Breaking News

Yearly Archives: 2025

ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಹಕ್ಕು ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಹಕ್ಕು ಪತ್ರ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೊಸಪೇಟೆ (ವಿಜಯನಗರ): ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಹಾಗೂ ಸಮರ್ಪಣೆ ಸಂಕಲ್ಪ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ …

Read More »

ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಮಹತ್ವದ ಕುರಿತು ವಿಚಾರ ಸಂಕಿರಣ

ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಮಹತ್ವದ ಕುರಿತು ವಿಚಾರ ಸಂಕಿರಣ ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಹೈಪ್ರೆಶರ್ ಬಾಯ್ಲರ ನಿರ್ವಹಣೆ ಮತ್ತು ಬಳಕೆಯ ಕುರಿತು ತಾಂತ್ರಿಕ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿತ್ತು. ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ನಿರ್ದೇಶಕರಾದ ರಾಜಗೋಪಾಲ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.. ಪುಣೆಯ ಥಮ್ರ್ಯಾಕ್ಸ ಬಾಯ್ಲರ್ ತಾಂತ್ರಿಕ ತಂತ್ರಜ್ಞರಾದ ಆರ್. ಅನಿಲ ರೆಡ್ಡಿ, ಮೀಟಕಾನ ಕಂಪನಿಯ ಮಾಜಿ ತಾಂತ್ರಿಕ ನಿರ್ದೇಶಕರಾದ ಶ್ರೀರಂಗ ಶಿರಾಳ್ಕರ, ಗೋಪಿಚಂದ್ರ ಗೌಡ, ಸಿ.ಬಿ. …

Read More »

ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ. ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ

ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎರಡು ವರ್ಷಗಳ ಜನಪರ ಸಾಧನೆಯ ಸಮರ್ಪಣೆ. ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆ ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುತ್ತಿದೆ; ಸಂಸದ ರಾಹುಲ್ ಗಾಂಧಿ ಬಿಜೆಪಿ ಶ್ರೀಮಂತರ ಜೇಬು ತುಂಬುವ ಕೆಲಸ ಮಾಡುತ್ತಿದೆ…ಕಾಂಗ್ರೆಸ್ ಗ್ಯಾರಂಟಿಗಳ ಮೂಲಕ ಸಾಮಾನ್ಯ ಜನರ ಜೇಬು ತುಂಬುವ ಕೆಲಸ ಮಾಡುತ್ತಿದೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ …

Read More »

ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ: ಮೇ 21-23ವರೆಗೆ ಆರೆಂಜ್, ರೆಡ್ ಅಲರ್ಟ್ ಘೋಷಣೆ

ಮಂಗಳೂರು: ನಗರದಲ್ಲಿ ಸೋಮವಾರ ರಾತ್ರಿಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇಂದೂ ಕೂಡ ಮಳೆ ಮುಂದುವರಿದಿದೆ. ಮಂಗಳೂರು ನಗರ ಸೇರಿದಂತೆ ಮೂಡುಬಿದಿರೆ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಭಾಗಗಳಲ್ಲಿ ಹೆಚ್ಚಿನ ಮಳೆ ಸುರಿದಿದೆ. ಸೋಮವಾರ ಬೆಳಗ್ಗಿನಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಅಲ್ಲಲ್ಲ ಚದುರಿದಂತೆ ಮಳೆ ಸುರಿದಿತ್ತು. ಕ್ಷಣ ಕಾಲ ಮಳೆ ಬಂದು ಬಳಿಕ ಬಿಸಿಲು ಬಂದಿತ್ತು. ಆದರೆ ರಾತ್ರಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೆಳಗ್ಗೆಯೂ ಮುಂದುವರಿದಿದೆ. ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ: ಮೇ 20 …

Read More »

