Breaking News

Yearly Archives: 2025

ಬೆಳಗಾವಿ ಹೊರ ವಲಯದ ರೆಸಾರ್ಟ್ ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಬಾಲಕಿಯನ್ನು ಪುಸಲಾಯಿಸಿ, ಬೆಳಗಾವಿ ಹೊರವಲಯದ ರೆಸಾರ್ಟ್ ಗೆ ಕರೆದೊಯ್ದ ಮೂವರು ಬಾಲಕರು, ಪಾರ್ಟಿ ಮಾಡಿದ ಬಳಿಕ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಮೇ 6ರಂದು ನಡೆದ ಘಟನೆ ಇದು. ಮೇ 12ರಂದು ಸೋಮವಾರ ಬಾಲಕಿಯ ಪೋಷಕರು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು …

Read More »

ತಗ್ಗು ಪ್ರದೇಶಗಳಲ್ಲಿ ಬೇಸ್​ಮೆಂಟ್​ ನಿರ್ಮಿಸಲು ಅವಕಾಶವಿಲ್ಲ: ಸಿಎಂ

ತಗ್ಗು ಪ್ರದೇಶಗಳಲ್ಲಿ ಬೇಸ್​ಮೆಂಟ್​ ನಿರ್ಮಿಸಲು ಅವಕಾಶವಿಲ್ಲ: ಸಿಎಂ ಬೆಂಗಳೂರು: ತಗ್ಗು ಪ್ರದೇಶದಲ್ಲಿ ಬೇಸ್​ಮೆಂಟ್​ ನಿರ್ಮಾಣ ಮಾಡಲು ಅವಕಾಶ ನೀಡದಂತೆ ಬಿಬಿಎಂಪಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬುಧವಾರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಕಾವೇರಿ ನಿವಾಸದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಲೋ ಲೈಯಿಂಗ್ ಪ್ರದೇಶದಲ್ಲಿ ಇನ್ನು ಮುಂದೆ ಬೇಸ್​ಮೆಂಟ್ ಮಾಡಲು ಅವಕಾಶ ಇರುವುದಿಲ್ಲ. ಅಲ್ಲಿ ಸ್ಟಿಲ್ಟ್ ಫ್ಲೋರ್ ಮಾಡಲು ಅವಕಾಶ ನೀಡಲಾಗುತ್ತದೆ. ಬೇಸ್ ಮೆಂಟ್​ಗೆ …

Read More »

ರಾಜ್ಯದಲ್ಲಿ ಹೆಚ್ಚುತ್ತಿವೆ ಚಿಕೂನ್​ಗುನ್ಯಾ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಚಿಕೂನ್​ಗುನ್ಯಾ ಹಾಗೂ, ಡೆಂಗ್ಯೂ ಸೋಂಕಿನ ಪ್ರಕರಣಗಳು ಏರಿಕೆ ಕಂಡಿದ್ದು ಇದು ಸೋಂಕಿನ ನಿಯಂತ್ರಣ ವೈಫಲ್ಯವೂ ಸಾರ್ವಜನಿಕರಿಗೆ ಆರೋಗ್ಯ ಸವಾಲಿನ ಬೆದರಿಕೆ ಒಡ್ಡುತ್ತಿದೆ. ರಾಜ್ಯದಲ್ಲಿ ಚಿಕೂನ್​ಗುನ್ಯಾ ಹೆಚ್ಚಳವಾಗಿರುವ ಕುರಿತು ಎನ್​ವಿಬಿಡಿಎಸ್​ಪಿ ಅಂಕಿ ಅಂಶ ಬಿಡುಗಡೆ ಮಾಡಿದ್ದು, ಮಾಹಿತಿ ಇಲ್ಲಿದೆ. 2018ರಿಂದ 2025ರ ವರೆಗೆ ರಾಜ್ಯದಲ್ಲಿನ ಚಿಕೂನ್​ಗುನ್ಯಾ​ ಪ್ರಕರಣಗಳು ವರ್ಷ ಶಂಕಿತ ಚಿಕೂನ್​ಗುನ್ಯಾ ಪ್ರಕರಣ ದೃಢ ಚಿಕೂನ್​ಗುನ್ಯಾ ಪ್ರಕರಣ 2018 20411 2546 2019 43698 3664 2020 16111 1326 …

Read More »

ಸೂಟ್​ಕೇಸ್​ನಲ್ಲಿ ಯುವತಿ ಶವ

ಆನೇಕಲ್ (ಬೆಂಗಳೂರು): ತಾಲೂಕಿನ ಚಂದಾಪುರದ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ರೈಲ್ವೆ ಬ್ರಿಡ್ಜ್ ಸಮೀಪ ನೀಲಿ ಬಣ್ಣದ ಸೂಟ್ ಕೇಸ್ ಕಂಡಿದ್ದು, ಪರಿಶೀಲನೆ ವೇಳೆ ಸಾರ್ವಜನಿಕರು ಶಾಕ್ ಆಗಿದ್ದಾರೆ. ಹೊಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 18 ವರ್ಷ ವಯಸ್ಸಿನ ಯುವತಿ ಶವ ಸೂಟ್ ಕೇಸ್ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ದೊರೆತಿದೆ. ಯುವತಿ ಗುಲಾಬಿ ಬಣ್ಣದ ಟಾಪ್ ಮತ್ತು ಕಪ್ಪು ಬಣ್ಣದ …

Read More »

