಗೊಂಡಿದ್ದಾರೆ. ಮಕ್ಕಳಿಗೆ ಮಾಸ್ಕ್ …

Read More »

ಪ್ರೀತಿಸಿ ಮದುವೆಯಾಗಿ ಹಣ, ಚಿನ್ನಾಭರಣ ಪಡೆದು ಪರಾರಿ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಗರ್ಭಿಣಿ

ಬೆಂಗಳೂರು: ಪ್ರೀತಿಸಿ ಮದುವೆಯಾದವನು ಸಂಸಾರಕ್ಕೆ ಹೊಸ ಮನೆ ಮಾಡುವುದಾಗಿ ಹಣ ಚಿನ್ನ ಪಡೆದುಕೊಂಡು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹೇಮಂತ್​​ ಎಂಬಾತನ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೂರೇ ತಿಂಗಳಿಗೆ ತನ್ನನ್ನು ತೊರೆದು ಪರಾರಿಯಾದ ಪತಿಗಾಗಿ ಸಂತ್ರಸ್ತ ಮಹಿಳೆ ಬೆಂಗಳೂರು ಪಶ್ಚಿಮ ವಿಭಾಗದ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಕುಣಿಗಲ್​ ಮೂಲದ ಸಂತ್ರಸ್ತೆ, ಬೆಂಗಳೂರಿನಲ್ಲಿ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ಹೇಮಂತ್‌ನ ಪರಿಚಯವಾಗುತ್ತದೆ. ಇಬ್ಬರು ಪರಸ್ಪರ ಪ್ರೀತಿಸಿ ಕಳೆದ ಫೆಬ್ರವರಿಯಲ್ಲಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದರು. …

Read More »

ಪ್ರೀತಿಸದಿದ್ದರೆ ಮುಖಕ್ಕೆ ಆ್ಯಸಿಡ್ ಎರಚುವ ಬೆದರಿಕೆ ಆರೋಪ: ಹುಬ್ಬಳ್ಳಿಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ: ನಗರದ ಕಾಲೇಜೊಂದರಲ್ಲಿ ಡಿಪ್ಲೋಮಾ ಓದುತ್ತಿದ್ದ ವಿದ್ಯಾರ್ಥಿನಿಗೆ ಯುವಕನೊಬ್ಬ ಪ್ರೀತಿಸದಿದ್ದರೆ ಮುಖಕ್ಕೆ ಆ್ಯಸಿಡ್​ ಎರಚುವುದಾಗಿ ಬೆದರಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ. ವಿನೋದರಾಜ್‌ ಎಂಬಾತನ ವಿರುದ್ಧ ವಿದ್ಯಾರ್ಥಿನಿಯ ಪಾಲಕರು ದೂರು ನೀಡಿದ್ದಾರೆ. ಮೂರು–ನಾಲ್ಕು ವರ್ಷಗಳಿಂದ ವಿನೋದರಾಜ ಜೊತೆ ವಿದ್ಯಾರ್ಥಿನಿಗೆ ಸ್ನೇಹವಿತ್ತು. ಕೆಲ ತಿಂಗಳಿನಿಂದ ಅವನ ವರ್ತನೆಯಲ್ಲಿ ಬದಲಾವಣೆ ಕಂಡು ಬಂದ ಕಾರಣ, ಅವನ ಮೊಬೈಲ್​ ನಂಬರ್​ನ್ನು ಬ್ಲಾಕ್​​ ಮಾಡಿದ್ದಳು. ಇದರಿಂದ ಕೋಪಗೊಂಡ ವಿನೋದರಾಜ್​​ “ನಿನ್ನನ್ನು ಪ್ರೀತಿಸುತ್ತಿದ್ದೇನೆ. …

Read More »