Breaking News

Yearly Archives: 2025

ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆ

ಕೃಷ್ಣಾ ನದಿಗೆ 4 ಅಡಿಯಷ್ಟು ನೀರು ಏರಿಕೆ ಚಿಕ್ಕೋಡಿ:ಬಿಸಿಲಿನ ಧಗೆ ಹಾಗೂ ನೀರಿನ ಕೊರತೆಯಿಂದಾಗಿ ಬೇಸತ್ತಿದ್ದ ಗಡಿಭಾಗದ ಜನತೆಗೆ ಕೃತ್ತಿಕಾ ಮಳೆ ಕೈ ಹಿಡಿದಿದೆ. ನೆರೆಯ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಮತ್ತು ಸಾತಾರಾ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ 4 ಅಡಿಯಷ್ಟು ನೀರಿನ ಮಟ್ಟ ದಿಢೀರ್ ಏರಿಕೆಯಾಗಿದೆ. ಬರಿದಾಗಿದ್ದ ಕೃಷ್ಣಾ ಮತ್ತು ಉಪ ನದಿಗಳಿಗೆ ಜೀವಕಳೆ …

Read More »

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ

ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮರುಮೌಲ್ಯಮಾಪನ… 624 ಅಂಕಗಳು ಬಂದ ಹಿನ್ನೆಲೆ ಕುಂದಾನಗರಿಯ ಕುವರಿಯ ಹರ್ಷ ಇಷ್ಟವಾದುದ್ದನ್ನೇ ಆಯ್ಕೆ ಮಾಡಿಕೊಂಡು ಸಾಧನೆ ಮಾಡುವಂತೆ ಕರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬರೆದ್ದಿದ್ದಕ್ಕಿಂತ ಕಡಿಮೆ ಅಂಕಗಳು ಬಂದ ಹಿನ್ನೆಲೆ ಮತ್ತೇ ಮರು ಮೌಲ್ಯಮಾಪನಕ್ಕೆ ಹಾಕಿ 624 ಅಂಕ ಪಡೆದ ಬೆಳಗಾವಿಯ ವಿದ್ಯಾರ್ಥಿನಿ ಸಂತಸವನ್ನು ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳಿಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅವಕಾಶವಿದೆ. ಬೇರೆಯವರು ಹೇಳಿದ್ದನ್ನು ಆಯ್ಕೆ ಮಾಡಿಕೊಳ್ಳುವ ಬದಲೂ ತಮಗೆ ಇಷ್ಟವಾದುದ್ದನ್ನು ಆಯ್ಕೆ ಮಾಡಿಕೊಂಡು ಸಾಧನೆ ಮಾಡಬೇಕೆಂದು ಕರೆ …

Read More »

ಅತ್ಯಾಚಾರ ಆರೋಪ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಪೊಲೀಸ್ ವಶಕ್ಕೆ

ಬೆಂಗಳೂರು : ಸಹನಟಿ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಪೊಲೀಸರು, ಈ ಸಂಬಂಧ ಕಾಮಿಡಿ ಕಿಲಾಡಿ ರಿಯಾಲಿಟಿ ಶೋ ಖ್ಯಾತಿಯ ಮಡೆನೂರು ಮನು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 33 ವರ್ಷದ ಸಹ ನಟಿ ನೀಡಿದ ದೂರಿನ ಮೇರೆಗೆ ಹಾಸನದ ಶಾಂತಿಗ್ರಾಮದಲ್ಲಿ ಆರೋಪಿ ಮನು ಅವರನ್ನು ವಶಕ್ಕೆ ಪಡೆದು ಕರೆತರಲಾಗುತ್ತಿದೆ. ವಿಚಾರಣೆ ಮುಕ್ತಾಯದ ಬಳಿಕ ಕಾನೂನು ಪ್ರಕ್ರಿಯೆಗಳ ಬಗ್ಗೆ ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಹಾಸ್ಯ ನಟನಾಗಿ ಖ್ಯಾತಿ …

Read More »