ಸಿಡಿಲು ಬಡಿದು ಇಬ್ಬರು ಕುರಿಗಾಯಿ ಸಾವು

ರಾಯಚೂರು/ಹಾವೇರಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವನ್ನಪ್ಪಿದರೆ, ವಿವಿಧ ಜಿಲ್ಲೆಗಳಲ್ಲಿ ಜನರು ಸಿಡಿಲಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಸೋಮವಾರ ರಾಯಚೂರು ಮತ್ತು ಹಾವೇರಿಯಲ್ಲಿ ತಲಾ ಒಬ್ಬ ವ್ಯಕ್ತಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಇಬ್ಬರು ಕುರಿಗಾಯಿ ಸಾವು: ರಾಯಚೂರಿನ ಭೋಗಿರಾಮನಗುಂಡ(ಬಿ.ಆರ್.ಗುಂಡ)ಯಲ್ಲಿ ಸಿಡಿಲು ಬಡಿದು ಕುರಿಗಾಯಿ ಬಾಲಕ ಸಾವನ್ನಪ್ಪಿದ್ದಾನೆ. ಹನುಮಗೌಡ ನಾಯಕ‌ (16) ಸಿಡಿಲು ಬಡಿದು ಮೃತಪಟ್ಟ ಬಾಲಕ. …

Read More »

ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠದ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

ಚಾಮರಾಜನಗರ: ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀ ಪಟ್ಟದ ಗುರುಸ್ವಾಮೀಜಿ ಮಂಗಳವಾರ ಮುಂಜಾನೆ ಲಿಂಗೈಕ್ಯರಾಗಿದ್ದಾರೆ. ಶ್ರೀ ಗುರುಸ್ವಾಮೀಜಿ ಅವರು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ ರುದ್ರಪ್ಪ ಮತ್ತು ಪುಟ್ಟ ಮಾದಮ್ಮರ ಜೇಷ್ಠ ಪುತ್ರರಾಗಿ, 1956ರ ಆಗಸ್ಟ್ 2ರಂದು ಜನಿಸಿದ್ದರು. ನಂತರ ಸಾಲೂರು ಬ್ರಹನ್ ಮಠಕ್ಕೆ 17ನೇ ಪೀಠಾಧ್ಯಕ್ಷರಾಗಿ 1995ರ ಜನವರಿ 29 ರಂದು …

Read More »

ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದ ಸಚಿವ ಕೆ.ಎನ್‌.ರಾಜಣ್ಣ

ಮೈಸೂರು: ನನಗೆ 75 ವಯಸ್ಸಾಗಿದೆ. ಯುವಕರಿಗೆ ಅವಕಾಶ ಸಿಗಬೇಕು, ಆ ದೃಷ್ಟಿಯಿಂದ ಮುಂದೆ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ, ಸಹಕಾರ ಕ್ಷೇತ್ರ ಹಾಗೂ ರಾಜಕಾರಣದಲ್ಲಿ ಸಕ್ರಿಯನಾಗಿರುವೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಪ್ರಕಟಿಸಿದರು. ಹುಣಸೂರಿನಲ್ಲಿ‌ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಟ್ಟಭದ್ರರ ಹಿಡಿತದಿಂದ ಸಹಕಾರ ಕ್ಷೇತ್ರ ಮುಕ್ತಕ್ಕೆ ಕ್ರಮ ಕೈಗೊಳ್ಳಲಾಗುವುದು. ಜನರ ನಿರೀಕ್ಷೆಗೆ ತಕ್ಕಂತೆ ಎರಡೂ ಸದನಗಳ ಒಪ್ಪಿಗೆ ಪಡೆದು ತಿದ್ದುಪಡಿ ತಂದು ರಾಜ್ಯಪಾಲರ ಅಂಕಿತಕ್ಕೆ ಕಡತ ಕಳುಹಿಸಿದ್ದರೂ ಕೇಂದ್ರಕ್ಕೆ ಕಳುಹಿಸುವಂತೆ ಸೂಚಿಸಿದ್ದಾರೆ. ಆದರೆ, …

Read More »