ಧಾರವಾಡದಲ್ಲಿ ಪೂರ್ವ ಮುಂಗಾರು ಮಳೆ: ಅಧಿಕಾರಿ, ಸಿಬ್ಬಂದಿ ಕೇಂದ್ರ ಸ್ಥಾನ ಬಿಡದಂತೆ ಡಿಸಿ ಆದೇಶ

ಧಾರವಾಡ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿರಬೇಕೆಂದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ. ಮಳೆಯಿಂದ ಹಾನಿಗೊಳಗಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಲು ಕ್ರಮವಹಿಸಬೇಕು.‌ ಆದ್ದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅಧೀನದಲ್ಲಿ ಕಾರ್ಯ …

Read More »

ಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರ:ಬಾಲಚಂದ್ರ ಜಾರಕಿಹೊಳಿ

ಮೂಡಲಗಿ – ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಅನುಕೂಲವಾಗಲು ಡಯಾಲಿಸಿಸ್ ಕೇಂದ್ರದ ಸದ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.   ಮಂಗಳವಾರದಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭಿಸಲಾದ ಎರಡು ಹಾಸಿಗೆಯ ಸಾಮರ್ಥ್ಯದ ಹೊಸ ಡಯಾಲಿಸಿಸ್ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಬಡ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು. ಪ್ರತಿ ತಾಲ್ಲೂಕಿಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ …

Read More »

ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಎದುರಾಗಿದೆ: ಡಿ.ಕೆ. ಶಿ

ಬೆಂಗಳೂರು: ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಮಳೆ ಅನಾಹುತ ಸಮಸ್ಯೆ ಎದುರಾಗಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆರೋಪಿಸಿದರು. ಬುಧವಾರ ನಗರ ಪ್ರದಕ್ಷಿಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಯಾವುದೇ ಕೆಲಸ ಮಾಡಿಲ್ಲ ಎಂಬುದಕ್ಕೆ ಸಾಕ್ಷಿ. ಕಾಂಗ್ರೆಸ್ ಶಾಸಕರು ಕಾಮಗಾರಿಗಳನ್ನು ಬೇಗ ಮುಗಿಸಿ ತಮ್ಮ ಕ್ಷೇತ್ರಗಳಲ್ಲಿನ ಸಮಸ್ಯೆ ಬಗೆಹರಿಸಿದ್ದಾರೆ. ಎಲ್ಲೆಲ್ಲಿ ಬಿಜೆಪಿ ಶಾಸಕರಿದ್ದಾರೋ ಆ ಪ್ರದೇಶಗಳಲ್ಲಿ ಮಾತ್ರ ಇಂತಹ ಸಮಸ್ಯೆ ಎದುರಾಗಿದೆ ಎಂದರು. ಮಳೆಯಿಂದ …

Read More »

ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ರೋಹಿತ್ ಶರ್ಮಾ

ಇತ್ತೀಚೆಗೆ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ರೋಹಿತ್ ಶರ್ಮಾ (Rohit Sharma) ಇನ್ನು ಮುಂದೆ ಏಕದಿನ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಪ್ರಸ್ತುತ ಐಪಿಎಲ್‌ನಲ್ಲಿ (IPL 2025) ಮುಂಬೈ ಇಂಡಿಯನ್ಸ್ ಪರ ಕಳೆದ ಕೆಲವು ಪಂದ್ಯಗಳಿಂದ ಸ್ಥಿರ ಪ್ರದರ್ಶನ ನೀಡುತ್ತಿರುವ ರೋಹಿತ್ ಶರ್ಮಾ ಈ ಬಾರಿಯ ಐಪಿಎಲ್ ಮುಗಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರೋಹಿತ್ ಕಳೆದ ಐದು ವರ್ಷಗಳಿಂದ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಐಪಿಎಲ್ ನಂತರ …

Read More »

ಸದ್ಯದಲ್ಲೇ ರಾಮ ಮಂದಿರ ನಿರ್ಮಾಣ ಪೂರ್ಣ; ಜೂನ್ 5ರಂದು ರಾಮ ದರ್ಬಾರ್ ಪ್ರಾಣ ಪ್ರತಿಷ್ಠೆ

ಅಯೋಧ್ಯೆ, ಮೇ 21: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮ ಮಂದಿರದ (Ram Temple) ನಿರ್ಮಾಣ ಕಾರ್ಯ ಜೂನ್ 5ರೊಳಗೆ ಪೂರ್ಣಗೊಳ್ಳಲಿದ್ದು, ಜೂನ್ 3ರಿಂದ ಪ್ರಾರಂಭವಾಗುವ ಸಮಾರಂಭದಲ್ಲಿ ‘ರಾಮ ದರ್ಬಾರ್’ನ ಪವಿತ್ರೀಕರಣ ನಡೆಯಲಿದೆ ಎಂದು ಶ್ರೀ ರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ. ರಾಮ ದರ್ಬಾರ್‌ನ ‘ಪ್ರಾಣ ಪ್ರತಿಷ್ಠೆ’ ಜೂನ್ 3ರಿಂದ 5ರವರೆಗೆ ನಡೆಯಲಿದೆ. ಜೂನ್ 5ರಂದು ನಡೆಯಲಿರುವ ಪವಿತ್ರೀಕರಣ ಸಮಾರಂಭಕ್ಕೆ ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಆಹ್ವಾನಿಸಲಾಗುವುದು ಎಂದು ಮಿಶ್ರಾ …

Read More »

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ

ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್​ ಅವರು ನೂತನ …

Read More »