ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ. ಇತ್ತಿಚಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರ ತೇಜೋವಧೆಗೆ ಕೆಲವರಿಂದ ಪ್ರಯತ್ನಗಳು ನಡೆಯುತ್ತಿರುವದನ್ನು ಖಂಡಿಸಿ ಇಂದು ಹುಕ್ಕೇರಿ ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಜರುಗಿತು. ಪಟ್ಟಣದ ಅಡವಿಸಿದ್ದೇಶ್ವರ ಮಠದ ಆವಣರದಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಪ್ರತಿಭಟನೆಗೆ ಚಾಲನೆ ನೀಡಿ ಮಾತನಾಡುತ್ತಾ ಹಿಂದೂ ಸಂಪ್ರದಾಯಗಳ ದೇವಾಲಯಗಳ ಮೇಲೆ ಈ ರೀತಿ …
Read More »Yearly Archives: 2025
ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು : ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ ಆರೋಪದಡಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಶ್ರೀಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ಎಂಬುವರು ತನ್ನನ್ನು ಬೆಂಗಳೂರಿಗೆ ಕರೆದುಕೊಂಡು ಬಂದಿದ್ದು, ಖಾಸಗಿ ಹೋಟಲ್ನಲ್ಲಿ ಅತ್ಯಾಚಾರ ಎಸಗಿ, ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಆಗಸ್ಟ್ 17 …
Read More »ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಈ ವರ್ಷ ರಾಜ್ಯಾದ್ಯಂತ ವಿಸ್ತರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಹೃದಯಾಘಾತದಿಂದ ಮರಣವಾಗುವವರ ಸಂಖ್ಯೆ ಅಧಿಕವಾಗುತ್ತಿದ್ದು, ಇದನ್ನ ನಿಯಂತ್ರಿಸಲು ಈ ವರ್ಷದಿಂದಲೇ ಡಾ.ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲಾಣ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಹೃದಯಾಘಾತ ತಡೆಯಲು 2023ರಲ್ಲಿ ಹೃದಯ ಜ್ಯೋತಿ ಯೋಜನೆ ಆರಂಭಿಸಲಾಗಿದೆ. ಪ್ರಸ್ತಕ ಆರ್ಥಿಕ ಸಾಲಿನಲ್ಲಿ ರಾಜ್ಯದ 86 ಕೇಂದ್ರಗಳಲ್ಲಿ ಈ ಯೋಜನೆ ಚಾಲ್ತಿಯಲ್ಲಿದೆ. ಈ ಯೋಜನಯನ್ನ ರಾಜ್ಯದ ಜಿಲ್ಲಾ, ತಾಲೂಕು ಹಾಗೂ ಸಮುದಾಯ ಆರೋಗ್ಯ …
Read More »ರಾಜ್ಯದ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಇನ್ನು ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50ಕಿ.ಮೀ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. 11 ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ …
Read More »ಕಂಪ್ಲಿ ಸೇತುವೆ ಮುಳುಗಡೆ; ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತ –
ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಪರಿಣಾಮ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ – ಗಂಗಾವತಿ ಸಂಪರ್ಕ ಸ್ಥಗಿತಗೊಂಡಿದೆ. ಮಲೆನಾಡು ಪ್ರದೇಶ ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಕೂಡ ಗಣನೀಯವಾಗಿ ಹೆಚ್ಚಾಗಿದೆ. ಸದ್ಯ 1,07,500 ಕ್ಯೂಸೆಕ್ ನೀರಿನ ಒಳ ಹರಿವು ಇದೆ. ಜಲಾಶಯದ ಸುರಕ್ಷತಾ ದೃಷ್ಟಿಯಿಂದ …
Read More »ಪಿಒಪಿ ಮೂರ್ತಿ ಬ್ಯಾನ್ ವಿಚಾರಕ್ಕೆ ಡಿಸಿ ರೋಷನ್ ಹೇಳಿದ್ದೇನು?