ತಂಗಿ ಮದುವೆಯ ಖರ್ಚಿಗಾಗಿ ಪಬ್​ಗೆ ನುಗ್ಗಿ 50 ಸಾವಿರ ಹಣವನ್ನು ದೋಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಸುಬ್ರಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಾಮಿಟ್ರಿ ಬ್ರಿವರಿ ಅಂಡ್ ಕಿಚನ್ ಪಬ್​ಗೆ ನುಗ್ಗಿ 50 ಸಾವಿರ ರೂಪಾಯಿ ಕಳ್ಳತನ ಮಾಡಿ, ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ. ತಂಗಿ ಮದುವೆಗಾಗಿ ಹಣ ಹೊಂದಿಸಲು ಕಳ್ಳತನ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ಧಾರೆ. ಪಬ್​ನ ಭದ್ರತಾ ಸಿಬ್ಬಂದಿ ವಿನಯ್ ಕುಮಾರ್ ನೀಡಿದ ದೂರು ಆಧರಿಸಿ ಒಡಿಶಾ ಮೂಲದ ದಿಲೀಪ್ ಕುಮಾರ್ (29) ಎಂಬುವನನ್ನು ಬಂಧಿಸಿ 6 ಸಾವಿರ ನಗದು, …

Read More »

ರೈಲ್ವೆ ನಿಲ್ದಾಣ ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ (

ಗದಗ: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ 2025-26ರಲ್ಲಿ 7,600 ಕೋಟಿ ರೂ.‌ ಅನುದಾನ ಒದಗಿಸಿದ್ದಾರೆ.‌ ಕಳೆದೊಂದು ದಶಕದಲ್ಲಿ ಪ್ರತಿ ವರ್ಷ ಕರ್ನಾಟಕಕ್ಕೆ 7 ಸಾವಿರ ಕೋಟಿ ರೂ.ಗೂ ಹೆಚ್ಚು ಅನುದಾನ ಒದಗಿಸಿದ್ದು, ಸದ್ಯ 51 ಸಾವಿರ ಕೋಟಿ ರೂ.‌ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಗುರುವಾರ ಅಮೃತ ಭಾರತ್ ರೈಲ್ವೆ ಸ್ಟೇಷನ್ ಯೋಜನೆಯಡಿ 23.24 ಕೋಟಿ ರೂ. ವೆಚ್ಚದಲ್ಲಿ ಪುನರಾಭಿವೃದ್ಧಿ ಕಂಡ ಗದಗ …

Read More »

ಬೆಳಗಾವಿ ಜಿಲ್ಲೆಯ ಒಟ್ಟು 15 ಕಡೆಗಳಲ್ಲಿ ಸ್ಕೈ ವಾಕ್​ ನಿರ್ಮಾಣ ಮಾಡಲು ಮುಂದಾದ ಪಾಲಿಕೆ

ಬೆಳಗಾವಿ: ದಿನದಿಂದ ದಿನಕ್ಕೆ ರಾಜ್ಯದ ಎರಡನೇ ರಾಜಧಾನಿ ಬೆಳಗಾವಿ ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿ ಮಹಾನಗರದಲ್ಲಿ ಸಂಚಾರ ದಟ್ಟಣೆ ಕೂಡ ಹೆಚ್ಚುತ್ತಿದೆ. ಹಾಗಾಗಿ, ಸಂಚಾರ ದಟ್ಟಣೆ ನಿಯಂತ್ರಿಸಲು ಮತ್ತು ರಸ್ತೆ ದಾಟಲು ಪಾದಚಾರಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಪ್ರಥಮ ಬಾರಿಗೆ ಮಹಾನಗರ ಪಾಲಿಕೆಯು ಖಾಸಗಿ ಸಹಭಾಗಿತ್ವದಲ್ಲಿ ಸ್ಕೈ ವಾಕ್ ನಿರ್ಮಾಣಕ್ಕೆ ಮುಂದಾಗಿದೆ. ಹೌದು, ನಗರದಲ್ಲಿ ಪಾದಚಾರಿ ಮಾರ್ಗಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಹಾಗಾಗಿ, ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸಬೇಕಾದ ಪರಿಸ್ಥಿತಿ …

Read More »

ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಕುರಿತ ಚರ್ಚೆ ಅಪೂರ್ಣವಾಗಿದೆ: ಹೆಚ್.ಕೆ.ಪಾಟೀಲ್