ಮಕ್ಕಳಾಗಲಿಲ್ಲ ಎಂದು ಕಲ್ಲಿನಿಂದ ಜಜ್ಜಿ ಸೊಸೆ ಕೊಲೆ

ಚಿಕ್ಕೋಡಿ (ಬೆಳಗಾವಿ) : ಸೊಸೆಗೆ ಮಕ್ಕಳಾಗಲಿಲ್ಲ ಎಂದು ಅತ್ತೆಯೇ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ಪತಿ ಸಂತೋಷ ಹೊನಕಾಂಡೆ, ಮಾವ ಕಾಮಣ್ಣ ಹೊನಕಾಂಡೆ, ಅತ್ತೆ ಜಯಶ್ರೀ ಹೊನಕಾಂಡೆ ಎಂಬುವರನ್ನು …

Read More »

ರಂಗ ಸೃಷ್ಟಿಯಿಂದ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮ

ರಂಗ ಸೃಷ್ಟಿಯಿಂದ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮ ಬೆಳಗಾವಿ : ಹೇಮರಡ್ಡಿ ಮಲ್ಲಮ್ಮ ನಾಟಕವನ್ನು ಅತ್ಯಂತ ಯಶಸ್ವಿಯಾಗಿ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಂಗಸೃಷ್ಟಿ ತಂಡದ ಕಲಾವಿದರಿಗೆ ಕೃತಜ್ಞತೆ ಸಮರ್ಪಣೆ ಕಾರ್ಯಕ್ರಮ ಈಚೆಗೆ ನಡೆಯಿತು. ಬೆಳಗಾವಿಯ ಸ್ಕೌಟ್ಸ್ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲ ಕಲಾವಿದರಿಗೆ ಗೌರವ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ರಂಗಸೃಷ್ಟಿ ಅಧ್ಯಕ್ಷ ರಮೇಶ ಜಂಗಲ್ ಅವರು ಮಾತನಾಡಿ, ನಿರೀಕ್ಷೆಗೂ ಮೀರಿ ನಾಟಕ ಯಶಸ್ವಿಯಾಗಿದೆ. ಸಭಾಭವನ ಕಿಕ್ಕಿರಿದು ತುಂಬಿದ್ದರಿಂದ ನೂರಾರು ಜನರು ವಾಪಸ್ ಹೋಗಬೇಕಾಯಿತು. …

Read More »

ಉಚಗಾಂವ-ಬೆಕ್ಕಿನಕೆರೆ ಮಾರ್ಗದಲ್ಲಿ ಮದಗಜದ ದಾಳಿಗೆ ಕಾರೊಂದು ಜಖಂ

ಬೆಳಗಾವಿಯಲ್ಲಿ ಮದಗಜನ ಅಟ್ಟಹಾಸ…ಗಜರಾಜನ ಕಾಲಿಗೆ ಸಿಕ್ಕ ಕಾರು ಪುಡಿ ಪುಡಿ!!! ಮದಗಜದ ದಾಳಿಗೆ ಕಾರೊಂದು ಜಖಂಗೊಳ ಘಟನೆ ಬೆಳಗಾವಿ ತಾಲೂಕಿನ ಉಚಗಾಂವ್ ಗ್ರಾಮದಲ್ಲಿ ನಡೆದಿದೆ. , ಬೆಳಗಾವಿ ತಾಲೂಕಿನಲ್ಲಿ ಮತ್ತೇ ಗಜರಾಜ ಅಟ್ಟಹಾಸ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಉಚಗಾಂವ-ಬೆಕ್ಕಿನಕೆರೆ ಮಾರ್ಗದಲ್ಲಿ ಡಾ. ನಿರಂಜನ್ ಕದಮ್ ಅವರ ಮನೆಯಿದೆ. ಅವರ ಮನೆ ಆವರಣಕ್ಕೆ ನುಗ್ಗಿದ ಮದಗಜ ಅಲ್ಲಿಯೇ ಪಾರ್ಕ್ ಮಾಡಿದ್ದ ಕಾರನ್ನು ಎತ್ತಿ ಬೀಸಾಕಿ ಜಖಂಗೊಳಿಸಿದೆ. ಗೋವಾದ ಮಡಗಾಂವನಿಂದ ಸಚೀನ್ ಪಾಟೀಲ್ …

Read More »