ಬೆಳಗಾವಿ: ಪಿಒಪಿ ಗಣೇಶ ಮೂರ್ತಿಗಳನ್ನು ಕಟ್ಟುನಿಟ್ಟಾಗಿ ಬ್ಯಾನ್ ಮಾಡುತ್ತೇವೆ. ಅದೇ ರೀತಿ ನಮ್ಮ ಜಿಲ್ಲೆಯ ಮೂಲಕ ಬೇರೆ ರಾಜ್ಯಗಳಿಗೆ ಸಾಗಿಸುವುದನ್ನು ನಿಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದರು. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಜೊತೆಗೆ ಇಂದು ನಗರದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಎರಡು ತಿಂಗಳ ಹಿಂದೆ ಪಿಒಪಿ ಮೂರ್ತಿಗಳ ವಿಚಾರಕ್ಕೆ ಸಭೆ ಮಾಡಿದ್ದೇವೆ. ನಮ್ಮ ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಪಿಒಪಿ ಮೂರ್ತಿಗಳನ್ನು ಸಾಗಿಸುತ್ತಿರುವುದು ನಮ್ಮ ಗಮನಕ್ಕೆ …
Read More »ಹೋರಿಗಳ ಕತ್ತು ಕೊಯ್ದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನೆಲಮಂಗಲ : ಇಲ್ಲಿಯ ಅರಳಸಂದ್ರ ಗ್ರಾಮದಲ್ಲಿ ಹಳ್ಳಿಕಾರ್ ತಳಿಯ ಎರಡು ಹೋರಿಗಳ ಕತ್ತು ಕೊಯ್ದು ನಡುರಸ್ತೆಯಲ್ಲಿ ಎಸೆದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಎಂಎಸ್ ಪಾಳ್ಯದ ನಿವಾಸಿ ಇಮ್ರಾನ್ (30), ಮಹಮ್ಮದ್ ಸಾಬ್ ಪಾಳ್ಯದ ನಿವಾಸಿ ಸಯ್ಯದ್ ನವಾಜ್ (35), ಶ್ರೀನಿಧಿ ಬಡಾವಣೆಯ ನಿವಾಸಿ ವೆಂಕಟೇಶ್ ಅಲಿಯಾಸ್ ಮಹಮ್ಮದ್ ಶುಯಾಬ್ (20) ಬಂಧಿತ ಆರೋಪಿಗಳು. ಬಂಧನದ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಘಟನೆ …
Read More »ಯೋಗೀಶ್ಗೌಡ ಕೊಲೆ ಪ್ರಕರಣ : ಆರೋಪಿ ಅಶ್ವತ್ಥ್ ಜಾಮೀನು ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿಯ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ಗೌಡ ಗೌಡರ ಕೊಲೆ ಪ್ರಕರಣದ ಆರೋಪಿಯಾಗಿದ್ದ ಅಶ್ವತ್ಥ್ ಅವರ ಜಾಮೀನನ್ನು ಹೈಕೋರ್ಟ್ ತಾತ್ಕಾಲಿಕವಾಗಿ ರದ್ದುಪಡಿಸಿ ಆದೇಶ ಹೊರಡಿಸಿದೆ. ಬಿಜೆಪಿ ಸದಸ್ಯ ಯೋಗೀಶ್ಗೌಡ ಕೊಲೆ ಪ್ರಕರಣದ ಒಂಬತ್ತನೇ ಆರೋಪಿ ಅಶ್ವತ್ಥ್ ಎಂಬುವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಐ. ಅರುಣ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಅಲ್ಲದೆ, ಪ್ರಕರಣ ಸಂಬಂಧ ಇತರೆ ಸಾಕ್ಷಿಗಳ …
Read More »ಅಮೆರಿಕದ ಐಸಿಎಸ್ ಇಂಟರ್ನ್ಯಾಷನಲ್ನಿಂದ ಉಡುಪಿಯ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ಗೆ ಗೌರವ ಫೆಲೋಶಿಪ್
ಉಡುಪಿ: ವಿಶ್ವ ಛಾಯಾಗ್ರಹಣ ದಿನದಂದು ಖ್ಯಾತ ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಅವರಿಗೆ ಅಮೆರಿಕದ ಇಮೇಜ್ ಕಾಲಿಗ್ ಸೊಸೈಟಿ ಇಂಟರ್ನ್ಯಾಷನಲ್ (ICS) ವತಿಯಿಂದ ಅತ್ಯುನ್ನತ ಗೌರವಗಳಲ್ಲಿ ಒಂದಾದ ಆನರರಿ ಫೆಲೋಶಿಪ್ (Hon.FICS) ಅನ್ನು ಪ್ರದಾನ ಮಾಡಲಾಗಿದೆ. ಟೋನಿ ಲೀ ಕಿಮ್ ಥುವಾನ್ APSA, Hon.EFIAP, ಕು. ಸಾರಾ ತೈ ಮೇ ಲಿನ್ ARPS ಹಾಗೂ ICS ಗೌರವ ಸಮಿತಿ ಅವರ ನೇತೃತ್ವದಲ್ಲಿ ನೀಡಲಾದ ಈ ಪ್ರಶಸ್ತಿ, ಛಾಯಾಗ್ರಹಣ ಕಲೆ ಹಾಗೂ ಸಂಸ್ಕೃತಿಯ …
Read More »ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಕಾರ್ಯಾರಂಭ: ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯ ವೇಳೆ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾಗಿದೆ. ಗುಣಮಟ್ಟದ ಶಿಕ್ಷಣ ಕೊಡುವ ಪ್ರಯತ್ನ …
Read More »