ಬೆಂಗಳೂರು: “ಜಾತಿಗಣತಿ ಬಗ್ಗೆ ಚರ್ಚೆ ಅಪೂರ್ಣವಾಗಿದೆ. ಬಹುತೇಕ ಸಚಿವರು ಲಿಖಿತ ಅಭಿಪ್ರಾಯ ನೀಡಿದ್ದಾರೆ. ಕೆಲವರು ಕೊಡಬೇಕಿದೆ. ಈ ಬಗ್ಗೆ ಚರ್ಚೆಯಾದ ಮೇಲೆ ತೀರ್ಮಾನ ಮಾಡುತ್ತೇವೆ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಇಂದು ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, “ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024ರಲ್ಲಿ ಮಾಡಿರುವ ಶಿಫಾರಸುಗಳ …

Read More »

ಮಳೆ ಬಂದ್ರೆ ಕೆರೆಯಂತಾಗುವ ಹೆಚ್‌ಬಿಆರ್ ಲೇಔಟ್‌

ಬೆಂಗಳೂರು: ಪ್ರತಿ ಬಾರಿಯೂ ಮಳೆ ಅಬ್ಬರಿಸಿದಾಗ ನಗರದ ಹೆಚ್‌ಬಿಆರ್ ಲೇಔಟ್‌ನ ಹಲವಾರು ಪ್ರದೇಶಗಳು ಪ್ರವಾಹ ವಲಯಗಳಂತೆ ಮಾರ್ಪಡುತ್ತವೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಸಂದರ್ಭದಲ್ಲೂ ಇದು ಭಿನ್ನವಾಗಿರಲಿಲ್ಲ. ಧಾರಾಕಾರ ವರ್ಷಧಾರೆಗೆ ಚರಂಡಿಗಳು ತುಂಬಿ ಹರಿದಿದ್ದು, ಬೀದಿಗಳು ಜಲಾವೃತವಾಗಿದ್ದವು. ಮನೆಗಳಿಗೆ ನೀರು ನುಗ್ಗಿದ್ದರಿಂದ ಬಿಬಿಎಂಪಿ ಹಾಗೂ ಗುತ್ತಿಗೆದಾರರ ಪುನರಾವರ್ತಿತ ನಿರ್ಲಕ್ಷ್ಯ ಮತ್ತು ಕಳಪೆ ಕಾಮಗಾರಿಯ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕಿದರು. ಇಲ್ಲಿನ ಮೂರನೇ ಬ್ಲಾಕ್ ಮಾಟೇಕರ್ ಬೀದಿ, ಫಾರೆಸ್ಟ್ ಪಾರ್ಕ್ ಬಳಿಯ 4ನೇ …

Read More »

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ:ಬಾಲಚಂದ್ರ ಜಾರಕಿಹೊಳಿ

ಅರಭಾವಿ – ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಉಂಟಾಗುತ್ತಿದ್ದು, ಅರಭಾವಿ ಪಟ್ಟಣದ ಅಭಿವೃದ್ಧಿಗಾಗಿ ನಗರೋತ್ಥಾನ ಯೋಜನೆಯಡಿ ಅನುದಾನ ತರಲು ಪ್ರಯತ್ನ ಮಾಡುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಈಚೆಗೆ ಪ.ಜಾ / ಪ.ಪಂ. ಮತ್ತು ಇತರೆ ಬಡ ಜನಾಂಗದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ತನ್ನ ಪಂಚ ಭಾಗ್ಯಗಳಿಗೆ ಅನುದಾನ ನೀಡುತ್ತಿರುವುದರಿಂದ ನಮ್ಮ ಕ್ಷೇತ್ರದ …

Read More »

ಯಾರೇ ತಿಪ್ಪರಲಾಗ ಹಾಕಿದರು ಗೋಕಾಕ ಜಿಲ್ಲೆ ಆಗೇ ಆಗುತ್ತದೆ:ಈರಣ್ಣ ಕಡಾಡಿ

ಘಟಪ್ರಭಾ: ಯಾರೇ ತಿಪ್ಪರಲಾಗ ಹಾಕಿದರು ಮುಂದೊAದು ದಿನ ಗೋಕಾಕ ಜಿಲ್ಲೆ ಆಗೇ ಆಗುತ್ತದೆ ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಗುರುವಾರ ಮೇ 22 ರಂದು ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ …

Read More »