Breaking News

Yearly Archives: 2025

ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ತೀವ್ರ ವಿರೋಧ*

ಅನಧಿಕೃತ ಮಳಿಗೆಗಳ ತೆರವು ಕಾರ್ಯಾಚರಣೆ ತೀವ್ರ ವಿರೋಧ* ಸವದತ್ತಿ ಪಟ್ಟಣದ ಯಲ್ಲಮ್ಮ ರೇಣುಕಾ ‌ದೇವಿ ಆವರಣದಲ್ಲಿನ ಅನಧಿಕೃತ ‌ಮಳಿಗೆಗಳ ತೆರವು ಬಿಗಿ ಪೊಲೀಸ್ ‌ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆಗೆ ಮುಂದಾಗಿದ್ದ ಅಧಿಕಾರಿಗಳು ತೆರವು ಕಾರ್ಯಾಚರಣೆ ವಿರೋಧಿಸಿ ಶ್ರೀರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಚೇರಿ ಮುತ್ತಿಗೆ ಪ್ರಾಧಿಕಾರದ ಆಯುಕ್ತ ಅಶೋಕ ದುಡಗುಂಟಿ ಅವರನ್ನು ‌ದೇಗುಲದಲ್ಲಿ ಕೂಡಿಹಾಕಿ ಆಕ್ರೋಶ ಅನಧಿಕೃತ ಅಂಗಡಿಗಳನ್ನ ತೆರವು ಮಾಡದಂತೆ ಆಯಕ್ತರ ಕಚೇರಿ ಮುತ್ತಿಗೆ ಹಾಕಿ ಆಕ್ರೋಶ ಯಾವುದೇ …

Read More »

ಹಾವೇರಿ: ಬಿರುಗಾಳಿ ಸಹಿತ ಭಾರೀ ಮಳೆಗೆ 10ಕ್ಕೂ ಹೆಚ್ಚು ವಿದ್ಯುತ್ ಕಂಬ, 10ಕ್ಕೂ ಅಧಿಕ ಮರ ನೆಲಸಮ

ಹಾವೇರಿ: ಮಂಗಳವಾರ ಸುರಿದ ಭಾರೀ ಮಳೆಗೆ ಹಾವೇರಿ ನಗರ ತತ್ತರಿಸಿದೆ. ಮಳೆಯಿಂದ ಸುಮಾರು 10ಕ್ಕೂ ವಿದ್ಯುತ್ ಕಂಬಗಳು, 10ಕ್ಕೂ ಅಧಿಕ ಮರಗಳು ಧರೆಗುರುಳಿದ್ದು, ವಿದ್ಯುತ್ ಇಲ್ಲದೇ ಕೆಲ ಬಡಾವಣೆಗಳು ಇಡೀ ರಾತ್ರಿ ಕತ್ತಲಲ್ಲೇ ಕಾಲ ಕಳೆಯಬೇಕಾಯಿತು. ಎರಡು ಕಾರುಗಳ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಕಾರು ಪ್ರಯಾಣಿಕರು ಪಾರಾಗಿದ್ದಾರೆ. ಕೆರಿಮತ್ತಿಹಳ್ಳಿ-ಹಾವೇರಿ ಸಂಪರ್ಕಿಸುವ ರಸ್ತೆಯಲ್ಲಿ ಬೃಹತ್ ಮರವೊಂದು ಬೇರು ಸಮೇತ ಧರೆಗುರುಳಿದ್ದು, ಸಂಚಾರ ಬಂದ್ ಆಗಿದೆ. ಪರಿಣಾಮ ಹಾವೇರಿಯಿಂದ ಕೆರಿಮತ್ತಿಹಳ್ಳಿಗೆ ಹೋಗಲು …

Read More »

ಬೀದರ್​ನಲ್ಲಿ 2025 ಕೋಟಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೀದರ್​: “ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಇದಕ್ಕೆ ಈ ಕಾರ್ಯಕ್ರಮವೇ ಉದಾಹರಣೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್​ ಸಂಯುಕ್ತಾಶ್ರಯದಲ್ಲಿ ನೆಹರು ಕ್ರೀಡಾಂಗಣದಲ್ಲಿ ಕರ್ನಾಟಕ್ಕೆ ಮುಕುಟವಾಗಿರುವ ಬೀದರ್​ ಜಿಲ್ಲೆಯಲ್ಲಿ 2025 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. “ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರಕಾರವು ಬದ್ಧವಾಗಿದ್ದು, ಗ್ಯಾರಂಟಿ …

Read More »

ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ…

ಬೆಳಗಾವಿ ನಗರದಲ್ಲಿ ಗೋಮಾಂಸ ಸಾಗಾಟ… ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಶ್ರೀರಾಮಸೇನೆ ಮತ್ತು ಹಿಂದೂಪರ ಸಂಘಟನೆಯ ಕಾರ್ಯಕರ್ತರು… ಮತ್ತು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಬೆಳಗಾವಿ ನಗರದಲ್ಲಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ವಾಹನ ಮತ್ತು ಚಾಲಕನನ್ನು ಶ್ರೀರಾಮಸೇನೆ & ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರ್ಯಕರ್ತರು ಹಿಡಿದು ಎಪಿಎಂಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಮಧ್ಯಾನ್ಹ ನಡೆದಿದೆ. ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದ ಸಿಗ್ನಲ್’ನಲ್ಲಿ ಬೋಲೆರೋ ಟೆಂಪೋ ವಾಹನ ನಿಂತುಕೊಂಡಿತ್ತು. ಅದರಿಂದ …

Read More »

ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ*: *ಮುಖ್ಯಮಂತ್ರಿ ಸಿದ್ದರಾಮಯ್ಯ*

ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ: ಸಿಎಂ* ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ …

Read More »

160 ಕೆಜಿ ತೂಕ ಹೊಂದಿದ್ದ ವ್ಯಕ್ತಿಗೆ ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ: 48 ಕೆ.ಜಿ ತೂಕ ನಷ್ಟ*

ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಫೋರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್‌ ಎಂಬ ವ್ಯಕ್ತಿ …

Read More »

ಬೆಂಗಳೂರು-ವಿಜಯಪುರ ರೈಲು ಪ್ರಯಾಣ: 14ರಿಂದ 10 ಗಂಟೆಗೆ ಇಳಿಸಲು ತ್ವರಿತ ಕ್ರಮಕ್ಕೆ ಎಂ.ಬಿ.ಪಾಟೀಲ ಸೂಚನೆ*

*ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನೆ: ಭೂಸ್ವಾಧೀನಕ್ಕೆ ಗಡುವು ಕೊಟ್ಟ ಸಚಿವ ಎಂ ಬಿ ಪಾಟೀಲ* ಬೆಂಗಳೂರು: ರಾಜ್ಯ ರಾಜಧಾನಿ ಮತ್ತು ವಿಜಯಪುರ ನಡುವಿನ ರೈಲು ಪ್ರಯಾಣದ ಅವಧಿಯನ್ನು ಈಗಿರುವ 14-15 ಗಂಟೆಗಳಿಂದ ಕನಿಷ್ಠ 10 ಗಂಟೆಗಳಿಗೆ ಇಳಿಸುವ ಸಂಬಂಧ ಹಿರಿಯ ರೈಲ್ವೆ ಅಧಿಕಾರಿಗಳೊಂದಿಗೆ ಮತ್ತೊಂದು ಸಭೆ ನಡೆಸಿದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಈ‌ ನಿಟ್ಟಿನಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು. ಬುಧವಾರ ಅವರು ಇಲ್ಲಿ …

Read More »

ಮಳೆಗಾಲದಲ್ಲಿ ವಿದ್ಯುತ್‌ ಅನಾಹುತ ತಪ್ಪಿಸಲು ಸೆಸ್ಕ್‌ ಸನ್ನದ್ಧ: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ವು ಯಾವಾಗಲೂ ಗ್ರಾಹಕರಿಗೆ ಅಡಚಣೆ ರಹಿತವಾದ ವಿದ್ಯುತ್‌ ಸೇವೆಯನ್ನು ನೀಡುತ್ತಾ ಬಂದಿದೆ. ಪ್ರಸ್ತುತ ಪೂರ್ವ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಉಂಟಾಗುವ ವಿದ್ಯುತ್ ‌ಸಮಸ್ಯೆಗಳು, ಅಪಾಯಗಳ ಕುರಿತಂತೆ ಜಾಗೃತಿ ಮೂಡಿಸಿ, ಎಚ್ಚರ ವಹಿಸಲು ಕ್ರಮ ವಹಿಸಿದೆ ಎಂದು ಸೆಸ್ಕ್‌ ಪ್ರಕಟಣೆ ಮೂಲಕ ತಿಳಿಸಿದೆ. ಸೆಸ್ಕ್ ವ್ಯಾಪ್ತಿಯ 5 ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಈಗಾಗಲೇ ಆರಂಭವಾಗಿದೆ. ಇಂತಹ ಸಂದರ್ಭಗಳಲ್ಲಿ ಅತಿಯಾದ ಗಾಳಿ ಮತ್ತು ಮಳೆಯಿಂದ ವಿದ್ಯುತ್ …

Read More »

ಪ್ರಜ್ವಲ್ ರೇವಣ್ಣ ವಿರುದ್ಧ ದೋಷಾರೋಪ ನಿಗದಿ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೋಷಾರೋಪ ನಿಗದಿಪಡಿಸಿ, ವಿಚಾರಣೆಗೆ ಮುಂದಾಗಿರುವ ಸೆಷನ್ಸ್ ನ್ಯಾಯಾಲಯದ ಪ್ರಕ್ರಿಯೆ ಮುಂದೂಡಲು ನಿರ್ದೇಶಿಸುವಂತೆ ಕೋರಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ”ಪ್ರಕರಣದಲ್ಲಿ ಯಾವುದೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿಲ್ಲ. …

Read More »

ಶಬರಿಮಲೆಗೆ ತೆರಳಿದ್ದ ಹಾವೇರಿಯ ಗುರುಸ್ವಾಮಿ ರಸ್ತೆ ಅಪಘಾತದಲ್ಲಿ ಸಾವು

ಎರಿಮಲೈ/ಹಾವೇರಿ: ಕೇರಳ ರಾಜ್ಯದ ಎರಿಮಲೈ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಹಾನಗಲ್ ಪಟ್ಟಣದ 51 ವರ್ಷದ ಮಾರುತಿ ಎಂ ಹರಿಹರ ಎಂದು ಗುರುತಿಸಲಾಗಿದೆ. ಕೇರಳ ರಾಜ್ಯದಲ್ಲಿರುವ ಶಬರಿಮಲೆಗೆ ಹಾವೇರಿ ಜಿಲ್ಲೆಯಿಂದ 25 ಪ್ರಯಾಣಿಕರು ತೆರಳಿದ್ದರು. ಯಾತ್ರೆಗೆ ತೆಗೆದುಕೊಂಡಿದ್ದ ಮಿನಿ ಬಸ್ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಮಾರುತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಕ್ಕೂ ಅಧಿಕ ಜನರಿಗೆ ಗಾಯಗಳಾಗಿವೆ. 20 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ …

Read More »